ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

INDW vs SLW: ಶ್ರೀಲಂಕಾ ವಿರುದ್ಧ 3 ವಿಕೆಟ್‌ ಕಿತ್ತು ವಿಶೇಷ ದಾಖಲೆ ಬರೆದ ದೀಪ್ತಿ ಶರ್ಮಾ!

ಶ್ರೀಲಂಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತದ ಸ್ಟಾರ್ ಸ್ಪಿನ್ನರ್ ದೀಪ್ತಿ ಶರ್ಮಾ ಅದ್ಭುತ ಪ್ರದರ್ಶನ ನೀಡಿ ದಾಖಲೆ ಬರೆದರು. ಅವರು ಮೂರನೇ ಪಂದ್ಯದಲ್ಲಿ ಸ್ಪಿನ್‌ ಮೋಡಿ ಮಾಡಿದ 18 ರನ್‌ ನೀಡಿ 3 ವಿಕೆಟ್‌ ಕಿತ್ತರು. ಆ ಮೂಲಕ ಮಹಿಳಾ ಟಿ20ಐ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್‌ ಪಡೆದ ಜಂಟಿ ದಾಖಲೆಯನ್ನು ಬರೆದಿದ್ದಾರೆ.

ದೀಪ್ತಿ ಶರ್ಮಾ ಟಿ20ಐ ವಿಶೇಷ ದಾಖಲೆ ಬರೆದಿದ್ದಾರೆ.

ನವದೆಹಲಿ: ಭಾರತದ ಸ್ಪಿನ್ನರ್ ದೀಪ್ತಿ ಶರ್ಮಾ (Deepti Sharma) ಟಿ20ಐ ಕ್ರಿಕೆಟ್‌ನಲ್ಲಿ ಪ್ರಮುಖ ಮೈಲುಗಲ್ಲು ತಲುಪಿದ್ದಾರೆ. ಶ್ರೀಲಂಕಾ ವಿರುದ್ಧದ ಮೂರನೇ ಟಿ20ಐ ಪಂದ್ಯದಲ್ಲಿ (INDW vs SLW) ಅವರು ಈ ಸಾಧನೆಗೆ ಭಾಜನರಾಗಿದ್ದಾರೆ. ದೀಪ್ತಿ ಶರ್ಮಾ ಇದೀಗ ಅಂತಾರಾಷ್ಟ್ರೀಯ ಮಹಿಳಾ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಜಂಟಿಯಾಗಿ ಮೊದಲ ಸ್ಥಾನ ಪಡೆದಿದ್ದಾರೆ. ಆ ಮೂಲಕ ಆಸ್ಟ್ರೇಲಿಯಾದ ಮೇಗನ್ ಶುಟ್ ಅವರ 151 ವಿಕೆಟ್‌ಗಳ ದಾಖಲೆಯನ್ನು ದೀಪ್ತಿ ಶರ್ಮಾ ಸರಿಗಟ್ಟಿದ್ದಾರೆ.

ದೀಪ್ತಿ ಶರ್ಮಾ ಪಂದ್ಯದ 19ನೇ ಓವರ್‌ನಲ್ಲಿ ಶ್ರೀಲಂಕಾದ ಮಲ್ಶಾ ಶೆಹಾನಿ ಅವರನ್ನು ಔಟ್ ಮಾಡುವ ಮೂಲಕ ತಮ್ಮ ಟಿ20ಐ ವೃತ್ತಿಜೀವನದ 151ನೇ ವಿಕೆಟ್ ಪಡೆದರು. ಈ ಸಾಧನೆಯೊಂದಿಗೆ, ದೀಪ್ತಿ ಶರ್ಮಾ ಟಿ20ಐಗಳಲ್ಲಿ ಜಂಟಿಯಾಗಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಅವರು 128 ಇನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ.

KAR vs KER: ದೇವದತ್‌ ಪಡಿಕ್ಕಲ್‌, ಕರುಣ್‌ ನಾಯರ್‌ ಭರ್ಜರಿ ಶತಕ, ಕೇರಳ ಎದುರು ಕರ್ನಾಟಕಕ್ಕೆ ಭರ್ಜರಿ ಜಯ!

ಮಹಿಳಾ ಟಿ20ಐ ಪಂದ್ಯಗಳಲ್ಲಿ ದೀಪ್ತಿ ಶರ್ಮಾ ಮತ್ತು ಮೇಗನ್ ಶುಟ್ ತಲಾ 151 ವಿಕೆಟ್‌ಗಳೊಂದಿಗೆ ಪ್ರಮುಖ ವಿಕೆಟ್ ಪಡೆದವರ ಪಟ್ಟಿಯನ್ನು ಹಂಚಿಕೊಂಡಿದ್ದಾರೆ. ಮೇಗನ್ ಶುಟ್ 122 ಇನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ. ರುವಾಂಡಾದ ಹೆನ್ರಿಯೆಟ್ ಇಶಿಯಾಮ್ವೆ 111 ಇನಿಂಗ್ಸ್‌ಗಳಲ್ಲಿ 144 ವಿಕೆಟ್‌ಗಳನ್ನು ಪಡೆದಿದ್ದಾರೆ. ಪಾಕಿಸ್ತಾನದ ನಿಡಾ ದಾರ್ 144 ವಿಕೆಟ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ, ಆದರೆ 152 ಇನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಇಂಗ್ಲೆಂಡ್‌ನ ಸೋಫಿ ಎಕ್ಲೆಸ್ಟೋನ್ 142 ವಿಕೆಟ್‌ಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ, 100 ಇನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ.



ದೀಪ್ತಿ ಶರ್ಮಾ ಅದ್ಭುತ ವೃತ್ತಿಜೀವನ

ದೀಪ್ತಿ ಶರ್ಮಾ ತಮ್ಮ ವೃತ್ತಿಜೀವನದುದ್ದಕ್ಕೂ ಅನೇಕ ಪ್ರಭಾವಶಾಲಿ ಪ್ರದರ್ಶನಗಳನ್ನು ನೀಡಿದ್ದಾರೆ. ಅವರು ವೈವಿಧ್ಯತೆ ಮತ್ತು ಕಠಿಣ ಪರಿಸ್ಥಿತಿಗಳಲ್ಲಿಯೂ ವಿಕೆಟ್ ಪಡೆಯುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಮೇಗನ್ ಶುಟ್ ಅವರ ದಾಖಲೆಯನ್ನು ಸರಿಗಟ್ಟುವ ಮೂಲಕ ದೀಪ್ತಿ ಶರ್ಮಾ ವಿಶ್ವದ ಅತ್ಯುತ್ತಮ ಟಿ20 ಬೌಲರ್‌ಗಳಲ್ಲಿ ಒಬ್ಬರು ಎಂದು ಸಾಬೀತುಪಡಿಸುತ್ತದೆ.

ಟಿ20ಐ ಸರಣಿ ವಶಪಡಿಸಿಕೊಂಡ ಭಾರತ

ಇನ್ನು ಮೂರನೇ ಟಿ20ಐ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡುವಂತಾದ ಶ್ರೀಲಂಕಾ ತನ್ನ ಪಾಲಿನ 20 ಓವರ್‌ಗಳಿಗೆ 7 ವಿಕೆಟ್‌ಗಳ ನಷ್ಟಕ್ಕೆ 112 ರನ್‌ಗಳನ್ನು ಕಲೆ ಹಾಕಿತು. ಬಳಿಕ ಗುರಿ ಹಿಂಬಾಲಿಸಿದ ಭಾರತ ಮಹಿಳಾ ತಂಡ, ಶಫಾಲಿ ವರ್ಮಾ (79 ರನ್‌) ಅರ್ಧಶತಕದ ಬಲದಿಂದ13.2 ಓವರ್‌ಗಳಿಗೆ 115 ರನ್‌ ಗಳಿಸಿ 8 ವಿಕೆಟ್‌ಗಳಂದ ಗೆದ್ದು ಬೀಗಿತು. ಆ ಮೂಲಕ ಇನ್ನೂ ಎರಡು ಪಂದ್ಯಗಳು ಬಾಕಿ ಇರುವಾಗಲೇ ಆತಿಥೇಯ ಭಾರತ 3-0 ಅಂತರದಲ್ಲಿ ಟಿ20ಐ ಸರಣಿಯನ್ನು ವಶಪಡಿಸಿಕೊಂಡಿತು.