ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

41 ಎಸೆತಗಳಲ್ಲಿ ಭರ್ಜರಿ ಶತಕ ಸಿಡಿಸಿ ನೂತನ ಮೈಲುಗಲ್ಲು ತಲುಪಿದ ಡೆವಾಲ್ಡ್‌ ಬ್ರೆವಿಸ್‌!

ಆಸ್ಟ್ರೇಲಿಯಾ ವಿರುದ್ದ ಎರಡನೇ ಟಿ20ಐ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದ ಯುವ ಬ್ಯಾಟ್ಸ್‌ಮನ್‌ ಡೆವಾಲ್ಡ್‌ ಬ್ರೆವಿಸ್‌ ಅವರು ಕೇವಲ 41 ಎಸೆತಗಳಲ್ಲಿ ಶತಕವನ್ನು ಬಾರಿಸಿದ್ದಾರೆ. ಆ ಮೂಲಕ ದಕ್ಷಿಣ ಆಫ್ರಿಕಾ ತಂಡದ 53 ರನ್‌ಗಳ ಗೆಲುವಿಗೆ ನೆರವಾಗುವ ಮೂಲಕ ಅವರು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ದಕ್ಷಿಣ ಆಫ್ರಿಕಾ ಪರ ಎರಡನೇ ವೇಗದ ಶತಕವನ್ನು ಬಾರಿಸಿದ ಡೆವಾಲ್ಡ್‌ ಬ್ರೆವಿಸ್‌.

ನವದೆಹಲಿ: ದಾರ್ವಿನ್‌ನ ಮರಾರ ಕ್ರಿಕೆಟ್‌ ಗ್ರೌಂಡ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಎರಡನೇ ಟಿ20ಐ ಪಂದ್ಯದಲ್ಲಿ(AUS vs SA) ದಕ್ಷಿಣ ಆಫ್ರಿಕಾ ತಂಡದ ಯುವ ಬ್ಯಾಟ್ಸ್‌ಮನ್‌ ಡೆವಾಲ್ಡ್‌ ಬ್ರೆವಿಸ್‌ (Dewals Brewis) ಕೇವಲ 41 ಎಸೆತಗಳಲ್ಲಿ ಶತಕವನ್ನು ಬಾರಿಸಿದ್ದಾರೆ. ಆ ಮೂಲಕ 22ನೇ ವಯಸ್ಸಿನ ಬ್ಯಾಟ್ಸ್‌ಮನ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಮ್ಮ ಆಗಮನವಾಗಿದೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ. ಟಿ20ಐ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ ದಕ್ಷಿಣ ಆಫ್ರಿಕಾ (South Africa) ಅತ್ಯಂತ ಕಿರಿಯ ಬ್ಯಾಟ್ಸ್‌ಮನ್‌ ಹಾಗೂ ಹರಿಣ ಪಡೆಯ ಎರಡನೇ ವೇಗದ ಬ್ಯಾಟ್ಸ್‌ಮನ್‌ ಎಂಬ ದಾಖಲೆಯನ್ನು ಡೆವಾಲ್ಡ್‌ ಬ್ರೆವಿಸ್‌ ಬರೆದಿದ್ದಾರೆ.

2017ರಲ್ಲಿ ಬಾಂಗ್ಲಾದೇಶ ವಿರುದ್ದ ಡೇವಿಡ್‌ ಮಿಲ್ಲರ್‌ ಕೇವಲ 35 ಎಸೆತಗಳಲ್ಲಿ ಶತಕವನ್ನು ಬಾರಿಸಿದ್ದರು. ಆ ಮೂಲಕ ದಕ್ಷಿಣ ಆಫ್ರಿಕಾ ಪರ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ವೇಗವಾಗಿ ಶತಕ ಸಿಡಿಸಿದ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ. ಇದೀಗ ಡೆವಾಲ್ಡ್‌ ಬ್ರೆವಿಸ್‌ ಅವರು ದಕ್ಷಿಣ ಆಫ್ರಿಕಾ ಪರ ವೇಗದ ಶತಕ ಸಿಡಿಸಿದ ಎರಡನೇ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ.

MS Dhoni: ʼಡಿಸೆಂಬರ್‌ನಲ್ಲಿ ಅಂತಿಮ ನಿರ್ಧಾರʼ; ಧೋನಿ ಐಪಿಎಲ್‌ ನಿವೃತ್ತಿ ಖಚಿತ

ಈ ಪಂದ್ಯದಲ್ಲಿ ಸ್ಪೋಟಕ ಬ್ಯಾಟ್‌ ಮಾಡಿದ ಬ್ರೆವಿಸ್‌ 56 ಎಸೆತಗಳಲ್ಲಿ ಅಜೇಯ 125 ರನ್‌ಗಳನ್ನು ಬಾರಿಸಿದ್ದಾರೆ. ಆ ಮೂಲಕ ದಕ್ಷಿಣ ಆಫ್ರಿಕಾ ತಂಡ ತನ್ನ ಪಾಲಿನ 20 ಓವರ್‌ಗಳಿಗೆ 6 ವಿಕೆಟ್‌ಗಳ ನಷ್ಟಕ್ಕೆ 219 ರನ್‌ಗಳನ್ನು ಕಲೆ ಹಾಕಿತ್ತು. ಆ ಮೂಲಕ ಎದುರಾಳಿ ಆಸ್ಟ್ರೇಲಿಯಾ ತಂಡಕ್ಕೆ 220 ರನ್‌ಗಳ ಕಠಿಣ ಗುರಿಯನ್ನು ನೀಡಿತ್ತು.

41 ಎಸೆತಗಳು: ಡೆವಾಲ್ಡ್‌ ಬ್ರೆವಿಸ್ ಪುರುಷರ ಟಿ20ಐ ನಲ್ಲಿ ದಕ್ಷಿಣ ಆಫ್ರಿಕಾ ಪರ ಎರಡನೇ ಅತ್ಯಂತ ವೇಗದ ಶತಕ ಬಾರಿಸಿದ್ದಾರೆ. 2017 ರಲ್ಲಿ ಡೇವಿಡ್ ಮಿಲ್ಲರ್ 35 ಎಸೆತಗಳಲ್ಲಿ ಶತಕ ಬಾರಿಸಿದ್ದರು ಹಾಗೂ ಅಗ್ರ ಸ್ಥಾನದಲ್ಲಿದ್ದಾರೆ.

SA vs ZIM: ಜಿಂಬಾಬ್ವೆ ವಿರುದ್ಧ 7 ವಿಕೆಟ್‌ಗಳಿಂದ ಗೆದ್ದು ತ್ರಿಕೋನ ಸರಣಿಯಲ್ಲಿ ಫೈನಲ್‌ಗೇರಿದ ದಕ್ಷಿಣ ಆಫ್ರಿಕಾ!

ಡೆವಾಲ್ಡ್‌ ಬ್ರೆವಿಸ್‌ ಅವರ ಸಾಧನೆಗಳು

8: ಬ್ರೆವಿಸ್ ದಕ್ಷಿಣ ಆಫ್ರಿಕಾ ಪರ ಟಿ20ಐ ಶತಕ ಬಾರಿಸಿದ ಎಂಟನೇ ಆಟಗಾರ.

22 ವರ್ಷ, 105 ದಿನಗಳು: ಸಿಎಸ್‌ಕೆ ತಾರೆ ಟಿ20ಐ ಶತಕ ಬಾರಿಸಿದ ಅತ್ಯಂತ ಕಿರಿಯ ದಕ್ಷಿಣ ಆಫ್ರಿಕಾದ ಆಟಗಾರ.

25: ಪುರುಷರ ಟಿ20ಐ ಕ್ರಿಕೆಟ್‌ನಲ್ಲಿ ದಕ್ಷಿಣ ಆಫ್ರಿಕಾ ಪರ ಅತ್ಯಧಿಕ ವೈಯಕ್ತಿಕ ಸ್ಕೋರ್ ಆಗಿದ್ದು, 2015 ರಲ್ಲಿ ಜೋಹಾನ್ಸ್‌ಬರ್ಗ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಫಾಫ್ ಡು ಪ್ಲೆಸಿಸ್ ಅವರ 119 ರನ್‌ಗಳನ್ನು ಹಿಂದಿಕ್ಕಿದ್ದಾರೆ.

ದಕ್ಷಿಣ ಆಫ್ರಿಕಾ ತಂಡಕ್ಕೆ 53 ರನ್‌ ಜಯ

ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡುವಂತಾಗಿದ್ದ ದಕ್ಷಿಣ ಆಫ್ರಿಕಾ ಪರ ನಾಲ್ಕನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದ ಡೆವಾಲ್ಡ್‌ ಬ್ರೆವಿಸ್‌ ಆಸೀಸ್‌ ಬೌಲರ್‌ಗಳಿಗೆ ಬೆವರಿಳಿಸಿದರು. ಅವರು ತಮ್ಮ ಸ್ಟೋಟಕ ಬ್ಯಾಟಿಂಗ್‌ ಮೂಲಕ ತಮ್ಮ ಟಿ20ಐ ವೃತ್ತಿ ಜೀವನದಲ್ಲಿ ಚೊಚ್ಚಲ ಶತಕವನ್ನು ಸಿಡಿಸಿದ್ದಾರೆ. ಆ ಮೂಲಕ ದಕ್ಷಿಣ ಆಫ್ರಿಕಾ ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರವನ್ನು ವಹಿಸಿದ್ದಾರೆ.

ದಕ್ಷಿಣ ಆಫ್ರಿಕಾ ನೀಡಿದ್ದ 220 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಆಸ್ಟ್ರೇಲಿಯಾ ತಂಡದ ಪರ ಟಿಮ್‌ ಡೇವಿಡ್‌ ಅರ್ಧಶತಕ ಸಿಡಿಸಿದ್ದು ಬಿಟ್ಟರೆ ಇನ್ನುಳಿದ ಬ್ಯಾಟ್ಸ್‌ಮನ್‌ಗಳು ವಿಫಲರಾದರು. ಕ್ವೇನಾ ಎಂಫಾಕ ಹಾಗೂ ಕಾರ್ಬಿನ್‌ ಬಾಷ್‌ ಅವರ ಮಾರಕ ಬೌಲಿಂಗ್‌ ದಾಳಿಗೆ ನಲುಗಿದ ಆಸೀಸ್‌, 17.4 ಓವರ್‌ಗಳಿಗೆ 164 ರನ್‌ಗಳಿಗೆ ಆಲ್‌ಔಟ್‌ ಆಯಿತು. ಆ ಮೂಲಕ 53 ರನ್‌ಗಳ ಜಯವಾಗಿದೆ.