ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

IND vs WI: ನಾಲ್ಕನೇ ಟಿ20ಐ ಪಂದ್ಯಕ್ಕೆ ಭಾರತ ತಂಡದಲ್ಲಿ ಒಂದು ಬದಲಾವಣೆ ಸೂಚಿಸಿದ ದಿನೇಶ್‌ ಕಾರ್ತಿಕ್‌!

ಮೂರು ಪಂದ್ಯಗಳ ಅಂತ್ಯಕ್ಕೆ ಭಾರತ ತಂಡ, ವಸ್ಟ್‌ ಇಂಡೀಸ್‌ ವಿರುದ್ಧ ಟಿ20ಐ ಸರಣಿಯಲ್ಲಿ 2-1 ಅಂತರದಲ್ಲಿ ಮುನ್ನಡೆಯನ್ನು ಹೊಂದಿದೆ. ಇದೀಗ ನಾಲ್ಕನೇ ಪಂದ್ಯ ಅಕ್ಟೋಬರ್‌ 14 ರಂದು ಹೈದರಾಬಾದ್‌ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಚೈನಾಮನ್‌ ಸ್ಪಿನ್ನರ್‌ ಕುಲ್ದೀಪ್‌ ಯಾದವ್‌ ಅವರನ್ನು ಆಡಿಸಬೇಕೆಂದು ದಿನೇಶ್‌ ಕಾರ್ತಿಕ್‌ ಸಲಹೆ ನೀಡಿದ್ದಾರೆ.

ಭಾರತ ತಂಡಕ್ಕೆ ಒಂದು ಬದಲಾವಣೆ ಸೂಚಿಸಿದ ದಿನೇಶ್‌ ಕಾರ್ತಿಕ್‌.

ಹೈದರಾಬಾದ್‌: ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವಿನ ಐದು ಪಂದ್ಯಗಳ ಟಿ20ಐ ಸರಣಿಯ (IND vs WI) ನಾಲ್ಕನೇ ಪಂದ್ಯ ಅಕ್ಟೋಬರ್ 14ರಂದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಈಗಾಗಲೇ ಮೂರು ಪಂದ್ಯಗಳು ಮುಕ್ತಾಯಗೊಂಡಿದ್ದು, ಭಾರತ 2–1ರ ಮುನ್ನಡೆ ಸಾಧಿಸಿದೆ. ಸರಣಿಯಲ್ಲಿ ಮುನ್ನಡೆಯನ್ನು ಮತ್ತಷ್ಟು ಬಲಪಡಿಸುವ ಗುರಿಯೊಂದಿಗೆ ಭಾರತ ಕಣಕ್ಕಿಳಿಯಲಿದ್ದು, ಈ ಪಂದ್ಯಕ್ಕೂ ಮುನ್ನ ಮಾಜಿ ಕ್ರಿಕೆಟಿಗ ದಿನೇಶ್ ಕಾರ್ತಿಕ್ (Dinesh Karthik) ತಂಡದ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಮಾಡುವಂತೆ ಸಲಹೆ ನೀಡಿದ್ದಾರೆ.

ಹೈದರಾಬಾದ್‌ನ ಪಿಚ್ ಬ್ಯಾಟಿಂಗ್‌ಗೆ ಹೆಚ್ಚು ಅನುಕೂಲಕರವಾಗಿರುವ ಸಾಧ್ಯತೆಯಿದ್ದು, ಮೈದಾನದ ಬೌಂಡರಿಗಳು ದೊಡ್ಡದಾಗಿವೆ. ಇಂತಹ ಪರಿಸ್ಥಿತಿಯಲ್ಲಿ ಭಾರತ ತಂಡ ಐವರು ಸಮರ್ಥ ಬೌಲರ್‌ಗಳನ್ನು ಹೊಂದಿರುವುದು ಮುಖ್ಯ ಎಂದು ದಿನೇಶ್ ಕಾರ್ತಿಕ್ ಅಭಿಪ್ರಾಯಪಟ್ಟಿದ್ದಾರೆ. ಇದೇ ಕಾರಣಕ್ಕೆ ತಂಡದ ಆಲ್‌ರೌಂಡರ್‌ಗಳಲ್ಲಿ ಒಬ್ಬರ ಬದಲಿಗೆ ಸ್ಪಿನ್ನರ್ ಕುಲ್‌ದೀಪ್ ಯಾದವ್ ಅವರನ್ನು ಆಡುವ ಹನ್ನೊಂದರ ಬಳಗಕ್ಕೆ ಸೇರಿಸಿಕೊಳ್ಳುವಂತೆ ಅವರು ಸೂಚಿಸಿದ್ದಾರೆ.

IND vs WI: 2,000 ರನ್‌ ಪೂರ್ಣಗೊಳಿಸಿ ಸೂರ್ಯಕುಮಾರ್‌ ಯಾದವ್‌ ದಾಖಲೆ ಮುರಿದ ಅಭಿಷೇಕ್‌ ಶರ್ಮಾ!

ಕುಲ್ದೀಪ್ ಯಾದವ್‌ಗೆ ಅವಕಾಶ ನೀಡಲು ಕಾರ್ತಿಕ್ ಸಲಹೆ

ಹೈದರಾಬಾದ್‌ನ ಪಿಚ್ ಮತ್ತು ಮೈದಾನದ ಸ್ವರೂಪವನ್ನು ಗಮನಿಸಿದರೆ ಕುಲ್‌ದೀಪ್ ಯಾದವ್ ಅವರಂತಹ ಸ್ಪಿನ್ನರ್ ತಂಡಕ್ಕೆ ನೆರವಾಗಬಹುದು ಎಂಬುದು ಕಾರ್ತಿಕ್ ಅವರ ಅಭಿಪ್ರಾಯ. ಮಧ್ಯಮ ಓವರ್‌ಗಳಲ್ಲಿ ವಿಕೆಟ್ ಪಡೆಯುವ ಸಾಮರ್ಥ್ಯ ಹೊಂದಿರುವ ಅವರು, ಎದುರಾಳಿ ಬ್ಯಾಟರ್‌ಗಳ ರನ್ ಗಳಿಕೆಯ ವೇಗಕ್ಕೆ ಕಡಿವಾಣ ಹಾಕಲು ನೆರವಾಗಬಹುದು.

“ಪಿಚ್ ಎಷ್ಟು ಬ್ಯಾಟಿಂಗ್‌ಗೆ ಅನುಕೂಲಕರವಾಗಿದೆ ಮತ್ತು ಮೈದಾನದ ಬೌಂಡರಿಗಳು ಎಷ್ಟು ದೊಡ್ಡದಾಗಿವೆ ಎಂಬುದನ್ನು ಗಮನಿಸಿದರೆ, ನಾನು ಕುಲ್‌ದೀಪ್ ಯಾದವ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲು ಬಯಸುತ್ತೇನೆ. ಆಲ್‌ರೌಂಡರ್‌ಗಳಲ್ಲಿ ಒಬ್ಬರ ಬದಲಿಗೆ ಅವರನ್ನು ಆಡಿಸುವ ಬಗ್ಗೆ ಯೋಚಿಸುತ್ತೇನೆ. ಭಾರತದಲ್ಲಿ ಯಾವುದೇ ತಂಡದ ವಿರುದ್ಧ ಸ್ಪರ್ಧಿಸಲು ಐವರು ಬೌಲರ್‌ಗಳನ್ನು ಹೊಂದಿರುವುದು ಮುಖ್ಯ ಎಂದು ನನಗೆ ಅನಿಸುತ್ತದೆ. ಈಗಿನ ಪರಿಸ್ಥಿತಿಯಲ್ಲಿ ಇದು ಇನ್ನಷ್ಟು ಅಗತ್ಯವಾಗಿದೆ,” ಎಂದು ದಿನೇಶ್ ಕಾರ್ತಿಕ್ ಕ್ರಿಕ್‌ಬಜ್‌ನಲ್ಲಿ ಸಲಹೆ ನೀಡಿದ್ದಾರೆ.

IND vs WI: ಭಾರತ ಟಿ 20 ತಂಡದಲ್ಲಿ ನಿತೀಶ್‌ ಕುಮಾರ್‌ ರೆಡ್ಡಿಯ ಪಾತ್ರವನ್ನು ವಹಿಸಿದ ದಿನೇಶ್‌ ಕಾರ್ತಿಕ್!‌

ಈ ಟಿ20ಐ ಸರಣಿಯಲ್ಲಿ ಕುಲ್ದೀಪ್ ಯಾದವ್ ತಮ್ಮ ಬೌಲಿಂಗ್ ಮೂಲಕ ಗಮನ ಸೆಳೆದಿದ್ದಾರೆ. ಇವರು ಇದುವರೆಗೆ ಮೂರು ಇನಿಂಗ್ಸ್‌ಗಳಲ್ಲಿ ಏಳು ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಪ್ರತಿ ವಿಕೆಟ್‌ಗೆ ಸರಾಸರಿ 23.85 ರನ್ ನೀಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಶ್ರೇಯಸ್ ಅಯ್ಯರ್ ನಾಯಕತ್ವಕ್ಕೆ ದಿನೇಶ್ ಕಾರ್ತಿಕ್ ಮೆಚ್ಚುಗೆ

ಕುಲ್‌ದೀಪ್ ಯಾದವ್ ಅವರನ್ನು ತಂಡಕ್ಕೆ ಸೇರಿಸುವ ಸಲಹೆಯ ಜೊತೆಗೆ, ಭಾರತ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರ ನಾಯಕತ್ವವನ್ನೂ ದಿನೇಶ್ ಕಾರ್ತಿಕ್ ಶ್ಲಾಘಿಸಿದ್ದಾರೆ. ಸರಣಿಯ ಹಿಂದಿನ ಪಂದ್ಯಗಳಲ್ಲಿ ಬೌಲರ್‌ಗಳನ್ನು ಸಮರ್ಪಕವಾಗಿ ಬಳಸಿಕೊಂಡಿರುವ ಅಯ್ಯರ್ ಅವರ ನಿರ್ಧಾರಗಳನ್ನು ಅವರು ಮೆಚ್ಚಿಕೊಂಡಿದ್ದಾರೆ.

“ನಾಯಕತ್ವದ ವಿಚಾರದಲ್ಲಿ ಹೇಳುವುದಾದರೆ, ಶ್ರೇಯಸ್ ಅಯ್ಯರ್ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಹಿಂದಿನ ಪಂದ್ಯದಲ್ಲಿಯೂ ಅವರು ಬದಲಾಯಿಸಬೇಕಾದಂತಹ ದೊಡ್ಡ ತಪ್ಪುಗಳು ಹೆಚ್ಚು ಕಂಡುಬರಲಿಲ್ಲ. ನಾನು ಶ್ರೇಯಸ್ ಅಯ್ಯರ್ ಸ್ಥಾನದಲ್ಲಿದ್ದರೆ, ಬೌಲರ್‌ಗಳನ್ನು ಬಳಸಿಕೊಳ್ಳುತ್ತಿರುವ ರೀತಿಯ ಬಗ್ಗೆ ತುಂಬಾ ಸಂತೋಷಪಡುತ್ತಿದ್ದೆ. ಈ ಪಂದ್ಯದಲ್ಲಿಯೂ ಅವರು ಬೌಲರ್‌ಗಳನ್ನು ಸಮರ್ಪಕವಾಗಿ ಬಳಸಿಕೊಂಡಿದ್ದಾರೆ. ಹೀಗಾಗಿ ಅವರು ಉತ್ತಮ ಕೆಲಸ ಮಾಡಿದ್ದಾರೆ,” ಎಂದು ದಿನೇಶ್ ಕಾರ್ತಿಕ್ ಅಭಿಪ್ರಾಯಪಟ್ಟಿದ್ದಾರೆ.