IND vs ENG: ಕೆಎಲ್ ರಾಹುಲ್ ಇನ್? ಮೂರನೇ ಒಡಿಐಗೆ ಭಾರತ ತಂಡದಲ್ಲಿ 2 ಬದಲಾವಣೆ ಸಾಧ್ಯತೆ!
India vs England 3rd ODI match Preview: ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಣ ಮೂರನೇ ಹಾಗೂ ಏಕದಿನ ಸರಣಿಯ ನಿರ್ಣಾಯಕ ಪಂದ್ಯ ಜುಲೈ 19 ರಂದು ಲಂಡನ್‌ನ ಲಾರ್ಡ್ಸ್ ಅಂಗಣದಲ್ಲಿ ನಡೆಯಲಿದೆ ಈ ಪಂದ್ಯಕ್ಕೆ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್ XI,ಪಿಚ್ ರಿಪೋರ್ಟ್ ಸೇರಿದಂತೆ ಪ್ರಮುಖ ಸಂಗತಿಗಳನ್ನು ಇಲ್ಲಿ ವಿವರಿಸಲಾಗಿದೆ.
ಇಂಗ್ಲೆಂಡ್ ವಿರುದ್ಧದ ಮೂರನೇ ಒಡಿಐಗೆ ಭಾರತ ತಂಡ ಸಜ್ಜು. -
ಲಂಡನ್: ಭಾರತ ಹಾಗೂ ಇಂಗ್ಲೆಂಡ್ ತಂಡಗಳ (IND vs ENG) ನಡುವಣ ಮೂರನೇ ಹಾಗೂ ಏಕದಿನ ಸರಣಿಯ ನಿರ್ಣಾಯಕ ಪಂದ್ಯ ಎರಡು ಕಾರಣಗಳಿಗೆ ತೀವ್ರ ಕುತೂಹಲವನ್ನು ಕೆರಳಿಸಿದೆ. ಒಂದು ಕಾರಣವೇನೆಂದರೆ ರೋಹಿತ್ ಶರ್ಮಾಗೆ (Rohit sharma) ಲಾರ್ಡ್ಸ್ ಒಡಿಐ ಕೊನೆಯ ಪಂದ್ಯ ಎಂದು ಹೇಳಲಾಗುತ್ತಿದೆ, ಮತ್ತೊಂದು ಕಾರಣವೇನೆಂದರೆ ಏಕದಿನ ಸರಣಿಯನ್ನು ತನ್ನದಾಗಿಸಿಕೊಳ್ಳಲು ಭಾರತ ತಂಡಕ್ಕೆ ಮೂರನೇ ಪಂದ್ಯದ ಗೆಲುವು ಅನಿವಾರ್ಯವಾಗಿದೆ. ಅಂದ ಹಾಗೆ ಎರಡು ಪಂದ್ಯಗಳ ಅಂತ್ಯಕ್ಕೆ 1-1 ಅಂತರದಲ್ಲಿ ಸರಣಿಯನ್ನು ಸಮಬಲ ಕಾಯ್ದುಕೊಂಡಿರುವ ಉಭಯ ತಂಡಗಳಿಗೆ ಸರಣಿಯನ್ನು ಗೆಲ್ಲಲು ಲಾರ್ಡ್ಸ್‌ನಲ್ಲಿ ಗೆಲುವು ಅಗತ್ಯ.
ಕಾರ್ಡಿಫ್‌ನಲ್ಲಿ ನಡೆದಿದ್ದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡ 32ನೇ ಓವರ್‌ವರೆಗೂ 178 ರನ್‌ಗಳನ್ನು ಗಳಿಸಿ ಉತ್ತಮ ಹಾದಿಯಲ್ಲಿತ್ತು. ಆದರೆ ವಿರಾಟ್ ಕೊಹ್ಲಿ ಔಟ್ ಆದ ಬಳಿಕ 55 ರನ್‌ಗಳ ಅಂತರದಲ್ಲಿ 7 ವಿಕೆಟ್‌ಗಳನ್ನು ಕಳೆದುಕೊಂಡು 233 ರನ್‌ಗಳಿಗೆ ಕುಸಿಯಿತು. ಬಳಿಕ 234 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಇಂಗ್ಲೆಂಡ್ ಕೂಡ ಆರಂಭಿಕ ಆಘಾತವನ್ನು ಅನುಭವಿಸಿತ್ತಾದರೂ ಜೋ ರೂಟ್ ಅವರ ಏಕಾಂಗಿ ಹೋರಾಟದ ಫಲವಾಗಿ 4 ವಿಕೆಟ್‌ಗಳ ಗೆಲುವು ತನ್ನದಾಗಿಸಿಕೊಂಡಿತ್ತು.
IND vs ENG: ಲಾರ್ಡ್ಸ್‌ನಲ್ಲಿ ರೋಹಿತ್ ಶರ್ಮಾಗೆ ಕೊನೆಯ ಪಂದ್ಯವೇ? ಸ್ಪಷ್ಟನೆ ನೀಡಿದ ಬಿಸಿಸಿಐ ಸೆಕ್ರೆಟರಿ!
ಕಳೆದ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್ XIನಲ್ಲಿ ಒಂದು ಬದಲಾವಣೆಯನ್ನು ತರಲಾಗಿತ್ತು. ಅನಾರೋಗ್ಯದ ಕಾರಣ ಕೆಎಲ್ ರಾಹುಲ್‌ಗೆ ವಿಶ್ರಾಂತಿ ನೀಡುವ ಮೂಲಕ ಇಶಾನ್ ಕಿಶನ್‌ಗೆ ಅವಕಾಶವನ್ನು ನೀಡಲಾಗಿತ್ತು. ಇದೀಗ ರಾಹುಲ್ ಸಂಪೂರ್ಣವಾಗಿ ಫಿಟ್ ಆಗಿದ್ದು, ಮೂರನೇ ಪಂದ್ಯಕ್ಕೆ ಮರಳಿದ್ದಾರೆ. ಮತೊಂದು ಕಡೆ ವಾಷಿಂಗ್ಟನ್ ಸುಂದರ್ ಅವರನ್ನು ಕೈ ಬಿಟ್ಟು ಚೈನಾಮನ್ ಸ್ಪಿನ್ನರ್ ಕುಲ್ದೀಪ್ ಯಾದವ್‌ಗೆ ಅವಕಾಶವನ್ನು ನೀಡಬಹುದು.
ಪಂದ್ಯದ ವಿವರ
ಮೂರನೇ ಏಕದಿನ ಪಂದ್ಯ
ಭಾರತ vs ಇಂಗ್ಲೆಂಡ್
ದಿನಾಂಕ: ಜುಲೈ 19, 2026
ಸಮಯ: ಸಂಜೆ 03: 30ಕ್ಕೆ (ಭಾರತೀಯ ಕಾಲಮಾನ)
ಸ್ಥಳ: ಲಾರ್ಡ್ಸ್, ಲಂಡನ್
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
ಲೈವ್ ಸ್ಟ್ರೀಮಿಂಗ್: ಜಿಯೊ ಹಾಟ್‌ಸ್ಟಾರ್
IND vs ENG: ಮೂರನೇ ಏಕದಿನ ಪಂದ್ಯಕ್ಕೆ ಭಾರತ ತಂಡದಲ್ಲಿ ಮೂರು ಬದಲಾವಣೆ ಅಗತ್ಯ!
ಮುಖಾಮುಖಿ ದಾಖಲೆ
ಒಟ್ಟು ಆಡಿರುವ ಪಂದ್ಯಗಳು: 112
ಭಾರತ: 62
ಇಂಗ್ಲೆಂಡ್: 45
ಫಲಿತಾಂಶವಿಲ್ಲ: 05
ಲಾರ್ಡ್ಸ್ ಪಿಚ್ ರಿಪೋರ್ಟ್
ಲಂಡನ್‌ನ ಲಾರ್ಡ್ಸ್ ಕ್ರಿಕೆಟ್ ಅಂಗಣದ ಪಿಚ್ ಬೌಲರ್‌ಗಳ ಸ್ನೇಹಿಯಾಗಿದ್ದು, ಫಾಸ್ಟ್ ಬೌಲರ್‌ಗಳಿಗೆ ಹೆಚ್ಚಿನ ನೆರವು ನೀಡಲಿದೆ. ಹೊಸ ಚೆಂಡಿನಲ್ಲಿ ವೇಗಿಗಳು ಸ್ವಿಂಗ್ ಹಾಗೂ ಬೌನ್ಸ್ ಹಾಕಬಹುದು. ಸ್ಪಿನ್ನರ್‌ಗಳಿಗೆ ಈ ಪಿಚ್‌ನಲ್ಲಿ ಅಲ್ಪ ಪಾತ್ರವನ್ನು ನಿರ್ವಹಿಸಬಹುದಷ್ಟೆ. ಆದರೆ, ಎರಡನೇ ಇನಿಂಗ್ಸ್‌ನಲ್ಲಿ ಈ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ನೆರವು ನೀಡಲಿದೆ. ಅಂದ ಹಾಗೆ ಟಾಸ್ ಗೆದ್ದ ತಂಡದ ನಾಯಕ ಚೇಸಿಂಗ್ ಆಯ್ಕೆ ಮಾಡಿಕೊಳ್ಳಬಹುದು.
IND vs ENG: ರೋಹಿತ್ ಶರ್ಮಾ ಒಡಿಐ ನಿವೃತ್ತಿ ಬಗ್ಗೆ ಸ್ಪಷ್ಟನೆ ನೀಡಿದ ಬ್ಯಾಟಿಂಗ್ ಕೋಚ್!
ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ XI
ಭಾರತ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪ ನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಶಿವಂ ದುಬೇ, ಕುಲ್ದೀಪ್ ಯಾದವ್, ಗುರ್ನೂರ್ ಬ್ರಾರ್, ಜಸ್‌ಪ್ರೀತ್ ಬುಮ್ರಾ, ಪ್ರಸಿಧ್ ಕೃಷ್ಣ
ಇಂಗ್ಲೆಂಡ್: ಜೇಕಬ್ ಬೆಥೆಲ್, ಬೆನ್ ಡಕೆಟ್, ಜೋ ರೂಟ್, ಹ್ಯಾರಿ ಬ್ರೂಕ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ಸ್ಯಾಮ್ ಕರನ್, ವಿಲ್ ಜ್ಯಾಕ್ಸ್, ಗಸ್ ಅಟ್ಕಿನ್ಸನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಸಾಕಿಬ್ ಮಹ್ಮೂದ್