ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ENG vs IND: ನಾಲ್ಕನೇ ಟೆಸ್ಟ್‌ ಪಂದ್ಯದಲ್ಲಿ ವಿಶ್ವದಾಖಲೆ ಬರೆಯುವ ಸನಿಹದಲ್ಲಿ ಜೋ ರೂಟ್‌!

ಲಾರ್ಡ್ಸ್‌ ಟೆಸ್ಟ್‌ನಲ್ಲಿ ಭರ್ಜರಿ ಶತಕ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಇಂಗ್ಲೆಂಡ್‌ ತಂಡದ ಮಾಜಿ ನಾಯಕ ಜೋ ರೂಟ್‌ ನಾಲ್ಕನೇ ಟೆಸ್ಟ್‌ನಲ್ಲಿ ಮಹತ್ವದ ದಾಖಲೆಯೊಂದನ್ನು ನಿರ್ಮಿಸುವ ಸಾಧ್ಯತೆ ಇದೆ. ಇನ್ನು ರೂಟ್ ತಮ್ಮ ಟೆಸ್ಟ್‌ ಕ್ರಿಕೆಟ್‌ ವೃತ್ತಿ ಬದುಕಿನಲ್ಲಿ ಮತ್ತೊಂದು ದಾಖಲೆ ನಿರ್ಮಿಸುವತ್ತ ಹೆಜ್ಜೆ ಇಟ್ಟಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ನಲ್ಲಿ 6000 ರನ್ ಗಳಿಸಿದ ವಿಶ್ವದ ಮೊದಲ ಆಟಗಾರರಾಗುವ ಸಾಧ್ಯತೆ ಇದೆ.

IND vs ENG: ವಿಶ್ವ ದಾಖಲೆ ಬರೆಯುವ ಸನಿಹದಲ್ಲಿ ಜೋ ರೂಟ್‌!

6000 ರನ್‌ಗಳ ಸನಿಹದಲ್ಲಿ ಜೋ ರೂಟ್‌.

Profile Ramesh Kote Jul 16, 2025 8:44 PM

ಲಂಡನ್‌: ಲಾರ್ಡ್ಸ್‌ ಟೆಸ್ಟ್‌ನಲ್ಲಿ ಭರ್ಜರಿ ಶತಕ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇಂಗ್ಲೆಂಡ್‌ (England) ತಂಡದ ಮಾಜಿ ನಾಯಕ ಜೋ ರೂಟ್‌ (Joe Root) ನಾಲ್ಕನೇ ಟೆಸ್ಟ್‌ನಲ್ಲಿ (IND vs ENG) ಮಹತ್ವದ ದಾಖಲೆಯೊಂದನ್ನು ನಿರ್ಮಿಸುವ ಸಾಧ್ಯತೆ ಇದೆ. ತೆಂಡೂಲ್ಕರ್-ಆಂಡರ್ಸನ್ ಟ್ರೋಫಿ ಟೂರ್ನಿಯಲ್ಲಿ ನಿರೀಕ್ಷಿತ ಪ್ರದರ್ಶನ ತೋರದೇ ನಿರಾಸೆ ಮೂಡಿಸಿದ್ದರೂ, ಲಾರ್ಡ್ಸ್‌ನಲ್ಲಿ ತಮ್ಮ 37ನೇ ಟೆಸ್ಟ್ ಶತಕದ ಮೂಲಕ ಜೋ ರೂಟ್ ದಿಗ್ಗಜರ ದಾಖಲೆಯನ್ನು ಮುರಿದಿದ್ದರು. ಅವರ ಶತಕ ಇಂಗ್ಲೆಂಡ್ ಗೆಲುವಿಗೆ ಪ್ರಮುಖ ಕಾರಣವಾಗಿದ್ದು, ಪ್ರಥಮ ಇನಿಂಗ್ಸ್‌ನಲ್ಲಿ ತಂಡವು 387 ರನ್‌ಗಳ ಭರ್ಜರಿ ಮೊತ್ತವನ್ನು ದಾಖಲಿಸಿತ್ತು. ಈ ಮೂಲಕ ಭಾರತ ತನ್ನ ಪ್ರಥಮ ಇನಿಂಗ್ಸ್‌ನಲ್ಲಿ ಮುನ್ನಡೆ ಪಡೆಯಲು ಸಾಧ್ಯವಾಗಲಿಲ್ಲ. ದ್ವಿತೀಯ ಇನಿಂಗ್ಸ್‌ನಲ್ಲಿ ಇಂಗ್ಲೆಂಡ್ 192 ರನ್‌ಗಳಿಗೆ ಆಲೌಟಾದರೂ, ಭಾರತ ಕೇವಲ 22 ರನ್‌ಗಳಿಂದ ಸೋಲನ್ನು ಕಂಡಿತು.

ಟೆಸ್ಟ್ ಕ್ರಿಕೆಟ್‌ನ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾದ ಜೋ ರೂಟ್, ಮುಂದಿನ ಎರಡೂ ಪಂದ್ಯಗಳಲ್ಲೂ ಇದೇ ಫಾರ್ಮ್‌ ಮುಂದುವರಿಸುವ ಸಾಧ್ಯತೆ ಇದೆ. ಇನ್ನು ರೂಟ್ ತಮ್ಮ ಟೆಸ್ಟ್‌ ಕ್ರಿಕೆಟ್‌ ವೃತ್ತಿ ಬದುಕಿನಲ್ಲಿ ಮತ್ತೊಂದು ದಾಖಲೆ ನಿರ್ಮಿಸುವತ್ತ ದಾಪುಗಾಲು ಇಡುತ್ತಿದ್ದಾರೆ. ವರ್ಲ್ಡ್ ಟೆಸ್ಟ್ ಚಾಂಪಿಯನ್‌ಷಿಪ್‌ನಲ್ಲಿ (WTC) 6000 ರನ್ ಗಳಿಸಿದ ವಿಶ್ವದ ಮೊದಲ ಆಟಗಾರರಾಗುವ ಸಾಧ್ಯತೆ ಇದೆ. ಈಗಾಗಲೇ ಈ ಟೂರ್ನಿಯಲ್ಲಿ 5796 ರನ್‌ ಕಹಾಕಿರುವ ಜೋ ರೂಟ್‌, 204 ರನ್‌ಗಳ ಅಗತ್ಯವಿದೆ. ಇನ್ನು ಆಸ್ಟ್ರೇಲಿಯಾದ ಸ್ಟೀವನ್‌ ಸ್ಮಿತ್‌ 4278 ರನ್‌ ಗಳಿಸುವ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ.

IND vs ENG: ಕರುಣ್‌ ನಾಯರ್‌ ಔಟ್‌, ನಾಲ್ಕನೇ ಟೆಸ್ಟ್‌ಗೆ ಭಾರತದ ಪ್ಲೇಯಿಂಗ್‌ XIನಲ್ಲಿ 2 ಬದಲಾವಣೆ ಸಾಧ್ಯತೆ!

ಆದಾಗ್ಯೂ, ರೂಟ್ ಅವರ ಈ ಸಾಧನೆಗಳ ನಡುವೆಯೂ ಇಂಗ್ಲೆಂಡ್ ತಂಡ ಆರಂಭಿಕ ಮೂರು ಡಬ್ಲ್ಯುಟಿಸಿ ಆವೃತ್ತಿಗಳಲ್ಲಿ ಫೈನಲ್‌ಗೆ ಅರ್ಹತೆ ಪಡೆಯಲು ವಿಫಲವಾಗಿವೆ. ಇದೀಗ ಭಾರತದ ವಿರುದ್ಧ ಟೆಸ್ಟ್‌ ಸರಣಿಯಲ್ಲಿ 2-1 ಮುನ್ನಡೆ ಹೊಂದಿರುವ ಇಂಗ್ಲೆಂಡ್, ಮುಂದಿನ ಎರಡು ಪಂದ್ಯಗಳನ್ನು ಗೆದ್ದರೆ, ನಾಲ್ಕನೇ ಆವೃತ್ತಿಯ ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್‌ ಟೂರ್ನಿಯಲ್ಲಿ ಶುಭಾರಂಭ ಕಾಣಲಿದೆ.

ಐಸಿಸಿ ಟೆಸ್ಟ್‌ ಶ್ರೇಯಾಂಕದಲ್ಲಿ ಮತ್ತೆ ಅಗ್ರ ಸ್ಥಾನಕ್ಕೇರಿದ ಜೋ ರೂಟ್‌

ಉತ್ತಮ ಫಾರ್ಮ್‌ನಲ್ಲಿರು ಜೋ ರೂಟ್‌ ಜುಲೈ 16ರಂದು ಬಿಡುಗಡೆಯಾದ ನೂತನ ಐಸಿಸಿ ಟೆಸ್ಟ್‌ ಶ್ರೇಯಾಂಕ ಪಟ್ಟಿಯಲ್ಲಿ 888 ಪಾಯಿಂಟ್ಸ್‌ನೊಂದಿಗೆ ಪುನಃ ಅಗ್ರ ಸ್ಥಾನಕ್ಕೇರಿದ್ದಾರೆ. ಇದುವರೆಗೂ ಮೊದಲ ಸ್ಥಾನದಲ್ಲಿದ್ದ ಹ್ಯಾರಿ ಬ್ರೂಕ್‌ 3 ನೇ ಸ್ಥಾನಕ್ಕೆ ಕುಸಿದಿದ್ದಾರೆ. ಹ್ಯಾರಿ ಅವರು ಭಾರತ ತಂಡದ ವಿಫಲರಾಗುತ್ತಿದ್ದಾರೆ.

IND vs ENG: ʻತುಂಬಾ ನಿರಾಶೆಯಾಯಿತುʼ-ಭಾರತ ತಂಡವನ್ನು ಟೀಕಿಸಿದ ಸೌರವ್‌ ಗಂಗೂಲಿ!

ನಾಲ್ಕನೇ ಟೆಸ್ಟ್‌ ಯಾವಾಗ?

ಭಾರತ ಹಾಗೂ ಇಂಗ್ಲೆಂಡ್‌ ತಂಡಗಳ ನಡುವಣ ನಾಲ್ಕನೇ ಟೆಸ್ಟ್‌ ಪಂದ್ಯ ಜುಲೈ 23 ರಂದು ಮ್ಯಾಂಚೆಸ್ಟರ್‌ನ ಓಲ್ಡ್‌ ಟ್ರಾಫರ್ಡ್‌ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ. ಇನ್ನುಳಿದ ಎರಡು ಪಂದ್ಯಗಳಲ್ಲಿ ಜೋ ರೂಟ್‌ ಒಟ್ಟು 200ಕ್ಕೂ ಅಧಿಕ ರನ್‌ಗಳನ್ನು ಗಳಿಸಿದರೆ, ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್‌ನಲ್ಲಿ 6000 ರನ್‌ಗಳನ್ನು ಪೂರ್ಣಗೊಳಿಸಲಿದ್ದಾರೆ.

ಬರಹ: ಕೆ ಎನ್ ರಂಗು ಚಿತ್ರದುರ್ಗ