ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IND vs ENG: ಜೋಫ್ರಾ ಆರ್ಚರ್‌ ಇಲ್ಲ, ಎರಡನೇ ಟೆಸ್ಟ್‌ಗೆ ಇಂಗ್ಲೆಂಡ್‌ನ ಪ್ಲೇಯಿಂಗ್‌ XI ಪ್ರಕಟ!

England Playing XI: ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್‌ ಸರಣಿಯ ಎರಡನೇ ಪಂದ್ಯ ಬರ್ಮಿಂಗ್‌ಹ್ಯಾಮ್‌ನ ಎಜ್‌ಬಾಸ್ಟನ್‌ನಲ್ಲಿ ಜುಲೈ 2 ರಂದು ಆರಂಭವಾಗಲಿದೆ. ಎರಡನೇ ಟೆಸ್ಟ್‌ಗೆ ಇಂಗ್ಲೆಂಡ್ ತನ್ನ ಪ್ಲೇಯಿಂಗ್ XI ಅನ್ನು ಜೂನ್‌ 30 ರಂದು ಪ್ರಕಟಿಸಿದೆ. ಮೊದಲನೇ ಪಂದ್ಯವನ್ನು ಆಡಿದ್ದ ಅದೇ ಆಡುವ ಬಳಗವನ್ನು ಉಳಿಸಿಕೊಳ್ಳಲಾಗಿದೆ.

ಎರಡನೇ ಟೆಸ್ಟ್‌ ಪಂದ್ಯಕ್ಕೆ ಇಂಗ್ಲೆಂಡ್‌ ಪ್ಲೇಯಿಂಗ್‌ XI ಪ್ರಕಟ.

ಬರ್ಮಿಂಗ್‌ಹ್ಯಾಮ್‌: ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ (IND vs ENG) ಎರಡನೇ ಪಂದ್ಯ ಜುಲೈ 2ರ ಬುಧವಾರದಂದು ಎಜ್‌ಬಾಸ್ಟನ್‌ನಲ್ಲಿ ಆರಂಭವಾಗಲಿದೆ. ಮೊದಲ ಟೆಸ್ಟ್‌ ಪಂದ್ಯದಂತೆ ಈ ಹಣಾಹಣಿಗೂ ಇಂಗ್ಲೆಂಡ್ ತನ್ನ ಪ್ಲೇಯಿಂಗ್ 11 ಅನ್ನು 2 ದಿನಗಳ ಮೊದಲೇ ಘೋಷಿಸಿದೆ. ಮಾರಕ ವೇಗಿ ಜೋಫ್ರಾ ಆರ್ಚರ್ (Jofra Archer) ಈ ಪಂದ್ಯದಲ್ಲಿಯೂ ಆಡುತ್ತಿಲ್ಲ ಎಂಬುದು ಭಾರತೀಯ ಅಭಿಮಾನಿಗಳಿಗೆ ಸಮಾಧಾನಕರ ವಿಷಯವಾಗಿದೆ. ಆರ್ಚರ್ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಡಬಹುದು ಎಂದು ಹೇಳಲಾಗಿತ್ತು. ಆದರೆ. ಮೊದಲನೇ ಟೆಸ್ಟ್‌ ಆಡಿದ್ದ ಅದೇ ಆಡುವ ಬಳಗವನ್ನು ಎರಡನೇ ಟೆಸ್ಟ್‌ಗೆ ಇಂಗ್ಲೆಂಡ್ ಉಳಿಸಿಕೊಂಡಿದೆ.

ಮೊದಲ ಟೆಸ್ಟ್ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್‌ ಪ್ರದರ್ಶನವನ್ನು ತೋರಿದ್ದ ಇಂಗ್ಲೆಂಡ್‌ನ ಆರಂಭಿಕ ಬೆನ್ ಡಕೆಟ್, ಹ್ಯಾರಿ ಬ್ರೂಕ್ ಮತ್ತು ಜೋ ರೂಟ್ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಎಜ್‌ಬಾಸ್ಟನ್‌ನಲ್ಲಿ ಜೋ ರೂಟ್ ಅವರ ದಾಖಲೆ ಅದ್ಭುತವಾಗಿದೆ. ಎರಡನೇ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡ ಹಿಡಿತ ಸಾಧಿಸಬೇಕೆಂದರೆ, ಅವರು ಬೆನ್ ಡಕೆಟ್, ಹ್ಯಾರಿ ಬ್ರೂಕ್ ಮತ್ತು ಜೋ ರೂಟ್ ಅವರನ್ನು ಆದಷ್ಟು ಬೇಗ ಔಟ್ ಮಾಡಬೇಕಾಗುತ್ತದೆ.

IND vs ENG: ರಾಹುಲ್‌ ದ್ರಾವಿಡ್‌ ದಾಖಲೆ ಮುರಿಯುವ ಸನಿಹದಲ್ಲಿ ಜೋ ರೂಟ್‌!

5 ವಿಕೆಟ್‌ಗಳಿಂದ ಗೆಲುವು ಸಾಧಿಸಿದ್ದ ಇಂಗ್ಲೆಂಡ್‌

ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲನೇ ಪಂದ್ಯ ಲೀಡ್ಸ್‌ನ ಹೆಡಿಂಗ್ಲೆಯಲ್ಲಿ ನಡೆದಿತ್ತು. ಇದರಲ್ಲಿ ಭಾರತ ತಂಡ, ಅದ್ಭುತ ಪ್ರದರ್ಶನವನ್ನು ತೋರಿತ್ತು. ಆದರೆ, ಇದರ ಹೊರತಾಗಿಯೂ ಇಂಗ್ಲೆಂಡ್ 5 ವಿಕೆಟ್‌ಗಳಿಂದ ಗೆದ್ದುಕೊಂಡಿತ್ತು. ಪ್ರವಾಸಿ ತಂಡದಲ್ಲಿ ನಾಲ್ವರು ಆಟಗಾರರು 5 ಶತಕಗಳನ್ನು ಗಳಿಸಿದರೂ, ಕೆಳ ಮದ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ವೈಫಲ್ಯದಿಂದ ಟೀಮ್‌ ಇಂಡಿಯಾ ಸೋಲಿನ ನಿರಾಶೆ ಅನುಭವಿಸಿತ್ತು.. ಇಂಗ್ಲೆಂಡ್‌ಗೆ ಭಾರತ ತಂಡ 371 ರನ್‌ಗಳ ಗುರಿಯನ್ನು ನೀಡಿತ್ತು. ಕೊನೆಯ ದಿನದಂದು, ಆತಿಥೇಯರಿಗೆ ಗೆಲ್ಲಲು 350 ರನ್‌ಗಳ ಅಗತ್ಯವಿತ್ತು. ಇಂಗ್ಲೆಂಡ್ ಈ ಗುರಿಯನ್ನು ಸುಲಭವಾಗಿ ತಲುಪಿತು.



ಎರಡನೇ ಟೆಸ್ಟ್‌ಗೆ ಇಂಗ್ಲೆಂಡ್‌ ಪ್ಲೇಯಿಂಗ್‌ XI

ಝ್ಯಾಕ್‌ ಕ್ರಾವ್ಲಿ (ಆರಂಭಿಕ ಬ್ಯಾಟ್ಸ್‌ಮನ್‌)

ಬೆನ್‌ ಡಕೆಟ್‌ (ಆರಂಭಿಕ ಬ್ಯಾಟ್ಸ್‌ಮನ್‌)

ಒಲ್ಲಿ ಪೋಪ್‌ (ಬ್ಯಾಟ್ಸ್‌ಮನ್‌)

ಜೋ ರೂಟ್‌ (ಬ್ಯಾಟ್ಸ್‌ಮನ್‌)

ಹ್ಯಾರಿ ಬ್ರೂಕ್‌ (ಬ್ಯಾಟ್ಸ್‌ಮನ್‌)

ಬೆನ್‌ ಸ್ಟೋಕ್ಸ್‌ (ನಾಯಕ, ಆಲ್‌ರೌಂಡರ್‌)

ಜೇಮಿ ಸ್ಮಿತ್‌ (ವಿಕೆಟ್‌ ಕೀಪರ್‌)

ಕ್ರಿಸ್‌ ವೋಕ್ಸ್‌ (ವೇಗದ ಬೌಲಿಂಗ್‌ ಆಲ್‌ರೌಂಡರ್‌)

ಬ್ರೈಡೆನ್‌ ಕಾರ್ಸ್‌ (ವೇಗದ ಬೌಲರ್‌)

ಜಾಶ್‌ ಟಾಂಗ್‌ (ವೇಗದ ಬೌಲರ್‌)

ಶೋಯೆಬ್‌ ಬಷೀರ್‌ (ಸ್ಪಿನ್ನರ್‌)

IND vs ENG: ವಿರಾಟ್ ಕೊಹ್ಲಿಯ ಮಹತ್ವದ ದಾಖಲೆ ಮುರಿಯುವ ಸನಿಹದಲ್ಲಿ ರಿಷಭ್ ಪಂತ್!

ಪಂದ್ಯದ ವಿವರ

ಎರಡನೇ ಟೆಸ್ಟ್‌ ಪಂದ್ಯ

ಭಾರತ vs ಇಂಗ್ಲೆಂಡ್‌

ದಿನಾಂಕ: ಜುಲೈ 2 ರಿಂದ 6

ಸಮಯ: ಭಾರತೀಯ ಕಾಲಮಾನ ಮಧ್ಯಾಹ್ನ 03: 30ಕ್ಕೆ ಆರಂಭ

ಸ್ಥಳ: ಎಜ್‌ಬಾಸ್ಟನ್‌ ಸ್ಟೇಡಿಯಂ, ಬರ್ಮಿಂಗ್‌ಹ್ಯಾಮ್‌

ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌

ಲೈವ್‌ ಸ್ಟ್ರೀಮಿಂಗ್‌: ಡಿಸ್ನಿ ಹಾಟ್‌ಸ್ಟಾರ್‌