IND vs ENG: ಐದನೇ ಟೆಸ್ಟ್‌ಗೆ ಭಾರತದ ಪ್ಲೇಯಿಂಗ್ XI ಆರಿಸಿದ ವಾಸೀಮ್ ಜಾಫರ್!
ಇಂಗ್ಲೆಂಡ್ ವಿರುದ್ಧ ಜುಲೈ 31 ರಂದು ಆರಂಭವಾಗಲಿರುವ ಐದನೇ ಹಾಗೂ ಟೆಸ್ಟ್ ಸರಣಿಯ ಕೊನೆಯ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್ XI ಅನ್ನು ಮಾಜಿ ಕ್ರಿಕೆಟಿಗ ವಾಸೀಮ್ ಜಾಫರ್ ಆರಿಸಿದ್ದಾರೆ. ಅವರು ಈ ಪಂದ್ಯದಲ್ಲಿ ಚೈನಾಮನ್ ಸ್ಪಿನ್ನರ್ ಕುಲ್ದೀಪ್ ಯಾದವ್‌ಗೆ ಅವಕಾಶ ನೀಡಬೇಕೆಂದು ಆಗ್ರಹಿಸಿದ್ದಾರೆ.

ಭಾರತದ ಪ್ಲೇಯಿಂಗ್ XI ಆರಿಸಿದ ವಾಸೀಮ್ ಜಾಫರ್.

ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವಣ ಐದನೇ ಹಾಗೂ ಟೆಸ್ಟ್ ಸರಣಿಯ ಕೊನೆಯ ಪಂದ್ಯ(IND vs ENG) ಗುರುವಾರ ಕೆನಿಂಗ್ಟನ್ ಓವಲ್‌ನಲ್ಲಿ ಆರಂಭವಾಗಲಿದೆ. ಈ ಪಂದ್ಯಕ್ಕೂ ಮುನ್ನ ಭಾರತ ತಂಡದ ಪ್ಲೇಯಿಂಗ್ XI (India's Playing Xi) ಬಗ್ಗೆ ತೀವ್ರ ಕುತೂಹಲ ಕೆರಳಿಸಿದೆ. ಇಂಗ್ಲೆಂಡ್‌ನ ಪ್ಲೇಯಿಂಗ್ XI ಅನ್ನು ಈಗಾಗಲೇ ಪ್ರಕಟಿಸಲಾಗಿದೆ. ಆದರೆ, ಶುಭಮನ್ ಗಿಲ್ ನಾಯಕತ್ವದ ಭಾರತ ತಂಡ ತನ್ನ ಆಡುವ ಬಳಗವನ್ನು ಪಂದ್ಯಕ್ಕೂ ಮುನ್ನ ಟಾಸ್ ವೇಳೆ ಪ್ರಕಟಿಸಲಿದೆ. ಇದರ ನಡುವೆ ಭಾರತೀಯ ಮಾಜಿ ಕ್ರಿಕೆಟಿಗ ವಾಸೀಮ್ ಜಾಫರ್ (Wasim Jaffer), ಕೆನಿಂಗ್ಟನ್ ಓವಲ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯಕ್ಕೆ ತಮ್ಮ ನೆಚ್ಚಿನ ಭಾರತದ ಪ್ಲೇಯಿಂಗ್ XI ಆರಿಸಿದ್ದಾರೆ.
ಐದನೇ ಟೆಸ್ಟ್‌ಗೆ ವಾಸೀಮ್ ಜಾಫರ್ ಆಯ್ಕೆ ಮಾಡಿರುವ ಭಾರತದ ಪ್ಲೇಯಿಂಗ್ XIನಲ್ಲಿ ಶಾರ್ದುಲ್ ಠಾಕೂರ್ ಅವರನ್ನು ಹೊರಗಿಡುವ ಮೂಲಕ ಅರ್ಷದೀಪ್ ಸಿಂಗ್‌ಗೆ ಅವಕಾಶ ನೀಡಿದ್ದಾರೆ. ಯಶಸ್ವಿ ಜೈಸ್ವಾಲ್ ಮತ್ತು ಕೆಎಲ್ ರಾಹುಲ್ ಅವರನ್ನು ಆರಂಭಿಕ ಬ್ಯಾಟ್ಸ್‌ಮನ್‌ಗಳಾಗಿ ಅವರು ಆಯ್ಕೆ ಮಾಡಿದ್ದಾರೆ. ಅವರು ಸಾಯಿ ಸುದರ್ಶನ್, ಶುಭಮನ್ ಗಿಲ್, ಧ್ರುವ್ ಜುರೆಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಆಕಾಶ್ ದೀಪ್ ಮತ್ತು ಮೊಹಮ್ಮದ್ ಸಿರಾಜ್ ಅವರನ್ನು ತಂಡದಲ್ಲಿ ಸೇರಿಸಿಕೊಂಡಿದ್ದಾರೆ.
IND vs ENG: ಐದನೇ ಟೆಸ್ಟ್‌ಗೆ ಭಾರತ ತಂಡದಲ್ಲಿ 3 ಬದಲಾವಣೆಯನ್ನು ಸೂಚಿಸಿದ ಇರ್ಫಾನ್ ಪಠಾಣ್!
ವಾಸೀಮ್ ಜಾಫರ್ ಅವರು ಸಾಯಿ ಸುದರ್ಶನ್ ಅವರನ್ನು ಮೂರನೇ ಕ್ರಮಾಂಕದಲ್ಲಿ ಆಯ್ಕೆ ಮಾಡಿದ್ದಾರೆ. ಸುದರ್ಶನ್ ಮ್ಯಾಂಚೆಸ್ಟರ್ ಟೆಸ್ಟ್‌ನಲ್ಲಿ ಅರ್ಧಶತಕ ಗಳಿಸಿದ್ದಾರೆ. ಶುಭಮನ್ ಗಿಲ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸಲಿದ್ದಾರೆ. ಗಿಲ್ ಉತ್ತಮ ಫಾರ್ಮ್‌ನಲ್ಲಿದ್ದಾರೆ ಮತ್ತು ಸಾಕಷ್ಟು ರನ್ ಗಳಿಸಿದ್ದಾರೆ. ಈ ಪಂದ್ಯದಲ್ಲೂ ಅವರು ತಂಡಕ್ಕೆ ಮುಖ್ಯವಾಗಲಿದ್ದಾರೆ. ಭಾರತ ಕೆಳ ಕ್ರಮಾಂಕದಲ್ಲಿ ಕೆಲವು ಬದಲಾವಣೆಗಳನ್ನು ಮಾಡಬಹುದು ಎಂದು ವಾಸಿಮ್ ಜಾಫರ್ ನಂಬಿದ್ದಾರೆ. ಅವರ ಪ್ರಕಾರ, ಗಾಯಗೊಂಡ ರಿಷಭ್ ಪಂತ್ ಬದಲಿಗೆ ಧ್ರುವ್ ಜುರೆಲ್ ಆಯ್ಕೆಯಾಗಲಿದ್ದಾರೆ. ಲಾರ್ಡ್ಸ್ ಮತ್ತು ಮ್ಯಾಂಚೆಸ್ಟರ್‌ನಲ್ಲಿ ಪಂತ್ ಗಾಯಗೊಂಡ ನಂತರ ಕಳೆದ ಎರಡು ಪಂದ್ಯಗಳಲ್ಲಿ ಜುರೆಲ್ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ನಿರ್ವಹಿಸಿದ್ದರು.
ರವೀಂದ್ರ ಜಡೇಜಾ ಮತ್ತು ವಾಷಿಂಗ್ಟನ್ ಸುಂದರ್ ಅವರನ್ನು ಜಾಫರ್ ತಂಡದಲ್ಲಿ ಉಳಿಸಿಕೊಂಡಿದ್ದಾರೆ. ಮ್ಯಾಂಚೆಸ್ಟರ್ ಟೆಸ್ಟ್‌ನಲ್ಲಿ ಇಬ್ಬರೂ ಆಟಗಾರರು ಬ್ಯಾಟಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿ ಭಾರತವನ್ನು ಸೋಲಿನಿಂದ ಪಾರು ಮಾಡಿದ್ದಾರೆ. ಜಾಫರ್, ಕುಲ್‌ದೀಪ್ ಯಾದವ್ ಅವರನ್ನು ತಂಡದಲ್ಲಿ ಸೇರಿಸಿಕೊಂಡಿದ್ದಾರೆ. ಕುಲ್‌ದೀಪ್ ಯಾದವ್, ಶಾರ್ದುಲ್ ಠಾಕೂರ್ ಅವರ ಸ್ಥಾನದಲ್ಲಿ ಆಡಬಹುದು. ಠಾಕೂರ್ ಬೌಲಿಂಗ್ ಹಾಗೂ ಬ್ಯಾಟಿಂಗ್‌ನಲ್ಲಿ ಉತ್ತಮವಾಗಿ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಕಳೆದ ಪಂದ್ಯದಲ್ಲಿ ಅವರು ಗಮನಾರ್ಹ ಕೊಡುಗೆ ನೀಡಿದ್ದರೂ, ಬೌಲಿಂಗ್‌ನಲ್ಲಿ ಎಡವಿದ್ದರು. ಕಳೆದ ನಾಲ್ಕು ಪಂದ್ಯಗಳಲ್ಲಿ ಕುಲ್‌ದೀಪ್ ಅವರನ್ನು ಆಡಿಸದಿದ್ದಕ್ಕಾಗಿ ತಂಡದ ಆಡಳಿತ ಮಂಡಳಿ ಸಾಕಷ್ಟು ಟೀಕೆಗಳನ್ನು ಎದುರಿಸಿತ್ತು.
IND vs ENG 5th Test: ಅಂತಿಮ ಟೆಸ್ಟ್‌ನ ಪಿಚ್ ರಿಪೋರ್ಟ್, ಹವಾಮಾನ ವರದಿ ಹೀಗಿದೆ
ಅರ್ಷದೀಪ್ ಸಿಂಗ್ ಓವಲ್‌ನಲ್ಲಿ ತಮ್ಮ ಮೊದಲ ಪಂದ್ಯವನ್ನು ಆಡಲಿದ್ದಾರೆ. ಅವರು ಅನ್ಶುಲ್ ಕಾಂಬೋಜ್ ಅವರ ಸ್ಥಾನವನ್ನು ಅಲಂಕರಿಸಲಿದ್ದಾರೆ. ವರ್ಕ್‌ಲೋಡ್ ಮ್ಯಾನೇಜ್‌ಮೆಂಟ್ ಕಾರಣ ಜಸ್‌ಪ್ರೀತ್ ಈ ಪಂದ್ಯದಲ್ಲಿ ಆಡುವುದಿಲ್ಲ. ಅರ್ಷದೀಪ್ ಸಿಂಗ್ ಜೊತೆಗೆ, ಆಕಾಶ್ ದೀಪ್ ಮತ್ತು ಮೊಹಮ್ಮದ್ ಸಿರಾಜ್ ವೇಗದ ಬೌಲಿಂಗ್ ದಾಳಿಯನ್ನು ನಿರ್ವಹಿಸಲಿದ್ದಾರೆ.
ಐದನೇ ಟೆಸ್ಟ್‌ಗೆ ವಾಸೀಮ್ ಜಾಫರ್ ಆಯ್ಕೆಯ ಭಾರತ ತಂಡದ ಪ್ಲೇಯಿಂಗ್ XI
ಯಶಸ್ವಿ ಜೈಸ್ವಾಲ್
ಕೆಎಲ್ ರಾಹುಲ್
ಸಾಯಿ ಸುದರ್ಶನ್
ಶುಬ್‌ಮನ್ ಗಿಲ್ (ನಾಯಕ)
ಧ್ರುವ್ ಜುರೆಲ್ (ವಿಕೆಟ್ ಕೀಪರ್)
ರವೀಂದ್ರ ಜಡೇಜಾ
ವಾಷಿಂಗ್ಟನ್ ಸುಂದರ್
ಕುಲ್ದೀಪ್ ಯಾದವ್
ಆಕಾಶ್ ದೀಪ್
ಅರ್ಷದೀಪ್ ಸಿಂಗ್
ಮೊಹಮ್ಮದ್ ಸಿರಾಜ್