ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IND vs ENG: ವೀರೇಂದ್ರ ಸೆಹ್ವಾಗ್‌ರ ದೊಡ್ಡ ದಾಖಲೆ ಮುರಿಯುವ ಸನಿಹದಲ್ಲಿ ರಿಷಭ್‌ ಪಂತ್‌!

ಜುಲೈ 23 ರಂದು ಮ್ಯಾಂಚೆಸ್ಟರ್‌ನ ಓಲ್ಡ್‌ ಟ್ರಾಫರ್ಡ್‌ ಕ್ರೀಡಾಂಗಣದಲ್ಲಿಆರಂಭವಾಗಲಿರುವ ನಾಲ್ಕನೇ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡದ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌, ಮಾಜಿ ಆರಂಭಿಕ ಬ್ಯಾಟ್ಸ್‌ಮನ್‌ ವೀರೇಂದ್ರ ಸೆಹ್ವಾಗ್‌ ಅವರ ದಾಖಲೆಯನ್ನು ಮುರಿಯುವ ಸಾಧ್ಯತೆ ಇದೆ. ಈ ಸರಣಿಯಲ್ಲಿ ಆಡಿದ ಮೂರು ಪಂದ್ಯಗಳಲ್ಲಿ ಪಂತ್‌ ಒಟ್ಟು 425 ರನ್‌ಗಳನ್ನು ಕಲೆ ಹಾಕಿದ್ದಾರೆ.

ವೀರೇಂದ್ರ ಸೆಹ್ವಾಗ್‌ ದಾಖಲೆ ಮುರಿಯಲು ರಿಷಭ್‌ ಪಂತ್‌ಗೆ ಕೇವಲ ಮೂರು ಸಿಕ್ಸರ್‌ ಅಗತ್ಯ.

ನವದೆಹಲಿ: ಭಾರತ ಹಾಗೂ ಇಂಗ್ಲೆಂಡ್‌ ತಂಡಗಳ(IND vs ENG) ನಡುವಣ ನಾಲ್ಕನೇ ಟೆಸ್ಟ್‌ ಪಂದ್ಯ ಜುಲೈ 23 ರಂದು ಮ್ಯಾಂಚೆಸ್ಟರ್‌ನ ಓಲ್ಡ್‌ ಟ್ರಾಫರ್ಡ್‌ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ.ಈ ಪಂದ್ಯದ ನಿಮಿತ್ತ ಟೀಮ್‌ ಇಂಡಿಯಾ ಕಠಿಣ ಅಭ್ಯಾಸ ನಡೆಸುತ್ತಿದೆ. ಕಳೆದ ಪಂದ್ಯದಲ್ಲಿ ಸೋಲು ಅನುಭವಿಸಿದ್ದ ಟೀಮ್‌ ಇಂಡಿಯಾ ಇದೀಗ ಈ ಪಂದ್ಯವನ್ನು ಗೆದ್ದು ಸರಣಿಯನ್ನು ಜೀವಂತವಾಗಿರಿಸಿಕೊಳ್ಳಬೇಕಾದ ಅಗತ್ಯವಿದೆ. ಇದರ ನಡುವೆ ಭಾರತ ತಂಡದ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌ (Rishabh Pant), ಮಾಜಿ ಸ್ಪೋಟಕ ಆರಂಭಿಕ ವೀರೇಂದ್ರ ಸೆಹ್ವಾಗ್‌ (Virender Sehwag) ಅವರ ದಾಖಲೆಯನ್ನು ಮುರಿಯುವ ಸನಿಹದಲ್ಲಿದ್ದಾರೆ. ಪ್ರಸ್ತುತ ಟೆಸ್ಟ್‌ ಸರಣಿಯಲ್ಲಿ ಅದ್ಭುತ ಫಾರ್ಮ್‌ನಲ್ಲಿರುವ ರಿಷಭ್‌ ಪಂತ್‌ 425 ರನ್‌ಗಳನ್ನು ಬಾರಿಸಿದ್ದು, ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

ಈ ಟೆಸ್ಟ್‌ ಸರಣಿಯಲ್ಲಿ ಭಯಾನಕ ಫಾರ್ಮ್‌ನಲ್ಲಿರುವ ರಿಷಭ್‌ ಪಂತ್‌, ಎದುರಾಳಿ ಬೌಲರ್‌ಗಳಿಗೆ ನಡುಕು ಹುಟ್ಟಿಸಿದ್ದರೆ. ಅವರು ಈ ಸರಣಿಯಲ್ಲಿ 70.83ರ ಸರಾಸರಿಯಲ್ಲಿ ಎರಡು ಶತಕಗಳು ಹಾಗೂ ಹಲವು ಅರ್ಧಶತಕಗಳನ್ನು ಬಾರಿಸಿದ್ದಾರೆ. ಇಂಗ್ಲೆಂಡ್‌ ವಿರುದ್ಧ ನಾಲ್ಕನೇ ಟೆಸ್ಟ್‌ ಪಂದ್ಯದಲ್ಲಿ ರಿಷಭ್‌ ಪಂತ್‌ ಕ್ರೀಸ್‌ನಲ್ಲಿ ದೀರ್ಘಾವಧಿ ಸಮಯ ಕಳೆದರೆ, ಅವರು ದೊಡ್ಡ ದಾಖಲೆಯೊಂದನ್ನು ಮುರಿಯಲಿದ್ದಾರೆ. ಈ ಪಂದ್ಯದಲ್ಲಿ ಕೇವಲ ಮೂರು ಸಿಕ್ಸರ್‌ಗಳನ್ನು ಬಾರಿಸಿದರೆ, ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ ಬಾರಿಸಿದ ಭಾರತೀಯ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಲಿದ್ದಾರೆ.

ENG vs IND: ಮ್ಯಾಂಚೆಸ್ಟರ್ ಟೆಸ್ಟ್‌ನಲ್ಲಿ 19 ವರ್ಷದ ಏಷ್ಯನ್ ದಾಖಲೆ ಮೇಲೆ ಕಣ್ಣಿಟ್ಟ ಶುಭ್‌ಮನ್ ಗಿಲ್

ವಿಕೆಟ್‌ ಕೀಪರ್‌-ಬ್ಯಾಟ್ಸ್‌ಮನ್‌ ಪ್ರಸ್ತುತ ಭಾರತದ ಪರ ಅತಿ ಹೆಚ್ಚು ಟೆಸ್ಟ್‌ ಸಿಕ್ಸರ್‌ಗಳನ್ನು ಬಾರಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ಮಾಜಿ ನಾಯಕ ರೋಹಿತ್‌ ಶರ್ಮಾ ಅವರೊಂದಿಗೆ ಎರಡನೇ ಸ್ಥಾನವನ್ನು ಅಲಂಕರಿಸಿದ್ದಾರೆ. ಪಂತ್‌ 46 ಪಂದ್ಯಗಳಲ್ಲಿ 88 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಇನ್ನು ಕೇವಲ ಮೂರು ಸಿಕ್ಸರ್‌ ಬಾರಿಸಿದ ಭಾರತದ ಪರ ಅತಿ ಹೆಚ್ಚು ಟೆಸ್ಟ್‌ ಶತಕಗಳನ್ನು ಬಾರಿಸಿದ ಬ್ಯಾಟ್ಸ್‌ಮನ್‌ ಎನಿಸಿಕೊಳ್ಳಲಿದ್ದಾರೆ. ಆ ಮೂಲಕ ಮಾಜಿ ಆರಂಭಿಕ ಬ್ಯಾಟ್ಸ್‌ಮನ್‌ ವೀರೇಂದ್ರ ಸೆಹ್ವಾಗ್‌ ಅವರ ದಾಖಲೆಯನ್ನು ಮುರಿಯಲಿದ್ದಾರೆ. ಸೆಹ್ವಾಗ್‌ 103 ಟೆಸ್ಟ್‌ ಟೆಸ್ಟ್‌ ಪಂದ್ಯಗಳಲ್ಲಿ 90 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಇದೀಗ ಪಂತ್‌ಗೆ ಕೇವಲ ಮೂರು ಸಿಕ್ಸರ್‌ ಅಗತ್ಯವಿದೆ.

ನಾಲ್ಕನೇ ಟೆಸ್ಟ್‌ಗೆ ಪಂತ್‌ ಅನುಮಾನ

ಆದರೆ, ರಿಷಭ್‌ ಪಂತ್‌ ಮೂರನೇ ಟೆಸ್ಟ್‌ ಪಂದ್ಯದ ವೇಳೆ ಗಾಯಕ್ಕೆ ತುತ್ತಾಗಿದ್ದಾರೆ. ಅವರು ವಿಕೆಟ್‌ ಕೀಪಿಂಗ್‌ ವೇಲೆ ಚೆಂಡನ್ನು ತನ್ನ ತೋರು ಬೆರಳಿಗೆ ತಗುಲಿಸಿಕೊಂಡಿದ್ದರು. ಈ ಕಾರಣದಿಂದಾಗಿ ಅವರು ಲಾರ್ಡ್ಸ್‌ ಟೆಸ್ಟ್‌ನಲ್ಲಿ ವಿಕೆಟ್‌ ಕೀಪಿಂಗ್‌ನಲ್ಲಿ ಮುಂದಿವರಿದಿರಲಿಲ್ಲ. ಇವರ ಬದಲು ಧ್ರುವ್‌ ಜುರೆಲ್‌ ವಿಕೆಟ್‌ ಕೀಪಿಂಗ್‌ ಜವಾಬ್ದಾರಿಯನ್ನು ನಿರ್ವಹಿಸಿದ್ದರು. ಇದೀಗ ಪಂತ್‌ ಸಂಪೂರ್ಣವಾಗಿ ಇನ್ನು ಗುಣಮುಖರಾಗಿರುವುದು ಅನುಮಾನ. ಒಂದು ವೇಳೆ ಅವರು ಸಂಪೂರ್ಣ ಫಿಟ್‌ ಇಲ್ಲವಾದರೆ ನಾಲ್ಕನೇ ಟೆಸ್ಟ್‌ನಲ್ಲಿ ಆಡುವುದು ಅನುಮಾನ. ಹಾಗಾಗಿ ಇವರ ಸ್ಥಾನದಲ್ಲಿ ಧ್ರುವ್‌ ಜುರೆಲ್‌ ಆಡಬಹುದು.

ENG vs IND: ಟೀಂ ಇಂಡಿಯಾಗೆ ಗಾಯಾಳುಗಳ ಚಿಂತೆ; ಆಲ್‌ರೌಂಡರ್‌ ಸರಣಿಯಿಂದ ಔಟ್‌!

ರಿಷಭ್‌ ಪಂತ್‌ ಗಾಯದ ಬಗ್ಗೆ ಸಹಾಯಕ ಕೋಚ್‌ ಹೇಳಿದ್ದೇನು?

ರಿಷಭ್‌ ಪಂತ್‌ ಅವರು ನಾಲ್ಕನೇ ಟೆಸ್ಟ್‌ ಪಂದ್ಯದಲ್ಲಿ ಪೂರ್ಣ ಪ್ರಮಾಣದ ಬ್ಯಾಟ್ಸ್‌ಮನ್‌ ಆಗಿ ಆಡಲಿದ್ದಾರೆಂದು ಭಾರತ ತಂಡದ ಸಹಾಯಕ ಕೋಚ್‌ ರಯಾನ್‌ ಟೆನ್‌ ಡಶಾಟ್‌ ಹೇಳಿದ್ದಾರೆ. ಏಕೆಂದರೆ ಅವರು ಬ್ಯಾಟಿಂಗ್‌ನಲ್ಲಿ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಅದರಲ್ಲಿಯೂ ಭಾರತ ತಂಡ ಈ ಸರಣಿಯನ್ನು ಜೀವಂತವಾಗಿರಿಸಿಕೊಳ್ಳಬೇಕೆಂದರೆ ಮ್ಯಾಂಚೆಸ್ಟರ್‌ ಟೆಸ್ಟ್‌ ಅನ್ನು ಗೆಲ್ಲಲೇಬೇಕಾಗಿದೆ. ಹಾಗಾಗಿ ಇನ್‌ಫಾರ್ಮ್‌ ಬ್ಯಾಟರ್‌ ರಿಷಭ್‌ ಪಂತ್‌ ಭಾರತ ತಂಡಕ್ಕೆ ತುಂಬಾ ಮುಖ್ಯವಾಗಿದೆ. ಹಾಗಾಗಿ ಪ್ರವಾಸಿ ತಂಡದ ಟೀಮ್‌ ಮ್ಯಾನೇಜ್‌ಮೆಂಟ್‌ ಪಂತ್‌ ಅವರನ್ನು ಕಳೆದುಕೊಳ್ಳಲು ಇಷ್ಟಪಡುವುದಿಲ್ಲ. ಆದರೆ, ಮಾಜಿ ಹೆಡ್‌ ಕೋಚ್‌ ರವಿ ಶಾಸ್ತ್ರಿ, ರಿಷಭ್‌ ಪಂತ್‌ ಬ್ಯಾಟ್ಸ್‌ಮನ್‌ ಆಗಿ ಆಡುವುದು ಬೇಡ, ಸಂಪೂರ್ಣವಾಗಿ ಗುಣಮುಖರಾಗಿ ಕೊನೆಯ ಟಸ್ಟ್‌ ಪಂದ್ಯವನ್ನು ಆಡಲಿ ಎಂದು ಆಗ್ರಹಿಸಿದ್ದಾರೆ.