ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಆಂಗ್ಲರ ನಾಡಿನಲ್ಲಿ ಪಾಕಿಸ್ತಾನಕ್ಕೆ ಮುಖಭಂಗ: ಟೆಸ್ಟ್‌ ಸರಣಿ ಕ್ಲೀನ್‌ ಸ್ವೀಪ್‌ ಮಾಡಿಕೊಂಡ ಇಂಗ್ಲೆಂಡ್‌!

ಎಜ್‌ಬಾಸ್ಟನ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಇಂಗ್ಲೆಂಡ್ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಇಂಗ್ಲೆಂಡ್ 3-0 ಅಂತರದಲ್ಲಿ ಕ್ಲೀನ್‌ಸ್ವೀಪ್ ಮಾಡಿದೆ. ಸರಣಿಯುದ್ದಕ್ಕೂ ಪ್ರಾಬಲ್ಯ ಮೆರೆದ ಇಂಗ್ಲೆಂಡ್, ಮೂರನೇ ಟೆಸ್ಟ್‌ನಲ್ಲೂ ಪಾಕಿಸ್ತಾನಕ್ಕೆ ಯಾವುದೇ ಅವಕಾಶ ನೀಡಲಿಲ್ಲ.

ಪಾಕಿಸ್ತಾನ ಎದುರು ಟೆಸ್ಟ್‌ ಸರಣಿ ಕ್ಲೀನ್‌ ಸ್ವೀಪ್‌ ಮಾಡಿಕೊಂಡ ಇಂಗ್ಲೆಂಡ್‌!

ಪಾಕಿಸ್ತಾನ ಎದುರು ಮೂರನೇ ಟೆಸ್ಟ್‌ ಗೆದ್ದ ಇಂಗ್ಲೆಂಡ್‌. -

Profile
Ramesh Kote Sep 12, 2026 10:08 PM

ಬರ್ಮಿಂಗ್‌ಹ್ಯಾಮ್‌: ಇಲ್ಲಿನ ಎಜ್‌ಬಾಸ್ಟನ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ (IND vs PAK) ಪಾಕಿಸ್ತಾನ ವಿರುದ್ಧ ಇಂಗ್ಲೆಂಡ್ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಇಂಗ್ಲೆಂಡ್ (England) 3-0 ಅಂತರದಲ್ಲಿ ಕ್ಲೀನ್‌ಸ್ವೀಪ್ ಮಾಡಿದೆ. ಈ ಅದ್ಭುತ ಗೆಲುವಿನ ಪರಿಣಾಮವಾಗಿ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2025-27 ಅಂಕಪಟ್ಟಿಯಲ್ಲಿ ಇಂಗ್ಲೆಂಡ್ ತನ್ನ ಸ್ಥಾನವನ್ನು ಸುಧಾರಿಸಿಕೊಂಡಿದೆ. 7ನೇ ಸ್ಥಾನದಲ್ಲಿದ್ದ ಇಂಗ್ಲೆಂಡ್ ಇದೀಗ 6ನೇ ಸ್ಥಾನಕ್ಕೆ ಜಿಗಿದಿದೆ. ಮತ್ತೊಂದೆಡೆ, ಇಡೀ ಸರಣಿಯಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ ಪಾಕಿಸ್ತಾನ ತಂಡ ಅಂಕಪಟ್ಟಿಯ ಕೊನೆಯ ಸ್ಥಾನದಲ್ಲೇ ಮುಂದುವರಿದಿದೆ.

ಟಾಸ್ ಸೋತು ಮೊದಲು ಬ್ಯಾಟ್‌ ಮಾಡಿದ ಪಾಕಿಸ್ತಾನ ತಂಡಕ್ಕೆ ಇಂಗ್ಲೆಂಡ್ ವೇಗದ ಬೌಲರ್‌ಗಳು ಆರಂಭದಲ್ಲೇ ಆಘಾತ ನೀಡಿದರು. ಜಾಶ್ ಟಂಗ್ (4/42), ಓಲ್ಲಿ ರಾಬಿನ್ಸನ್ (3/15) ಮತ್ತು ಜೋಫ್ರಾ ಆರ್ಚರ್ (3/25) ಅವರ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ ಪಾಕಿಸ್ತಾನ, ಮೊದಲ ಇನಿಂಗ್ಸ್‌ನಲ್ಲಿ ಕೇವಲ 133 ರನ್‌ಗಳಿಗೆ ಆಲೌಟ್ ಆಯಿತು. ಪಾಕಿಸ್ತಾನದ ಪರ ಸೌದ್ ಶಕೀಲ್ 43 ರನ್ ಹಾಗೂ ಮೊಹಮ್ಮದ್ ಅಬ್ಬಾಸ್ 21 ರನ್ ಗಳಿಸಿದ್ದು ಬಿಟ್ಟರೆ, ಉಳಿದ ಯಾವುದೇ ಬ್ಯಾಟರ್‌ಗಳು ಕ್ರೀಸ್‌ನಲ್ಲಿ ಹೆಚ್ಚು ಕಾಲ ನಿಲ್ಲಲು ಸಾಧ್ಯವಾಗಲಿಲ್ಲ.

ಕ್ರಿಕೆಟ್‌ ಇತಿಹಾಸದಲ್ಲಿಯೇ ಅತ್ಯಂತ ಶ್ರೇಷ್ಠ ನಾಯಕ ಎಂಎಸ್‌ ಧೋನಿ ಎಂದ ರಾಹುಲ್‌ ದ್ರಾವಿಡ್‌!

ಇಂಗ್ಲೆಂಡ್‌ಗೆ 320 ರನ್‌ಗಳ ಭಾರೀ ಮುನ್ನಡೆ

ಇದಕ್ಕೆ ಪ್ರತಿಯಾಗಿ ಇಂಗ್ಲೆಂಡ್ ತನ್ನ ಪ್ರಥಮ ಇನಿಂಗ್ಸ್‌ನಲ್ಲಿ 453 ರನ್‌ಗಳನ್ನು ಕಲೆಹಾಕಿತು. ಇದರೊಂದಿಗೆ ಪಾಕಿಸ್ತಾನದ ವಿರುದ್ಧ ಬರೋಬ್ಬರಿ 320 ರನ್‌ಗಳ ಮುನ್ನಡೆ ಸಾಧಿಸಿತು. ಇಂಗ್ಲೆಂಡ್ ಪರ ಹ್ಯಾರಿ ಬ್ರೂಕ್ (75), ಜೇಮಿ ಸ್ಮಿತ್ (69), ಡ್ಯಾನ್ ಲಾರೆನ್ಸ್ (65), ಎಮಿಲಿಯೋ ಗೇ (60) ಮತ್ತು ಒಲ್ಲಿ ರಾಬಿನ್ಸನ್ (50) ಅರ್ಧಶತಕದ ಇನಿಂಗ್ಸ್‌ಗಳನ್ನು ಆಡಿದರು. ಪಾಕಿಸ್ತಾನದ ಪರ ರಜಾವುಲ್ಲಾ 4 ವಿಕೆಟ್‌ಗಳನ್ನು ಕಬಳಿಸಿದರು. ಆದರೂ ಇಂಗ್ಲೆಂಡ್‌ನ ಬೃಹತ್ ಮೊತ್ತವನ್ನು ತಡೆಯಲು ಪಾಕ್ ಬೌಲರ್‌ಗಳಿಗೆ ಸಾಧ್ಯವಾಗಲಿಲ್ಲ.

ಪಾಕಿಸ್ತಾನದ ಕಮ್‌ಬ್ಯಾಕ್ ಪ್ರಯತ್ನ

320 ರನ್‌ಗಳ ಹಿನ್ನಡೆಯ ಬಳಿಕ ಎರಡನೇ ಇನಿಂಗ್ಸ್‌ನಲ್ಲಿ ಪಾಕಿಸ್ತಾನ ಉತ್ತಮ ಹೋರಾಟ ನೀಡಿತು. ತಂಡ 449 ರನ್‌ಗಳನ್ನು ಕಲೆಹಾಕುವ ಮೂಲಕ ಇಂಗ್ಲೆಂಡ್‌ಗೆ ಸವಾಲಿನ ಮೊತ್ತ ನೀಡಿತು. ಪಾಕಿಸ್ತಾನದ ನಾಯಕ ಶಾನ್ ಮಸೂದ್ 95 ರನ್ ಗಳಿಸಿ ಕೇವಲ 5 ರನ್‌ಗಳಿಂದ ಶತಕ ವಂಚಿತರಾದರು. ಬಾಬರ್ ಆಝಂ (76) ಮತ್ತು ಅಜಾನ್ ಅವೈಸ್ (59) ಕೂಡ ತಂಡದ ಮೊತ್ತ ಹೆಚ್ಚಿಸುವಲ್ಲಿ ಪ್ರಮುಖ ಕೊಡುಗೆ ನೀಡಿದರು.

ENG vs PAK: ಅರ್ಧಶತಕ ಬಾರಿಸಿ ಮಿಸ್ಬಾ ಉಲ್‌ ಹಕ್‌ ಒಳಗೊಂಡ ಎಲೈಟ್‌ ಲಿಸ್ಟ್‌ ಸೇರಿದ ಬಾಬರ್‌ ಆಝಮ್!

ಕೆಳ ಕ್ರಮಾಂಕದಲ್ಲಿ ರಜಾವುಲ್ಲಾ ಸ್ಫೋಟಕ ಬ್ಯಾಟಿಂಗ್ ನಡೆಸಿದರು. ಕೇವಲ 63 ಎಸೆತಗಳಲ್ಲಿ 9 ಸಿಕ್ಸರ್‌ಗಳ ನೆರವಿನಿಂದ 81 ರನ್ ಸಿಡಿಸಿ ಪಾಕಿಸ್ತಾನದ ಮೊತ್ತವನ್ನು 449ಕ್ಕೆ ಕೊಂಡೊಯ್ದರು. ಇಂಗ್ಲೆಂಡ್ ಪರ ಗಸ್ ಅಟ್ಕಿನ್ಸನ್ 3 ವಿಕೆಟ್ ಪಡೆದರೆ, ಒಲ್ಲಿ ರಾಬಿನ್ಸನ್, ಜೋಶ್ ಟಂಗ್ ಮತ್ತು ಡ್ಯಾನ್ ಲಾರೆನ್ಸ್ ತಲಾ 2 ವಿಕೆಟ್ ಕಬಳಿಸಿದರು.

ಎರಡನೇ ಇನಿಂಗ್ಸ್‌ನಲ್ಲಿ ಇಂಗ್ಲೆಂಡ್‌ಗೆ ಸುಲಭ ಗೆಲುವು

ಪಾಕಿಸ್ತಾನ ಬಲಿಷ್ಠವಾಗಿ ಕಮ್‌ಬ್ಯಾಕ್ ಮಾಡಿದರೂ, ಪಂದ್ಯ ಹಾಗೂ ಸರಣಿ ಗೆಲ್ಲಲು ಇಂಗ್ಲೆಂಡ್‌ಗೆ ಕೇವಲ 130 ರನ್‌ಗಳ ಗುರಿ ಎದುರಾಯಿತು. ಆದರೆ ಗುರಿ ಬೆನ್ನತ್ತಿದ ಇಂಗ್ಲೆಂಡ್‌ಗೆ ಆರಂಭದಲ್ಲೇ ಆಘಾತ ಎದುರಾಯಿತು. ಮೊಹಮ್ಮದ್ ಅಬ್ಬಾಸ್ ಆರಂಭಿಕ ಬ್ಯಾಟರ್‌ಗಳಾದ ಬೆನ್ ಡಕೆಟ್ (0) ಮತ್ತು ಎಮಿಲಿಯೋ ಗೇ (0) ಅವರನ್ನು ಖಾತೆ ತೆರೆಯುವ ಮುನ್ನವೇ ಪೆವಿಲಿಯನ್‌ಗೆ ಕಳುಹಿಸಿದರು. ಆ ಬಳಿಕ ನಾಯಕ ಜೋ ರೂಟ್ (62) ಹಾಗೂ ವಿಕೆಟ್‌ಕೀಪರ್ ಬ್ಯಾಟರ್ ಜೋರ್ಡನ್ ಕಾಕ್ಸ್ (59) ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದರು. ಈ ಜೋಡಿ ಯಾವುದೇ ಮತ್ತೊಂದು ವಿಕೆಟ್ ಕಳೆದುಕೊಳ್ಳದೆ ಕೇವಲ 24.2 ಓವರ್‌ಗಳಲ್ಲಿ ಇಂಗ್ಲೆಂಡ್‌ಗೆ 8 ವಿಕೆಟ್‌ಗಳ ಭರ್ಜರಿ ಗೆಲುವು ತಂದುಕೊಟ್ಟಿತು. ಈ ಗೆಲುವಿನೊಂದಿಗೆ ಇಂಗ್ಲೆಂಡ್ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್‌ಸ್ವೀಪ್ ಮಾಡಿತು.