ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IND vs ENG: ಟಾಸ್ ಗೆದ್ದ ಇಂಗ್ಲೆಂಡ್‌ ಬೌಲಿಂಗ್‌ ಆಯ್ಕೆ; 3 ಬದಲಾವಣೆ ಮಾಡಿದ ಟೀಂ ಇಂಡಿಯಾ

India vs England: ಆತಿಥೇಯ ಇಂಗ್ಲೆಂಡ್‌ ಮತ್ತು ಟೀಂ ಇಂಡೊಯಾ ನಡುವಿನ ದ್ವಿತೀಯ ಟೆಸ್ಟ್‌ ಆರಂಭಗೊಂಡಿದೆ. ಟಾಸ್‌ ಗೆದ್ದ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಭಾರತ ತಂಡಲ್ಲಿ 3 ಬದಲಾವಣೆಗಳನ್ನು ಮಾಡಿದೆ. ಶಾರ್ದೂಲ್ ಠಾಕೂರ್ ಬದಲಿಗೆ ನಿತೀಶ್ ಕುಮಾರ್ ಮತ್ತು ಜಸ್‌ಪ್ರೀತ್‌ ಬುಮ್ರಾ ಬದಲಿಗೆ ಆಕಾಶ್ ದೀಪ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಜತೆಗೆ ವಾಷಿಂಗ್ಟನ್ ಸುಂದರ್ ಕೂಡ ಆಡುತ್ತಿದ್ದಾರೆ.

ಬರ್ಮಿಂಗ್‌ಹ್ಯಾಮ್‌: ಲೀಡ್ಸ್‌ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್‌ ವಿರುದ್ಧ ಸೋತ ಟೀಂ ಇಂಡಿಯಾ ಎಡ್ಜ್‌ಬಾಸ್ಟನ್‌ನಲ್ಲಿ ಬುಧವಾರ (ಜು. 2) ಆರಂಭವಾದ ದ್ವಿತೀಯ ಟೆಸ್ಟ್‌ ಪಂದ್ಯದಲ್ಲಿ ಗೆಲುವಿನ ವಿಶ್ವಾಸದೊಂದಿಗೆ ಕಣಕ್ಕಿಳಿದಿದೆ. ಶುಭ್​ಮನ್ ಗಿಲ್ (Shubman Gill) ಪಡೆ ಈ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಸಮಬಲ ಸಾಧಿಸಲು ಮುಂದಾಗಿದೆ. ಇದೀಗ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ (Ben Stokes) ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಭಾರತ ತಂಡಲ್ಲಿ 3 ಬದಲಾವಣೆಗಳನ್ನು ಮಾಡಲಾಗಿದ್ದು, ಶಾರ್ದೂಲ್ ಠಾಕೂರ್ ಬದಲಿಗೆ ನಿತೀಶ್ ಕುಮಾರ್ ಮತ್ತು ಜಸ್‌ಪ್ರೀತ್‌ ಬುಮ್ರಾ ಬದಲಿಗೆ ಆಕಾಶ್ ದೀಪ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಜತೆಗೆ ವಾಷಿಂಗ್ಟನ್ ಸುಂದರ್ ಕೂಡ ಆಡುತ್ತಿದ್ದಾರೆ.

ಇನ್ನು ಇಂಗ್ಲೆಂಡ್‌ ತಂಡ ಆಡುವ ಬಳಗದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಅಂದರೆ ಲೀಡ್ಸ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಆಡಿದ್ದ ಅದೇ 11 ಆಟಗಾರರು ಕಣಕ್ಕಿಳಿಯಲಿದ್ದಾರೆ.



ಈ ಸುದ್ದಿಯನ್ನೂ ಓದಿ: IND vs BAN: ಟೀಮ್‌ ಇಂಡಿಯಾದ ಬಾಂಗ್ಲಾ ಪ್ರವಾಸ ಡೌಟ್!

ಭಾರತ ತಂಡದ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಕೆ.ಎಲ್.ರಾಹುಲ್, ಕರುಣ್ ನಾಯರ್, ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್‌ ಕೀಪರ್‌), ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜ, ವಾಷಿಂಗ್ಟನ್ ಸುಂದರ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಇಂಗ್ಲೆಂಡ್‌ ತಂಡದ ಆಡುವ ಬಳಗ: ಜಾಕ್‌ ಕ್ರಾಲಿ, ಬೆನ್‌ ಡಕೆಟ್‌, ಒಲ್ಲಿ ಪೋಪ್‌, ಜೋ ರೂಟ್‌, ಹ್ಯಾರಿ ಬ್ರೂಕ್‌, ಬೆನ್‌ ಸ್ಟೋಕ್ಸ್‌ (ನಾಯಕ), ಜೇಮಿ ಸ್ಮಿತ್‌ (ವಿಕೆಟ್‌ ಕೀಪರ್‌), ಕ್ರಿಸ್‌ ವೋಕ್ಸ್‌, ಬ್ರೈಡೆನ್‌ ಕಾರ್ಸ್‌, ಜಾಶ್‌ ಟಾಂಗ್‌, ಶೋಯೆಬ್‌ ಬಶೀರ್‌.