ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

IND vs ENG Semifinal: ಇಂಗ್ಲೆಂಡ್‌ ಎದುರು ಟಾಸ್‌ ಸೋತ ಭಾರತ ಮೊದಲ ಬ್ಯಾಟಿಂಗ್‌!

IND vs ENG T20 World Cup Semifinal: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್‌ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಇಂಗ್ಲೆಂಡ್‌ ತಂಡ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಹಾಗಾಗಿ ಭಾರತ ಮೊದಲು ಬ್ಯಾಟ್‌ ಮಾಡಲಿದೆ.

IND vs ENG" ಟಾಸ್‌ ಸೋತ ಭಾರತ ತಂಡ ಮೊದಲ ಬ್ಯಾಟಿಂಗ್‌!

ಭಾರತ vs ಇಂಗ್ಲೆಂಡ್‌ ನಡುವಣ ಟಿ20 ವಿಶ್ವಕಪ್‌ ಸೆಮಿಫೈನಲ್‌. -

Profile
Ramesh Kote Mar 5, 2026 6:53 PM

ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2026ರ ಐಸಿಸಿ ಟಿ20 ವಿಶ್ವಕಪ್‌ (T20 World Cup 2026) ಟೂರ್ನಿಯ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್‌ ತಂಡಗಳು (IND vs ENG) ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಇಂಗ್ಲೆಂಡ್‌ ತಂಡದ ನಾಯಕ ಹ್ಯಾರಿ ಬ್ರೂಕ್‌ (Harry Brook), ಮೊದಲು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಆ ಮೂಲಕ ಎದುರಾಳಿ ಭಾರತ ತಂಡವನ್ನು ಮೊದಲ ಬ್ಯಾಟಿಂಗ್‌ಗೆ ಆಹ್ವಾನಿಸಿದ್ದಾರೆ. ಈ ಟೂರ್ನಿಯಲ್ಲಿ ಇದೇ ಮೊದಲ ಬಾರಿ ಭಾರತ ಹಾಗೂ ಇಂಗ್ಲೆಂಡ್‌ ತಂಡಗಳು ಮುಖಾಮುಖಿಯಾಗುತ್ತಿವೆ.

ಭಾರತ ತಂಡದ ಪ್ಲೇಯಿಂಗ್‌ xiನಲ್ಲಿ ಯಾವುದೇ ಬದಲಾವಣೆ ಇಲ್ಲ. ವೆಸ್ಟ್‌ ಇಂಡೀಸ್‌ ವಿರುದ್ಧ ಅದೇ ಆಡುವ ಬಳಗವನ್ನು ಈ ಪಂದ್ಯಕ್ಕೆ ಉಳಿಸಿಕೊಳ್ಳಲಾಗಿದೆ. ಕಳೆದ ಪಂದ್ಯದಲ್ಲಿ ವೈಫಲ್ಯ ಅನುಭವಿಸಿದ ಹೊರತಾಗಿಯೂ ಅಭಿಷೇಕ್‌ ಶರ್ಮಾಗೆ ಮತ್ತೊಂದು ಅವಕಾಶವನ್ನು ನೀಡಲಾಗಿದೆ. ಇನ್ನು ಇಂಗ್ಲೆಂಡ್‌ ತಂಡದ ಪ್ಲೇಯಿಂಗ್‌ Xiನಲ್ಲಿ ಒಂದು ಬದಲಾವಣೆಯನ್ನು ತರಲಾಗಿದೆ. ರೆಹಾನ್‌ ಅಹ್ಮದ್‌ ಅವರ ಸ್ಥಾನಕ್ಕೆ ಜೇಮಿ ಓವರ್ಟನ್‌ ಆಂಗ್ಲರ ಆಡುವ ಬಳಗಕ್ಕೆ ಬಂದಿದ್ದಾರೆ.

IND vs ENG: ಸೆಮಿಫೈನಲ್‌ಗೆ ಭಾರತ ತಂಡದಲ್ಲಿ ಒಂದು ಬದಲಾವಣೆ ಸೂಚಿಸಿದ ಮೈಕಲ್‌ ವಾನ್‌!

ಬುಧವಾರ ನಡೆದಿದ್ದ ಮೊದಲನೇ ಸೆಮಿಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲೆಂಡ್‌ ತಂಡಗಳು ಕಾದಾಟ ನಡೆಸಿದ್ದವು. ಈ ಪಂದ್ಯದಲ್ಲಿ ಫಿನ್‌ ಆಲೆನ್‌ ಶತಕದ ಬಲದಿಂದ ನ್ಯೂಜಿಲೆಂಡ್‌ ತಂಡ, ಹರಿಣ ಪಡೆಯನ್ನು ಮಣಿಸಿ ಫೈನಲ್‌ಗೆ ಪ್ರವೇಶ ಮಾಡಿದೆ. ಇದೀಗ ಭಾರತ ಹಾಗೂ ಇಂಗ್ಲೆಂಡ್‌ ತಂಡಗಳ ನಡುವೆ ಗೆದ್ದ ತಂಡ ಫೈನಲ್‌ನಲ್ಲಿ ಕಿವೀಸ್‌ ಎದುರು ಪ್ರಶಸ್ತಿಗಾಗಿ ಕಾದಾಟ ನಡೆಸಲಿವೆ.



ಇತ್ತಂಡಗಳ ಪ್ಲೇಯಿಂಗ್‌ XI

ಭಾರತ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ ವಿಕೆಟ್‌ ಕೀಪರ್), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್(ನಾಐಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್‌ಪ್ರೀತ್ ಬುಮ್ರಾ

ನ್ಯೂಜಿಲೆಂಡ್‌: ಫಿಲಿಪ್ ಸಾಲ್ಟ್, ಜೋಸ್ ಬಟ್ಲರ್(ವಿಕೆಟ್‌ ಕೀಪರ್‌), ಹ್ಯಾರಿ ಬ್ರೂಕ್(ನಾಯಕ), ಜಾಕೋಬ್ ಬೆಥೆಲ್, ಟಾಮ್ ಬ್ಯಾಂಟನ್, ಸ್ಯಾಮ್ ಕರನ್, ವಿಲ್ ಜ್ಯಾಕ್ಸ್, ಜೇಮೀ ಓವರ್ಟನ್, ಲಿಯಾಮ್ ಡಾಸನ್, ಜೋಫ್ರಾ ಆರ್ಚರ್, ಆದಿಲ್ ರಶೀದ್



ತಂಡಗಳು

ಭಾರತ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ ವಿಕೆಟ್‌ ಕೀಪರ್), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್(ನಾಐಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್‌ಪ್ರೀತ್ ಬುಮ್ರಾ, ಕುಲ್ದೀಪ್‌ ಯಾದವ್‌, ಮೊಹಮ್ಮದ್‌ ಸಿರಾಜ್‌, ರಿಂಕು ಸಿಂಗ್‌, ವಾಷಿಂಗ್ಟನ್‌ ಸುಂದರ್‌

ಇಂಗ್ಲೆಂಡ್‌: ಫಿಲಿಪ್ ಸಾಲ್ಟ್, ಜೋಸ್ ಬಟ್ಲರ್(ವಿಕೆಟ್‌ ಕೀಪರ್‌), ಹ್ಯಾರಿ ಬ್ರೂಕ್(ನಾಯಕ), ಜಾಕೋಬ್ ಬೆಥೆಲ್, ಟಾಮ್ ಬ್ಯಾಂಟನ್, ಸ್ಯಾಮ್ ಕರನ್, ವಿಲ್ ಜ್ಯಾಕ್ಸ್, ಜೇಮೀ ಓವರ್ಟನ್, ಲಿಯಾಮ್ ಡಾಸನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಬೆನ್‌ ಡಕೆಟ್‌, ಲ್ಯೂಕ್‌ ವುಡ್‌, ಜಾಶ್‌ ಟಾಂಗ್‌, ರೆಹಾನ್‌ ಅಹ್ಮದ್‌