ಕಾರ್ಡಿಫ್: ಇಲ್ಲಿನ ಸೋಫಿಯಾ ಗಾರ್ಡನ್ಸ್‌ನಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ (IND vs ENG) ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಪ್ರವಾಸಿ ಟೀಮ್ ಇಂಡಿಯಾವನ್ನು ಮೊದಲ ಬ್ಯಾಟಿಂಗ್‌ಗೆ ಆಹ್ವಾನ ನೀಡಿದ್ದಾರೆ. ಹಾಗಾಗಿ ಶುಭಮನ್ ಗಿಲ್ ನಾಯಕತ್ವದ ಭಾರತ ತಂಡ ಮೊದಲು ಬ್ಯಾಟ್ ಮಾಡಲಿದೆ.
ಮೊದಲನೇ ಪಂದ್ಯದ ಗೆಲುವಿನ ಮೂಲಕ ಏಕದಿನ ಸರಣಿಯಲ್ಲಿ 1-0 ಮುನ್ನಡೆಯ ವಿಶ್ವಾಸದಲ್ಲಿರುವ ಭಾರತ ತಂಡ, ಇದೀಗ ಎರಡನೇ ಪಂದ್ಯವನ್ನು ಗೆದ್ದು ಟಿ20ಐ ಸರಣಿಯನ್ನು ವಶಪಡಿಸಿಕೊಳ್ಳಲು ಎದುರು ನೋಡುತ್ತಿದೆ. ಈ ಪಂದ್ಯಕ್ಕೆ ಭಾರತ ತಂಡದಲ್ಲಿ ಒಂದು ಬದಲಾವಣೆಯನ್ನು ತರಲಾಗಿದೆ. ಕೆಎಲ್ ರಾಹುಲ್ ಅನಾರೋಗ್ಯದ ಕಾರಣ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಹಾಗಾಗಿ ಅವರ ಬದಲು ಇಶಾನ್ ಕಿಶನ್‌ಗೆ ಸ್ಥಾನ ನೀಡಲಾಗಿದೆ.
ಇನ್ನು ಇಂಗ್ಲೆಂಡ್ ತಂಡದ ಪ್ಲೇಯಿಂಗ್ XIನಲ್ಲಿ ಎರಡು ಬದಲಾವಣೆಯನ್ನು ತರಲಾಗಿದೆ. ಗಸ್ ಅಟ್ಕಿನ್ಸನ್ ಮತ್ತು ಸಾಕಿಬ್ ಮಹಮೂದ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದ್ದು, ಲಿಯಾಮ್ ಡಾಸನ್ ಹಾಗೂ ಜಾಶ್ ಟಂಗ್ ತಮ್ಮ ಸ್ಥಾನಗಳನ್ನು ಕಳೆದುಕೊಂಡಿದ್ದಾರೆ.
IND vs ENG: ʻಔಟಾದರೂ ಪರವಾಗಿಲ್ಲ, ಮುಕ್ತವಾಗಿ ಬ್ಯಾಟ್ ಮಾಡಿʼ-ರೋಹಿತ್ ಶರ್ಮಾಗೆ ಗಂಭೀರ್ ಸಲಹೆ!
ಮೊದಲನೇ ಏಕದಿನ ಪಂದ್ಯ ಗೆದ್ದಿದ್ದ ಭಾರತ
ಭಾರತ ತಂಡ ಬರ್ಮಿಂಗ್‌ಹ್ಯಾಮ್‌ನ ಎಜ್‌ಬಾಸ್ಟನ್‌ನಲ್ಲಿ ನಡೆದಿದ್ದ ಮೊದಲನೇ ಏಕದಿನ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್‌ಗಳಿಂದ ಗೆಲುವು ಪಡೆದಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಇಂಗ್ಲೆಂಡ್ ತಂಡ 258 ರನ್‌ಗಳನ್ನು ಕಲೆ ಹಾಕಿತ್ತು. ಬಳಿಕ ಗುರಿ ಹಿಂಬಾಲಿಸಿದ್ದ ಭಾರತ ತಂಡ 4 ವಿಕೆಟ್‌ಗಳನ್ನು ಕಳೆದುಕೊಂಡು ಗೆದ್ದು ಬೀಗಿತ್ತು. ಈ ಗೆಲುವಿನ ಮೂಲಕ ಟೀಮ್ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆಯನ್ನು ಪಡೆದುಕೊಂಡಿದೆ.
ಉಭಯ ತಂಡಗಳ ಪ್ಲೇಯಿಂಗ್ XI
ಭಾರತ: ರೋಹಿತ್ ಶರ್ಮಾ, ಶುಭ್‌ಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಇಶಾನ್ ಕಿಶನ್ (ವಿಕೆಟ್‌ಕೀಪರ್), ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್, ಶಿವಂ ದುಬೆ, ಅಕ್ಷರ್ ಪಟೇಲ್, ಗುರ್ನೂರ್ ಬ್ರಾರ್, ಜಸ್‌ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ
ಇಂಗ್ಲೆಂಡ್: ಬೆನ್ ಡಕೆಟ್, ಜೇಕಬ್ ಬೆಥೆಲ್, ಜೋ ರೂಟ್, ಹ್ಯಾರಿ ಬ್ರೂಕ್ (ನಾಯಕ), ಜೋಸ್ ಬಟ್ಲರ್ (ವಿಕೆಟ್‌ಕೀಪರ್), ಸ್ಯಾಮ್ ಕರನ್, ವಿಲ್ ಜ್ಯಾಕ್ಸ್, ಗಸ್ ಅಟ್ಕಿನ್ಸನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಸಾಕಿಬ್ ಮಹಮೂದ್.
ತಂಡಗಳು
ಭಾರತ: ರೋಹಿತ್ ಶರ್ಮಾ, ಶುಭ್‌ಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಇಶಾನ್ ಕಿಶನ್ (ವಿಕೆಟ್‌ಕೀಪರ್), ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್, ಶಿವಂ ದುಬೆ, ಅಕ್ಷರ್ ಪಟೇಲ್, ಗುರ್ನೂರ್ ಬ್ರಾರ್, ಜಸ್‌ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಕೆಎಲ್ ರಾಹುಲ್, ಕುಲ್ದೀಪ್ ಯಾದವ್, ಪ್ರಿನ್ಸ್ ಯಾದವ್, ಅರ್ಷದೀಪ್ ಸಿಂಗ್
ಇಂಗ್ಲೆಂಡ್: ಬೆನ್ ಡಕೆಟ್, ಜೇಕಬ್ ಬೆಥೆಲ್, ಜೋ ರೂಟ್, ಹ್ಯಾರಿ ಬ್ರೂಕ್ (ನಾಯಕ), ಜೋಸ್ ಬಟ್ಲರ್ (ವಿಕೆಟ್‌ಕೀಪರ್), ಸ್ಯಾಮ್ ಕರನ್, ವಿಲ್ ಜ್ಯಾಕ್ಸ್, ಗಸ್ ಅಟ್ಕಿನ್ಸನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಸಾಕಿಬ್ ಮಹಮೂದ್, ಬ್ರೈಡನ್ ಕಾರ್ಸ್, ಟಾಮ್ ಬ್ಯಾಂಟನ್, ಜೇಮ್ಸ್ ಕೋಲ್ಸ್, ರೆಹಾನ್ ಅಹ್ಮದ್, ಜಾಶ್ ಟಾಂಗ್, ಲಿಯಾನ್ ಡಾಸನ್