ಲಂಡನ್: ಇಲ್ಲಿನ ಲಾರ್ಡ್ಸ್ ಅಂಗಣದಲ್ಲಿ ಇದೀಗ ನಡೆಯುತ್ತಿರುವ ಮೂರನೇ ಹಾಗೂ ಏಕದಿನ ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ (IND vs ENG) ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ (Harry Brook) ಮೊದಲು ಬ್ಯಾಟಿಂಗ್ ಆರಿಸಿಕೊಂಡಿದ್ದಾರೆ. ಆ ಮೂಲಕ ಎದುರಾಳಿ ಭಾರತ ತಂಡಕ್ಕೆ ದೊಡ್ಡ ಮೊತ್ತದ ಗುರಿಯನ್ನು ನೀಡಲು ಎದುರು ನೋಡುತ್ತಿದ್ದಾರೆ. ಎರಡು ಪಂದ್ಯಗಳ ಬಳಿಕ ಸರಣಿಯಲ್ಲಿ 1-1 ಸಮಬಲ ಕಾಯ್ದುಕೊಂಡಿರುವ ಉಭಯ ತಂಡಗಳು, ಲಾರ್ಡ್ಸ್‌ನಲ್ಲಿ ಗೆದ್ದು ಏಕದಿನ ಸರಣಿಯನ್ನು ತನ್ನದಾಗಿಸಿಕೊಳ್ಳಲು ಎದುರು ನೋಡುತ್ತಿವೆ.
ಭಾರತ ತಂಡದ ಪ್ಲೇಯಿಂಗ್ XIನಲ್ಲಿ ಮಹತ್ವದ ಮೂರು ಬದಲಾವಣೆಗಳನ್ನು ತರಲಾಗಿದೆ ಎಂದು ಟಾಸ್ ವೇಳೆ ಭಾರತ ತಂಡದ ನಾಯಕ ಶುಭಮನ್ ಗಿಲ್ ಮಾಹಿತಿಯನ್ನು ನೀಡಿದ್ದಾರೆ. ಜಸ್‌ಪ್ರೀತ್ ಬುಮ್ರಾ ಸ್ಥಾನಕ್ಕೆ ಅರ್ಷದೀಪ್ ಸಿಂಗ್, ಶಿವಂ ದುಬೇ ಸ್ಥಾನಕ್ಕೆ ಕೆಎಲ್ ರಾಹುಲ್ ಹಾಗೂ ವಾಷಿಂಗ್ಟನ್ ಸುಂದರ್ ಸ್ಥಾನಕ್ಕೆ ಪ್ರಿನ್ಸ್ ಯಾದವ್ ಬಂದಿದ್ದಾರೆ. ಇದು ಕೊನೆಯ ಪಂದ್ಯವಾಗಿರುವ ಕಾರಣ ಟೀಮ್ ಮ್ಯಾನೇಜ್‌ಮೆಂಟ್ ಪ್ಲೇಯಿಂಗ್ XIನಲ್ಲಿ ಮಹತ್ವದ ಬದಲಾವಣೆಯನ್ನು ತರಲಾಗಿದೆ ಎಂದು ಹೇಳಬಹುದಾಗಿದೆ.
IND vs ENG: ನಿವೃತ್ತಿ ವದಂತಿಗಳ ನಡುವೆಯೂ ಗಂಭೀರ್ ಜೊತೆ ನಗುತ್ತಾ ಮಾತುಕತೆ ನಡೆಸಿದ ರೋಹಿತ್ ಶರ್ಮಾ!
ಇನ್ನು ಇಂಗ್ಲೆಂಡ್ ತಂಡದ ಪ್ಲೇಯಿಂಗ್ Xiನಲ್ಲಿ ಒಂದು ಬದಲಾವಣೆಯನ್ನು ತರಲಾಗಿದೆ. ಸಾಕಿಬ್ ಮಹ್ಮೂದ್ ಅವರ ಸ್ಥಾನಕ್ಕೆ ಜಾಶ್ ಟಂಗ್ ಪ್ಲೇಯಿಂಗ್ Xiಗೆ ಬಂದಿದ್ದಾರೆ. ಕಳೆದ ಪಂದ್ಯದಲ್ಲಿ ಗೆಲುವು ಪಡೆದಿದ್ದ ಇಂಗ್ಲೆಂಡ್ ತಂಡ, ಇದೀಗ ಮೂರನೇ ಪಂದ್ಯದಲ್ಲಿಯೂ ಅದೇ ಲಯವನ್ನು ಮುಂದುವರಿಸಿ ಏಕದಿನ ಸರಣಿಯನ್ನು ಮುಡಿಗೇರಿಸಿಕೊಳ್ಳಲು ಎದುರು ನೋಡುತ್ತಿದೆ. ಶುಭಮನ್ ಗಿಲ್ ನಾಯಕತ್ವದ ಭಾರತ ತಂಡದ ಪರಿಸ್ಥಿತಿ ಕೂಡ ಇದೇ ರೀತಿ ಇದೆ.
ಇತ್ತಂಡಗಳ ಪ್ಲೇಯಿಂಗ್ XI
ಭಾರತ: ರೋಹಿತ್ ಶರ್ಮಾ, ಶುಭಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಅಕ್ಷರ್ ಪಟೇಲ್, ಗುರ್ನೂರ್ ಬ್ರಾರ್, ಪ್ರಿನ್ಸ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿಧ್ ಕೃಷ್ಣ
ಇಂಗ್ಲೆಂಡ್: ಬೆನ್ ಡಕೆಟ್, ಜೇಕಬ್ ಬೆಥೆಲ್, ಜೋ ರೂಟ್, ಹ್ಯಾರಿ ಬ್ರೂಕ್ (ನಾಯಕ), ಜೋಸ್ ಬಟ್ಲರ್ ( ವಿಕೆಟ್ ಕೀಪರ್), ಸ್ಯಾಮ್ ಕರನ್, ವಿಲ್ ಜ್ಯಾಕ್ಸ್, ಗಸ್ ಅಟ್ಕಿನ್ಸನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಜಾಶ್ ಟಂಗ್
ಜಸ್‌ಪ್ರೀತ್ ಬುಮ್ರಾ ಏಕೆ ಆಡುತ್ತಿಲ್ಲ?
ಮೊದಲನೇ ಹಾಗೂ ಎರಡನೇ ಪಂದ್ಯದಲ್ಲಿ ಆಡಿದ್ದ ಭಾರತ ತಂಡದ ಹಿರಿಯ ವೇಗಿ ಜಸ್‌ಪ್ರೀತ್ ಬುಮ್ರಾ, ಇದೀಗ ಮೂರನೇ ಪಂದ್ಯದಿಂದ ಹೊರಗುಳಿದಿದ್ದಾರೆ. ಟಾಸ್ ವೇಳೆ ಬುಮ್ರಾ ಆಡದೇ ಇರಲು ಕಾರಣವೇನೆಂದು ನಾಯಕ ಶುಭಮನ್ ಗಿಲ್ ತಿಳಿಸಿದ್ದಾರೆ. ಮೊಣಕಾಲು ಗಾಯದ ಕಾರಣ ಬುಮ್ರಾ ಆಯ್ಕೆಗೆ ಅಲಭ್ಯರಾಗಿದ್ದಾರೆಂದು ಹೇಳಿದ್ದಾರೆ. ಹಾಗಾಗಿ ಇವರ ಸ್ಥಾನಕ್ಕೆ ಪ್ರಿನ್ಸ್ ಯಾದವ್‌ಗೆ ಚಾನ್ಸ್ ನೀಡಲಾಗಿದೆ.
IND vs ENG: ಮೂರನೇ ಒಡಿಐಗೂ ಮುನ್ನ ಭಾರತ ತಂಡಕ್ಕೆ ಆಘಾತ, ವಾಷಿಂಗ್ಟನ್ ಸುಂದರ್ ಔಟ್!
ತಂಡಗಳು
ಭಾರತ: ರೋಹಿತ್ ಶರ್ಮಾ, ಶುಭಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಅಕ್ಷರ್ ಪಟೇಲ್, ಗುರ್ನೂರ್ ಬ್ರಾರ್, ಪ್ರಿನ್ಸ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿಧ್ ಕೃಷ್ಣ, ಶಿವಂ ದುಬೇ, ಹರ್ಷ್ ದುಬೇ, ಜಸ್‌ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್
ಇಂಗ್ಲೆಂಡ್: ಬೆನ್ ಡಕೆಟ್, ಜೇಕಬ್ ಬೆಥೆಲ್, ಜೋ ರೂಟ್, ಹ್ಯಾರಿ ಬ್ರೂಕ್ (ನಾಯಕ), ಜೋಸ್ ಬಟ್ಲರ್ ( ವಿಕೆಟ್ ಕೀಪರ್), ಸ್ಯಾಮ್ ಕರನ್, ವಿಲ್ ಜ್ಯಾಕ್ಸ್, ಗಸ್ ಅಟ್ಕಿನ್ಸನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಜಾಶ್ ಟಂಗ್, ಸಾಕಿಬ್ ಮಹ್ಮೂದ್, ಬ್ರೈಡನ್ ಕಾರ್ಸ್, ಟಾಮ್ ಬ್ಯಾಂಟನ್, ಜೇಮ್ಸ್ ಕೋಲ್ಸ್, ರೆಹಾನ್ ಅಹ್ಮದ್, ಲಿಯಾಮ್ ಡಾಸನ್