ನವದೆಹಲಿ: ಭಾರತ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಅವರು ಐಸಿಸಿ ಏಕದಿನ ಶ್ರೇಯಾಂಕದಲ್ಲಿ (ICC ODI Rankings) ಅಗ್ರ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಇತ್ತೀಚೆಗೆ ವೆಸ್ಟ್ ಇಂಡೀಸ್ ವಿರುದ್ಧ ಶತಕ ಬಾರಿಸಿದ್ದರ ಫಲವಾಗಿ ನ್ಯೂಜಿಲೆಂಡ್ ತಂಡದ ಬ್ಯಾಟ್ಸ್‌ಮನ್ ಡ್ಯಾರಿಲ್ ಮಿಚೆಲ್ (Daryl Mitchell) ಅಗ್ರ ಸ್ಥಾನಕ್ಕೇರುವ ಮೂಲಕ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ರೋಹಿತ್ ಶರ್ಮಾ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದ್ದರು. ಆದರೆ, ಅಗ್ರ ಸ್ಥಾನಕ್ಕೇರಿದ ಕೆಲವೇ ದಿನಗಳಲ್ಲಿ ಅವರು ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ಮೊದಲನೇ ಪಂದ್ಯದಲ್ಲಿ ಶತಕ ಬಾರಿಸಿದ್ದ ಡ್ಯಾರಿಲ್ ಮಿಚೆಲ್ ಅವರು ರೋಹಿತ್ ಶರ್ಮಾರನ್ನು ಹಿಂದಿಕ್ಕಿ ಅಗ್ರ ಸ್ಥಾನವನ್ನು ಅಲಂಕರಿಸಿದ್ದಾರೆ. ತಮ್ಮ ಒಡಿಐ ವೃತ್ತಿ ಜೀವನದಲ್ಲಿಯೇ ಒಡಿಐ ಶ್ರೇಯಾಂಕದಲ್ಲಿ ಕಿವೀಸ್ ಬ್ಯಾಟರ್ ಅಗ್ರ ಸ್ಥಾನಕ್ಕೆರಿದ್ದು ಇದೇ ಮೊದಲು. ಇದರೊಂದಿಗೆ ಐಸಿಸಿ ಒಡಿಐ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರ ಸ್ಥಾನಕ್ಕೇರಿದ ಮೊದಲ ಕಿವೀಸ್ ಬ್ಯಾಟ್ಸ್‌ಮನ್ ಆಗಿದ್ದಾರೆ. ಗ್ಲೆನ್ ಟರ್ನರ್ ಅವರು 1979ರಲ್ಲಿ ಅಗ್ರ ಸ್ಥಾನಕ್ಕೇರಿದ್ದರು.
IND vs SA: 2ನೇ ಟೆಸ್ಟ್‌ಗೂ ಮುನ್ನ ದಕ್ಷಿಣ ಆಫ್ರಿಕಾಗೆ ಗಾಯದ ಭೀತಿ; ಇಬ್ಬರು ಪ್ರಧಾನ ಬೌಲರ್‌ಗಳಿಗೆ ಗಾಯ
ಮಾರ್ಟಿನ್ ಕ್ರಾವ್, ಆಂಡ್ರೆ ಜೋನ್ಸ್, ರೋಜರ್ ಟೌಸ್, ನೇಥನ್ ಆಶ್ಟ್ಲೆ, ಕೇನ್ ವಿಲಿಯಮ್ಸನ್, ಮಾರ್ಟಿನ್ ಗಪ್ಟಿಲ್ ಹಾಗೂ ರಾಸ್ ಟೇಲರ್ ಅವರು ಈ ಹಿಂದೆ ಅಗ್ರ ಐದು ಸ್ಥಾನದಲ್ಲಿ ಸ್ಥಾನ ಪಡೆದಿದ್ದರು. ಆದರೆ, ಡ್ಯಾರಿಲ್ ಮಿಚೆಲ್ ಬಿಟ್ಟರೆ ಈ ತಲೆ ಮಾರಿನ ಯಾವುದೇ ಕಿವೀಸ್ ಆಟಗಾರ ಅಗ್ರ ಸ್ಥಾನವನ್ನು ಅಲಂಕರಿಸಿಲ್ಲ. ಇನ್ನು ಶ್ರೀಲಂಕಾ ವಿರುದ್ಧ ಏಕದಿನ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿಕೊಂಡಿದ್ದ ಪಾಕಿಸ್ತಾನ ತಂಡದ ಹಲವು ಆಟಗಾರರು ಶ್ರೇಯಾಂಕದಲ್ಲಿ ಗಣನೀಯ ಏರಿಕೆ ಕಂಡಿದ್ದಾರೆ.
ಒಡಿಐ ಶ್ರೇಯಾಂಕದಲ್ಲಿ ಪಾಕ್ ಆಟಗಾರರ ಪ್ರಗತಿ
ಮೊಹಮ್ಮದ್ ರಿಝ್ವಾನ್ ಐದು ಸ್ಥಾನಗಳಲ್ಲಿ ಏರಿಕೆ ಕಂಡು 22ನೇ ಸ್ಥಾನಕ್ಕೆರಿದ್ದರೆ, ಫಖಾರ್ ಝಮಾನ್ ಐದು ಸ್ಥಾನಗಳಲ್ಲಿ ಏರಿಕೆ ಕಂಡು 26ನೇ ಶ್ರೇಯಾಂಕಕ್ಕೇರಿದ್ದಾರೆ. ಬೌಲಿಂಗ್ ಶ್ರೇಯಾಂಕದಲ್ಲಿ ಸ್ಪಿನ್ನರ್ ಅಬ್ರಾರ್ ಅಹ್ಮದ್ 11ನೇ ಸ್ಥಾನಗಳಲ್ಲಿ ಏರಿಕೆ ಕಂಡು 9ನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ. ಇನ್ನು ವೇಗದ ಬೌಲರ್ ಹ್ಯಾರಿಸ್ ರೌಫ್ ಐದು ಸ್ಥಾನಗಳಲ್ಲಿ ಏರಿಕೆ ಕಂಡು 23ನೇ ಸ್ಥಾನಕ್ಕೆ ಪ್ರವೇಶ ಮಾಡಿದ್ದಾರೆ. ಅಫ್ಘಾನಿಸ್ತಾನ ತಂಡದ ರಶೀದ್ ಖಾನ್ ಅವರು ಒಡಿಐ ಬೌಲರ್‌ಗಳ ಶ್ರೇಯಾಂಕದಲ್ಲಿ ಅಗ್ರ ಸ್ಥಾನದಲ್ಲಿ ಮುಂದುವರಿದಿದ್ದಾರೆ.
IND vs SA: ಗಿಲ್‌ಗೆ ವಿಶ್ರಾಂತಿ ಸಾಧ್ಯತೆ; ಏಕದಿನ ಸರಣಿಗೆ ರಾಹುಲ್ ನಾಯಕ?
ಅಗ್ರ ಐದರೊಳಗೆ ಪ್ರವೇಶ ಮಾಡಿದ ತೆಂಬಾ ಬವೂಮಾ
ಭಾರತದ ವಿರುದ್ಧ ಮೊದಲನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್‌ನಲ್ಲಿ ಅರ್ಧಶತಕ ಬಾರಿಸಿದ ದಕ್ಷಿಣ ಆಫ್ರಿಕಾ ತಂಡದ ನಾಯಕ ತೆಂಬಾ ಬವೂಮಾ ಅವರು ಟಸ್ಟ್ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಇದೇ ಮೊದಲ ಬಾರಿ ಅಗ್ರ ಐದರೊಳಗೆ ಪ್ರವೇಶ ಮಾಡಿದ್ದಾರೆ. ಗಾಯದ ಕಾರಣ ಮೊದಲನೇ ಟೆಸ್ಟ್‌ನಲ್ಲಿ ಬ್ಯಾಟಿಂಗ್ ನಡೆಸದ ಹೊರತಾಗಿಯೂ ಭಾರತದ ನಾಯಕ ಶುಭಮನ್ ಗಿಲ್ ಅವರು ಎರಡು ಸ್ಥಾನಗಳಲ್ಲಿ ಏರಿಕೆ ಕಂಡಿದ್ದು, 11ನೇ ಸ್ಥಾನಕ್ಕೆ ಪ್ರವೇಶ ಮಾಡಿದ್ದಾರೆ.
IND vs SA: ಈಡನ್ ಗಾರ್ಡನ್ಸ್ ತಂತ್ರ ವಿಫಲ; ಗುವಾಹಟಿ ಟೆಸ್ಟ್‌ಗೆ ಸ್ಪಿನ್ ಪಿಚ್ ಇಲ್ಲ!
ಅಗ್ರ ಸ್ಥಾನದಲ್ಲಿ ಉಳಿದ ಜಸ್‌ಪ್ರೀತ್ ಬುಮ್ರಾ
ಭಾರತ ತಂಡದ ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ ಅವರು ದಕ್ಷಿಣ ಆಫ್ರಿಕಾ ವಿರುದ್ಧ ಮೊದಲನೇ ಟೆಸ್ಟ್ ಪದ್ಯದಲ್ಲಿ ಆರು ವಿಕೆಟ್‌ಗಳನ್ನು ಕಬಳಿಸುವ ಮೂಲಕ ಟೆಸ್ಟ್ ಬೌಲರ್‌ಗಳ ಶ್ರೇಯಾಂಕದಲ್ಲಿ ಅಗ್ರ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಕುಲ್ದೀಪ್ ಯಾದವ್ ಎರಡು ಸ್ಥಾನಗಳಲ್ಲಿ ಏರಿದ್ದು, 13ನೇ ಶ್ರೇಯಾಂಕವನ್ನು ಅಲಂಕರಿಸಿದ್ದಾರೆ. ಇನ್ನು ರವೀಂದ್ರ ಜಡೇಜಾ ಅವರು ನಾಲ್ಕು ಸ್ಥಾನಗಳಲ್ಲಿ ಸುಧಾರಣೆ ಕಂಡಿದ್ದಾರೆ ಹಾಗೂ 15ನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ. ದಕ್ಷಿಣ ಆಫ್ರಿಕಾದ ಆಲ್‌ರೌಂಡರ್ ಮಾರ್ಕೊ ಯೆನ್ಸನ್ ಅವರು ಟೆಸ್ಟ್ ಬೌಲರ್‌ಗಳ ಶ್ರೇಯಾಂಕದಲ್ಲಿ 11ನೇ ಸ್ಥಾನವನ್ನು ಅಲಂಕರಿಸಿದ್ದಾರೆ. ಸ್ಪಿನ್ನರ್ ಸೈಮನ್ ಹಾರ್ಮರ್ 20ನೇ ಸ್ಥಾನಗಳಲ್ಲಿ ಏರಿಕೆ ಕಂಡಿದ್ದು, 24ನೇ ಶ್ರೇಯಾಂಕಕ್ಕೆ ಪ್ರವೇಶ ಮಾಡಿದ್ದಾರೆ.