VHT 2025-26: ಮುಂಬೈ ತಂಡದ ನಾಯಕತ್ವಕ್ಕೆ ಮರಳಿದ ಶ್ರೇಯಸ್ ಅಯ್ಯರ್!
ಭಾರತ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಅವರು ಗಾಯದಿಂದ ಗುಣಮುಖರಾಗಿದ್ದು, ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇದಕ್ಕೂ ಮುನ್ನ ಅವರು 2025-26ರ ಸಾಲಿನ ವಿಜಯ ಹಝಾರೆ ಟ್ರೋಫಿ ಟೂರ್ನಿಯಲ್ಲಿ ಮುಂಬೈ ತಂಡವನ್ನು ಮುನ್ನಡೆಸಲಿದ್ದಾರೆ.
ಮುಂಬೈ ತಂಡವನ್ನು ಮುನ್ನಡೆಸಲಿರುವ ಶ್ರೇಯಸ್ ಅಯ್ಯರ್. -
ನವದೆಹಲಿ: ಕಳೆದ ವರ್ಷ ಆಸ್ಟ್ರೇಲಿಯಾ ಪ್ರವಾಸದ ವೇಳೆ ಭಾರತದ ಏಕದಿನ (India's ODI Squad) ತಂಡದ ಉಪನಾಯಕ ಶ್ರೇಯಸ್ ಅಯ್ಯರ್ (Shreyas Iyer) ಗಾಯಗೊಂಡಿದ್ದರು. ಕ್ಯಾಚ್ ಪಡೆಯುವಾಗ ಬಿದ್ದು ಪಕ್ಕೆಲುಬಿನ ಗಾಯಕ್ಕೆ ತುತ್ತಾಗಿದ್ದರು. ಇದಾದ ನಂತರ, ಅಯ್ಯರ್ ಆಸ್ಪತ್ರೆಗೆ ದಾಖಲಾಗಿ ಸ್ವಲ್ಪ ಸಮಯ ಐಸಿಯುನಲ್ಲಿಯೂ ಚಿಕಿತ್ಸೆ ಪಡೆದಿದ್ದರು. ಗಾಯದ ನಂತರ ಅವರು ಆಸ್ಟ್ರೇಲಿಯಾಕ್ಕೆ ಮರಳಿದ್ದರು ಹಾಗೂ ಅವರ ಚೇತರಿಕೆಗೂ ಸ್ವಲ್ಪ ಸಮಯ ಹಿಡಿದಿತ್ತು. ಅಂದ ಹಾಗೆ ಇದೀಗ ಸಂಪೂರ್ಣ ಫಿಟ್ ಆಗಿರುವ ಅವರು ನ್ಯೂಜಿಲೆಂಡ್ ವಿರುದ್ದದ ಏಕದಿನ ಸರಣಿಯ (IND vs NZ) ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇದಕ್ಕೂ ಮುನ್ನ ಅವರು ಮುಂಬೈ ಪರ ವಿಜಯ ಹಝಾರೆ ಟ್ರೋಫಿ ಟೂರ್ನಿಯಲ್ಲಿ ಆಡಲಿದ್ದಾರೆ.
ಇದೀಗ ಸಂಪೂರ್ಣ ಫಿಟ್ ಆಗಿರುವ ಶ್ರೇಯಸ್ ಅಯ್ಯರ್ ಮೈದಾನಕ್ಕಿಳಿಯಲು ಸಿದ್ಧರಾಗಿದ್ದಾರೆ. ಶಾರ್ದುಲ್ ಠಾಕೂರ್ ಗಾಯಗೊಂಡು ಟೂರ್ನಿಯಿಂದ ಹೊರಗುಳಿದ ನಂತರ ವಿಜಯ್ ಹಜಾರೆ ಟ್ರೋಫಿ ಋತುವಿನ ಇನ್ನುಳಿದ ಪಂದ್ಯಗಳಿಗೆ ಶ್ರೇಯಸ್ ಅಯ್ಯರ್ ಅವರು ಮುಂಬೈ ತಂಡವನ್ನುಮುನ್ನಡೆಸಲಿದ್ದಾರೆ.
ʻನನ್ನ ಆರ್‌ಸಿಬಿ ಗೆಳೆಯ ಮೊಹಮ್ಮದ್ ಸಿರಾಜ್‌ಗೆ ಅದೃಷ್ಟವಿಲ್ಲʼ-ಎಬಿಡಿ ಈ ರೀತಿ ಹೇಳಿದ್ದೇಕೆ?
ಮುಂಬೈ ತಂಡದ ಮುಖ್ಯ ಆಯ್ಕೆದಾರರ ಹೇಳಿಕೆ
ಮುಂಬೈ ತಂಡದ ಮುಖ್ಯ ಆಯ್ಕೆದಾರ ಸಂಜಯ್ ಪಾಟೀಲ್ ಸೋಮವಾರ ಪಿಟಿಐಗೆ "ಶಾರ್ದುಲ್ ಗಾಯಗೊಂಡಿದ್ದು, ವಿಶ್ರಾಂತಿ ಪಡೆಯಲು ಸೂಚಿಸಲಾಗಿದೆ. ಶಿವಂ ದುಬೆ ಮತ್ತು ಸೂರ್ಯಕುಮಾರ್ ಯಾದವ್ ಅವರಂತಹ ಇತರ ಆಟಗಾರರು ನಮ್ಮಲ್ಲಿ ಲಭ್ಯವಿದ್ದು, ಉಳಿದ ಪಂದ್ಯಗಳಿಗೆ ಶ್ರೇಯಸ್ ಅಯ್ಯರ್ ಅವರನ್ನು ಮುಂಬೈ ತಂಡದ ನಾಯಕರನ್ನಾಗಿ ನೇಮಿಸಲಾಗಿದೆ," ಎಂದು ತಿಳಿಸಿದರು. ಆದಾಗ್ಯೂ, ಠಾಕೂರ್ ಯಾವ ರೀತಿಯ ಗಾಯದಿಂದ ಬಳಲುತ್ತಿದ್ದರು ಎಂಬುದನ್ನು ಅವರು ನಿರ್ದಿಷ್ಟಪಡಿಸಲಿಲ್ಲ.
ಜನವರಿ 6 ರಂದು ಹಿಮಾಚಲ ಪ್ರದೇಶ ವಿರುದ್ಧದ ವಿಜಯ ಹಝಾರೆ ಟ್ರೋಫಿ ಟೂರ್ನಿಯಲ್ಲಿ, ಗಾಯಗೊಂಡ ನಂತರ ಶ್ರೇಯಸ್ ಅಯ್ಯರ್ ತಮ್ಮ ಮೊದಲ ಪಂದ್ಯವನ್ನು ಆಡಲಿದ್ದಾರೆ. ಇದರ ನಂತರ, ಮುಂಬೈ ಜನವರಿ 8 ರಂದು ಪಂಜಾಬ್ ವಿರುದ್ಧ ಸೆಣಸಲಿದೆ. ಅಯ್ಯರ್ ಎರಡೂ ಪಂದ್ಯಗಳಲ್ಲಿ ಆಡಲಿದ್ದಾರೆ.
Mustafizur Rahman row: ಐಪಿಎಲ್ ಪಂದ್ಯಗಳ ಪ್ರಸಾರವನ್ನು ನಿಷೇಧಿಸಿದ ಬಾಂಗ್ಲಾದೇಶ ಸರ್ಕಾರ!
ಜನವರಿ 11 ರಿಂದ ಪ್ರಾರಂಭವಾಗುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೂ ಆಯ್ಕೆ ಮಾಡಲಾಗಿದೆ. ಜನವರಿ 11 ರಂದು ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ ಎಂಬುದನ್ನು ಗಮನಿಸಬೇಕು. ಶ್ರೇಯಸ್ ಅಯ್ಯರ್ ಅವರನ್ನು ಈ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅಯ್ಯರ್ ಅವರನ್ನು ಉಪನಾಯಕನನ್ನಾಗಿ ಹೆಸರಿಸಲಾಗಿದೆ. ಆದಾಗ್ಯೂ, ಅವರ ಲಭ್ಯತೆಯು ಫಿಟ್ನೆಸ್‌ಗೆ ಒಳಪಟ್ಟಿರುತ್ತದೆ. ಇದರರ್ಥ ಅವರು ಆಡುತ್ತಾರೋ ಇಲ್ಲವೋ ಎಂಬುದು ಅವರ ಫಿಟ್ನೆಸ್ ಅನ್ನು ಅವಲಂಬಿಸಿರುತ್ತದೆ.
ಆದಾಗ್ಯೂ, ಶ್ರೇಯಸ್ ಅಯ್ಯರ್ ಪ್ರಸ್ತುತ ಸರಣಿಗೆ ಮುಂಚಿತವಾಗಿ ಮುಂಬೈ ಪರ ಆಡುತ್ತಿದ್ದಾರೆ. ಈ ಪಂದ್ಯಗಳಲ್ಲಿ ಅವರಿಗೆ ಯಾವುದೇ ಸಮಸ್ಯೆಗಳಿಲ್ಲದಿದ್ದರೆ ಮತ್ತು ಫಿಟ್ ಆಗಿ ಕಾಣಿಸಿಕೊಂಡರೆ, ಅಯ್ಯರ್ ಖಂಡಿತವಾಗಿಯೂ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಆಡುತ್ತಾರೆ.