ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಸ್ಪೋಟಕ ಬ್ಯಾಟಿಂಗ್‌ ಮೂಲಕ ಸೂರ್ಯಕುಮಾರ್‌ ಯಾದವ್‌ರ ದಾಖಲೆ ಮುರಿದ ಗ್ಲೆನ್‌ ಮ್ಯಾಕ್ಸ್‌ವೆಲ್‌!

ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ಪರ ಸ್ಫೋಟಕ ಬ್ಯಾಟಿಂಗ್ ನಡೆಸುವ ಮೂಲಕ ಗ್ಲೆನ್ ಮ್ಯಾಕ್ಸ್‌ವೆಲ್ ವಿಶೇಷ ದಾಖಲೆಯನ್ನು ಬರೆದಿದ್ದಾರೆ. ಅರ್ಧಶತಕ ಸಿಡಿಸಿದ ಬಳಿಕ ಗ್ಲೆನ್‌ ಮ್ಯಾಕ್ಸ್‌ವೆಲ್ ತಂಡಕ್ಕೆ ಗೆಲುವು ತಂದುಕೊಟ್ಟರು ಹಾಗೂ ಭಾರತದ ಸೂರ್ಯಕುಮಾರ್ ಯಾದವ್ ಅವರನ್ನು ಹಿಂದಿಕ್ಕಿದ್ದಾರೆ.

ಸೂರ್ಯಕುಮಾರ್‌ ಯಾದವ್‌ ದಾಖಲೆ ಮುರಿದ ಗ್ಲೆನ್‌ ಮ್ಯಾಕ್ಸ್‌ವೆಲ್‌.

ನವದೆಹಲಿ: ಮೂರನೇ ಟಿ20ಐ ಪಂದ್ಯದಲ್ಲಿ (AUS vs SA) ಗ್ಲೆನ್ ಮ್ಯಾಕ್ಸ್‌ವೆಲ್ (Glenn Maxwell) ಅವರ ಬಿರುಗಾಳಿಯ ಅರ್ಧಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡ ಎದುರಾಳಿ ದಕ್ಷಿಣ ಆಫ್ರಿಕಾ ತಂಡವನ್ನು ಎರಡು ವಿಕೆಟ್‌ಗಳಿಂದ ಸೋಲಿಸಿತು. ಸ್ಪೋಟಕ ಬ್ಯಾಟಿಂಗ್‌ ಪ್ರದರ್ಶನವನ್ನು ತೋರಿದ ಗ್ಲೆನ್‌ ಮ್ಯಾಕ್ಸ್‌ವೆಲ್ 36 ಎಸೆತಗಳಲ್ಲಿ 62 ರನ್‌ಗಳ ಅಜೇಯ ಇನಿಂಗ್ಸ್‌ ಆಡಿದರು. ಅವರು ತಮ್ಮ ಇನಿಂಗ್ಸ್‌ನಲ್ಲಿ 2 ಸಿಕ್ಸರ್‌ಗಳನ್ನು ಕೂಡ ಸಿಡಿಸಿದ್ದರು. ಈ ಸಿಕ್ಸರ್‌ನೊಂದಿಗೆ ಮ್ಯಾಕ್ಸ್‌ವೆಲ್ ಭಾರತದ ಸ್ಫೋಟಕ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ (Suryakumar Yadav) ಅವರನ್ನು ಹಿಂದಿಕ್ಕಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಸಿಡಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಮ್ಯಾಕ್ಸ್‌ವೆಲ್, ಸೂರ್ಯಕುಮಾರ್ ಯಾದವ್‌ ಅವರನ್ನು ಹಿಂದಿಕ್ಕಿದ್ದಾರೆ.

ಟಿ20ಐ ಕ್ರಿಕೆಟ್‌ನಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ 148 ಸಿಕ್ಸರ್‌ಗಳನ್ನು ಹೊಂದಿದ್ದಾರೆ. ಸೂರ್ಯಕುಮಾರ್ ಯಾದವ್ ಅವರ ಖಾತೆಯಲ್ಲಿ 146 ಸಿಕ್ಸರ್‌ಗಳಿವೆ. ಟಿ20ಐ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಸಿಡಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಭಾರತದ ದಂತಕಥೆ ರೋಹಿತ್ ಶರ್ಮಾ ಅಗ್ರ ಸ್ಥಾನದಲ್ಲಿದ್ದಾರೆ. ಈ ಸ್ವರೂಪದಲ್ಲಿ ರೋಹಿತ್ ಶರ್ಮಾ 205 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಮ್ಯಾಕ್ಸ್‌ವೆಲ್ ಅತಿ ಹೆಚ್ಚು ಸಿಕ್ಸರ್‌ಗಳ ವಿಷಯದಲ್ಲಿ ಆರನೇ ಸ್ಥಾನದಲ್ಲಿದ್ದಾರೆ.

AUS vs SA: ಗ್ಲೆನ್‌ ಮ್ಯಾಕ್ಸ್‌ವೆಲ್‌ ಅಬ್ಬರ, ಟಿ20ಐ ಸರಣಿ ಗೆದ್ದ ಆಸ್ಟ್ರೇಲಿಯಾ!

ಟಿ20ಐನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳು

ರೋಹಿತ್ ಶರ್ಮಾ - 205 ಸಿಕ್ಸರ್‌ಗಳು

ಮಾರ್ಟಿನ್ ಗಪ್ಟಿಲ್ - 173 ಸಿಕ್ಸರ್‌ಗಳು

ಮುಹಮ್ಮದ್ ವಸಿಮ್ - 168 ಸಿಕ್ಸರ್‌ಗಳು

ಜೋಸ್ ಬಟ್ಲರ್ - 160 ಸಿಕ್ಸರ್‌ಗಳು

ನಿಕೋಲಸ್ ಪೂರನ್ - 149 ಸಿಕ್ಸರ್‌ಗಳು

ಗ್ಲೆನ್ ಮ್ಯಾಕ್ಸ್‌ವೆಲ್ - 148 ಸಿಕ್ಸರ್‌ಗಳು



ಡೇವಿಡ್‌ ವಾರ್ನರ್‌ ದಾಖಲೆ ಸರಿಗಟ್ಟಿದ ಮ್ಯಾಕ್ಸ್‌ವೆಲ್‌

ಸಿಕ್ಸರ್‌ಗಳನ್ನು ಹೊಡೆಯುವ ವಿಷಯದಲ್ಲಿ ಸೂರ್ಯಕುಮಾರ್ ಯಾದವ್ ಅವರನ್ನು ಹಿಂದಿಕ್ಕುವುದರ ಜೊತೆಗೆ ಗ್ಲೆನ್ ಮ್ಯಾಕ್ಸ್‌ವೆಲ್ ಫೀಲ್ಡಿಂಗ್‌ನಲ್ಲಿಯೂ ವಿಶೇಷ ದಾಖಲೆಯನ್ನು ಬರೆದಿದ್ದಾರೆ. ಪಂದ್ಯದಲ್ಲಿ ಮ್ಯಾಕ್ಸ್‌ವೆಲ್ ದಕ್ಷಿಣ ಆಫ್ರಿಕಾದ ಡೆವಾಲ್ಡ್ ಬ್ರೆವಿಸ್ ಅವರ ಅದ್ಭುತ ಕ್ಯಾಚ್ ಅನ್ನು ಹಿಡಿದರು. ಇದರೊಂದಿಗೆ, ಅವರು ಈ ಸ್ವರೂಪದಲ್ಲಿ ಡೇವಿಡ್ ವಾರ್ನರ್ ಅವರ 68 ಕ್ಯಾಚ್‌ಗಳನ್ನು ಸರಿಗಟ್ಟಿದ್ದಾರೆ. ಮ್ಯಾಕ್ಸ್‌ವೆಲ್ ತಮ್ಮ ಅದ್ಭುತ ಫೀಲ್ಡಿಂಗ್ ಮತ್ತು ಬಿರುಗಾಳಿಯ ಬ್ಯಾಟಿಂಗ್‌ಗೆ ಹೆಸರು ವಾಸಿಯಾಗಿದ್ದಾರೆ.

Dewald Brevis: ವಿರಾಟ್‌ ಕೊಹ್ಲಿಯ ದೊಡ್ಡ ದಾಖಲೆಯನ್ನು ಮುರಿದ ಬೇಬಿ ಎಬಿಡಿ!

ಟಿ20ಐ ಸರಣಿ ಗೆದ್ದ ಆಸ್ಟ್ರೇಲಿಯಾ

ಈ ಪಂದ್ಯದ ಬಗ್ಗೆ ಹೇಳುವುದಾದರೆ, ಡೆವಾಲ್ಡ್ ಬ್ರೆವಿಸ್ ಅವರ ಬಿರುಗಾಳಿಯ ಅರ್ಧಶತಕದ ಇನಿಂಗ್ಸ್‌ನಿಂದಾಗಿ ದಕ್ಷಿಣ ಆಫ್ರಿಕಾ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 172 ರನ್ ಗಳಿಸಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ದಕ್ಷಿಣ ಆಫ್ರಿಕಾದ ಬೌಲರ್‌ಗಳು ಉತ್ತಮ ಆರಂಭವನ್ನು ಹೊಂದಿದ್ದರು, ಆದರೆ ಕೊನೆಯ ಓವರ್‌ಗಳಲ್ಲಿ ಅವರ ಹಿಡಿತ ದುರ್ಬಲಗೊಂಡಿತು. ಈ ರೀತಿಯಾಗಿ, ಆಸ್ಟ್ರೇಲಿಯಾ ತಂಡ ಇನ್ನೂ ಒಂದು ಎಸೆತ ಬಾಕಿ ಇರುವಾಗಲೇ 173 ರನ್ ಗಳಿಸುವ ಮೂಲಕ ಪಂದ್ಯವನ್ನು ಗೆದ್ದುಕೊಂಡಿತು ಹಾಗೂ ಟಿ20ಐ ಸರಣಿಯನ್ನು 2-1 ಅಂತರದಲ್ಲಿ ತನ್ನದಾಗಿಸಿಕೊಂಡಿತು.