RCB vs GT ಪಂದ್ಯದಲ್ಲಿ ಟಾಸ್ ಸೋತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಬ್ಯಾಟಿಂಗ್!
RCB vs GT Qualifier 1: ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2026ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಆಡುತ್ತಿವೆ. ಟಾಸ್ ಗೆದ್ದ ಜಿಟಿ ಮೊದಲು ಬೌಲಿಂಗ್ ಆರಿಸಿಕೊಂಡಿದೆ.
ಆರ್‌ಸಿಬಿ ಹಾಗೂ ಜಿಟಿ ನಡುವಣ ಐಪಿಎಲ್ ಮೊದಲ ಕ್ವಾಲಿಫೈಯರ್ ಪಂದ್ಯ. -
ಧರ್ಮಶಾಲಾ: ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2026ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಟೂರ್ನಿಯ ಮೊದಲನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ (RCB vs GT) ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಜಿಟಿ ತಂಡದ ನಾಯಕ ಶುಭಮನ್ ಗಿಲ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ರಜತ್ ಪಾಟಿದಾರ್ ನಾಯಕತ್ವದ ಆರ್‌ಸಿಬಿ ಮೊದಲು ಬ್ಯಾಟ್ ಮಾಡಲಿದೆ. ಇಲ್ಲಿನ ಪಿಚ್ ಬ್ಯಾಟಿಂಗ್ ಸ್ನೇಹಿಯಾಗಿದ್ದು, ಇದು ಹೈಸ್ಕೋರಿಂಗ್ ಪಂದ್ಯವಾಗುವ ಸಾಧ್ಯತೆ ಇದೆ.
ಈ ಪಂದ್ಯದಲ್ಲಿ ಆರ್‌ಸಿಬಿ ತಂಡ ತನ್ನ ಪ್ಲೇಯಿಂಗ್ XIನಲ್ಲಿ ಒಂದು ಬದಲಾವಣೆಯನ್ನು ಮಾಡಿಕೊಂಡಿದೆ. ಕಳೆದ ಪಂದ್ಯವನ್ನು ಆಡಿದ್ದ ರೊಮ್ಯಾರಿಯೊ ಶೆಫರ್ಡ್ ಅವರ ಬದಲು ವೇಗದ ಬೌಲರ್ ಜೇಕಬ್ ಡಫಿಗೆ ಅವಕಾಶವನ್ನು ನೀಡಲಾಗಿದೆ. ಆದರೆ, ಫಿಲ್ ಸಾಲ್ಟ್ ಅವರು ಈ ಪಂದ್ಯದಲ್ಲಿಯೂ ಆಡುತ್ತಿಲ್ಲ ಎಂದು ಟಾಸ್ ವೇಳೆ ಆರ್‌ಸಿಬಿ ನಾಯಕ ರಜತ್ ಪಾಟಿದಾರ್ ಮಾಹಿತಿ ನೀಡಿದ್ದಾರೆ. ಇನ್ನು ಎದುರಾಳಿ ಜಿಟಿ ತಂಡದ ಪ್ಲೇಯಿಂಗ್XIನಲ್ಲಿಯೂ ಒಂದು ಬದಲಾವಣೆಯನ್ನು ತರಲಾಗಿದೆ. ಅರ್ಷದ್ ಖಾನ್ ಜಾಗಕ್ಕೆ ಕುಲ್ವಂತ್ ಖೆಜ್ರೋಲಿಯಾ ಬಂದಿದ್ದಾರೆ.
RCB vs GT ಮೊದಲನೇ ಕ್ವಾಲಿಫೈಯರ್‌ಗೆ ಮಳೆ ಕಾಟ ಇದೆಯಾ? ಧರ್ಮಶಾಲಾ ಹವಾಮಾನ ವರದಿ ಇಲ್ಲಿದೆ!
ಆರ್‌ಸಿಬಿ ಹಾಗೂ ಜಿಟಿ ಎರಡೂ ತಂಡಗಳು ಅಂಕಪಟ್ಟಿಯಲ್ಲಿ ತಲಾ 18 ಅಂಕಗಳ ಮೂಲಕ ಅಗ್ರ ಎರಡು ಸ್ಥಾನಗಳನ್ನು ಪಡೆಯುವ ಮೂಲಕ ಮೊದಲನೇ ಕ್ವಾಲಿಫೈಯರ್‌ಗೆ ಅರ್ಹತೆ ಪಡೆದಿವೆ. ಇದೀಗ ಈ ಪಂದ್ಯವನ್ನು ಗೆದ್ದ ತಂಡ ನೇರವಾಗಿ ಫೈನಲ್‌ಗೆ ಪ್ರವೇಶ ಮಾಡಲಿವೆ. ಹಾಗಾಗಿ ಈ ಪಂದ್ಯ ಅತ್ಯಂತ ರೋಚಕತೆಯಿಂದ ಕೂಡಿರಲಿದೆ. ಆದರೆ, ಲೀಗ್ ಹಂತದಲ್ಲಿ ಎರಡು ಬಾರಿ ಈ ತಂಡಗಳು ಮುಖಾಮುಖಿಯಾಗಿದ್ದವು. ಆದರೆ, ಮೊದಲನೇ ಬಾರಿ ಆರ್‌ಸಿಬಿ ಗೆದ್ದಿದ್ದರೆ, ಎರಡನೇ ಬಾರಿ ಜಿಟಿ ಗೆಲುವು ಪಡೆದಿತ್ತು. ಲೀಗ್ ಹಂತದಲ್ಲಿ ಎರಡೂ ತಂಡಗಳಿಂದ ಸಮಬಲದ ಹೋರಾಟ ಮೂಡಿಬಂದಿತ್ತು.
🚨Toss update from Dharamshala 🚨@gujarat_titans won the toss and elected to bowl first against @rcbtweets
— IndianPremierLeague (@IPL) May 26, 2026
Updates ▶️ https://t.co/9rs6u5obOw#TATAIPL | #Qualifier1 | #TheFinalLeap | #RCBvGT pic.twitter.com/oNia93E4e4
ಇಲ್ಲಿನ ಪಿಚ್ ಬ್ಯಾಟ್ಸ್‌ಮನ್‌ಗಳ ಸ್ನೇಹಿಯಾಗಿದ್ದು, ರನ್ ಹೊಳೆ ಹರಿಯುವ ಸಾಧ್ಯತೆ ಇದೆ. ಮೊದಲು ಬ್ಯಾಟ್ ಮಾಡಬೇಕಾಗಿರುವ ಆರ್‌ಸಿಬಿ ತಂಡ, ತನ್ನ ಪಾಲಿನ 20 ಓವರ್‌ಗಳಿಗೆ 230ಕ್ಕೂ ಅಧಿಕ ಮೊತ್ತವನ್ನು ಕಲೆ ಹಾಕಿ ಎದುರಾಳಿ ತಂಡವನ್ನು ಒತ್ತಡಕ್ಕೆ ಸಿಲುಕಿಸಬೇಕು. ಇದು ಆರ್‌ಸಿಬಿ ತಂಡದ ಬ್ಯಾಟಿಂಗ್ ತಂತ್ರವಾಗಿರಬಹುದು. ವಿರಾಟ್ ಕೊಹ್ಲಿ ಹಾಗೂ ವೆಂಕಟೇಶ್ ಅಯ್ಯರ್ ಅವರು ಇನಿಂಗ್ಸ್ ಆರಂಭಿಸಲಿದ್ದಾರೆ.
Time to play our 𝒑𝒆𝒂𝒌 cricket! 🏔️ 💪 pic.twitter.com/i4wXEKfade
— Gujarat Titans (@gujarat_titans) May 26, 2026
ಇತ್ತಂಡಗಳ ಪ್ಲೇಯಿಂಗ್ XI
ಗುಜರಾತ್ ಟೈಟನ್ಸ್: ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ನಿಶಾಂತ್ ಸಿಂಧು, ಜೇಸನ್ ಹೋಲ್ಡರ್, ರಶೀದ್ ಖಾನ್, ಕುಲ್ವಂತ್ ಖೆಜ್ರೋಲಿಯಾ, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿಧ್ ಕೃಷ್ಣ
🪙 𝐓𝐎𝐒𝐒 𝐀𝐍𝐃 𝐓𝐄𝐀𝐌 𝐍𝐄𝐖𝐒 👇
— Royal Challengers Bengaluru (@RCBTweets) May 26, 2026
We've been put in to bat first in Dharamshala. 🔥
🔁 One change in the batting XI tonight:
Jacob Duffy 🔁 Romario 🫡
12th Man Army, drop a ❤️🔥 to wish our boys all the best for 𝘛𝘩𝘦 𝘍𝘪𝘯𝘢𝘭 𝘓𝘦𝘢𝘱! 🤝#PlayBold #ನಮ್ಮRCB #IPL2026… pic.twitter.com/4AHv7ZFhGY
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವೆಂಕಟೇಶ್ ಅಯ್ಯರ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃಣಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೇಕಬ್ ಡಫಿ, ಜಾಶ್ ಹೇಝಲ್‌ವುಡ್, ರಸಿಖ್ ಸಲಾಮ್ ದಾರ್