IND vs AFG: ಅಫ್ಘಾನಿಸ್ತಾನ ವಿರುದ್ಧದ ಟಿ20ಐ ಸರಣಿಗೂ ಮುನ್ನ ಮೂವರು ಆಲ್‌ರೌಂಡರ್‌ಗಳು ಫಿಟ್!
ಸೆಪ್ಟೆಂಬರ್ 13ರಿಂದು ಆರಂಭವಾಗಲಿರುವ ಅಫ್ಘಾನಿಸ್ತಾನ ವಿರುದ್ಧದ ಟಿ20ಐ ಸರಣಿಗೂ ಮುನ್ನ ಭಾರತ ತಂಡಕ್ಕೆ ಸಿಹಿ ಸುದ್ದಿ ಸಿಕ್ಕಿದೆ. ಆಲ್‌ರೌಂಡರ್‌ಗಳಾದ ಹಾರ್ದಿಕ್ ಪಾಂಡ್ಯ ಮತ್ತು ನಿತೀಶ್ ಕುಮಾರ್ ರೆಡ್ಡಿ ಸಂಪೂರ್ಣ ಫಿಟ್‌ನೆಸ್‌ಗೆ ಮರಳುವ ಹಂತದಲ್ಲಿದ್ದಾರೆ. ಮತ್ತೊಂದೆಡೆ, ವಾಷಿಂಗ್ಟನ್ ಸುಂದರ್ ಕೂಡ ತಂಡಕ್ಕೆ ಕಂಬ್ಯಾಕ್ ಮಾಡುವ ಹಾದಿಯಲ್ಲಿದ್ದಾರೆ.
ಆಫ್ಘನ್ ಟಿ20ಐ ಸರಣಿಗೆ ಮೂವರು ಆಲ್‌ರೌಂಡರ್‌ಗಳು ಫಿಟ್. -
ನವದೆಹಲಿ: ಶ್ರೀಲಂಕಾ ಪ್ರವಾಸದ ಬಳಿಕ ಭಾರತ ಕ್ರಿಕೆಟ್ ತಂಡ, ಅಫ್ಘಾನಿಸ್ತಾನ ವಿರುದ್ಧ ಟಿ20ಐ ಸರಣಿಯಲ್ಲಿ(IND vs AFG) ಸೆಣಸಲಿದೆ. ದೆಹಲಿಯಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯ ಸೆಪ್ಟೆಂಬರ್ 13ರಂದು ನಡೆಯಲಿದೆ. ಸರಣಿ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾಗೆ ಸಿಹಿ ಸುದ್ದಿ ಸಿಕ್ಕಿದೆ. ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಾರ, ತಂಡದ ಪ್ರಮುಖ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಜತೆಗೆ ನಿತೀಶ್ ಕುಮಾರ್ ರೆಡ್ಡಿ ಮತ್ತು ವಾಷಿಂಗ್ಟನ್ ಸುಂದರ್ (Washington Sundar) ಕೂಡ ಸರಣಿ ಆರಂಭಕ್ಕೂ ಮುನ್ನ ಸಂಪೂರ್ಣ ಫಿಟ್ ಆಗುವ ನಿರೀಕ್ಷೆಯಿದೆ.
ನಿತೀಶ್ ಕುಮಾರ್ ರೆಡ್ಡಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕಂಬ್ಯಾಕ್ ಮಾಡಲು ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ (COE)ನಲ್ಲಿ ಸಂಪೂರ್ಣ ಸಾಮರ್ಥ್ಯದೊಂದಿಗೆ ತರಬೇತಿ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. ಇನ್ನು ಆಫ್‌ಸ್ಪಿನ್ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ವಾರಾಂತ್ಯವನ್ನು ಚೆನ್ನೈನಲ್ಲಿ ಕಳೆದಿದ್ದು, ತಂಡದ ಆಯ್ಕೆಗೆ ಮುನ್ನ ತಮ್ಮ ಫಿಟ್‌ನೆಸ್ ಸಾಬೀತುಪಡಿಸಲು ಮತ್ತೆ ಸಿಒಇಗೆ ಮರಳಲಿದ್ದಾರೆ.
92 ರನ್‌ಗೆ ವಿಕೆಟ್ ಒಪ್ಪಿಸಿದರೂ 57 ವರ್ಷಗಳ ಹಳೆಯ ದಾಖಲೆ ಮುರಿದ ವೈಭವ್ ಸೂರ್ಯವಂಶಿ!
ಸೆಪ್ಟೆಂಬರ್ 13ರಂದು ಆರಂಭವಾಗಲಿರುವ ಅಫ್ಘಾನಿಸ್ತಾನ ವಿರುದ್ಧದ ಟಿ20ಐ ಸರಣಿಗೆ ಟೀಂ ಇಂಡಿಯಾ ಆಯ್ಕೆ ಇದೇ ವಾರ ನಡೆಯುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ. ಹಾರ್ದಿಕ್ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ ಮತ್ತು ವಾಷಿಂಗ್ಟನ್ ಸುಂದರ್ ಫಿಟ್ ಆಗಿ ತಂಡಕ್ಕೆ ಮರಳಿದರೆ, ಭಾರತದ ಆಲ್‌ರೌಂಡರ್ ವಿಭಾಗ ಮತ್ತಷ್ಟು ಬಲಿಷ್ಠವಾಗಲಿದೆ.
ಅಫ್ಘಾನಿಸ್ತಾನ ವಿರುದ್ಧದ ಟಿ20ಐ ಸರಣಿಯು ವಾಷಿಂಗ್ಟನ್ ಸುಂದರ್‌ಗೆ ಟಿ20 ಮಾದರಿಯ ಮೂಲಕ ಭಾರತ ತಂಡಕ್ಕೆ ಮರಳಲು ನೆರವಾಗಬಹುದು. ಕಳೆದ ಕೆಲವು ವಾರಗಳಲ್ಲಿ ಅವರ ವರ್ಕ್‌ಲೋಡ್ ಅನ್ನು ಹಂತ ಹಂತವಾಗಿ ಹೆಚ್ಚಿಸಲಾಗಿದ್ದು, ಮೂರು ಪಂದ್ಯಗಳ ಈ ಟಿ20ಐ ಸರಣಿಗೆ ಆಯ್ಕೆಗೆ ಅವರು ಲಭ್ಯರಾಗುವ ಸಾಧ್ಯತೆಯಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.
Women's Asia Cup: ಮಹಿಳಾ ಟಿ20ಐ ಕ್ರಿಕೆಟ್‌ನಲ್ಲಿ ನೂತನ ದಾಖಲೆ ಬರೆದ ದೀಪ್ತಿ ಶರ್ಮಾ!
ನಿತೀಶ್ ಕುಮಾರ್ ರೆಡ್ಡಿ ಮತ್ತು ಹಾರ್ದಿಕ್ ಪಾಂಡ್ಯ ಇಬ್ಬರೂ ಸಾಕಷ್ಟು ಸಮಯದಿಂದ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ (COE) ತರಬೇತಿ ಪಡೆಯುತ್ತಿದ್ದಾರೆ. ವೈಯಕ್ತಿಕ ಕೆಲಸಗಳಿಗಾಗಿ ಮಾತ್ರ ಅವರು ವಿರಾಮ ಪಡೆಯುತ್ತಿದ್ದಾರೆ ಎಂದು ಮೂಲ ತಿಳಿಸಿದೆ. ನಿತೀಶ್ ರೆಡ್ಡಿ ವಾರಾಂತ್ಯದಲ್ಲಿ ಮಾತ್ರ ಮನೆಗೆ ತೆರಳುತ್ತಿದ್ದರೆ, ಹಾರ್ದಿಕ್ ಪಾಂಡ್ಯ ಬೆಂಗಳೂರಿನಲ್ಲೇ ಶಿಫ್ಟ್ ಆಗಿದ್ದಾರೆ ಎಂದು ಮೂಲ ಹೇಳಿದೆ. ಈ ಮೂವರು ಆಲ್‌ರೌಂಡರ್‌ಗಳ ಫಿಟ್‌ನೆಸ್ ಸ್ಥಿತಿ ಭಾರತದ ಟಿ20ಐ ತಂಡದ ಆಯ್ಕೆಯಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಯಿದೆ.
ಬಿಸಿಸಿಐ ಮೂಲಗಳು ಹೇಳುವುದೇನು?
“ನಿತೀಶ್ ರೆಡ್ಡಿ ಮತ್ತು ಹಾರ್ದಿಕ್ ಪಾಂಡ್ಯ ಇಬ್ಬರೂ ಬಹಳ ಸಮಯದಿಂದ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ (CoE) ಇದ್ದಾರೆ. ಅವರು ವೈಯಕ್ತಿಕ ಕೆಲಸಗಳಿಗಾಗಿ ಮಾತ್ರ ವಿರಾಮ ಪಡೆಯುತ್ತಾರೆ. ರೆಡ್ಡಿ ವಾರಾಂತ್ಯದಲ್ಲಿ ಮಾತ್ರ ಮನೆಗೆ ತೆರಳುತ್ತಾರೆ, ಆದರೆ ಪಾಂಡ್ಯ ಈಗಾಗಲೇ ಬೆಂಗಳೂರನಲ್ಲಿಯೇ ವಾಸ್ತವ್ಯ ಹೂಡಿದ್ದಾರೆ," ಎಂದು ಮೂಲಗಳು ಹೇಳಿರುವುದು ವರದಿಯಾಗಿದೆ.
ವಾಷಿಂಗ್ಟನ್ ಸುಂದರ್ ಬಗ್ಗೆ ಪ್ರತಿಕ್ರಿಯಿಸಿ, "ಪ್ರಾಯೋಗಿಕವಾಗಿ ನೋಡಿದರೆ, ಅಫ್ಘಾನಿಸ್ತಾನ ವಿರುದ್ಧದ ಟಿ20 ಪಂದ್ಯಗಳೇ ಗುರಿಯಾಗಿವೆ. ಇದರ ಮೂಲಕ ವಾಷಿಂಗ್ಟನ್ ಸುಂದರ್ ಟಿ20 ಮಾದರಿಯ ಮೂಲಕ ನಿಧಾನವಾಗಿ ತಂಡಕ್ಕೆ ಮರಳಲು ಸಾಧ್ಯವಾಗಲಿದೆ. ಕಳೆದ ಕೆಲವು ವಾರಗಳಲ್ಲಿ ಅವರ ವರ್ಕ್‌ಲೋಡ್ ಅನ್ನು ಹಂತ ಹಂತವಾಗಿ ಹೆಚ್ಚಿಸಲಾಗಿದೆ. ಹೀಗಾಗಿ ಮೂರು ಟಿ20 ಪಂದ್ಯಗಳ ಸರಣಿಗೆ ಆಯ್ಕೆಗೆ ಅವರು ಲಭ್ಯರಾಗುವ ಸಾಧ್ಯತೆಯಿದೆ,” ಎಂದು ಆಪ್ತ ಮೂಲ ತಿಳಿಸಿದೆ.