ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

IPL 2026: ಆರ್‌ಸಿಬಿ ವೇಗಿ ಜಾಶ್‌ ಹೇಝಲ್‌ವುಡ್‌ ಎಷ್ಟು ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ?

IPL 2026: ಗಾಯದಿಂದ ಇನ್ನೂ ಚೇತರಿಸಿಕೊಳ್ಳುತ್ತಿರುವ ಆಸ್ಟ್ರೇಲಿಯಾ ವೇಗಿ ಜಾಶ್‌ ಹೇಝಲ್‌ವುಡ್‌ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಆರಂಭಿಕ ಕೆಲ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಇದು ಬೆಂಗಳೂರು ಫ್ರಾಂಚೈಸಿಗೆ ಭಾರಿ ಹಿನ್ನಡೆಯಾಗಿದೆ. ಆದರೆ, ಅವರು ಖಚಿತವಾಗಿ ಎಷ್ಟು ಪಂದ್ಯಗಳಿಂದ ಹೊರಗುಳಿಯಲಿದ್ದಾರೆಂದು ಇಲ್ಲಿ ವಿವರಿಸಲಾಗಿದೆ.

ಜಾಶ್‌ ಹೇಝಲ್‌ವುಡ್‌ ಎರಡು ಪಂದ್ಯಗಳಿಗೆ ಅಲಭ್ಯ.

ನವದೆಹಲಿ: ಕಳೆದ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ತಮ್ಮ ಅದ್ಭುತ ಬೌಲಿಂಗ್‌ ಪ್ರದರ್ಶನದ ಮೂಲಕ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡಕ್ಕೆ ಚೊಚ್ಚಲ ಕಪ್‌ ಗೆದ್ದುಕೊಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದ ಆಸ್ಟ್ರೇಲಿಯಾ ವೇಗಿ ಜಾಶ್‌ ಹೇಝಲ್‌ವುಡ್‌ (Josh Hazlewood), 2026ರ ಐಪಿಎಲ್‌ ಟೂರ್ನಿಯ (IPL 2026) ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಅವರು ಮಾರ್ಚ್‌ 28 ರಂದು ಸನ್‌ರೈಸರ್ಸ್‌ ಹೈದರಾಬಾದ್‌ ಹಾಗೂ ಏಪ್ರಿಲ್‌ 5 ರಂದು ನಡೆಯುವ ಚೆನ್ನೈ ಸೂಪರ್‌ ಕಿಂಗ್ಸ್‌ ಎದುರಿನ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆಂದು ಕ್ರಿಕ್‌ಬಝ್‌ ವರದಿ ಮಾಡಿದೆ.

ಜಾಶ್‌ ಹೇಝಲ್‌ವುಡ್‌ ಅವರ ರೀತಿ ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ನಾಯಕ ಪ್ಯಾಟ್‌ ಕಮಿನ್ಸ್‌ ಕೂಡ ಆರಂಭಿಕ ಕೆಲ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಅವರು ಕೆಳ ಬೆನ್ನಿನ ಗಾಯದಿಂದ ಇನ್ನೂ ಗುಣಮುಖರಾಗುತ್ತಿದ್ದಾರೆ. ಸ್ಟ್ರೆಸ್‌ ಬ್ಯಾಕ್‌ ಇಂಜುರಿಯಿಂದ ಗುಣಮುಖರಾಗುತ್ತಿದ್ದಾರೆ.

IPL 2026: ಇಶಾನ್‌ ಕಿಶನ್‌ಗೆ ಎಸ್‌ಆರ್‌ಎಚ್‌ ನಾಯಕತ್ವ ನೀಡಿದ ಬಗ್ಗೆ ಆಕಾಶ್‌ ಚೋಪ್ರಾ ಪ್ರತಿಕ್ರಿಯೆ!

"ಜಾಶ್‌ ಹೇಝಲ್‌ವುಡ್‌ ಅವರು 2026ರ ಐಪಿಎಲ್ ಟೂರ್ನಿಯಲ್ಲಿ ಆಡಲು ತಡವಾಗಿ ಆರ್‌ಸಿಬಿ ತಂಡವನ್ನು ಸೇರಿಕೊಳ್ಳುವ ಸಾಧ್ಯತೆ ಇದೆ. ಅವರ ಜೊತೆಗೆ ಪ್ಯಾಟ್‌ ಕಮಿನ್ಸ್‌ ಕೂಡ ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ಆರಂಭಿಕ ಕೆಲವು ಪಂದ್ಯಗಳಿಗೆ ಅಲಭ್ಯರಾಗುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ. ಇದರಲ್ಲಿ ಮಾರ್ಚ್ 28ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧ ಸನ್‌ರೈಸರ್ಸ್‌ ಹೈದರಾಬಾದ್‌ ತಂಡಗಳು ಮುಖಾಮುಖಿಯಾಗಲಿವೆ," ಎಂದು ವರದಿ ಹೇಳಿದೆ.

ಈ ಇಬ್ಬರೂ ಆಟಗಾರರು ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ನಡೆದಿದ್ದ 2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿಯೂ ಆಡಿರಲಿಲ್ಲ. ಇವರ ಅನುಪಸ್ಥಿತಿಯಲ್ಲಿ ಆಸ್ಟ್ರೇಲಿಯಾ ತಂಡ ಗುಂಪು ಹಂತದಲ್ಲೇ ಹೊರಬಿದ್ದಿತ್ತು. ಪ್ಯಾಟ್‌ ಕಮಿನ್ಸ್‌ ಕಳೆದ ವರ್ಷ ಇಂಗ್ಲೆಂಡ್‌ ವಿರುದ್ಧ ಆಷಸ್‌ ಟ್ರೋಫಿ ಟೆಸ್ಟ್‌ ಸರಣಿಯಲ್ಲಿ ಕೇವಲ ಒಂದು ಪಂದ್ಯ ಮಾತ್ರ ಆಡಿದ್ದರೆ, ಹೇಝಲ್‌ವುಡ್ ಆ ಸರಣಿಯಲ್ಲಿ ಆಡಿರಲಿಲ್ಲ.

IPL 2026: ʻವಿರಾಟ್‌ ಕೊಹ್ಲಿ ಆರ್‌ಸಿಬಿಯ ಹೃದಯ ಬಡಿತʼ-ಎಬಿಡಿ ಮಾತು ಒಪ್ಪಬಹುದಾ?

ಗಾಯದ ಕಾರಣದಿಂದ ಪ್ಯಾಟ್‌ ಕಮಿನ್ಸ್‌ ಇನ್ನೂ ಯಾವುದೇ ಕ್ರಿಕೆಟ್ ಆಡಿಲ್ಲ. ಅವರ ಲಭ್ಯತೆ ಕುರಿತು ಫ್ರಾಂಚೈಸಿಗೂ ಇನ್ನೂ ಸ್ಪಷ್ಟತೆ ಇಲ್ಲ ಎಂದು ತಿಳಿದುಬಂದಿದೆ. ಇದರಿಂದಾಗಿ, ಇಶಾನ್‌ ಕಿಶನ್‌ ಆರಂಭಿಕ ಪಂದ್ಯಗಳಲ್ಲಿ ಎಸ್‌ಆರ್‌ಎಚ್ ತಂಡವನ್ನು ಮುನ್ನಡೆಸಲಿದ್ದಾರೆ. ಅಭಿಷೇಕ್‌ ಶರ್ಮಾ ಉಪನಾಯಕನಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಫ್ರಾಂಚೈಸಿ ದೃಢಪಡಿಸಿದೆ.