ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Asia Cup 2025: ʻಜಸ್‌ಪ್ರೀತ್‌ ಬುಮ್ರಾ ಎಲ್ಲಾ ಪಂದ್ಯಗಳನ್ನು ಆಡಲ್ಲʼ-ಎಬಿಡಿ ಅಚ್ಚರಿ ಹೇಳಿಕೆ!

AB De Villiers on Jasprit Bumrah: ಭಾರತ ಕ್ರಿಕೆಟ್ ತಂಡದ ಯಾರ್ಕರ್‌ ಕಿಂಗ್‌ ಖ್ಯಾತಿಯ ವೇಗದ ಬೌಲರ್ ಜಸ್‌ಪ್ರೀತ್‌ ಬುಮ್ರಾ 2025ರ ಏಷ್ಯಾ ಕಪ್ ಟೂರ್ನಿಯಲ್ಲಿ ಮಿಂಚಲು ಸಿದ್ಧರಾಗಿದ್ದಾರೆ. ಇದರ ನಡುವೆ ದಕ್ಷಿಣ ಆಫ್ರಿಕಾ ಮಾಜಿ ನಾಯಕ ಎಬಿ ಡಿ ಡಿವಿಲಿಯರ್ಸ್, ಜಸ್‌ಪ್ರೀತ್‌ ಬುಮ್ರಾ ಬಗ್ಗೆ ವಿಶೇಷ ಭವಿಷ್ಯ ನುಡಿದಿದ್ದಾರೆ.

ʻಜಸ್‌ಪ್ರೀತ್‌ ಬುಮ್ರಾ ಎಲ್ಲಾ ಪಂದ್ಯಗಳನ್ನು ಆಡಲ್ಲʼ:ಎಬಿಡಿ!

ಜಸ್‌ಪ್ರೀತ್‌ ಬುಮ್ರಾ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಎಬಿಡಿ.

Profile Ramesh Kote Aug 23, 2025 10:58 PM

ನವದೆಹಲಿ: ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ಕ್ರಿಕೆಟ್ ತಂಡ (Indian Cricket Team) ಏಷ್ಯಾ ಕಪ್‌ ಟೂರ್ನಿಗೆ (Asia Cup 2025) ಸಜ್ಜಾಗುತ್ತಿದೆ. ಟೂರ್ನಿಯಲ್ಲಿ ಟೀಮ್ ಇಂಡಿಯಾದ ಮೊದಲ ಪಂದ್ಯ ಸೆಪ್ಟೆಂಬರ್ 10 ರಂದು ನಡೆಯಲಿದೆ. ಇತ್ತೀಚೆಗೆ ಏಷ್ಯಾ ಕಪ್‌ ಟೂರ್ನಿಗೆ ಅಜಿತ್‌ ಅಗರ್ಕರ್‌ ಸಾರಥ್ಯದ ಬಿಸಿಸಿಐ ಆಯ್ಕೆ ಸಮಿತಿಯು 15 ಸದಸ್ಯರ ಭಾರತ ತಂಡವನ್ನು ಘೋಷಿಸಿತ್ತು. ಇದರಲ್ಲಿ ವೇಗದ ಬೌಲರ್ ಜಸ್‌ಪ್ರೀತ್‌ ಬುಮ್ರಾ (Jasprit Bumrah) ಕೂಡ ಸೇರಿದ್ದಾರೆ. ದಕ್ಷಿಣ ಆಫ್ರಿಕಾ ದಂತಕಥೆ ಎಬಿ ಡಿ ವಿಲಿಯರ್ಸ್(AB De Villiers) ಬುಮ್ರಾ ಬಗ್ಗೆ ದೊಡ್ಡ ಭವಿಷ್ಯ ನುಡಿದಿದ್ದಾರೆ. ಅವರು ಏಷ್ಯಾ ಕಪ್‌ ಟೂರ್ನಿಯಲ್ಲಿ ಎಲ್ಲಾ ಪಂದ್ಯಗಳನ್ನು ಆಡುವುದಿಲ್ಲ ಎಂದು ಹೇಳಿದ್ದಾರೆ.

ಜಸ್‌ಪ್ರೀತ್‌ ಬುಮ್ರಾ ಈ ಟೂರ್ನಿಯ ಪ್ರತಿಯೊಂದು ಪಂದ್ಯದಲ್ಲೂ ಆಡದಿರಬಹುದು ಎಂದು ಡಿವಿಲಿಯರ್ಸ್ ಹೇಳಿದ್ದಾರೆ. ಬುಮ್ರಾ ಅವರ ಕೆಲಸದ ಹೊರೆಯನ್ನು ನಿರ್ವಹಿಸಲು ಇದನ್ನು ಮಾಡಲಾಗುತ್ತದೆ ಎಂದು ಅವರು ನಂಬುತ್ತಾರೆ. 31ರ ವಯಸ್ಸಿನ ಜಸ್‌ಪ್ರೀತ್ ಬುಮ್ರಾ ಇತ್ತೀಚಿನ ವರ್ಷಗಳಲ್ಲಿ ನಿರಂತರವಾಗಿ ಗಾಯಗಳಿಂದ ಬಳಲುತ್ತಿದ್ದಾರೆ. ಏಷ್ಯಾ ಕಪ್‌ ಟೂರ್ನಿಗೂ ಮುನ್ನ ಕೆಲಸದ ಹೊರೆ ನಿರ್ವಹಣೆಯ ಭಾಗವಾಗಿ ಇಂಗ್ಲೆಂಡ್ ಪ್ರವಾಸದ ಸಮಯದಲ್ಲಿ ಬುಮ್ರಾ, ಐದು ಟೆಸ್ಟ್‌ಗಳಲ್ಲಿ ಕೇವಲ ಮೂರರಲ್ಲಿ ಮಾತ್ರ ಆಡಿದ್ದರು.

Asia Cup 2025: ಶ್ರೇಯಸ್‌ ಅಯ್ಯರ್‌ಗೆ ಸ್ಥಾನ ನೀಡದ ಬಗ್ಗೆ ಸಂಜಯ್‌ ಮಾಂಜ್ರೇಕರ್‌ ಪ್ರತಿಕ್ರಿಯೆ!

ಜಸ್‌ಪ್ರೀತ್‌ ಬುಮ್ರಾ ಬಗ್ಗೆ ಎಬಿಡಿ ಹೇಳಿದ್ದೇನು?

"ತಂಡದಲ್ಲಿ ಜಸ್‌ಪ್ರೀತ್‌ ಬುಮ್ರಾ ಅವರನ್ನು ನೋಡುವುದು ತುಂಬಾ ಸಂತೋಷ ತಂದಿದೆ. ಅವರು ಫಿಟ್ ಆಗಿದ್ದಾರೆ ಮತ್ತು ಆಡಲು ಸಿದ್ಧರಾಗಿದ್ದಾರೆ. ಅವರು ಎಲ್ಲಾ ಪಂದ್ಯಗಳನ್ನು ಆಡುತ್ತಾರೆ ಎಂದು ನಾನು ಭಾವಿಸುವುದಿಲ್ಲ. ಅವರನ್ನು ಪ್ರಮುಖ ಪಂದ್ಯಗಳಿಗೆ ಮಾತ್ರ ಆಯ್ಕೆ ಮಾಡಲಾಗುತ್ತದೆ ಎಂದು ಹೇಳುವ ಕೆಲವು ವರದಿಗಳನ್ನು ನಾನು ನೋಡಿದ್ದೇನೆ ಮತ್ತು ಆಯ್ಕೆದಾರರ ಈ ಪೂರ್ವಭಾವಿ ಮನೋಭಾವ ನನಗೆ ಇಷ್ಟವಾಯಿತು. ನಿಮ್ಮ ಹಿರಿಯ ಮತ್ತು ಅತ್ಯಂತ ಪ್ರಭಾವಶಾಲಿ ಆಟಗಾರರನ್ನು ನೀವು ಈ ರೀತಿ ನಿರ್ವಹಿಸಬೇಕು," ಎಂದು ಎಬಿಡಿ ತಿಳಿಸಿದ್ದಾರೆ.

"ಬುಮ್ರಾ ಇದನ್ನು ಸ್ವಂತ ಇಚ್ಛೆಯಿಂದ ಮಾಡುತ್ತಿದ್ದಾರೆ ಎಂದಲ್ಲ. ಇತ್ತೀಚಿನ ದಿನಗಳಲ್ಲಿ ತುಂಬಾ ಕ್ರಿಕೆಟ್ ಇದೆ. ಹಲವು ವರ್ಷಗಳ ಕಠಿಣ ಪರಿಶ್ರಮದ ಪರಿಣಾಮ ನಿಮ್ಮ ಹಿರಿಯ ಆಟಗಾರರ ಮೇಲೆ ಗೋಚರಿಸುತ್ತಿದೆ. ಒಮ್ಮೆ ನೀವು ಈ ಆಟಗಾರರನ್ನು ನಿರ್ವಹಿಸಲು ಪ್ರಾರಂಭಿಸಿದರೆ, ನೀವು ಅವರಿಂದ ಅತ್ಯುತ್ತಮ ಪ್ರದರ್ಶನವನ್ನು ಪಡೆಯುತ್ತೀರಿ ಮತ್ತು ಅವರು ಜಸ್‌ಪ್ರೀತ್‌ ಬುಮ್ರಾ ಅವರೊಂದಿಗೆ ಇದನ್ನು ಮಾಡಲು ಪ್ರಾರಂಭಿಸಿದ್ದಾರೆ ಎಂದು ನನಗೆ ಇಷ್ಟವಾಯಿತು," ಎಂದು ಅವರು ಹೇಳಿದ್ದಾರೆ.

Asia Cup 2025: ಭಾರತ-ಪಾಕಿಸ್ತಾನ ಪಂದ್ಯದ ಬಗ್ಗೆ ಸ್ಪಷ್ಟತೆ ಕೊಟ್ಟ ಕೇಂದ್ರ ಸರ್ಕಾರ!

2025ರ ಏಷ್ಯಾ ಕಪ್ ಟೂರ್ನಿಯ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್‌ (ವಿ.ಕೀ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಜಸ್‌ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಕುಲ್‌ದೀಪ್ ಯಾದವ್, ರಿಂಕು ಸಿಂಗ್, ಹರ್ಷಿತ್‌ ರಾಣಾ.

ಮೀಸಲು ಆಟಗಾರರು: ಪ್ರಸಿಧ್‌ ಕೃಷ್ಣ, ವಾಷಿಂಗ್ಟನ್ ಸುಂದರ್, ರಿಯಾನ್ ಪರಾಗ್, ಧ್ರುವ್ ಜುರೆಲ್, ಯಶಸ್ವಿ ಜೈಸ್ವಾಲ್.