ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಭಾರತದ ಪಂದ್ಯವನ್ನು ಬಾಯ್ಕಟ್‌ ಮಾಡಿದ್ದಕ್ಕೆ ಐಸಿಸಿ ಪಾಕ್‌ಗೆ ಶಿಕ್ಷೆ ನೀಡಲು ಸಾಧ್ಯವಿಲ್ಲ: ಎಹ್ಸಾನ್‌ ಮಣಿ!

2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯ ಗುಂಪು ಹಂತದಲ್ಲಿ ಭಾರತ ತಂಡದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಿದ ಪಾಕಿಸ್ತಾನ ತಂಡಕ್ಕೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ ಯಾವುದೇ ಶಿಕ್ಷೆ ನೀಡಲು ಸಾಧ್ಯವಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಮಾಜಿ ಅಧ್ಯಕ್ಷ ಎಹ್ಸಾನ್‌ ಮಣಿ ಹೇಳಿದ್ದಾರೆ.

ಪಾಕಿಸ್ತಾನ ತಂಡಕ್ಕೆ ಶಿಕ್ಷೆ ನೀಡಲು ಸಾಧ್ಯವಿಲ್ಲ ಎಂದ ಎಹ್ಸಾನ್‌ ಮಣಿ.

ನವದೆಹಲಿ: ಮುಂಬರುವ 2026ರ ಐಸಿಸಿ ಟಿ20 ವಿಶ್ವಕಪ್‌ (ICC T20 World Cup 2026) ಟೂರ್ನಿಯಲ್ಲಿ ಭಾರತ ವಿರುದ್ದದ ಪಂದ್ಯವನ್ನು ಬಹಿಷ್ಕರಿಸಿದ ಪಾಕಿಸ್ತಾನ ತಂಡಕ್ಕೆ (Pakistan Cricket) ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ ಯಾವುದೇ ಶಿಕ್ಷೆಯನ್ನು ನೀಡಲು ಸಾಧ್ಯವಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಮಾಜಿ ಅಧ್ಯಕ್ಷ ಎಹ್ಸಾನ್‌ ಮಣಿ (Ehsan Mani) ಹೇಳಿದ್ದಾರೆ. ಭಾರತ ವಿರುದ್ದದ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನ ಸರ್ಕಾರ ತೆಗೆದುಕೊಂಡಿದೆ. ಹಾಗಾಗಿ ಇದು ಐಸಿಸಿ ವ್ಯಾಪ್ತಿಯಿಂದ ಹೊರಗಿದೆ ಎಂದು ಅವರು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಬಾಂಗ್ಲಾದೇಶ ಕ್ರಿಕೆಟ್‌ ತಂಡ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯನ್ನೇ ಬಹಿಷ್ಕರಿಸಿದೆ. ಇದರ ಬೆನ್ನಲ್ಲೆ ಪಾಕಿಸ್ತಾನ ಕ್ರಿಕೆಟ್‌ ತಂಡ ಕೂಡ ಭಾರತ ವಿರುದ್ದದ ಪಂದ್ಯವನ್ನು ಬಾಯ್ಕಟ್‌ ಮಾಡಿದೆ. ಜನವರಿ ಒಂದರಂದು ಪಾಕಿಸ್ತಾನ ಸರ್ಕಾರ ಈ ವಿಷಯವನ್ನು ಪ್ರಕಟಿಸಿತ್ತ. ಪಾಕಿಸ್ತಾನ ಕ್ರಿಕೆಟ್‌ ತಂಡ, ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾಗವಹಿಸಲು ಶ್ರೀಲಂಕಾಗೆ ಪ್ರಯಾಣ ಬೆಳೆಸಲಿದೆ. ಆದರೆ, ಫೆಬ್ರವರಿ 15 ರಂದು ಸಾಂಪ್ರದಾಯಿಕ ಎದುರಾಳಿ ಭಾರತದ ವಿರುದ್ಧದ ಪಂದ್ಯವನ್ನು ಆಡಲು ಪಾಕಿಸ್ತಾನ ತಂಡ ಮೈದಾನಕ್ಕೆ ಇಳಿಯದೆ ಬಾಯ್ಕಟ್‌ ಮಾಡಲಿದೆ ಎಂದು ಪಾಕ್‌ ಪ್ರಧಾನ ಮಂತ್ರಿ ಪ್ರಕಟಿಸಿದ್ದರು.

T20 World Cup 2026: ಯುಎಸ್‌ಎ ವಿರುದ್ಧ 49 ಎಸೆತಗಳಲ್ಲಿ ಶತಕ ಸಿಡಿಸಿದ ಎನ್‌ ಜಗದೀಶನ್‌!

"ಪಾಕಿಸ್ತಾನ ಸರ್ಕಾರದ ಸೂಚನೆಗಳನ್ನು ಪಾಲಿಸಿದರೆ ಅದರ (ಪಾಕಿಸ್ತಾನ ತಂಡ) ವಿರುದ್ಧ ಯಾವುದೇ ನಿರ್ಬಂಧಗಳನ್ನು ಹೇರಲು ಸಾಧ್ಯವಿಲ್ಲ. ಭಾರತ ತಂಡ, 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನು ಪಾಕಿಸ್ತಾನದಲ್ಲಿ ಆಡಲು ನಿರಾಕರಿಸಿದ್ದಕ್ಕೆ ಅದೇ ಕಾರಣವಾಗಿತ್ತು. ನೀವು ದ್ವಿಮುಖ ನೀತಿಗಳನ್ನು ಹೊಂದಲು ಸಾಧ್ಯವಿಲ್ಲ. ಸಮಸ್ಯೆಯನ್ನು ನಿಭಾಯಿಸುವ ಬದಲು, ಐಸಿಸಿ ಕೇವಲ ಪ್ರೇಕ್ಷಕನಂತೆ ನಿಂತಿದೆ," ಎಂದು ಎಹ್ಸಾನ್‌ ಮಣಿ ಹೇಳಿರುವುದಾಗಿ ಸ್ಪೋರ್ಟ್‌ಸ್ಟಾರ್ ವರದಿ ಮಾಡಿದೆ.

ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿರುವ ಎಹ್ಸಾನ್‌ ಮಣಿ, ಪಿಸಿಬಿ ಅಧ್ಯಕ್ಷರು ಪಾಕಿಸ್ತಾನ ಸರ್ಕಾರದಲ್ಲಿ ಸಚಿವರಾಗಿರುವ ಕಾರಣ, ಸರ್ಕಾರಗಳು ಕ್ರಿಕೆಟ್ ನಿರ್ಧಾರಗಳ ಮೇಲೆ ಪ್ರಭಾವ ಬೀರಲು ಪರಿಸ್ಥಿತಿ ಪರಿಣಾಮಕಾರಿಯಾಗಿ ಬಾಗಿಲು ತೆರೆದಿದೆ ಎಂದು ಹೇಳಿದ್ದಾರೆ.

Josh Hazlewood: 2026ರ ಟಿ20 ವಿಶ್ವಕಪ್‌ ಟೂರ್ನಿಗೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಆಘಾತ!

ಆದಾಗ್ಯೂ, ಐಸಿಸಿ ಪಾಕಿಸ್ತಾನ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿದೆ ಮತ್ತು ಆಯ್ದ ಭಾಗವಹಿಸುವಿಕೆಯು ಶಿಕ್ಷಾರ್ಹ ಪರಿಣಾಮಗಳಿಗೆ ಕಾರಣವಾಗಬಹುದು ಎಂದು ಎಚ್ಚರಿಕೆ ನೀಡಿದೆ. ಪಿಸಿಬಿಯಿಂದ ಇನ್ನೂ ಯಾವುದೇ ಅಧಿಕೃತ ಸಂವಹನ ಬಂದಿಲ್ಲ ಎಂದು ಆಡಳಿತ ಮಂಡಳಿ ಹೇಳಿದೆ, ಆದರೆ ಈ ಕ್ರಮವು ಜಾಗತಿಕ ಕ್ರೀಡಾಕೂಟದ ತತ್ವಗಳಿಗೆ ಹೊಂದಿಕೆಯಾಗುವುದಿಲ್ಲ ಎಂದು ಬಣ್ಣಿಸಿದೆ.

"ಪಾಕಿಸ್ತಾನ ತಂಡ, ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತದ ವಿರುದ್ಧ ಆಡಿಲ್ಲವಾದರೆ ಅಥವಾ ಆಯ್ದ ಪಂದ್ಯಗಳನ್ನು ಆಯ್ಕೆ ಮಾಡಿದರೆ, ಇದು ಜಾಗತಿಕ ಕ್ರಿಕೆಟ್‌ ಪರಿಸರದ ಮೇಲೆ ಮಾತ್ರವಲ್ಲದೆ, ತನ್ನದೇ ದೇಶದ ಕ್ರಿಕೆಟ್‌ ಮೇಲೆ ಗಂಭೀರ ಪರಿಣಾಮ ಬೀರಲಿದೆ. ರಾಷ್ಟ್ರೀಯ ನೀತಿಯ ವಿಷಯಗಳಲ್ಲಿ ಸರ್ಕಾರಗಳ ಪಾತ್ರವನ್ನು ಒಪ್ಪಿಕೊಂಡರೂ, ಈ ನಿರ್ಧಾರವು ಜಾಗತಿಕ ಆಟದ ಹಿತಾಸಕ್ತಿ ಅಥವಾ ಪಾಕಿಸ್ತಾನ ಸೇರಿದಂತೆ ವಿಶ್ವಾದ್ಯಂತ ಅಭಿಮಾನಿಗಳ ಕಲ್ಯಾಣದಲ್ಲಿಲ್ಲ," ಎಂದು ಐಸಿಸಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.