ನವದೆಹಲಿ: ಪ್ರಸ್ತುತ ಏಕದಿನ ಕ್ರಿಕೆಟ್‌ನಲ್ಲಿ ಭರ್ಜರಿ ಫಾರ್ಮ್‌ನಲ್ಲಿರುವ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ(Virat Kohli), ಐಸಿಸಿ ಒಡಿಐ ಬ್ಯಾಟಿಂಗ್ (ICC ODI Rankings) ಶ್ರೇಯಾಂಕದಲ್ಲಿ ಅಗ್ರ ಸ್ಥಾನಕ್ಕೆ 4 ವರ್ಷಗಳ ಬಳಿಕ ಮರಳಿದ್ದಾರೆ. ಇನ್ನು ಇವರ ಸಹ ಆಟಗಾರ ರೋಹಿತ್ ಶರ್ಮಾ (Rohit Sharma) ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಅಂದ ಹಾಗೆ ವಿರಾಟ್ ಕೊಹ್ಲಿ 2021ರ ಜುಲೈನಲ್ಲಿ ಕೊನೆಯ ಬಾರಿ ಐಸಿಸಿ ಏಕದಿನ ಕ್ರಿಕೆಟ್‌ನಲ್ಲಿ ಅಗ್ರ ಸ್ಥಾನದಲ್ಲಿದ್ದರು. ಇದೀಗ ಅವರು ಕಿವೀಸ್ ಎದುರಿನ ಮೊದಲನೇ ಏಕದಿನ ಪಂದ್ಯದಲ್ಲಿ 91 ಎಸೆತಗಳಲ್ಲಿ 93 ರನ್‌ಗಳನ್ನು ಕಲೆ ಹಾಕುವ ಮೂಲಕ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿ ಅಗ್ರ ಸ್ಥಾನಕ್ಕೆ ಮರಳಿದ್ದಾರೆ.
ವಿರಾಟ್ ಕೊಹ್ಲಿ ಏಕದಿನ ಬ್ಯಾಟಿಂಗ್ ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೆ ಏರುತ್ತಿರುವುದು ಇದು 11ನೇ ಬಾರಿ, ಇದಕ್ಕೆ ಅವರ ಸತತ ಅದ್ಭುತ ಪ್ರದರ್ಶನವೇ ಕಾರಣ. ಕಳೆದ ವರ್ಷ ನವೆಂಬರ್-ಡಿಸೆಂಬರ್ ಅವಧಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ತವರು ಸರಣಿಯಲ್ಲಿ 135, 102 ಮತ್ತು ಅಜೇಯ 65 ರನ್ ಗಳಿಸಿದ್ದಲ್ಲದೆ, ಅಕ್ಟೋಬರ್‌ನಲ್ಲಿ ಸಿಡ್ನಿಯಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಅಜೇಯ 74 ರನ್ ಗಳಿಸಿದ್ದರು.
IND vs NZ: ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ನಡುವೆ ಮನಸ್ತಾಪ ಇದೆಯಾ? ಬ್ಯಾಟಿಂಗ್ ಕೋಚ್ ಹೇಳಿದ್ದಿದು!
ಕಳೆದ ಐದು ಇನಿಂಗ್ಸ್‌ಗಳಲ್ಲಿ ವಿರಾಟ್ ಕೊಹ್ಲಿ ಅರ್ಧಶತಕಗಳನ್ನು ಬಾರಿಸಿದ್ದಾರೆ. ಆ ಮೂಲಕ ಐದು ಪಂದ್ಯಗಳಿಂದ 469 ರನ್‌ಗಳನ್ನು ಗಳಿಸಿದ್ದಾರೆ. ಇದರಲ್ಲಿ ಎರಡು ಶತಕಗಳು ಹಾಗೂ ಮೂರು ಅರ್ಧಶತಕಗಳನ್ನು ಬಾರಿಸಿದ್ದಾರೆ. ಆ ಮೂಲಕ ಒಟ್ಟು 785 ರೇಟಿಂಗ್ ಪಾಯಿಂಟ್ಸ್ ಕಲೆ ಹಾಕುವ ಮೂಲಕ ಕೊಹ್ಲಿ ಒಡಿಐ ಶ್ರೇಯಾಂಕದಲ್ಲಿ ಅಗ್ರ ಸ್ಥಾನಕ್ಕೆ ಮರಳಿದ್ದಾರೆ. 775 ರೇಟಿಂಗ್ ಪಾಯಿಂಟ್ಸ್ ಮೂಲಕ ಹಿಟ್‌ಮ್ಯಾನ್ ರೋಹಿತ್ ಶರ್ಮಾ ಮೂರನೇ ಸ್ಥಾನಕ್ಕೆ ಇಳಿದಿದ್ದಾರೆ.
2013ರಲ್ಲಿ ಮೊದಲ ಬಾರಿ ಅಗ್ರ ಸ್ಥಾನಕ್ಕೇರಿದ್ದ ಕೊಹ್ಲಿ
ವಿರಾಟ್ ಕೊಹ್ಲಿ 2013ರಲ್ಲಿ ತಮ್ಮ ವೃತ್ತಿ ಜೀವನದಲ್ಲಿ ಮೊದಲ ಬಾರಿ ಅಗ್ರ ಸ್ಥಾನಕ್ಕೇರಿದ್ದರು ಹಾಗೂ 825 ದಿನಗಳ ಕಾಲ ಅವರು ಅಗ್ರ ಸ್ಥಾನದಲ್ಲಿ ಉಳಿದಿದ್ದರು. ಒಟ್ಟಾರೆಯಾಗಿ ಅತಿ ಹೆಚ್ಚು ಅವಧಿ ಅಗ್ರ ಸ್ಥಾನದಲಿ ಉಳಿದಿದ್ದ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 10ನೇ ಸ್ಥಾನದಲ್ಲಿದ್ದಾರೆ. ವೆಸ್ಟ್ ಇಂಡೀಸ್ ದಿಗ್ಗಜ ವಿವಿಯನ್ ರಿಚರ್ಡ್ಸ್ ಅವರು ಅಗ್ರ ಸ್ಥಾನದಲ್ಲಿದ್ದಾರೆ. ಇವರು ಒಟ್ಟು 2306 ದಿನಗಳ ಕಾಲ ನಂಬರ್ 1 ಸ್ಥಾನದಲ್ಲಿದ್ದರು.
IND vs NZ: ವಿರಾಟ್ ಕೊಹ್ಲಿ ದುರಹಂಕಾರಿ? ಮಾಜಿ ನಾಯಕನ ಬಗ್ಗೆ ಅಜಿಂಕ್ಯ ರಹಾನೆ ದೊಡ್ಡ ಹೇಳಿಕೆ!
ನ್ಯೂಜಿಲೆಂಡ್‌ನ ಡ್ಯಾರಿಲ್ ಮಿಚೆಲ್ ಮೊದಲ ಏಕದಿನ ಪಂದ್ಯದಲ್ಲಿ 84 ರನ್ ಗಳಿಸುವ ಮೂಲಕ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿದ್ದಾರೆ ಮತ್ತು 784 ರೇಟಿಂಗ್‌ಗಳೊಂದಿಗೆ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಅಗ್ರ ಸ್ಥಾನಕ್ಕಾಗಿ ಸ್ಪರ್ಧೆ ತೀವ್ರಗೊಳ್ಳಲಿದೆ, ಮೊದಲ ಮೂರು ಬ್ಯಾಟ್ಸ್‌ಮನ್‌ಗಳಲ್ಲಿ ಕೇವಲ 10 ಅಂಕಗಳು ಮಾತ್ರ ಇವೆ.
ಇದರ ನಡುವೆ ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಕೂಡ ಒಂದು ಸ್ಥಾನ ಏರಿ 11ನೇ ಸ್ಥಾನಕ್ಕೆ ತಲುಪಿದ್ದಾರೆ, ಆದರೆ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಕೂಡ ಐದು ಸ್ಥಾನಗಳನ್ನು ಹೆಚ್ಚಿಸಿಕೊಂಡು ಏಕದಿನ ಬೌಲಿಂಗ್ ಶ್ರೇಯಾಂಕದಲ್ಲಿ 15 ನೇ ಸ್ಥಾನಕ್ಕೆ ತಲುಪಿದ್ದಾರೆ.