ICC ODI Rankings: ಎರಡನೇ ಸ್ಥಾನಕ್ಕೆ ಲಗ್ಗೆಯಿಟ್ಟ ವಿರಾಟ್ ಕೊಹ್ಲಿ! ಅಗ್ರ ಸ್ಥಾನ ಯಾರಿಗೆ ಗೊತ್ತೆ?
ಬುಧವಾರ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಬಿಡುಗಡೆ ಮಾಡಿದ ಒಡಿಐ ನೂತನ ಶ್ರೇಯಾಂಕದಲ್ಲಿ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಪ್ರಗತಿ ಕಂಡಿದ್ದಾರೆ. ಅವರು ಎರಡನೇ ಸ್ಥಾನಕ್ಕೆ ಲಗ್ಗೆ ಇಡುವ ಮೂಲಕ ಅಗ್ರ ಸ್ಥಾನದಲ್ಲಿರುವ ರೋಹಿತ್ ಶರ್ಮಾಗೆ ಸನಿಹವಾಗಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಕೊಹ್ಲಿ ಎರಡು ಶತಕ ಹಾಗೂ ಒಂದು ಅರ್ಧಶತಕವನ್ನು ಬಾರಿಸಿದ್ದರು.
ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಎರಡನೇ ಸ್ಥಾನಕ್ಕೆ ವಿರಾಟ್ ಕೊಹ್ಲಿ. -
ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC ODI Rankings) ಹೊಸ ಏಕದಿನ ಶ್ರೇಯಾಂಕವನ್ನು ಬಿಡುಗಡೆ ಮಾಡಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಉತ್ತಮ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ (Virat Kohli), ಶ್ರೇಯಾಂಕದಲ್ಲಿ ಬೆಳವಣಿಗೆ ಕಂಡಿದ್ದಾರೆ. ಕಳೆದ ವಾರದವರೆಗೆ ಅವರು 4ನೇ ಸ್ಥಾನದಲ್ಲಿದ್ದರು. ಆದರೆ, ದಕ್ಷಿಣ ಆಫ್ರಿಕಾ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನವನ್ನು ತೋರಿದರ ಫಲವಾಗಿ ಇದೀಗ ಏಕದಿನ ಕ್ರಿಕೆಟ್ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಎರಡನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ. ಇವರ ಸಹ ಆಟಗಾರ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ (Rohit sharma) ತಮ್ಮ ಅಗ್ರ ಸ್ಥಾನವನ್ನು ಸುಭದ್ರವಾಗಿ ಕಾಪಾಡಿಕೊಂಡಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ಅದ್ಭುತ ಪ್ರದರ್ಶನ ತೋರಿದ್ದರು. ಅವರು ಇದೀಗ ಎರಡು ಸ್ಥಾನಕ್ಕೆ ಪ್ರವೇಶ ಮಾಡುವ ಮೂಲಕ 773 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದಾರೆ. ರೋಹಿತ್ ಶರ್ಮಾ 781 ಅಂಕಗಳೊಂದಿಗೆ ತಮ್ಮ ಅಗ್ರ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಡ್ಯಾರಿಲ್ ಮಿಚೆಲ್ 766 ಅಂಕಗಳೊಂದಿಗೆ ಒಂದು ಸ್ಥಾನ ಕುಸಿದು ಮೂರನೇ ಸ್ಥಾನಕ್ಕೆ ಇಳಿದಿದ್ದಾರೆ. ಇಬ್ರಾಹಿಂ ಝರ್ಡಾನ್ (764) ನಾಲ್ಕನೇ ಸ್ಥಾನದಲ್ಲಿದ್ದರೆ, ಶುಭಮನ್ ಗಿಲ್ (723) ಐದನೇ ಶ್ರೇಯಾಂಕದಲ್ಲಿದ್ದಾರೆ.
IND vs SA 2nd T20I: ಭಾರತದ ಸಂಭಾವ್ಯ ಪ್ಲೇಯಿಂಗ್ XI, ಪಿಚ್ ರಿಪೋರ್ಟ್, ಮುಖಾಮುಖಿ ದಾಖಲೆ ವಿವರ!
ಐಸಿಸಿ ಏಕದಿನ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕ
1.ರೋಹಿತ್ ಶರ್ಮಾ (ಭಾರತ): 781
2.ವಿರಾಟ್ ಕೊಹ್ಲಿ (ಭಾರತ): 773
3.ಡ್ಯಾರಿಲ್ ಮಿಚೆಲ್ (ನ್ಯೂಜಿಲೆಂಡ್): 766
4.ಇಬ್ರಾಹಿಂ ಝರ್ಡಾನ್ (ಅಫ್ಘಾನಿಸ್ತಾನ): 764
5.ಶುಭಮನ್ ಗಿಲ್ (ಭಾರತ): 723
6.ಬಾಬರ್ ಆಝಮ್ (ಪಾಕಿಸ್ತಾನ): 722
7.ಹ್ಯಾರಿ ಟೆಕ್ಟರ್ (ಐರ್ಲೆಂಡ್): 705
8.ಶೇಯ್ ಹೋಪ್ (ವೆಸ್ಟ್ ಇಂಡೀಸ್): 701
9.ಚರಿತ ಅಸಲಂಕಾ (ಶ್ರೀಲಂಕಾ): 690
10.ಶ್ರೇಯಸ್ ಅಯ್ಯರ್ (ಭಾರತ): 679
Quality performances across formats have translated into fresh gains in the latest ICC Men’s Player Rankings 💪
— ICC (@ICC) December 10, 2025
Read more 👇https://t.co/NePL14NTcD
ದಕ್ಷಿಣ ಆಫ್ರಿಕಾ ಏಕದಿನ ಸರಣಿಯಲ್ಲಿ ಮಿಂಚಿದ್ದ ಕೊಹ್ಲಿ
ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ಅದ್ಭುತ ಪ್ರದರ್ಶನ ತೋರಿದ್ದರು. ಈ ಸರಣಿಯುದ್ದಕ್ಕೂ ರನ್ ಹೊಳೆ ಹರಿಸಿದ್ದರು. ಇವರ ಬ್ಯಾಟಿಂಗ್ ಬಲದಿಂದ ಭಾರತ ತಂಡ, 2-1 ಅಂತರದಲ್ಲಿ ಏಕದಿನ ಸರಣಿಯನ್ನು ಗೆದ್ದಿತ್ತು. ಕೊಹ್ಲಿ ಸತತ ಎರಡು ಶತಕಗಳು ಮತ್ತು ತ್ವರಿತ ಅರ್ಧಶತಕವನ್ನು ಗಳಿಸುವ ಮೂಲಕ ತಮ್ಮ ಅದ್ಭುತ ಫಾರ್ಮ್ ಅನ್ನು ಪ್ರದರ್ಶಿಸಿದರು. ವಿರಾಟ್ ಕೊಹ್ಲಿ ಮೂರು ಪಂದ್ಯಗಳ ಸರಣಿಯಲ್ಲಿ 302 ರನ್ ಗಳಿಸಿದರು. ಇದರಲ್ಲಿ ಅವರು ಒಂದು ಶತಕ ಹಾಗೂ ಎರಡು ಅರ್ಧಶತಕಗಳನ್ನು ಬಾರಿಸಿದ್ದರು.