ವಿರಾಟ್ ಕೊಹ್ಲಿ ಟೆಸ್ಟ್ ನಿವೃತ್ತಿಯಿಂದ ಹೊರಬರುವ ಸಾಧ್ಯತೆ ಇದೆ ಎಂದ ಮೈಕಲ್ ಕ್ಲಾರ್ಕ್!
ಆಧುನಿಕ ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ಇಷ್ಟು ಬೇಗ ನಿವೃತ್ತಿ ಪಡೆಯಬಾರದಿತ್ತು ಆಸ್ಟ್ರೇಲಿಯಾ ಮಾಜಿ ನಾಯಕ ಮೈಕಲ್ ಕ್ಲಾರ್ಕ್ ಎಂದು ಹೇಳಿದ್ದಾರೆ. ಇಂಗ್ಲೆಂಡ್ ವಿರುದ್ಧ ಮುಂಬರುವ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡ 0-5 ಅಂತರದಲ್ಲಿ ಸೋಲು ಅನುಭವಿಸಿದರೆ, ವಿರಾಟ್ ಕೊಹ್ಲಿ ಟೆಸ್ಟ್ ನಿವೃತ್ತಿಯಿಂದ ಹೊರ ಬರಬಹುದು ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ನಿವೃತ್ತಿಯಿಂದ ಹೊರಬರಬೇಕೆಂದ ಮೈಕಲ್ ಕ್ಲಾರ್ಕ್.

ನವದೆಹಲಿ: ಇಂಗ್ಲೆಂಡ್ ವಿರುದ್ಧ ಮುಂಬರುವ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ (IND vs ENG) ಶುಭಮನ್ ಗಿಲ್ ನಾಯಕತ್ವದ ಭಾರತ ತಂಡ 0-5 ಅಂತರದಲ್ಲಿ ಹೀನಾಯ ಸೋಲು ಅನುಭವಿಸಿದರೆ, ಆಧುನಿಕ ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ (Virat Kohli) ಟೆಸ್ಟ್ ಕ್ರಿಕೆಟ್ ನಿವೃತ್ತಿಯಿಂದ ಹೊರ ಬರಬಹುದು ಎಂದು ಆಸ್ಟ್ರೇಲಿಯಾ ಮಾಜಿ ನಾಯಕ ಮೈಕಲ್ ಕ್ಲಾರ್ಕ್ (Michael Clarke) ಭವಿಷ್ಯ ನುಡಿದಿದ್ದಾರೆ. ಭಾರತ ಸೋಲು ಅನುಭವಿಸಿದರೆ, ಆಗ ಬಿಸಿಸಿಐನ ಆಡಳಿತ ಮಂಡಳಿ ಟೆಸ್ಟ್ ನಿವೃತ್ತಿಯಿಂದ ಹೊರಬರುವಂತೆ ವಿರಾಟ್ ಕೊಹ್ಲಿ ಬಳಿ ಮನವಿ ಮಾಡುವ ಸಾಧ್ಯತೆ ಇದೆ ಎಂದು ಆಸೀಸ್ ದಿಗ್ಗಜ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ಆಡಲು ಶುಭಮನ್ ಗಿಲ್ ನಾಯಕತ್ವದ ಭಾರತ ಟೆಸ್ಟ್ ತಂಡ ಯುಕೆ ಪ್ರವಾಸವನ್ನು ಹಮ್ಮಿಕೊಂಡಿದೆ. ಇದಕ್ಕೂ ಮುನ್ನ ಟೆಸ್ಟ್ ತಂಡ ಕೆಲ ಆಟಗಾರರು ಭಾರತ ಎ ತಂಡದ ಪರ ಇಂಗ್ಲೆಂಡ್ ಲಯನ್ಸ್ ವಿರುದ್ಧ ಎರಡನೇ ಅನಧಿಕೃತ ಟೆಸ್ಟ್ ಅನ್ನು ಆಡುತ್ತಿದ್ದಾರೆ. ಮೊದಲನೇ ಪಂದ್ಯ ಡ್ರಾನಲ್ಲಿ ಅಂತ್ಯ ಕಂಡಿದ್ದರೆ, ಎರಡನೇ ಟೆಸ್ಟ್ ಪಂದ್ಯ ಜೂನ್ 6 ರಂದು ನಾರ್ಥ್ಹ್ಯಾಮ್ಟನ್ನಲ್ಲಿ ಆರಂಭವಾಗಿದೆ.
ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ಹಠಾತ್ ವಿದಾಯ ಹೇಳಲು ಪ್ರಮುಖ 5 ಕಾರಣಗಳು!
ಅಂದ ಹಾಗೆ ಭಾರತ ತಂಡ 2007ರ ಬಳಿಕ ಇಂಗ್ಲೆಂಡ್ನಲ್ಲಿ ಟೆಸ್ಟ್ ಸರಣಿಯನ್ನು ಗೆದ್ದಿಲ್ಲ. ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಸೇರಿದಂತೆ ಸ್ಟಾರ್ ಆಟಗಾರರು ಇದ್ದಾಗಲೇ ಭಾರತ ತಂಡ, ಇಂಗ್ಲೆಂಡ್ನಲ್ಲಿ ಟೆಸ್ಟ್ ಸರಣಿಯನ್ನು ಗೆದ್ದಿರಲಿಲ್ಲ. ಆದರೆ, ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕಳೆದ ತಿಂಗಳು ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದರು. ಇದೀಗ ಹೊಸ-ಹೊಸ ಆಟಗಾರರೊಂದಿಗೆ ಭಾರತ ತಂಡ, ಇಂಗ್ಲೆಂಡ್ ವಿರುದ್ದ ಟೆಸ್ಟ್ ಸರಣಿಯನ್ನು ಆಡಲಿದೆ. ಹಾಗಾಗಿ ಶುಭಮನ್ ಗಿಲ್ ನಾಯಕತ್ವದ ಭಾರತ ತಂಡಕ್ಕೆ ಕಠಿಣ ಸವಾಲಾಗಿದೆ.
"ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡವೇನಾದರೂ 0-5 ಅಂತರದಲ್ಲಿ ಹೀನಾಯ ಸೋಲು ಅನುಭವಿಸಿದರೆ, ಕ್ರಿಕೆಟ್ ಅಭಿಮಾನಿಗಳು ಟೆಸ್ಟ್ ಕ್ರಿಕೆಟ್ ನಿವೃತ್ತಿಯಿಂದ ಹೊರ ಬಂದು, ಮತ್ತೊಮ್ಮೆ ಟೆಸ್ಟ್ ಕ್ರಿಕೆಟ್ ಆಡುವಂತೆ ವಿರಾಟ್ ಕೊಹ್ಲಿಗೆ ಆಗ್ರಹಿಸಬಹುದು. ಇದನ್ನು ನಾನು ಬಲವಾಗಿ ನಂಬುತ್ತೇನೆ," ಎಂದು ಆಸ್ಟ್ರೇಲಿಯಾ ಮಾಜಿ ನಾಯಕ ಮೈಕಲ್ ಕ್ಲಾರ್ಕ್ ಪಾಡ್ಕಾಸ್ಟ್ವೊಂದರಲ್ಲಿ ತಿಳಿಸಿದ್ದಾರೆ.
Virat Kohli Test Retire: ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಟೆಸ್ಟ್ ಕ್ರಿಕೆಟ್ಗೆ ವಿರಾಟ್ ಕೊಹ್ಲಿ ನಿವೃತ್ತಿ!
"ವಿರಾಟ್ ಕೊಹ್ಲಿ ಇನ್ನೂ ಟೆಸ್ಟ್ ಕ್ರಿಕೆಟ್ ಅನ್ನು ಪ್ರೀತಿಸುತ್ತಿದ್ದಾರೆ. ಒಂದು ವೇಳೆ ಇಂಗ್ಲೆಂಡ್ ವಿರುದ್ಧ ಭಾರತ ತಂಡ ದೊಡ್ಡ ಅಂತರದಲ್ಲಿ ಸೋಲು ಅನುಭವಿಸಿದರೆ, ನಾಯಕ, ಸೆಲೆಕ್ಟರ್ಗಳು, ಅಭಿಮಾನಿಗಳು ವಿರಾಟ್ ಕೊಹ್ಲಿಯನ್ನು ಟೆಸ್ಟ್ ನಿವೃತ್ತಿಯಿಂದ ಹೊರಬರುವಂತೆ ಮನವಿ ಮಾಡಬಹುದು. ಇದು ನಡೆದರೆ ಖಂಡಿತಾ ವಿರಾಟ್ ಕೊಹ್ಲಿ ನಿವೃತ್ತಿಯಿಂದ ಹೊರ ಬರಬಹುದು," ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವಿರಾಟ್ ಕೊಹ್ಲಿಯ ಟೆಸ್ಟ್ ಕ್ರಿಕೆಟ್ ಅಂಕಿಅಂಶ
ವಿರಾಟ್ ಕೊಹ್ಲಿ ತಮ್ಮ ಟೆಸ್ಟ್ ಕ್ರಿಕೆಟ್ ವೃತ್ತಿ ಜೀವನದಲ್ಲಿ ಆಡಿದ 123 ಪಂದ್ಯಗಳಿಂದ 46.85ರ ಸರಾಸರಿಯಲ್ಲಿ 9,230 ರನ್ಗಳನ್ನು ದಾಖಲಿಸಿದ್ದಾರೆ. ಇದರಲ್ಲಿ ಅವರು 30 ಶತಕಗಳನ್ನು ಬಾರಿಸಿದ್ದಾರೆ.