ಭಾರತೀಯ ಕ್ರಿಕೆಟ್ನ ಭವಿಷ್ಯದ ಶ್ರೇಷ್ಠ ಟೆಸ್ಟ್ ಆಟಗಾರನನ್ನು ಆರಿಸಿದ ಅಂಬಾಟಿ ರಾಯುಡು!
ನ್ಯೂಜಿಲೆಂಡ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಸಜ್ಜಾಗುತ್ತಿರುವ ಎಡಗೈ ಬ್ಯಾಟ್ಸ್ಮನ್ ಯಶಸ್ವಿ ಜೈಸ್ವಾಲ್ ಅವರನ್ನು ಮಾಜಿ ಕ್ರಿಕೆಟಿಗರಾದ ಅಂಬಾಟಿ ರಾಯುಡು ಹಾಗೂ ಮುರಳಿ ಕಾರ್ತಿಕ್ ಮುಕ್ತಕಂಠದಿಂದ ಗುಣಗಾನ ಮಾಡಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ ಜೈಸ್ವಾಲ್ ಭವಿಷ್ಯದ ಶ್ರೇಷ್ಠ ಆಟಗಾರನಾಗುವ ಸಾಮರ್ಥ್ಯವಿದೆ ಎಂದು ರಾಯುಡು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಯಶಸ್ವಿ ಜೈಸ್ವಾಲ್ ಬಗ್ಗೆ ದೊಡ್ಡ ಭವಿಷ್ಯ ನುಡಿದ ಅಂಬಾಟಿ ರಾಯುಡು. -
ನವದೆಹಲಿ: ಭಾರತ ಟೆಸ್ಟ್ ತಂಡದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನವನ್ನು ತೋರುತ್ತಿರುವ ಆರಂಭಿಕ ಬ್ಯಾಟ್ಸ್ಮನ್ ಯಶಸ್ವಿ ಜೈಸ್ವಾಲ್ (Yashasvi jaiswal) ಅವರನ್ನು ಮಾಜಿ ಕ್ರಿಕೆಟಿಗ ಅಂಬಾಟಿ ರಾಯುಡು (Ambati Rayudu) ಮುಕ್ತಕಂಠದಿಂದ ಗುಣಗಾನ ಮಾಡಿದ್ದಾರೆ. ಭವಿಷ್ಯದಲ್ಲಿ ಭಾರತೀಯ ಶ್ರೇಷ್ಠ ಆಟಗಾರರಿಗೆ ಯಶಸ್ವಿ ಜೈಸ್ವಾಲ್ ಸ್ಪರ್ಧೆ ನೀಡಲಿದ್ದಾರೆಂದು ಅವರು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಭಾರತೀಯ ಕ್ರಿಕೆಟ್ನ ಮೂರೂ ಸ್ವರೂಪಗಳಿಗೆ ಜೈಸ್ವಾಲ್ ಅವರು ತಂಡಕ್ಕೆ ಪ್ರಮುಖ ಅಸ್ತ್ರವಾಗಲಿದ್ದಾರೆಂದು ಚೆನ್ನೈ ಸೂಪರ್ ಕಿಂಗ್ಸ್ ಮಾಜಿ ಬ್ಯಾಟ್ಸ್ಮನ್ ತಿಳಿಸಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಸದ್ಯ ಯಶಸ್ವಿ ಜೈಸ್ವಾಲ್ ಸಜ್ಜಾಗುತ್ತಿದ್ದಾರೆ. ಇದಕ್ಕೂ ಮುನ್ನ ನ್ಯೂಜಿಲೆಂಡ್ ಎ ವಿರುದ್ಧದ ಪಂದ್ಯದಲ್ಲಿ ಅವರು ಎರಡು ಶತಕಗಳನ್ನು ಬಾರಿಸಿ ಭರ್ಜರಿ ಫಾರ್ಮ್ಗೆ ಮರಳಿದ್ದರು. ಕ್ರಿಕ್ಬಝ್ ಜೊತೆಗೆ ಮಾತನಾಡಿದ ಅಂಬಾಟಿ ರಾಯುಡು, ಯಶಸ್ವಿ ಜೈಸ್ವಾಲ್ ಬಗ್ಗೆ ದೊಡ್ಡ ಭವಿಷ್ಯವನ್ನು ನುಡಿದಿದ್ದಾರೆ.
IND vs NZ: ನ್ಯೂಜಿಲೆಂಡ್ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ, ಮೊಹಮ್ಮದ್ ಶಮಿಗೆ ಸ್ಥಾನವಿಲ್ಲ!
"ಖಂಡಿತವಾಗಿಯೂ. ಪ್ರಸ್ತುತ ನಮ್ಮ ತಂಡದಲ್ಲಿರುವ ಅತ್ಯುತ್ತಮ ಟೆಸ್ಟ್ ಬ್ಯಾಟರ್ಗಳಲ್ಲಿ ಅವರು ಕೂಡ ಒಬ್ಬರು ಎಂದು ನಾನು ಭಾವಿಸುತ್ತೇನೆ. ಮುಂದಿನ ದಿನಗಳಲ್ಲಿ ಅವರು ಭಾರತದ ದಿಗ್ಗಜ ಆಟಗಾರರ ಸಾಲಿನಲ್ಲಿ ಗುರುತಿಸಿಕೊಳ್ಳುವ ಸಾಮರ್ಥ್ಯ ಹೊಂದಿದ್ದಾರೆ. ಉತ್ತಮ ಟೆಸ್ಟ್ ಕ್ರಿಕೆಟಿಗನಾಗಲು ಅಗತ್ಯವಿರುವ ಆಟದ ಕೌಶಲ, ಪ್ರತಿಭೆ ಮಾತ್ರವಲ್ಲದೆ ಕಠಿಣ ಪರಿಸ್ಥಿತಿಗಳನ್ನು ಎದುರಿಸುವ ಮನೋಬಲವೂ ಅವರಲ್ಲಿದೆ. ಅವರು ಅದ್ಭುತ ಕ್ರಿಕೆಟಿಗ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ವೈಟ್ಬಾಲ್ ಕ್ರಿಕೆಟ್ನಲ್ಲೂ ಅವರು ಉತ್ತಮ ಪ್ರದರ್ಶನ ನೀಡುವ ಸಮಯ ಹೆಚ್ಚು ದೂರವಿಲ್ಲ ಎಂದು ನಾನು ಭಾವಿಸುತ್ತೇನೆ," ಎಂದು ಅಂಬಾಟಿ ರಾಯುಡು ಕ್ರಿಕ್ಬಜ್ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಯಶಸ್ವಿ ಜೈಸ್ವಾಲ್ಗೆ ಮುರಳಿ ಕಾರ್ತಿಕ್ ಸಂದೇಶ
ಭಾರತೀಯ ಮಾಜಿ ಸ್ಪಿನ್ನರ್ ಮುರಳಿ ಕಾರ್ತಿಕ್ ಅವರು ಎಡಗೈ ಬ್ಯಾಟರ್ ಯಶಸ್ವಿ ಜೈಸ್ವಾಲ್ ಇದೇ ರೀತಿಯ ಆಕ್ರಮಣಕಾರಿ ಆಟದ ತೀವ್ರತೆಯನ್ನು ಮುಂದುವರಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಕಣಕ್ಕಿಳಿಯುವ ಮುನ್ನ ಜೈಸ್ವಾಲ್ ಸ್ಪಷ್ಟ ಮನಸ್ಥಿತಿಯನ್ನು ಹೊಂದಿರುವುದು ಬಹಳ ಮುಖ್ಯ ಎಂದು ಅವರು ಹೇಳಿದ್ದಾರೆ.
"ಇದು ಜೈಸ್ವಾಲ್ ಪಾಲಿಗೆ ಬಹಳ ಒಳ್ಳೆಯ ಸಂಗತಿ. ಏಕೆಂದರೆ, ತಮ್ಮ ಟೆಸ್ಟ್ ವೃತ್ತಿಜೀವನವನ್ನು ಆರಂಭಿಸಿದ ರೀತಿಯನ್ನು ಹಾಗೂ ಇಲ್ಲಿಯವರೆಗೆ ಆಡಿಕೊಂಡು ಬಂದಿರುವ ಶೈಲಿಯನ್ನು ಗಮನಿಸಿದರೆ, ಅವರು ಅದೇ ಆಟದ ತೀವ್ರತೆಯನ್ನು ಮುಂದುವರಿಸಲು ಬಯಸುತ್ತಾರೆ. ಮೈದಾನಕ್ಕಿಳಿಯುವ ಪ್ರತಿಯೊಂದು ಪರಿಸ್ಥಿತಿಯಲ್ಲೂ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಲು ಆಟಗಾರರು ಬಯಸುತ್ತಾರೆ. ಹೀಗಾಗಿ ಇದು ಬಹಳ ಮುಖ್ಯ."
IND vs NZ: ಗಾಯಕ್ವಾಡ್, ಇಶಾನ್ ಇನ್; 4ನೇ ಒಡಿಐಗೆ ಭಾರತದ ಸಂಭಾವ್ಯ ಪ್ಲೇಯಿಂಗ್ XI ವಿವರ!
"ಇಂಗ್ಲೆಂಡ್ ಪ್ರವಾಸದಲ್ಲಿ ಅವರು ಶತಕಗಳನ್ನು ಬಾರಿಸಿದ್ದಾರೆ. ಅದೇ ವೇಳೆ ಕೆಲವೊಂದು ಪಂದ್ಯಗಳಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಿರಲಿಲ್ಲ. ಆದರೆ ಅವರು ಯಾವುದೇ ತಪ್ಪು ಮಾಡಿಲ್ಲ. ಅವರು ಆಡಿದ ಪ್ರತಿಯೊಂದು ಮಾದರಿಯ ಕ್ರಿಕೆಟ್ನಲ್ಲೂ ಶತಕಗಳನ್ನು ಗಳಿಸಿದ್ದಾರೆ. ಹೀಗಾಗಿ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಅವರು ಸ್ಪಷ್ಟ ಮನಸ್ಥಿತಿಯೊಂದಿಗೆ ಸಜ್ಜಾಗಿರುವುದು ಉತ್ತಮ ಬೆಳವಣಿಗೆ," ಎಂದು ಮುರಳಿ ಕಾರ್ತಿಕ್ ಹೇಳಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ: ಶುಭ್ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆ.ಎಲ್. ರಾಹುಲ್ ಉಪನಾಯಕ), ದೇವದತ್ ಪಡಿಕ್ಕಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೇಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅನ್ಶುಲ್ ಕಾಂಬೋಜ್, ಜಸ್ಪ್ರೀತ್ ಬುಮ್ರಾ, ಪ್ರಸಿಧ್ ಕೃಷ್ಣ, ಆಕಾಶ್ ದೀಪ್, ಸಾಯಿ ಸುದರ್ಶನ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್