ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IND vs SA: ಚೊಚ್ಚಲ ಒಡಿಐ ಶತಕ ಬಾರಿಸಿದ ವಿಶೇಷ ದಾಖಲೆ ಬರೆದ ಯಶಸ್ವಿ ಜೈಸ್ವಾಲ್‌!

Yashasvi jaiswal's Century: ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಏಕದಿನ ಪಂದ್ಯದಲ್ಲಿ ಚೊಚ್ಚಲ ಶತಕ ಬಾರಿಸಿದ ಭಾರತ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ ಯಶಸ್ವಿ ಜೈಸ್ವಾಲ್‌, ವಿಶೇಷ ದಾಖಲೆ ಬರೆದಿದ್ದಾರೆ. ಆ ಮೂಲಕ ಮೂರೂ ಸ್ವರೂಪದಲ್ಲಿ ಶತಕ ಬಾರಿಸಿದ ಭಾರತದ ಆರನೇ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ.

ಚೊಚ್ಚಲ ಒಡಿಐ ಶತಕ ಬಾರಿಸಿ ವಿಶೇಷ ದಾಖಲೆ ಬರೆದ ಜೈಸ್ವಾಲ್‌.

ವಿಶಾಖಪಟ್ಟಣಂ: ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಹಾಗೂ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ(IND vs SA) ಭರ್ಜರಿ ಬ್ಯಾಟಿಂಗ್‌ ಪ್ರದರ್ಶನವನ್ನು ತೋರಿದ ಭಾರತ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ ಯಶಸ್ವಿ ಜೈಸ್ವಾಲ್‌ (Yashasvi jaiswal) ತಮ್ಮ ಒಡಿಐ ಚೊಚ್ಚಲ ಶತಕವನ್ನು ಬಾರಿಸಿದರು. ಆ ಮೂಲಕ ಮೂರೂ ಸ್ವರೂಪದಲ್ಲಿ ಶತಕಗಳನ್ನು ಗಳಿಸಿದ ಭಾರತದ ಆರನೇ ಬ್ಯಾಟ್ಸ್‌ಮನ್‌ ಎಂಬ ದಾಖಲೆಯನ್ನು ಜೈಸ್ವಾಲ್‌ ಬರೆದಿದ್ದಾರೆ. ಇವರು ಆಡಿದ 121 ಎಸೆತಗಳಲ್ಲಿ ಎರಡು ಸಿಕ್ಸರ್‌ ಹಾಗೂ 12 ಬೌಂಡರಿಗಳೊಂದಿಗೆ ಅಜೇಯ 116 ರನ್‌ಗಳನ್ನು ಬಾರಿಸಿದರು. ಇದರೊಂದಿಗೆ ಭಾರತ ತಂಡದ (India) 9 ವಿಕೆಟ್‌ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಟೀಮ್‌ ಇಂಡಿಯಾ ಏಕದಿನ ಸರಣಿಯನ್ನು 2-1 ಅಂತರದಲ್ಲಿ ಮುಡಿಗೇರಿಸಿಕೊಂಡಿತು.

ಈ ಮೊದಲ ಶತಕದೊಂದಿಗೆ ಯಶಸ್ವಿ ಜೈಸ್ವಾಲ್ ಟೆಸ್ಟ್, ಟಿ20 ಮತ್ತು ಏಕದಿನ ಕ್ರಿಕೆಟ್ ಎಂಬ ಮೂರು ಸ್ವರೂಪಗಳಲ್ಲಿ ಶತಕ ಗಳಿಸಿದ ಆರನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು ಈಗಾಗಲೇ ಟೆಸ್ಟ್ ಮತ್ತು ಟಿ20ಐ ಕ್ರಿಕೆಟ್‌ನಲ್ಲಿ ಶತಕಗಳನ್ನು ಗಳಿಸಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧದ ಈ ಏಕದಿನ ಶತಕದೊಂದಿಗೆ, ಅವರು ಈ ಸಾಧನೆ ಮಾಡಿದ ಆರನೇ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಜೈಸ್ವಾಲ್‌ಗಿಂತ ಮುನ್ನ ಐವರು ಬ್ಯಾಟ್ಸ್‌ಮನ್‌ಗಳು ಈ ಸಾಧನೆ ಮಾಡಿದ್ದರು.

IND vs SA: ಯಶಸ್ವಿ ಜೈಸ್ವಾಲ್‌ ಶತಕ, ಮೂರನೇ ಪಂದ್ಯ ಗೆದ್ದು ಏಕದಿನ ಸರಣಿ ಮುಡಿಗೇರಿಸಿಕೊಂಡ ಭಾರತ!

ಭಾರತದ ಪರ ಮೂರೂ ಸ್ವರೂಪಗಳಲ್ಲಿ ಶತಕ ಸಿಡಿಸಿದ ಬ್ಯಾಟ್ಸ್‌ಮನ್‌ಗಳು

  1. ಸುರೇಶ್ ರೈನಾ
  2. ರೋಹಿತ್ ಶರ್ಮಾ
  3. ಕೆಎಲ್ ರಾಹುಲ್
  4. ವಿರಾಟ್ ಕೊಹ್ಲಿ
  5. ಶುಭಮನ್ ಗಿಲ್
  6. ಯಶಸ್ವಿ ಜೈಸ್ವಾಲ್



ದಕ್ಷಿಣ ಆಫ್ರಿಕಾ ವಿರುದ್ಧ ಶತಕ ಬಾರಿಸಿದ ಅತ್ಯಂತ ಕಿರಿಯ ಬ್ಯಾಟ್ಸ್‌ಮನ

ತಮ್ಮ ಚೊಚ್ಚಲ ಶತಕದೊಂದಿಗೆ ಯಶಸ್ವಿ ಜೈಸ್ವಾಲ್ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಪರ ಏಕದಿನ ಶತಕ ಬಾರಿಸಿದ ಅತ್ಯಂತ ಕಿರಿಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಯಶಸ್ವಿ ಈ ಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ತಲುಪಿದ್ದಾರೆ. ಯಶಸ್ವಿ 23 ವರ್ಷ 343 ದಿನಗಳಲ್ಲಿ ತಮ್ಮ ಮೊದಲ ಏಕದಿನ ಶತಕ ಗಳಿಸಿದ್ದಾರೆ. ಮೊದಲ ಸ್ಥಾನದಲ್ಲಿರುವ ಸಚಿನ್ ತೆಂಡೂಲ್ಕರ್ ಇದ್ದಾರೆ. ಇವರು 1996 ರಲ್ಲಿ ಮುಂಬೈನಲ್ಲಿ 23 ವರ್ಷ 234 ದಿನಗಳಲ್ಲಿ ಏಕದಿನ ಶತಕವನ್ನು ಸಿಡಿಸಿದ್ದರು. ಮಾಜಿ ಆಲ್‌ರೌಂಡರ್‌ ಯುವರಾಜ್ ಸಿಂಗ್ ಎರಡನೇ ಸ್ಥಾನದಲ್ಲಿದ್ದಾರೆ. ಯುವರಾಜ್ ಸಿಂಗ್ 2005 ರಲ್ಲಿ ಹೈದರಾಬಾದ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಶತಕ ಸಿಡಿಸಿದ್ದರು, ಆಗ ಅವರ ವಯಸ್ಸು 23 ವರ್ಷ 339 ದಿನಗಳು.

IND vs SA: 20000 ರನ್‌ಗಳಿಂದ ವಿರಾಟ್‌ ಕೊಹ್ಲಿ ಒಳಗೊಂಡ ಎಲೈಟ್‌ ಲಿಸ್ಟ್‌ ಸೇರಿದ ರೋಹಿತ್‌ ಶರ್ಮಾ!

12ನೇ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದ ಕೊಹ್ಲಿ

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು ವಿರಾಟ್ ಕೊಹ್ಲಿ ಎರಡು ಶತಕ ಮತ್ತು ಒಂದು ಅರ್ಧಶತಕದೊಂದಿಗೆ ಮುಗಿಸಿದ್ದಾರೆ. ಹಾಗಾಗಿ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದು ವಿರಾಟ್ ಕೊಹ್ಲಿ ಅವರ ಒಡಿಐ ಸ್ವರೂಪದಲ್ಲಿ 12ನೇ ಸರಣಿ ಶ್ರೇಷ್ಠ ಆಟಗಾರ ಪ್ರಶಸ್ತಿಯಾಗಿದೆ. ಇದರೊಂದಿಗೆ, 11 ಬಾರಿ ಸರಣಿ ಶ್ರೇಷ್ಠ ಆಟಗಾರ ಪ್ರಶಸ್ತಿ ಪಡೆದಿದ್ದ ಶ್ರೀಲಂಕಾದ ಸನತ್ ಜಯಸೂರ್ಯ ಅವರನ್ನು ಹಿಂದಿಕ್ಕಿದರು. ಸಚಿನ್ ತೆಂಡೂಲ್ಕರ್ (15 ಸರಣಿ ಶ್ರೇಷ್ಠ ಆಟಗಾರ ಪ್ರಶಸ್ತಿ) ಈ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ.