IND vs AFG: ಎರಡನೇ ಟಿ20ಐ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ XIನಲ್ಲಿ ಒಂದು ಬದಲಾವಣೆ ಸಾಧ್ಯತೆ!
ಭಾರತ ಹಾಗೂ ಅಫ್ಘಾನಿಸ್ತಾನ ನಡುವಣ ಮೂರು ಪಂದ್ಯಗಳ ಟಿ20ಐ ಸರಣಿ ಈಗಾಗಲೇ ಆರಂಭವಾಗಿದೆ. ಮೊದಲನೇ ಪಂದ್ಯವನ್ನು 7 ವಿಕೆಟ್‌ಗಳಿಂದ ಗೆದ್ದಿದ್ದ ಶ್ರೇಯಸ್ ಅಯ್ಯರ್ ನಾಯಕತ್ವದ ಟೀಮ್ ಇಂಡಿಯಾ ಇದೀಗ ಸೆಪ್ಟಂಬರ್ 15 ರಂದು ನಡೆಯುವ ಎರಡನೇ ಪಂದ್ಯಕ್ಕೆ ಸಜ್ಜಾಗುತ್ತಿದೆ. ಈ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್ Xiನಲ್ಲಿ ಒಂದು ಬದಲಾವಣೆಯನ್ನು ತರಲಾಗಿದೆ.
ಭಾರತ ಹಾಗೂ ಅಫ್ಘಾನಿಸ್ತಾನ ನಡುವಣ ಎರಡನೇ ಟಿ20ಐ ಪಂದ್ಯ. -
ನವದೆಹಲಿ: ಅಫ್ಘಾನಿಸ್ತಾನ ವಿರುದ್ಧಧ ಮೊದಲನೇ ಪಂದ್ಯವನ್ನು (IND vs AFG) ಗೆದ್ದು ಟಿ20ಐ ಸರಣಿಯಲ್ಲಿ 1-0 ಮುನ್ನಡೆಯನ್ನು ಪಡೆದಿರುವ ಭಾರತ ತಂಡ, ಇದೀಗ ಸೆಪ್ಟಂಬರ್ 15 ರಂದು ನಡೆಯುವ ಎರಡನೇ ಪಂದ್ಯಕ್ಕೆ ಸಜ್ಜಾಗುತ್ತಿದೆ. ಈ ಪಂದ್ಯವೂ ಕೂಡ ರಾಜಧಾನಿ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿಯೂ ಗೆಲುವು ಪಡೆದು, ಇನ್ನೂ ಒಂದು ಪಂದ್ಯ ಬಾಕಿ ಇರುವಾಗಲೇ ಟಿ20ಐ ಸರಣಿಯವನ್ನು ವಶಪಡಿಸಿಕೊಳ್ಳಲು ಶ್ರೇಯಸ್ ಅಯ್ಯರ್ (Shreyas Iyer) ನಾಯಕತ್ವದ ಟೀಮ್ ಇಂಡಿಯಾ ಎದುರು ನೋಡುತ್ತಿದೆ. ಮತ್ತೊಂದೆಡೆ ಎರಡನೇ ಪಂದ್ಯವನ್ನು ಗೆದ್ದು ಟಿ20ಐ ಸರಣಿಯನ್ನು ಜೀವಂತವಾಗಿರಿಸಿಕೊಳ್ಳಲು ಆತಿಥೇಯ ಆಫ್ಘನ್ ಪ್ರಯತ್ನಿಸಲಿದೆ.
ಮೊದಲನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡಕ್ಕೆ ಸಕಾರಾತ್ಮಕ ಫಲಿತಾಂಶ ಮೂಡಿಬಂದಿಲ್ಲವಾದರೂ, ಸರಣಿಯಲ್ಲಿ ಕಮ್‌ಬ್ಯಾಕ್ ಮಾಡಿದ ಗೆಲ್ಲಲು ಆಫ್ಘನ್ ತಂಡಕ್ಕೆ ಮತ್ತೊಂದು ಅವಕಾಶವಿದೆ. ಮಂಗಳವಾರ ನಡೆಯುವ ಪಂದ್ಯ ಅಫ್ಘಾನಿಸ್ತಾನ ತಂಡಕ್ಕೆ ಮಾಡು ಇಲ್ಲವೆ ಮಡಿ ಕಾದಾಟವಾಗಿದೆ. ಆರಂಭಿಕ ಪಂದ್ಯದಲ್ಲಿ ಸೋತಿರುವ ಆಫ್ಘನ್, ಎರಡನೇ ಪಂದ್ಯದಲ್ಲಿ ಯಾವ ರೀತಿಯ ರಣತಂತ್ರದೊಂದಿಗೆ ಕಣಕ್ಕೆ ಇಳಿಯಲಿದೆ ಎಂಬುದು ಆಸಕ್ತದಾಯಕ ಸಂಗತಿಯಾಗಿದೆ.
ಇನ್ನು ಭಾರತ ತಂಡ, ಮೊದಲನೇ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಗಳಿಂದ ಸಂಘಟಿತ ಪ್ರದರ್ಶನವನ್ನು ತೋರಿತ್ತು. ಅರ್ಷದೀಪ್ ಸಿಂಗ್ 3 ವಿಕೆಟ್ ಹಾಗೂ ಅಭಿಷೇಕ್ ಶರ್ಮಾ 32 ಎಸೆತಗಳಲ್ಲಿ 82 ರನ್‌ಗಳನ್ನು ಸಿಡಿಸಿದ್ದರು. ಇವರ ಆಟದ ಬಲದಿಂದ ಟೀಮ್ ಇಂಡಿಯಾ ಆರಾಮದಾಯಕವಾಗಿ ಪಂದ್ಯವನ್ನು ಗೆದ್ದಿತ್ತು. ಇದೀಗ ಶ್ರೇಯಸ್ ಅಯ್ಯರ್ ಬಳಗಕ್ಕೆ ಸರಣಿಯನ್ನು ತನ್ನದಾಗಿಸಿಕೊಳ್ಳಲು ಎರಡನೇ ಪಂದ್ಯದಲ್ಲಿ ಅದ್ಭುತ ಅವಕಾಶವಿದೆ.
ಮೊಹ್ಸಿನ್ ನಖ್ವಿಯಿಂದ ಮಹಿಳಾ ಏಷ್ಯಾ ಕಪ್ ಸ್ವೀಕರಿಸದೇ ಇರಲು ಕಾರಣ ತಿಳಿಸಿದ ಕೋಚ್ ಅಮೋಲ್ ಮಝುಮ್ದಾರ್!
ಸಂಜು ಔಟ್, ವೈಭವ್ ಇನ್
ಭಾರತ ತಂಡದ ಪ್ಲೇಯಿಂಗ್ XIನಲ್ಲಿ ಒಂದು ಬದಲಾವಣೆ ಮಾಡುವ ಸಾಧ್ಯತೆ ಇದೆ. ಮೊದಲನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಕೇವಲ 10 ರನ್‌ಗಳಿಗೆ ಸೀಮಿತರಾಗಿದ್ದರು. ಇದೀಗ ಅವರನ್ನು ಎರಡನೇ ಪಂದ್ಯದಲ್ಲಿ ಕೂರಿಸಿ, ವೈಭವ್ ಸೂರ್ಯವಂಶಿಯನ್ನು ಕಣಕ್ಕೆ ಇಳಿಸುವ ಸಾಧ್ಯತೆ ಇದೆ. ಆದರೆ, ಅಂತಿಮ ಕ್ಷಣದಲ್ಲಿ ಟೀಮ್ ಮ್ಯಾನೇಜ್‌ಮೆಂಟ್ ಯಾವ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂಬುದರ ಮೇಲೆ ಇದು ಅವಲಂಬಿಸಿದೆ.
ಪಂದ್ಯದ ವಿವರ
ಭಾರತ vs ಅಫ್ಘಾನಿಸ್ತಾನ
ಎರಡನೇ ಟಿ20ಐ ಪಂದ್ಯ
ದಿನಾಂಕ: ಸೆಪ್ಟಂಬರ್ 15, 2026
ಸಮಯ: ಸಂಜೆ 07: 30 ಕ್ಕೆ
ಸ್ಥಳ: ಅರುಣ್ ಜೇಟ್ಲಿ ಕ್ರೀಡಾಂಗಣ, ನವದೆಹಲಿ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
ಲೈವ್ ಸ್ಟ್ರೀಮಿಂಗ್: ಜಿಯೊ ಹಾಟ್‌ಸ್ಟಾರ್
IND vs AFG: ಅಭಿಷೇಕ್ ಶರ್ಮಾ ಅಬ್ಬರ, ಆಫ್ಘನ್ ಎದುರು ಭಾರತಕ್ಕೆ 7 ವಿಕೆಟ್ ಜಯ!
ಅರುಣ್ ಜೇಟ್ಲಿ ಕ್ರೀಡಾಗಣದ ಪಿಚ್ ರಿಪೋರ್ಟ್
ಅರುಣ್ ಜೇಟ್ಲಿ ಕ್ರೀಡಾಂಗಣದ ಪಿಚ್ ಸ್ವಾಭಾವಿಕವಾಗಿ ಬ್ಯಾಟ್ಸ್‌ಮನ್‌ಗಳ ಸ್ನೇಹಿಯಾಗಿದೆ. ಆದರೆ, ಪಂದ್ಯದ ಮೊದಲ ಅವಧಿಯಲ್ಲಿ ಪಿಚ್ ಸ್ಪಿನ್ನರ್‌ಗಳಿಗೆ ನೆರವು ನೀಡಲಿದೆ. ಪಂದ್ಯ ಸಾಗುತ್ತಿದ್ದಂತೆ ಬ್ಯಾಟ್ಸ್‌ಮನ್‌ಗಳಿಗೆ ಈ ಪಿಚ್‌ನಲ್ಲಿ ಬ್ಯಾಟ್ ಮಾಡುವುದು ಸುಲಭವಾಗಲಿದೆ. ಬ್ಯಾಟ್ಸ್‌ಮನ್‌ಗಳು ಕ್ರೀಸ್‌ನಲ್ಲಿ ನೆಲೆ ಕಂಡುಕೊಂಡರೆ ರನ್ ಹೊಳೆಯನ್ನು ಹರಿಸಬಹುದು. ಅಂದ ಹಾಗೆ ಈ ಪಂದ್ಯದಲ್ಲಿ ಟಾಸ್ ಗೆದ್ದ ತಂಡದ ನಾಯಕ ಮೊದಲು ಬೌಲಿಂಗ್ ಆಯ್ಕೆ ಮಾಡಕೊಳ್ಳುವ ಸಾಧ್ಯತೆ ಇದೆ.
ತಂಡಗಳು ಮುಖಾಮುಖಿ ದಾಖಲೆ
ಒಟ್ಟು ಆಡಿರುವ ಪಂದ್ಯಗಳು: 10
ಭಾರತದ ಗೆಲುವು: 08
ಅಫ್ಘಾನಿಸ್ತಾನದ ಗೆಲುವು: 00
ಫಲಿತಾಂಶವಿಲ್ಲ: 01
ಟೈ: 01 (ಸೂಪರ್ ಓವರ್‌ನಲ್ಲಿ ಭಾರತಕ್ಕೆ ಜಯ)
ಇನ್‌ಫಾರ್ಮ್ ಬ್ಯಾಟರ್‌ನ ಹೇಗೆ ಕೈಬಿಡುತ್ತೀರಿ? ವೈಭವ್‌ಗೆ ಕೊಕ್ ನೀಡಿದ್ದಕ್ಕೆ ಮೊಹಮ್ಮದ್ ಕೈಫ್ ಆಕ್ರೋಶ!
ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ XI
ಭಾರತ: ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ/ಸಂಜು ಸ್ಯಾಮ್ಸನ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ಶಿವಂ ದುಬೇ, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಜಸ್‌ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್
ಅಫ್ಘಾನಿಸ್ತಾನ: ರಹಮಾನುಲ್ಲಾ ಗುರ್ಬಾಝ್, ಇಬ್ರಾಹಿಂ ಝರ್ದಾನ್ (ನಾಯಕ), ಸೆಡಿಕುಲ್ಹಾ ಅಟಲ್, ಗುಲ್ಬದ್ದಿನ್ ನೈಬ್, ದಾರ್ವಿಸ್ ರಸೂಲಿ, ಅಝಮತ್‌ವುಲ್ಲಾ ಒಮರ್ಜಾಯ್, ಮೊಹಮ್ಮದ್ ನಬಿ, ರಸೀದ್ ಖಾನ್, ನೂರ್ ಅಹ್ಮದ್, ಮಜೀಬ್ ಉರ್ ರೆಹಮಾನ್, ನವೀನ್ ಉಲ್ ಹಕ್