ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

IND vs AFG: ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್‌ಗೆ ಭಾರತ ತಂಡವನ್ನು ಪ್ರಕಟಿಸಿದ ಬಿಸಿಸಿಐ!

India's Test Squad: ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್‌ ಪಂದ್ಯಕ್ಕೆ ಅಜಿತ್‌ ಅಗರ್ಜರ್‌ ಸಾರಥ್ಯದ ಬಿಸಿಸಿಐ ಆಯ್ಕೆ ಸಮಿತಿಯು ಮೇ 19 ರಂದು ಮಂಗಳವಾರ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದೆ. ತಂಡವನ್ನು ಶುಭಮನ್‌ ಗಿಲ್‌ ಮುನ್ನಡೆಸಲಿದ್ದಾರೆ. ಆದರೆ, ರಿಷಭ್‌ ಪಂತ್‌ ಅವರ ಬದಲು ಉಪನಾಯಕತ್ವದ ಜವಾಬ್ದಾರಿಯನ್ನು ಕೆಎಲ್‌ ರಾಹುಲ್‌ಗೆ ನೀಡಲಾಗಿದೆ.

ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್‌ಗೆ ಭಾರತ ತಂಡ ಪ್ರಕಟ!

ಆಫ್ಘನ್‌ ವಿರುದ್ಧದ ಏಕೈಕ ಟೆಸ್ಟ್‌ಗೆ ಭಾರತ ತಂಡ ಪ್ರಕಟ. -

Profile
Ramesh Kote May 19, 2026 5:47 PM

ಗುವಾಹಟಿ: ಅಫ್ಘಾನಿಸ್ತಾನ ವಿರುದ್ಧದ ಮುಂಬರುವ ಏಕೈಕ ಟೆಸ್ಟ್‌ ಪಂದ್ಯಕ್ಕೆ (IND vs AFG) ಅಜಿತ್‌ ಅಗರ್ಕರ್‌ ಸಾರಥ್ಯದ ಬಿಸಿಸಿಐ ಆಯ್ಕೆ ಸಮಿತಿಯು 15 ಸದಸ್ಯರ ಭಾರತ ತಂಡವನ್ನು (India's Test Squad) ಪ್ರಕಟಿಸಿದೆ. ಎಂದಿನಂತೆ ಈ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡವನ್ನು ಶುಭಮನ್‌ ಗಿಲ್‌ (Shubman Gill) ಮುನ್ನಡೆಸಲಿದ್ದಾರೆ. ಆದರೆ, ಉಪ ನಾಯಕತ್ವದ ಜವಾಬ್ದಾರಿಯನ್ನು ರಿಷಭ್‌ ಪಂತ್‌ ಅವರಿಂದ ಕೆಎಲ್‌ ರಾಹುಲ್‌ಗೆ ನೀಡಲಾಗಿದೆ. ಜೂನ್‌ 6 ರಂದು ಮುಲ್ಲಾನ್‌ಪುರದಲ್ಲಿ ಆರಂಭವಾಗಲಿರುವ ಟೆಸ್ಟ್‌ ಪಂದ್ಯಕ್ಕೆ ಜಸ್‌ಪ್ರೀತ್‌ ಬುಮ್ರಾ ಹಾಗೂ ರವೀಂದ್ರ ಜಡೇಜಾಗೆ ವಿಶ್ರಾಂತಿಯನ್ನು ನೀಡಲಾಗಿದೆ.

ವೇಗದ ಬೌಲರ್ ಗುರ್ನೂರ್‌ ಬ್ರಾರ್‌ ಹಾಗೂ ಎಡಗೈ ಸ್ಪಿನ್ನರ್ ಮಾನವ್‌ ಸುತಾರ್‌ ಮೊದಲ ಬಾರಿ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಜೊತೆಗೆ ಹರ್ಷ್‌ ದುಬೇ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಸುತಾರ್‌ ಮತ್ತು ಗುರ್ನೂರ್ ಇಬ್ಬರೂ ಐಪಿಎಲ್ ಫ್ರಾಂಚೈಸಿ ಗುಜರಾತ್‌ ಟೈಟನ್ಸ್‌ ತಂಡದ ಸಹ ಆಟಗಾರರಾಗಿದ್ದಾರೆ.

ಈ ವರ್ಷದ ಆರಂಭದಲ್ಲಿ ಇಂಗ್ಲೆಂಡ್ ಪ್ರವಾಸದ ವೇಳೆ ನಾಯಕ ಶುಭಮನ್‌ ಗಿಲ್‌ ಅವರ ಉಪನಾಯಕರಾಗಿದ್ದ ರಿಷಭ್‌ ಪಂತ್‌, ಈ ಬಾರಿ ವಿಕೆಟ್‌ಕೀಪರ್-ಬ್ಯಾಟರ್ ಆಗಿ ತಂಡದಲ್ಲಿ ಮುಂದುವರಿದಿದ್ದಾರೆ. ಆದರೆ ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯಕ್ಕೂ ಮುನ್ನ ನಾಯಕತ್ವದ ಜವಾಬ್ದಾರಿಯಿಂದ ಅವರನ್ನು ಬಿಡುಗಡೆ ಮಾಡಲಾಗಿದೆ.

IND vs AFG: ರಿಷಭ್‌ ಪಂತ್‌ಗೆ ಕೊಕ್‌, ಅಫ್ಘಾನಿಸ್ತಾನ ವಿರುದ್ದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ!

ಈ ತಂಡದಲ್ಲಿ ಯುವ ಆಟಗಾರರು ಹಾಗೂ ಅನುಭವಿಗಳ ಸಮತೋಲನವನ್ನು ಕಾಣಬಹುದು. ವೇಗದ ಬೌಲಿಂಗ್‌ ವಿಭಾಗವನ್ನು ಮೊಹಮ್ಮದ್‌ ಸಿರಾಜ್‌ ಮತ್ತು ಪ್ರಸಿಧ್‌ ಕೃಷ್ಣ ಮುನ್ನಡೆಸಲಿದ್ದಾರೆ. ಸ್ಪಿನ್ ವಿಭಾಗದಲ್ಲಿ ವಾಷಿಂಗ್ಟನ್‌ ಸುಂದರ್‌, ಕುಲ್ದೀಪ್‌ ಯಾದವ್‌ ಹಾಗೂ ಮನವ್ ಸುತಾರ್ ಪ್ರಮುಖ ಪಾತ್ರವಹಿಸಲಿದ್ದಾರೆ.

ಸಾಯಿ ಸುದರ್ಶನ್‌ ಮತ್ತು ನಿತೀಶ್‌ ಕುಮಾರ್‌ ರೆಡ್ಡಿ ದೇಶಿ ಕ್ರಿಕೆಟ್ ಹಾಗೂ ಇಂಡಿಯಾ ‘ಎ’ ತಂಡದ ಪರ ತೋರಿದ ಅದ್ಭುತ ಪ್ರದರ್ಶನದ ಫಲವಾಗಿ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಜೊತೆಗೆ ಬ್ಯಾಟಿಂಗ್ ವಿಭಾಗದಲ್ಲಿ ದೇವದತ್‌ ಪಡಿಕ್ಕಲ್‌ ಮತ್ತು ಯಶಸ್ವಿ ಜೈಸ್ವಾಲ್‌ ತಮ್ಮ ಸ್ಥಾನಗಳನ್ನು ಉಳಿಸಿಕೊಂಡಿದ್ದಾರೆ.



ವಿಕೆಟ್‌ಕೀಪರ್ ವಿಭಾಗದಲ್ಲಿ ಧ್ರುವ್‌ ಜುರೆಲ್‌ ಅವರನ್ನು ರಿಷಭ್‌ ಪಂತ್‌ ಜೊತೆಗೆ ಎರಡನೇ ವಿಕೆಟ್‌ಕೀಪರ್ ಆಯ್ಕೆಯಾಗಿ ತಂಡದಲ್ಲಿ ಸೇರಿಸಲಾಗಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ 2-0 ಅಂತರದ ಸರಣಿ ಸೋಲು ಅನುಭವಿಸಿದ ಬಳಿಕ, ಭಾರತ ಇದೀಗ ಮೊದಲ ಬಾರಿ ಟೆಸ್ಟ್ ಕ್ರಿಕೆಟ್‌ಗೆ ಮರಳುತ್ತಿದೆ. ಆ ಸರಣಿಯ ತಂಡದಲ್ಲಿ ಇದ್ದ ಜಸ್‌ಪ್ರೀತ್‌ ಬುಮ್ರಾ ಮತ್ತು ರವೀಂದ್ರ ಜಡೇಜಾ ಹೊರತುಪಡಿಸಿ, ಅಕ್ಷರ್‌ ಪಟೇಲ್‌ ಹಾಗೂ ಆಕಾಶ್‌ ದೀಪ್‌ ಕೂಡ ಈ ಬಾರಿ ತಂಡದಲ್ಲಿ ಸ್ಥಾನ ಪಡೆದಿಲ್ಲ.

IPL 2026: ಮುಂಬೈ ಇಂಡಿಯನ್ಸ್‌ಗೆ ಗಾಯದ ಸಮಸ್ಯೆ, ಕ್ವಿಂಟನ್‌ ಡಿ ಕಾಕ್‌, ರಾಜ್‌ ಬಾವಾ ಔಟ್‌!

ಭಾರತ ಮತ್ತು ಅಫ್ಘಾನಿಸ್ತಾನ ಇದುವರೆಗೆ ಕೇವಲ ಒಂದು ಟೆಸ್ಟ್ ಪಂದ್ಯದಲ್ಲೇ ಮುಖಾಮುಖಿಯಾಗಿವೆ. 2018ರಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ ಆ ಪಂದ್ಯದಲ್ಲಿ ಭಾರತ ಇನಿಂಗ್ಸ್‌ ಹಾಗೂ 262 ರನ್‌ಗಳ ಭರ್ಜರಿ ಜಯ ಸಾಧಿಸಿತ್ತು.

ಅಫ್ಘಾನಿಸಾನ ವಿರುದ್ಧದ ಏಕೈಕ ಟೆಸ್ಟ್‌ ಪಂದ್ಯಕ್ಕೆ ಭಾರತ ತಂಡ: ಶುಭಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್ (ಉಪ ನಾಯಕ) ಸಾಯಿ ಸುದರ್ಶನ್, ರಿಷಭ್ ಪಂತ್, ದೇವದತ್‌ ಪಡಿಕ್ಕಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್‌ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿಧ್‌ ಕೃಷ್ಣ, ಮಾನವ್ ಸುತಾರ್, ಗುರ್ನೂರ್ ಬ್ರಾರ್, ಹರ್ಷ್ ದುಬೇ, ಧ್ರುವ್‌ ಜುರೆಲ್‌