ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IND vs AUS: ಮೂರನೇ ಏಕದಿನ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್‌ XI ವಿವರ!

IND vs AUS 3rd ODI Preview: ಆರಂಭಿಕ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದ ಬಳಿಕ ಏಕದಿನ ಸರಣಿಯನ್ನು ಈಗಾಗಲೇ ಕಳೆದುಕೊಂಡಿರುವ ಭಾರತ ತಂಡ, ಇದೀಗ ಮೂರನೇ ಹಾಗೂ ಸರಣಿಯ ಕೊನೆಯ ಪಂದ್ಯಕ್ಕೆ ಸಜ್ಜಾಗುತ್ತಿದೆ. ಈ ಪಂದ್ಯಕ್ಕೆ ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್‌ XI, ಪಿಚ್‌ ರಿಪೋರ್ಟ್‌ ಸೇರಿದಂತೆ ಪ್ರಮುಖ ಅಂಶಗಳನ್ನು ಇಲ್ಲಿ ವಿವರಿಸಲಾಗಿದೆ.

IND vs AUS: ಸಿಡ್ನಿಯಲ್ಲಿ ವಿರಾಟ್‌ ಕೊಹ್ಲಿಯ ಬ್ಯಾಟಿಂಗ್‌ಗೆ ಪರೀಕ್ಷೆ!

ಆಸ್ಟ್ರೇಲಿಯಾ ವಿರುದ್ಧದ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್‌ XI -

Profile Ramesh Kote Oct 24, 2025 8:01 PM

ಸಿಡ್ನಿ: ಆರಂಭಿಕ ಎರಡೂ ಪಂದ್ಯಗಳನ್ನು ಸೋತು ಏಕದಿನ ಸರಣಿಯನ್ನು ಈಗಾಗಲೇ ಕಳೆದುಕೊಂಡಿರುವ ಭಾರತ ತಂಡ, ಇದೀಗ ಮೂರನೇ ಹಾಗೂ ಸರಣಿಯ ಕೊನೆಯ ಪಂದ್ಯವನ್ನು (IND vs AUS) ಗೆದ್ದು ಗೌರವವನ್ನು ಉಳಿಸಿಕೊಳ್ಳಲು ಎದುರು ನೋಡುತ್ತಿದೆ. ಇಲ್ಲಿನ ಸಿಡ್ನಿ ಕ್ರಿಕೆಟ್‌ ಗ್ರೌಂಡ್‌ನಲ್ಲಿ ಶನಿವಾರ ನಡೆಯುವ ಈ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ (Virat Kohli) ಪ್ರಮುಖ ಆಕರ್ಷಣೆಯಾಗಿದ್ದಾರೆ. ಏಕೆಂದರೆ ಆರಂಭಿಕ ಎರಡೂ ಪಂದ್ಯಗಳಲ್ಲಿ ಶೂನ್ಯಕ್ಕೆ ವಿಕೆಟ್‌ ಒಪ್ಪಿಸಿದ್ದರು ಹಾಗೂ ಈ ಪಂದ್ಯ ಆಸ್ಟ್ರೇಲಿಯಾದಲ್ಲಿ ಕೊಹ್ಲಿ ಪಾಲಿಗೆ ಕೊನೆಯದು. ಹಾಗಾಗಿ ಅಭಿಮಾನಿಗಳು ತಮ್ಮ ನೆಚ್ಚಿನ ಕ್ರಿಕೆಟಿಗನಿಂದ ದೊಡ್ಡ ಇನಿಂಗ್ಸ್‌ ಅನ್ನು ನಿರೀಕ್ಷೆ ಮಾಡುತ್ತಿದ್ದಾರೆ.

ಆರಂಭಿಕ ಎರಡೂ ಪಂದ್ಯಗಳಲ್ಲಿ ಭಾರತ ತಂಡ ಟಾಸ್‌ ಸೋತಿದ್ದು ಕೂಡ ಪ್ರವಾಸಿ ತಂಡಕ್ಕೆ ಹಿನ್ನಡೆಯಾಗಲು ಕಾರಣವಾಗಿತ್ತು. ಪರ್ತ್‌ನಲ್ಲಿ ನಡೆದಿದ್ದ ಮೊದಲನೇ ಪಂದ್ಯಕ್ಕೆ ಮಳೆ ಕಾಟ ನೀಡಿತ್ತು ಹಾಗೂ ಈ ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳಿಂದ ಸೋಲು ಅನುಭವಿಸಿತ್ತು. ನಂತರ ಎರಡನೇ ಏಕದಿನ ಪಂದ್ಯದಲ್ಲಿಯೂ ಭಾರತ ತಂಡ ಕಠಿಣ ಹೋರಾಟ ನಡೆಸಿದ ಹೊರತಾಗಿಯೂ ಅಂತಿಮವಾಗಿ ಕೇವಲ ಎರಡು ವಿಕೆಟ್‌ಗಳಿಂದ ಸೋಲು ಒಪ್ಪಿಕೊಂಡಿತ್ತು. ಕಳೆದ ಪಂದ್ಯವನ್ನು ಆಡಿದ್ದ ಅದೇ ಆಡುವ ಬಳಗವನ್ನು ಮುಂದುವರಿಸಲು ಟೀಮ್‌ ಇಂಡಿಯಾ ಬಯಸಬಹುದು.

ಇನ್ನು ಆಸ್ಟ್ರೇಲಿಯಾ ಈಗಾಗಲೇ ಏಕದಿನ ಸರಣಿಯನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಇದೀಗ ಮೂರನೇ ಪಂದ್ಯದಲ್ಲಿ ಬೆಂಚ್‌ ಸಾಮರ್ಥ್ಯವನ್ನು ಪರೀಕ್ಷೆಗೆ ಒಳಪಡಿಸಬಹುದು. ಕಳೆದ ಎರಡು ಪಂದ್ಯಗಳಲ್ಲಿ ಆಡಿದ್ದ ಆಟಗಾರರನ್ನು ಬೆಂಚ್‌ ಕಾಯಿಸಬಹುದು. ಟಿ20ಐ ಸರಣಿಗೂ ಮುನ್ನ ಅದೇ ಗೆಲುವಿನ ಲಯವನ್ನು ಉಳಿಸಲು ಆಸೀಸ್‌ ಎದುರು ನೋಡುತ್ತಿದೆ. ಅದರಂತೆ ಆಸ್ಟ್ರೇಲಿಯಾ ತಂಡ, ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಎರಡೂ ವಿಭಾಗಗಳಲ್ಲಿ ಅತ್ಯುತ್ತಮ ಸಂಯೋಜನೆಯನ್ನು ಹೊಂದಿದೆ.

IND vs AUS: ಎರಡನೇ ಒಡಿಐ ಸೋಲಿಗೆ ಕಾರಣವೇನೆಂದು ತಿಳಿಸಿದ ಶುಭಮನ್‌ ಗಿಲ್‌!

ಸಿಡ್ನಿ ಕ್ರಿಕೆಟ್‌ ಗ್ರೌಂಡ್‌ ಪಿಚ್‌ ರಿಪೋರ್ಟ್‌

ಮೂರನೇ ಏಕದಿನ ಪಂದ್ಯ ಸಿಡ್ನಿ ಕ್ರಿಕೆಟ್‌ ಗ್ರೌಂಡ್‌ನಲ್ಲಿ ನಡೆಯಲಿದೆ. ಇದು ಬ್ಯಾಟಿಂಗ್‌ ಸ್ನೇಹಿ ಪಿಚ್‌ ಆಗಿದೆ. ಚೆಂಡು ಸುಲಭವಾಗಿ ಬ್ಯಾಟ್‌ಗೆ ಬರಲಿದ್ದು, ಬ್ಯಾಟ್ಸ್‌ಮನ್‌ಗಳು ಮುಕ್ತವಾಗಿ ಬ್ಯಾಟ್‌ ಬೀಸಬಹುದಾಗಿದೆ. ವಿಕೆಟ್‌ ಅನ್ನು ಪಡೆಯಬೇಕೆಂದರೆ ಬೌಲರ್‌ಗಳು ಸಾಕಷ್ಟು ಪ್ರಯತ್ನವನ್ನು ಹಾಕಬೇಕಾಗುತ್ತದೆ. ಇನ್ನು ಪಂದ್ಯ ಸಾಗುತ್ತಿದ್ದಂತೆ ಸ್ಪಿನ್ನರ್‌ಗಳು ಕೂಡ ಪರಿಣಾಮಕಾರಿಯಾಗಲಿದ್ದಾರೆ. ಅದರಲ್ಲಿಯೂ ವಿಶೇಷವಾಗಿ ಅವರು ಲೈನ್‌ ಅಂಡ್‌ ಲೆನ್ತ್‌ ಅನ್ನು ಉಳಿಸಿಕೊಳ್ಳಬೇಕಾಗುತ್ತದೆ.

ಪಂದ್ಯದ ವಿವರ

ಭಾರತ vs ಆಸ್ಟ್ರೇಲಿಯಾ

ಮೂರನೇ ಏಕದಿನ ಪಂದ್ಯ

ದಿನಾಂಕ: ಅಕ್ಟೋಬರ್‌ 25, 2025

ಸ್ಥಳ: ಸಿಡ್ನಿ ಕ್ರಿಕೆಟ್‌ ಗ್ರೌಂಡ್‌, ಸಿಡ್ನಿ

ಸಮಯ: ಬೆಳಿಗ್ಗೆ 09:00ಕ್ಕೆ (ಭಾರತೀಯ ಕಾಲಮಾನ)

ಲೈವ್‌ ಸ್ಟ್ರೀಮಿಂಗ್‌: ಜಿಯೊ ಹಾಟ್‌ಸ್ಟಾರ್‌

IND vs AUS: ತಮ್ಮ ಬ್ಯಾಟಿಂಗ್‌ ಸ್ಟ್ಯಾನ್ಸ್‌ ಬದಲಿಸಿಕೊಳ್ಳಲು ಕಾರಣ ತಿಳಿಸಿದ ಶ್ರೇಯಸ್‌ ಅಯ್ಯರ್‌!

ಮುಖಾಮುಖಿ ದಾಖಲೆ

ಒಟ್ಟು ಆಡಿರುವ ಪಂದ್ಯಗಳು: 154

ಭಾರತದ ಗೆಲುವು: 58

ಆಸ್ಟ್ರೇಲಿಯಾದ ಗೆಲುವು: 86

ಫಲಿತಾಂಶವಿಲ್ಲ: 10

ಭಾರತ ತಂಡದ ಪ್ಲೇಯಿಂಗ್‌ XI

ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್‌ ಕೀಪರ್‌), ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್

ಆಸ್ಟ್ರೇಲಿಯಾ ತಂಡದ ಪ್ಲೇಯಿಂಗ್‌ XI

ಮಿಚೆಲ್‌ ಮಾರ್ಷ್‌ (ನಾಯಕ), ಟ್ರಾವಿಸ್‌ ಹೆಡ್‌, ಮ್ಯಾಥ್ಯೂ ಶಾರ್ಟ್‌, ಮ್ಯಾಟ್‌ ರೆನ್‌ಶಾ, ಅಲೆಕ್ಸ್‌ ಕೇರಿ (ವಿಕೆಟ್‌ ಕೀಪರ್‌), ಕೂಪರ್‌ ಕಾನೋಲಿ, ಮಿಚೆಲ್‌ ಓವೆನ್‌, ಕ್ಸಿವಿಯರ್‌ ಬಾರ್ಟ್ಲೆಟ್, ಮಿಚೆಲ್‌ ಸ್ಟಾರ್ಕ್‌, ಆಡಮ್‌ ಝಾಂಪ, ಜಾಶ್‌ ಹೇಝಲ್‌ವುಡ್‌