IND vs AUS: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ
India vs Australia 1st Semi-Final: ಇಂಡೋ-ಆಸೀಸ್ ತಂಡಗಳು ಇದುವರೆಗೆ ಏಕದಿನದಲ್ಲಿ 151 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಭಾರತ 57 ಪಂದ್ಯ ಗೆದ್ದರೆ, ಆಸ್ಟ್ರೇಲಿಯಾ 84 ಪಂದ್ಯಗಳಲ್ಲಿ ಗೆದ್ದಿದೆ. 10 ಪಂದ್ಯಗಳು ಫಲಿತಾಂಶ ಕಂಡಿಲ್ಲ.


ದುಬೈ: ಸತತ ಮೂರು ಜಯದೊಂದಿಗೆ ಅಜೇಯವಾಗಿ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ಪ್ರವೇಶಿಸಿದ ಭಾರತ ತಂಡ ಟಾಸ್ ಸೋತು ಬೌಲಿಂಗ್ ಆಹ್ವಾನ ಪಡೆದಿದೆ. ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ನಡೆಸಲಿದೆ. ಈ ಪಂದ್ಯದಲ್ಲಿಯೂ ಭಾರತ ಸ್ಪಿನ್ ಅಸ್ತ್ರವನ್ನು ಪ್ರಯೋಗಿಸಿದೆ. ಕಳೆದ ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದ ನಾಲ್ವರು ಸ್ಪಿನ್ನರ್ಗಳನ್ನೇ ಆಡಲಿಳಿಸಿತು. ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ದುಬೈನಲ್ಲೇ ಆಡಿದ 3 ಲೀಗ್ ಪಂದ್ಯಗಳಲ್ಲಿ ಸರ್ವಾಂಗೀಣ ನಿರ್ವಹಣೆಯೊಂದಿಗೆ ಗೆದ್ದಿರುವ ರೋಹಿತ್ ಶರ್ಮ, ಕಾಂಗರೂಗಳ ವಿರುದ್ಧವೂ ಇದೇ ಲಯದಲ್ಲಿ ಮುಂದುವರಿಯುವ ಹಂಬಲದಲ್ಲಿದೆ. ಈ ಮೂಲಕ 2023ರ ಐಸಿಸಿ ಟೆಸ್ಟ್ ವಿಶ್ವ ಚಾಂಪಿಯನ್ಷಿಪ್ ಮತ್ತು ತವರಿನ ಏಕದಿನ ವಿಶ್ವಕಪ್ ಫೈನಲ್ ಪಂದ್ಯಗಳ ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕ ಭಾರತ ತಂಡದ್ದಾಗಿದೆ.
ಭಾರತ ಆಡುವ ಬಳಗ
ರೋಹಿತ್ ಶರ್ಮ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್, ಅಕ್ಷರ್ ಪಟೇಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ.
ಆಸ್ಟ್ರೇಲಿಯಾ ಆಡುವ ಬಳಗ
ಕೂಪರ್ ಕೊನೊಲಿ, ಟ್ರಾವಿಸ್ ಹೆಡ್, ಸ್ಟೀವನ್ ಸ್ಮಿತ್(ನಾಯಕ), ಮಾರ್ನಸ್ ಲ್ಯಾಬುಸ್ಚಾಗ್ನೆ, ಜೋಶ್ ಇಂಗ್ಲಿಸ್(ವಿ.ಕೀ), ಅಲೆಕ್ಸ್ ಕ್ಯಾರಿ, ಗ್ಲೆನ್ ಮ್ಯಾಕ್ಸ್ವೆಲ್, ಬೆನ್ ದ್ವಾರಶೂಯಿಸ್, ನಾಥನ್ ಎಲ್ಲಿಸ್, ಆಡಮ್ ಝಂಪಾ, ತನ್ವೀರ್ ಸಂಘ.
2009ರ ಬಳಿಕ ಮೊದಲ ಮುಖಾಮುಖಿ
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಟಿ20 ವಿಶ್ವಕಪ್, ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಹಲವು ಬಾರಿ ಮುಖಾಮುಖಿಯಾಗಿದ್ದರೂ ಚಾಂಪಿಯನ್ಸ್ ಟ್ರೋಫಿಯಲ್ಲಿ ಇತ್ತಂಡಗಳು ಎದುರಾಗುತ್ತಿರುವುದು 2009ರ ಬಳಿಕ ಮೊದಲ ಬಾರಿಗೆ. ಈ ವರೆಗೂ ಉಭಯ ತಂಡಗಳ ನಡುವೆ ಚಾಂಪಿಯನ್ಸ್ ಟ್ರೋಫಿಯಲ್ಲಿ 4 ಪಂದ್ಯಗಳು ನಡೆದಿದ್ದು, 2ರಲ್ಲಿ ಭಾರತ, 1ರಲ್ಲಿ ಆಸೀಸ್ ಗೆದ್ದಿದೆ. 2009ರ ಪಂದ್ಯ ಮಳೆಯಿಂದ ರದ್ದಾಗಿತ್ತು.
ಒಟ್ಟು ಮುಖಾಮುಖಿ
ಇಂಡೋ-ಆಸೀಸ್ ತಂಡಗಳು ಇದುವರೆಗೆ ಏಕದಿನದಲ್ಲಿ 151 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಭಾರತ 57 ಪಂದ್ಯ ಗೆದ್ದರೆ, ಆಸ್ಟ್ರೇಲಿಯಾ 84 ಪಂದ್ಯಗಳಲ್ಲಿ ಗೆದ್ದಿದೆ. 10 ಪಂದ್ಯಗಳು ಫಲಿತಾಂಶ ಕಂಡಿಲ್ಲ.