ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಟಿ20ಐ ತಂಡದಿಂದ ಶುಭಮನ್‌ ಗಿಲ್‌ರನ್ನು ಕಿತ್ತಾಗಿ ಜೈಸ್ವಾಲ್‌ಗೆ ಚಾನ್ಸ್‌ ಕೊಡಿ ಎಂದ ಫ್ಯಾನ್ಸ್‌!

ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ20ಐ ಪಂದ್ಯದಲ್ಲಿಯೂ ಶುಭಮನ್ ಗಿಲ್ ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು. ಏಕದಿನ ಸರಣಿಯ ಆರಂಭದಿಂದ ಈವರೆಗೆ ನಿರಂತರವಾಗಿ ರನ್ ಬರ ಎದುರಿಸುತ್ತಿರುವ ಗಿಲ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಗಿಲ್ ಅವರ ಕಳಪೆ ಪ್ರದರ್ಶನದ ವಿರುದ್ಧ ಆಕ್ರೋಶ ಹೊರಹಾಕಿರುವ ಫ್ಯಾನ್ಸ್, ಉಪ ನಾಯಕನನ್ನು ಕೈ ಬಿಟ್ಟು ಜೈಸ್ವಾಲ್ ಅವರಿಗೆ ಸ್ಥಾನ ನೀಡಿ ಎಂದು ಒತ್ತಾಯಿಸುತ್ತಿದ್ದಾರೆ.

ಶುಭಮನ್‌  ಗಿಲ್‌ ಬದಲು ಜೈಸ್ವಾಲ್‌ಗೆ ಅವಕಾಶ ನೀಡಿ ಎಂದ ಫ್ಯಾನ್ಸ್‌!

ಶುಭಮನ್‌ ವಿರುದ್ಧ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. -

Profile Ramesh Kote Oct 31, 2025 8:36 PM

ಮುಂಬೈ: ಭಾರತ ಏಕದಿನ ಮತ್ತು ಟೆಸ್ಟ್ ತಂಡದ ನಾಯಕ ಶುಭಮನ್ ಗಿಲ್ (Shubman Gill) ಅವರು ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ (IND vs AUS) ಎದುರಿಸಿದ ಬ್ಯಾಟಿಂಗ್ ವೈಫಲ್ಯವನ್ನು ಟಿ20ಐ ಸರಣಿಯಲ್ಲಿಯೂ ಮುಂದುವರಿಸಿದ್ದಾರೆ. ಇದರಿಂದಾಗಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿರುವ ವ್ಯಾಪಕ ಟೀಕೆಗಳನ್ನು ಎದುರಿಸುತ್ತಿದ್ದಾರೆ. ಗಿಲ್ ಅವರನ್ನು ತಂಡದಿಂದ ಕೈ ಬಿಟ್ಟು ಯಶಸ್ವಿ ಜೈಸ್ವಾಲ್‌ಗೆ (Yashasvi Jaiswal) ತಂಡದಲ್ಲಿ ಸ್ಥಾನ ನೀಡಿ ಎಂದು ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ. ಏಷ್ಯಾ ಕಪ್ ಟೂರ್ನಿಯಲಿ ಶುಭಮನ್‌ ಗಿಲ್ ಅವರನ್ನು ಟೀಮ್‌ ಮ್ಯಾನೇಜ್‌ಮೆಂಟ್‌ ಉಪ ನಾಯಕನನ್ನಾಗಿ ನೇಮಕ ಮಾಡಿದ ಕಾರಣ ಜೈಸ್ವಾಲ್ ಅವರನ್ನು ತಂಡದಿಂದ ಕೈ ಬಿಡುವ ಅನಿವಾರ್ಯತೆ ಎದುರಾಗಿತ್ತು.

ಕಾಂಗರೂ ನಾಡಿನಲ್ಲಿ ಏಕದಿನ ಸರಣಿ ಕಳೆದುಕೊಂಡಿರುವ ಭಾರತ ತಂಡ, ಟಿ20ಐ ಸರಣಿ ಗೆಲ್ಲುವ ನಿರೀಕ್ಷೆಯಲ್ಲಿದೆ. ಮೊದಲ ಪಂದ್ಯ ಮಳೆಗಾಹುತಿಯಾದ ಬಳಿಕ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್‌ನಲ್ಲಿ ಎರಡನೇ ಟಿ20ಐ ಪಂದ್ಯವನ್ನು ಗೆದ್ದು ಶುಭಾರಂಭ ಕಾಣಲು ಎದುರು ನೋಡುತ್ತಿತ್ತು. ಅದರಂತೆ ಈ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಅವರೊಂದಿಗೆ ಇನಿಂಗ್ಸ್‌ ಆರಂಭಿಸಿದ ಗಿಲ್ ಮತ್ತೊಮ್ಮೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು. ಜಾಶ್ ಹೇಝಲ್‌ವುಡ್ ಅವರ ಎಸೆತದಲ್ಲಿ ಮಿಡ್-ಆಫ್‌ನಲ್ಲಿ ಕ್ಯಾಚ್ ಕೊಟ್ಟು ಪೆವಿಲಿಯನ್ ಕಡೆ ಸಾಗಿದರು. ಆ ಮೂಲಕ ಟಿ20ಐ ಕ್ರಿಕೆಟ್‌ನಲ್ಲಿ ಕಮ್‌ಬ್ಯಾಕ್‌ ಮಾಡಲು ಸಾಧ್ಯವಾಗಲಿಲ್ಲ. ಗಿಲ್ 9 ಇನಿಂಗ್ಸ್‌ಗಳಿಂದ 24.14ರ ಸರಾಸರಿ ಮತ್ತು 148.24ರ ಸ್ಟ್ರೈಕ್ ರೇಟ್‌ನಲ್ಲಿ 169 ರನ್ ಗಳಿಸಲಷ್ಟೇ ಶಕ್ತರಾಗಿದ್ದಾರೆ.

IND vs AUS: ಬ್ಯಾಟಿಂಗ್‌ ವೈಫಲ್ಯದಿಂದಾಗಿ ಆಸ್ಟ್ರೇಲಿಯಾ ಎದುರು ಸೋಲುಂಡ ಭಾರತ!

ಮತ್ತೊಂದೆಡೆ, ಯಶಸ್ವಿ ಜೈಸ್ವಾಲ್ ಅವರು 2024ರ ಜುಲೈನಲ್ಲಿ ಶ್ರೀಲಂಕಾ ಪ್ರವಾಸದ ಸಮಯದಲ್ಲಿ ಭಾರತ ಪರ ಕೊನೆಯ ಟಿ20ಐ ಆಡಿದ್ದರು. ಇದು ಗಿಲ್ ಪಾಲಿಗೆ 2025ರ ಏಷ್ಯಾ ಕಪ್‌ಗೂ ಮುನ್ನ ಕೊನೆಯ ಸರಣಿಯೂ ಆಗಿತ್ತು. ಜೈಸ್ವಾಲ್ ಟಿ20ಐಗಳಲ್ಲಿ ಅದ್ಭುತ ದಾಖಲೆಯನ್ನು ಹೊಂದಿದ್ದು, 22 ಇನಿಂಗ್ಸ್‌ಗಳಿಂದ 36.15ರ ಸರಾಸರಿಯಲ್ಲಿ 723 ರನ್ ಗಳಿಸಿದ್ದಾರೆ, ಇದರಲ್ಲಿ ಒಂದು ಶತಕ ಮತ್ತು ಐದು ಅರ್ಧಶತಕಗಳಿವೆ.



ಶುಭಮನ್‌ ಗಿಲ್‌ ಬದಲು ಜೈಸ್ವಾಲ್‌ಗೆ ಚಾನ್ಸ್‌ ಕೊಡಿ

ಶುಭಮನ್‌ ಗಿಲ್‌ ಸತತ ವೈಫಲ್ಯ ಅನುಭವಿಸಿದ ಕಾರಣ ಅಭಿಮಾನಿಗಳು ಉಪ ನಾಯಕನನ್ನು ಪ್ಲೇಯಿಂಗ್‌ XIನಿಂದ ಕೈ ಬಿಟ್ಟು ಯಶಸ್ವಿ ಜೈಸ್ವಾಲ್‌ಗೆ ಸ್ಥಾನ ನೀಡಬೇಕೆಂದು ಟ್ವಿಟರ್‌ನಲ್ಲಿ ಆಗ್ರಹಿಸುತ್ತಿದ್ದಾರೆ. ಯಶಸ್ವಿ ಜೈಸ್ವಾಲ್‌ ಎಡಗೈ ಬ್ಯಾಟ್ಸ್‌ಮನ್‌ ಆಗಿರುವ ಕಾರಣ ಆಡುವ ಬಳಗದಲ್ಲಿ ಸ್ಥಾನ ಸಿಗುತ್ತಿಲ್ಲ. ಏಕೆಂದರೆ ಎಡಗೈ ಬ್ಯಾಟ್ಸ್‌ಮನ್‌ ಆಗಿರುವ ಅಭಿಷೇಕ್‌ ಶರ್ಮಾ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ.



ಇದರ ನಡುವೆ ಜಾಶ್ ಹೇಝಲ್‌ವುಡ್ ಅವರ ಪರಿಣಾಮಕಾರಿ ಬೌಲಿಂಗ್ ದಾಳಿಗೆ ನಲುಗಿದ ಭಾರತ ತಂಡ, 125 ರನ್‌ಗಳಿಗೆ ಆಲ್‌ಔಟ್ ಆಯಿತು. ಟೀಮ್ ಇಂಡಿಯಾ ಓಪನರ್ ಅಭಿಷೇಕ್ ಶರ್ಮಾ (68 ರನ್‌) ಅವರ ಹೊರತಾಗಿ ಉಳಿದೆಲ್ಲಾ ಭಾರತೀಯ ಬ್ಯಾಟರ್‌ಗಳ ವೈಫಲ್ಯ ಅನುಭವಿಸಿದರು. ಈ ಕಾರಣದಿಂದಾಗಿ ಟೀಮ್‌ ಇಂಡಿಯಾ ದೊಡ್ಡ ಮೊತ್ತವನ್ನು ಕಲೆ ಹಾಕಲು ಸಾಧ್ಯವಿಲ್ಲ. ಹರ್ಷಿತ್‌ ರಾಣಾ 35 ರನ್‌ ಗಳಿಸಿ ಅಭಿಷೇಕ್‌ಗೆ ಸಾಥ್‌ ನೀಡಿದ್ದು ಬಿಟ್ಟರೆ ಇನ್ನುಳಿದವರು ಕನಿಷ್ಠ ಎರಡಂಕಿ ವೈಯಕ್ತಿಕ ಮೊತ್ತವನ್ನು ಗಳಿಸಲಿಲ್ಲ.