ನವದೆಹಲಿ: ಆಸ್ಟ್ರೇಲಿಯಾ ವಿರುದ್ದದ ಏಕದಿನ ಸರಣಿಯ (IND vs AUS) ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡಲು ಆಧುನಿಕ ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ (Virat Kohli) ಎದುರು ನೋಡುತ್ತಿದ್ದಾರೆ. ಅಕ್ಟೋಬರ್ 19 ರಂದು ಪರ್ತ್‌ನಲ್ಲಿ ಮೊದಲನೇ ಏಕದಿನ ಪಂದ್ಯ ನಡೆಯಲಿದೆ. ಈ ಪಂದ್ಯದ ಮೂಲಕ ಭಾರತ ತಂಡದ ಆಸ್ಟ್ರೇಲಿಯಾ ಪ್ರವಾಸ ಅಧಿಕೃತವಾಗಿ ಆರಂಭವಾಗಲಿದೆ. ವಿರಾಟ್ ಕೊಹ್ಲಿ ಅವರು 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ (ICC Champions Trophy 2025) ಕೊನೆಯ ಬಾರಿ ಭಾರತ ತಂಡದ ಪರ ಆಡಿದ್ದರು. ಇದೀಗ ಏಳು ತಿಂಗಳ ವಿರಾಮದ ಬಳಿಕ ಅವರು ಭಾರತ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ದೀರ್ಘಾವಧಿ ವಿರಾಮದ ಬಳಿಕ ಭಾರತ ತಂಡದ ನಾಯಕ ಹೇಗೆ ಪ್ರದರ್ಶನವನ್ನು ತೋರಲಿದ್ದಾರೆಂಬುದು ತೀವ್ರ ಕುತೂಹಲವನ್ನು ಕೆರಳಿಸಿದೆ.
ಆಸ್ಟ್ರೇಲಿಯಾ ವಿರುದ್ದದ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ನೂತನ ದಾಖಲೆ ಬರೆಯುವ ಸಾಧ್ಯತೆ ಇದೆ. ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳನ್ನು ಗಳಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ವಿರಾಟ್ ಕೊಹ್ಲಿ 14181 ರನ್‌ಗಳ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ. 14234 ರನ್‌ಗಳ ಮೂಲಕ ಶ್ರೀಲಂಕಾ ಮಾಜಿ ನಾಯಕ ಕುಮಾಋ ಸಂಗಕ್ಕಾರ ಎರಡನೇ ಸ್ಥಾನದಲ್ಲಿದ್ದಾರೆ. ಇದೀಗ ಈ ಸಾಲಿನಲ್ಲಿ ಸಂಗಕ್ಕಾರ ಅವರನ್ನು ಹಿಂದಿಕ್ಕಲು ವಿರಾಟ್ ಕೊಹ್ಲಿಗೆ ಕೇವಲ 54 ರನ್‌ಗಳ ಅಗತ್ಯವಿದೆ. ಪರ್ತ್ ಪಂದ್ಯದಲ್ಲಿ ಕೊಹ್ಲಿ 54 ರನ್ ಗಳಿಸಿದರೆ ಅತಿ ಹೆಚ್ಚು ಒಡಿಐ ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ಎರಡನೇ ಸ್ಥಾನಕ್ಕೆ ಪ್ರವೇಶ ಮಾಡಲಿದ್ದಾರೆ.
IND vs AUS: ಯಶಸ್ವಿ ಜೈಸ್ವಾಲ್ ಔಟ್, ಆಸ್ಟ್ರೇಲಿಯಾ ಏಕದಿನ ಸರಣಿಗೆ ಭಾರತದ ಬಲಿಷ್ಠ ಪ್ಲೇಯಿಂಗ್ XI
ಶ್ರೀಲಂಕಾ ದಿಗ್ಗಜ ಕುಮಾರ ಸಂಗಕ್ಕಾರ ಅವರು 2000 ರಿಂದ 2015ರ ಒಂದೂವರೆ ದಶಕದಲ್ಲಿ 404 ಪಂದ್ಯಗಳಿಂದ 14234 ರನ್‌ಗಳನ್ನು ಕಲೆ ಹಾಕಿ, ಈ ಪಟ್ಟಿಯಲ್ಲಿ ಸದ್ಯ ಎರಡನೇ ಸ್ಥಾನದಲ್ಲಿದ್ದಾರೆ. ಇದರಲ್ಲಿ ಅವರು 25 ಶತಕಗಳು ಹಾಗೂ 93 ಅರ್ಧಶತಕಗಳನ್ನು ಬಾರಿಸಿದ್ದಾರೆ. 2015ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಕುಮಾರ ಸಂಗಕ್ಕಾರ ತಮ್ಮ ಕೊನೆಯ ಪಂದ್ಯವನ್ನು ಆಡಿದ್ದರು. ಈ ಟೂರ್ನಿಯಲ್ಲಿ ಅವರು ಸತತ ನಾಲ್ಕು ಶತಕಗಳನ್ನು ಬಾರಿಸಿದ್ದರು. 2015ರ ಆಗಸ್ಟ್ ತಿಂಗಳಲ್ಲಿ ಭಾರತದ ಎದುರು ಶ್ರೀಲಂಕಾ ಪರ ಪರ ಕೊನೆಯ ಪಂದ್ಯವನ್ನು ಆಡಿದ್ದರು.
ಒಡಿಐ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ಸ್
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಅವರು 463 ಏಕದಿನ ಪಂದ್ಯಗಳಿಂದ 18426 ರನ್‌ಗಳನ್ನು ಗಳಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ದ್ವಿಶತಕ ಸಿಡಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ದಾಖಲೆ ಕೂಡ ಸಚಿನ್ ಹೆಸರಿನಲ್ಲಿದೆ. 49 ಬಾರಿ ಸಚಿನ್ ತೆಂಡೂಲ್ಕರ್ ಶತಕಗಳನ್ನು ಬಾರಿಸಿದ್ದಾರೆ.
IND vs AUS-ʻರೋಹಿತ್ ಶರ್ಮಾಗೆ ನಾಯಕತ್ವ ನೀಡದೇ ಇರುವುದು ಆಘಾತಕಾರಿʼ: ಹರ್ಭಜನ್ ಸಿಂಗ್!
ಸಚಿನ್ ತೆಂಡೂಲ್ಕರ್: 18426
ಕುಮಾರ ಸಂಗಕ್ಕಾರ: 14234
ವಿರಾಟ್ ಕೊಹ್ಲಿ: 14181
ರಿಕಿ ಪಾಂಟಿಂಗ್: 13704
ಸನತ್ ಜಯಸೂರ್ಯ: 13430
ಸಚಿನ್ ತಮ್ಮ ಏಕದಿನ ಕ್ರಿಕೆಟ್ ವೃತ್ತಿ ಜೀವನದಲ್ಲಿ 96 ಅರ್ಧಶತಕಗಳನ್ನು ಗಳಿಸಿದ್ದಾರೆ. ಅವರು 2012ರಲ್ಲಿ ಪಾಕಿಸ್ತಾನ ವಿರುದ್ಧ ಏಷ್ಯಾ ಕಪ್ ಟೂರ್ನಿಯಲ್ಲಿ ಭಾರತದ ಪರ ಕೊನೆಯ ಪಂದ್ಯವನ್ನು ಆಡಿದ್ದರು. ಇದೇ ವರ್ಷ ಡಿಸೆಂಬರ್ ಅವರು 50 ಓವರ್‌ಗಳ ಸ್ವರೂಪಕ್ಕೆ ವಿದಾಯ ಹೇಳಿದ್ದರು. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ದಾಖಲೆ ಸಚಿನ್ ಹೆಸರಿನಲ್ಲಿದೆ.