ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಶ್ರೇಯಸ್ ಅಯ್ಯರ್ ಆರೋಗ್ಯಕ್ಕಾಗಿ ದೇವರಲ್ಲಿ ಪ್ರಾರ್ಥಿಸಿದ ಸೂರ್ಯಕುಮಾರ್‌ ಯಾದವ್‌ ತಾಯಿ!

ಆಸ್ಟ್ರೇಲಿಯಾ ವಿರುದ್ದದ ಮೂರನೇ ಏಕದಿನ ಪಂದ್ಯದಲ್ಲಿ ಅಲೆಕ್ಸ್ ಕೇರಿ ಅವರ ಕ್ಯಾಚ್ ಪಡೆಯುವ ವೇಳೆ ಗಾಯಕ್ಕೆ ತುತ್ತಾಗಿದ್ದ ಶ್ರೇಯಸ್ ಅಯ್ಯರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಇದರ ನಡುವೆ ಟಿ20ಐ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರ ತಾಯಿ ಅಯ್ಯರ್ ಅವರ ಅರೋಗ್ಯ ಚೇತರಿಸಿಕೊಳ್ಳಲೆಂದು ವಿಶೇಷ ಪೂಜೆ ಸಲ್ಲಿಸಿದ್ದು, ಇದೀಗ ಈ ವಿಡಿಯೊ ಎಲ್ಲೆಡೆ ವೈರಲ್ ಆಗಿದೆ.

ಶ್ರೇಯಸ್ ಅಯ್ಯರ್‌ಗಾಗಿ ದೇವರಲ್ಲಿ ಪ್ರಾರ್ಥಿಸಿದ ಸೂರ್ಯಕುಮಾರ್‌ ತಾಯಿ!

ಶ್ರೇಯಸ್ ಅಯ್ಯರ್‌ಗಾಗಿ ದೇವರಲ್ಲಿ ಪ್ರಾರ್ಥಿಸಿದ ಸೂರ್ಯಕುಮಾರ್‌ ತಾಯಿ! -

Profile Ramesh Kote Oct 29, 2025 8:51 PM

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ (IND vs AUS) ವೇಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಶ್ರೇಯಸ್ ಅಯ್ಯರ್ (Shreyas Iyer) ಅವರು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಒಂದು ಸಣ್ಣ ಶಸ್ತ್ರ ಚಿಕಿತ್ಸೆ ಬಳಿಕ ಅಯ್ಯರ್ ಅವರ ಆರೋಗ್ಯದಲ್ಲಿ ಗಮನಾರ್ಹ ಚೇತರಿಕೆ ಕಂಡು ಬಂದಿದ್ದು, ಮಂಗಳವಾರ ಅವರನ್ನು ಐಸಿಯುನಿಂದ ವಾರ್ಡ್​​ಗೆ ಶಿಫ್ಟ್ ಮಾಡಿ ಚಿಕಿತ್ಸೆ ಮುಂದುವರಿಸಲಾಗಿದೆ. ಅವರ ಪಕ್ಕೆಲುಬಿಗೆ ಗಂಭೀರ ಗಾಯವಾಗಿ ಆಂತರಿಕ ರಕ್ತಸ್ರಾವವಾದ ಹಿನ್ನೆಲೆ ಐಸಿಯುಗೆ ದಾಖಲಿಸಲಾಗಿತ್ತು. ಆದರೆ ಮಂಗಳವಾರ ರಕ್ತಸ್ರಾವದಲ್ಲಿ ನಿಯಂತ್ರಣ ಕಂಡು ಬಂದಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿದ್ದವು.

ಇದರ ನಡುವೆ ಟಿ20ಐ ನಾಯಕ ಸೂರ್ಯಕುಮಾರ್ ಯಾದವ್ ಅವರ ತಾಯಿ ಸ್ವಪ್ನ ಯಾದವ್‌, ಛಠ್ ಪೂಜೆ ಸಂದರ್ಭದಲ್ಲಿ ಅಯ್ಯರ್ ಅವರ ಶೀಘ್ರ ಚೇತರಿಕೆಗಾಗಿ ಪ್ರಾರ್ಥನೆ ಸಲ್ಲಿಸುತ್ತಿರುವ ವಿಡಿಯೊವೊಂದು ಎಲ್ಲೆಡೆ ಹರಿದಾಡುತ್ತಿದೆ. ಈ ವಿಡಿಯೊದಲ್ಲಿ "ಎಲ್ಲರೂ ಶ್ರೇಯಸ್ ಅಯ್ಯರ್ ಅವರ ಒಳಿತಿಗಾಗಿ ಪ್ರಾರ್ಥನೆ ಮಾಡಿ, ಏಕೆಂದರೆ, ಅವರ ಆರೋಗ್ಯ ಸರಿಯಾಗಿಲ್ಲ ಎಂದು ನಾನು ಕೇಳಿದ್ದೇನೆ. ನನಗೆ ಇದರಿಂದ ತುಂಬಾ ದುಃಖವಾಗಿದೆ,” ಎಂದು ಹೇಳಿದ್ದಾರೆ.

AUS vs IND 1st T20I: ಮಳೆಯದ್ದೇ ಆಟ; ಭಾರತ-ಆಸೀಸ್‌ ಮೊದಲ ಟಿ20 ಪಂದ್ಯ ರದ್ದು

ಪಕ್ಕೆಲುಬಿನ ಸ್ಕ್ಯಾನಿಂಗ್‌ಗೆ ಸಂಬಂಧಪಟ್ಟ ವರದಿಯೊಂದನ್ನು ವೈದ್ಯರು ಬಹಿರಂಗಪಡಿಸಿದ್ದು, ಪಕ್ಕೆಲುಬಿನ ಮೂಳೆ ಸ್ವಲ್ಪ ಮುರಿದಿರುವಂತೆ ಕಂಡು ಬಂದಿದೆ. ಹೀಗಾಗಿ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಶಸ್ತ್ರಚಿಕಿತ್ಸೆಗೆ ಒಳಗಾಗಿರುವುದರಿಂದ ಐದು ದಿನಗಳ ಕಾಲ ಅಯ್ಯರ್ ಅವರು ಆಸ್ಪತ್ರೆಯಲ್ಲೇ ಇರಲಿದ್ದಾರೆ. ಪ್ರಸ್ತುತ ಸಿಡ್ನಿ ಹಾಗೂ ಭಾರತೀಯ ವೈದ್ಯಕೀಯ ತಂಡ ಶ್ರೇಯಸ್ ಅಯ್ಯರ್ ಅವರ ಆರೋಗ್ಯದ ಮೇಲೆ ಕಾಳಜಿ ವಹಿಸಿದೆ. ಶೀಘ್ರದಲ್ಲೇ ಗುಣಮುಖರಾಗಿ ಭಾರತಕ್ಕೆ ಹಿಂದಿರುಗುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.



ಶ್ರೇಯಸ್‌ ಅಯ್ಯರ್‌ ಆರೋಗ್ಯದ ಬಗ್ಗೆ ಸೂರ್ಯ ಹೇಳಿದ್ದಿದು

ಶ್ರೇಯಸ್‌ ಅಯ್ಯರ್ ಅವರ ಆರೋಗ್ಯ ಸ್ಥಿತಿಗತಿ ಕುರಿತು ಪ್ರತಿಕ್ರಿಯೆ ನೀಡಿರುವ ಸೂರ್ಯಕುಮಾರ್ ಯಾದವ್, ಅವರ ಬಳಿ ಮಾತನಾಡಿದದ್ದೇನೆ. ಅವರು ಚೇತರಿಕೆಯ ಹಾದಿಯಲ್ಲಿದ್ದಾರೆ. ತೀರಾ ಆತಂಕಪಡುವಂತಹದ್ದೇನು ಇಲ್ಲ ಎಂದು ಹೇಳಿದ್ದಾರೆ. "ಅವರಿಗೆ ಗಾಯವಾಗಿದೆ ಎಂದು ತಿಳಿದ ಮೊದಲ ದಿನವೇ ನಾನು ಅವರೊಂದಿಗೆ ಮಾತನಾಡಿದ್ದೆ. ನಾನು ಮೊದಲು ಅವರಿಗೆ ಕರೆ ಮಾಡಿದೆ. ನಂತರ ಅವರ ಬಳಿ ಫೋನ್ ಇಲ್ಲ ಎಂದು ನನಗೆ ತಿಳಿಯಿತು. ಹಾಗಾಗಿ ನಾನು ಫಿಸಿಯೊ ಕಮಲೇಶ್ ಅವರಿಗೆ ಕರೆ ಮಾಡಿದೆ. ಅವರು ಸ್ಥಿರವಾಗಿದ್ದಾರೆ ಎಂದು ಹೇಳಿದ್ದರು," ಎಂದರು.

IND vs AUS: ಟಿ20ಐ ಸರಣಿಯ ಆರಂಭಕ್ಕೂ ಮುನ್ನ ಭಾರತ ತಂಡಕ್ಕೆ ಆಘಾತ, ನಿತೀಶ್‌ ರೆಡ್ಡಿಗೆ ಗಾಯ!

"ಮೊದಲ ದಿನ, ನನಗೆ ಹೇಗೆ ಎಂದು ತಿಳಿದಿಲ್ಲ, ಆದರೆ ಅವರು ಚೆನ್ನಾಗಿ ಕಾಣುತ್ತಿದ್ದರು. ನಾವು ಎರಡು ದಿನಗಳಿಂದ ಮಾತನಾಡುತ್ತಿದ್ದೇವೆ. ಅವರು ಉತ್ತರಿಸುತ್ತಿದ್ದಾರೆ. ಅವರು ಫೋನ್‌ನಲ್ಲಿ ಉತ್ತರಿಸಿದರೆ, ಸ್ಥಿರವಾಗಿದ್ದಾರೆ ಎಂದರ್ಥ. ಅಲ್ಲಿ ಒಬ್ಬ ವೈದ್ಯರೂ ಇದ್ದಾರೆ, ಅವರು ಚೆನ್ನಾಗಿದ್ದಾರೆ. ಅವರು ಮಾತನಾಡುತ್ತಿದ್ದಾರೆ. ಎಲ್ಲವೂ ಸಾಮಾನ್ಯವಾಗಿದೆ. ಅವರು ಇನ್ನೂ ಕೆಲವು ದಿನಗಳವರೆಗೆ ತಮ್ಮನ್ನು ತಾವು ನೋಡಿಕೊಳ್ಳುವುದಾಗಿ ಹೇಳಿದ್ದಾರೆ," ಎಂದು ಸೂರ್ಯ ತಿಳಿಸಿದ್ದಾರೆ.

ಮೊದಲನೇ ಟಿ20ಐ ಪಂದ್ಯ ಮಳೆಗೆ ಬಲಿ

ಕ್ಯಾನ್‌ಬೆರಾದ ಮನುಕಾ ಓವಲ್‌ನಲ್ಲಿ ಬುಧವಾರ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಣ ಮೊದಲನೇ ಟಿ20ಐ ಪಂದ್ಯ ಮಳೆಗೆ ಬಲಿಯಾಗಿದೆ. ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡುವಂತಾದ ಭಾರತ ತಂಡ, 9.4 ಓವರ್‌ಗಳಿಗೆ ಒಂದು ವಿಕೆಟ್‌ ನಷ್ಟಕ್ಕೆ 97 ರನ್‌ಗಳನ್ನು ಕಲೆ ಹಾಕಿತ್ತು. ಈ ವೇಳೆ ಜೋರಾಗಿ ಮಳೆ ಬಂದಿದ್ದರಿಂದ ಅಂಪೈರ್‌ಗಳು ಪಂದ್ಯವನ್ನು ರದ್ದುಗೊಳಿಸಿದರು.