IND vs AUS: ಮೂರನೇ ಟಿ20ಐ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಆಡದೇ ಇರಲು ಕಾರಣವೇನು?
Why is Sanju samson not Playing XI: ಆಸ್ಟ್ರೇಲಿಯಾ ವಿರುದ್ಧ ಮೂರನೇ ಟಿ20ಐ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್ XIನಲ್ಲಿ ಮೂರು ಬದಲಾವಣೆಯನ್ನು ತರಲಾಗಿದೆ. ಕಳೆದ ಪಂದ್ಯದಲ್ಲಿ ವಿಫಲರಾಗಿದ್ದ ಸಂಜು ಸ್ಯಾಮ್ಸನ್ ಅವರನ್ನು ಕೈ ಬಿಡಲಾಗಿದೆ.
IND vs AUS: ಮೂರನೇ ಟಿ20ಐನಲ್ಲಿ ಸಂಜು ಸ್ಯಾಮ್ಸನ್ ಏಕೆ ಆಡುತ್ತಿಲ್ಲ? -
ಹೊಬರ್ಟ್: ಇಲ್ಲಿನ ಬೆಲ್ಲೆರಿವ್ ಓವಲ್‌ನಲ್ಲಿ ನಡೆಯುತ್ತಿರುವ ಮೂರನೇ ಟಿ20ಐ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ (IND vs AUS) ತಂಡಗಳು ಕಾದಾಟ ನಡೆಸುತ್ತಿವೆ. ಎರಡನೇ ಪಂದ್ಯದಲಿ ಸೋಲು ಅನುಭವಿಸಿದ್ದ ಭಾರತ ತಂಡ, ಮೂರನೇ ಕಾದಾಟಕ್ಕೆ ತನ್ನ (India's Playing Xi) ಪ್ಲೇಯಿಂಗ್ XIನಲ್ಲಿ ಮೂರು ಬದಲಾವಣೆಯನ್ನು ತರಲಾಗಿದೆ. ಆದರೆ, ಆಸ್ಟ್ರೇಲಿಯಾ ತಂಡದ ಪ್ಲೇಯಿಂಗ್ Xiನಲ್ಲಿ ಒಂದು ಬದಲಾವಣೆಯನ್ನು ತರಲಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav), ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಈ ವೇಳೆ ಅವರು ತನ್ನ ಪ್ಲೇಯಿಂಗ್ XI ಬಗ್ಗೆ ಮಾಹಿತಿ ನೀಡಿದರು. ಅಂದ ಹಾಗೆ ಈ ಪಂದ್ಯದಿಂದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಅವರನ್ನು ಕೈ ಬಿಡಲಾಗಿದ್ದು, ಜಿತೇಶ್ ಶರ್ಮಾಗೆ ಅವಕಾಶವನ್ನು ನೀಡಲಾಗಿದೆ.
ಈ ಸರಣಿಯ ಆರಂಭಿಕ ಪಂದ್ಯ ಮಳೆಗೆ ಬಲಿಯಾಗಿತ್ತು. ನಂತರ ಮೆಲ್ಬೋರ್ನ್‌ನಲ್ಲಿ ನಡೆದಿದ್ದ ಎರಡನೇ ಟಿ20ಐ ಪಂದ್ಯದಲ್ಲಿ ಭಾರತ ತಂಡ ಸೋಲು ಅನುಭವಿಸಿತ್ತು. ಆ ಮೂಲಕ ಟಿ20ಐ ಸರಣಿಯಲ್ಲಿ 0-1 ಹಿನ್ನಡೆಯನ್ನು ಅನುಭವಿಸಿದೆ. ಇದೀಗ ಟಿ20ಐ ಸರಣಿಯನ್ನು ಜೀವಂತವಾಗಿರಿಸಿಕೊಳ್ಳಬೇಕೆಂದರೆ, ಭಾರತ ತಂಡ ಹೊಬರ್ಟ್‌ನಲ್ಲಿ ಗೆಲ್ಲಲೇ ಬೇಕಾದ ಅನಿವಾರ್ಯತೆಗೆ ಸಿಲುಕಿದೆ.
ಈ ಹಿನ್ನೆಲೆಯಲ್ಲಿ ಭಾರತ ತಂಡದ ಪ್ಲೇಯಿಂಗ್ XIನಲ್ಲಿ ಮೂರು ಬದಲಾವಣೆ ಮಾಡಲಾಗಿದೆ ಎಂದು ಹೇಳಬಹುದು. ಅಂದ ಹಾಗೆ ಕಳೆದ ಎರಡು ಪಂದ್ಯಗಳಲ್ಲಿ ಬೆಂಚ್ ಕಾದಿದ್ದ ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ ಸ್ಥಾನಕ್ಕೆ ಬಂದಿದ್ದಾರೆ.
AUS vs IND Live: ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ
ಏಕೆ ಸಂಜು ಸ್ಯಾಮ್ಸನ್ ಆಡುತ್ತಿಲ್ಲ?
ಭಾರತ ತಂಡದ ಪ್ಲೇಯಿಂಗ್ XIನಲ್ಲಿ ಸಂಜು ಸ್ಯಾಮ್ಸನ್ ಬದಲಿಗೆ ಜಿತೇಶ್ ಶರ್ಮಾ, ಹರ್ಷಿತ್ ರಾಣಾ ಜಾಗಕ್ಕೆ ಅರ್ಷದೀಪ್ ಸಿಂಗ್ ಹಾಗೂ ಕುಲ್ದೀಪ್ ಯಾದವ್ ಸ್ಥಾನಕ್ಕೆ ವಾಷಿಂಗ್ಟನ್ ಸುಂದರ್ ಬಂದಿದ್ದಾರೆ. ಆದರೆ, ಇವರ ಪೈಕಿ ಸಂಜು ಸ್ಯಾಮ್ಸನ್ ಅವರನ್ನು ಕೈ ಬಿಟ್ಟಿದ್ದು ಎಲ್ಲರಿಗೂ ಅಚ್ಚರಿ ಮೂಡಿಸಿತು. ಏಕೆಂದರೆ ಆರಂಭಿಕ ಸ್ಥಾನದ ಬದಲು ಮಧ್ಯಮ ಕ್ರಮಾಂಕದಲ್ಲಿ ಅವಕಾಶವನ್ನು ನೀಡಲಾಗುತ್ತಿದೆ. ಆದರೂ ಇದೀಗ ಅವರನ್ನ ಕೈ ಬಿಡಲಾಗಿದೆ. ಅಂದ ಹಾಗೆ ಟಾಸ್ ವೇಳೆ ನಾಯಕ ಸೂರ್ಯಕುಮಾರ್ ಯಾದವ್ ಅವರು ಇದಕ್ಕೆ ಕಾರಣವೇನೆಂದು ತಿಳಿಸಲಿಲ್ಲ ಹಾಗೂ ಯಾವುದೇ ಆಟಗಾರ ಗಾಯಕ್ಕೆ ತುತ್ತಾಗಿರುವ ಬಗ್ಗೆ ಮಾಹಿತಿ ಇಲ್ಲ.
ಏಷ್ಯಾ ಕಪ್ ಟೂರ್ನಿಯಲ್ಲಿ ಎಲ್ಲಾ ಪಂದ್ಯಗಳನ್ನು ಸಂಜು ಸ್ಯಾಮ್ಸನ್ ಆಡಿದ್ದರು, ಆದರೆ ಅವರು ಅಲ್ಲಿ ದೊಡ್ಡ ಇನಿಂಗ್ಸ್ ಆಡುವಲ್ಲಿ ವಿಫಲರಾಗಿದ್ದರು. ಇದೀಗ ಆಸ್ಟ್ರೇಲಿಯಾ ಎದುರು ಎರಡನೇ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಅವಕಾಶ ಸಿಕ್ಕರೂ ಅದನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ವಿಫಲರಾಗಿದ್ದರು. ಬಹುಶಃ ಈ ಕಾರಣದಿಂದಲೇ ಸಂಜು ಬದಲು ಜಿತೇಶ್‌ಗೆ ಅವಕಾಶ ನೀಡಿರಬಹುದು. ಅಂದ ಹಾಗೆ ಜಿತೇಶ್ ಶರ್ಮಾ ದೀರ್ಘಾವಧಿಯಿಂದ ಬೆಂಚ್ ಕಾಯುತ್ತಿದ್ದಾರೆ.
A look at #TeamIndia’s Playing XI ahead of the 3️⃣rd T20I 🙌
— BCCI (@BCCI) November 2, 2025
Updates ▶️ https://t.co/X5xeZ0LEfC#AUSvIND pic.twitter.com/acjQQyLcAA
ಸೂರ್ಯಕುಮಾರ್ ಯಾದವ್ ಏನು ಹೇಳಿದರು?
"ನಾವು ಮೊದಲು ಬೌಲ್ ಮಾಡುತ್ತೇವೆ. ಎರಡನೇ ಇನಿಂಗ್ಸ್‌ನಲ್ಲಿ ಬ್ಯಾಟ್ ಮಾಡಲು ಚೆಂಡು ಸುಲಭವಾಗಿ ಬರಲಿದೆ. ಏಕೈಕ ಸಮಯದಲ್ಲಿ ಒಂದು ಪಂದ್ಯವನ್ನು ತೆಗೆದುಕೊಳ್ಳುವ ಬಗ್ಗೆ ನನಗೆ ಖುಷಿ ಇದೆ. ನಾವು ಪ್ಲೇಯಿಂಗ್ XIನಲ್ಲಿ ಮೂರು ಬದಲಾವಣೆಯನ್ನು ಮಾಡಕೊಂಡಿದ್ದೇವೆ. ಜಿತೇಶ್, ಅರ್ಷದೀಪ್ ಹಾಗೂ ವಾಷಿಂಗ್ಟನ್ ಆಡುತ್ತಿದ್ದಾರೆ," ಎಂದು ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಟಾಸ್ ವೇಳೆ ತಿಳಿಸಿದ್ದಾರೆ.
IND vs AUS: ಬ್ಯಾಟಿಂಗ್ ವೈಫಲ್ಯದಿಂದಾಗಿ ಆಸ್ಟ್ರೇಲಿಯಾ ಎದುರು ಸೋಲುಂಡ ಭಾರತ!
ಆಸ್ಟ್ರೇಲಿಯಾ ಪ್ಲೇಯಿಂಗ್ XI: ಮಿಚೆಲ್ ಮಾರ್ಷ್ (ನಾಯಕ), ಟ್ರಾವಿಸ್ ಹೆಡ್, ಜಾಶ್ ಇಂಗ್ಲಿಸ್ (ವಿಕೆಟ್ ಕೀಪರ್), ಟಿಮ್ ಡೇವಿಡ್, ಮ್ಯಾಥ್ಯೂ ಶಾರ್ಟ್, ಮಿಚೆಲ್ ಓವೆನ್, ಮಾರ್ಕಸ್ ಸ್ಟೋಯ್ನಿಸ್, ಜೇವಿಯರ್ ಬಾರ್ಟ್ಲೆಟ್, ಶಾನ್ ಎಬಾಟ್, ನೇಥನ್ ಎಲ್ಲಿಸ್, ಮ್ಯಾಥ್ಯೂ ಕುಹ್ನೇಮನ್
ಭಾರತದ ಪ್ಲೇಯಿಂಗ್ XI: ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್‌ಪ್ರೀತ್ ಬುಮ್ರಾ