ಲಂಡನ್: ವಾಷಿಂಗ್ಟನ್ ಸುಂದರ್ (22ಕ್ಕೆ 4) ಸ್ಪಿನ್ ಮೋಡಿ ಹಾಗೂ ಮೊಹಮ್ಮದ್ ಸಿರಾಜ್ (31 ಕ್ಕೆ 2) ಬೌಲಿಂಗ್ ದಾಳಿಗೆ ನಲುಗಿದ ಇಂಗ್ಲೆಂಡ್ ತಂಡ ಮೂರನೇ ಟೆಸ್ಟ್ ಪಂದ್ಯದ (IND vs ENG) ದ್ವಿತೀಯ ಇನಿಂಗ್ಸ್‌ನಲ್ಲಿ ಕೇವಲ 192 ರನ್‌ಗಳಿಗೆ ಆಲ್‌ಔಟ್ ಆಯಿತು. ಆ ಮೂಲಕ ಎದುರಾಳಿ ಭಾರತ ತಂಡಕ್ಕೆ ಕೇವಲ 193 ರನ್‌ಗಳ ಸಾಧಾರಣ ಗುರಿಯನ್ನು ನೀಡಿದೆ. ದ್ವಿತೀಯ ಇನಿಂಗ್ಸ್‌ನ ಆಂಭದಲ್ಲಿ ಮೊಹಮ್ಮದ್ ಸಿರಾಜ್ (Mohammed Siraj) ಮಾರಕ ದಾಳಿಯಿಂದ ಎರಡು ಪ್ರಮುಖ ವಿಕೆಟ್‌ಗಳನ್ನು ಕಬಳಿಸಿದ್ದರು. ನಂತರ ಮಧ್ಯಮ ಓವರ್‌ಗಳಲ್ಲಿ ಸ್ಪಿನ್ ಮೋಡಿ ಮಾಡಿದ ವಾಷಿಂಗ್ಟನ್ ಸುಂದರ್ (Washington Sundar) ನಾಲ್ಕು ವಿಕೆಟ್‌ಗಳನ್ನು ಕಿತ್ತು ಇಂಗ್ಲೆಂಡ್ ತಂಡದ ಪತನಕ್ಕೆ ಕಾರಣರಾಗಿದ್ದರು.
ಭಾನುವಾರ ಬೆಳಿಗ್ಗೆ ವಿಕೆಟ್ ನಷ್ಟವಿಲ್ಲದೆ 2 ರನ್‌ಗಳಿಂದ ದ್ವಿತೀಯ ಇನಿಂಗ್ಸ್ ಮುಂದುವರಿಸಿದ ಇಂಗ್ಲೆಂಡ್ ತಂಡಕ್ಕೆ ಆರಂಭದಲ್ಲಿ ಮೊಹಮ್ಮದ್ ಸಿರಾಜ್ ಆರಂಭಿಕ ಆಘಾತ ನೀಡಿದ್ದರು. ಬೆನ್ ಡಕೆಟ್ ಹಾಗೂ ಒಲ್ಲಿ ಪೋಪ್ ಅವರನ್ನು ಔಟ್ ಮಾಡಿದ್ದರು. ನಂತರ ನಿತೀಶ್ ರೆಡ್ಡಿ, ಆರಂಭಿಕ ಬ್ಯಾಟ್ಸ್‌ಮನ್ ಝ್ಯಾಕ್ ಕ್ರಾವ್ಲಿ ಅವರನ್ನು ಔಟ್ ಮಾಡಿದ್ದರು. ಆ ಮೂಲಕ ಇಂಗ್ಲೆಂಡ್ ತಂಡ 50 ರನ್‌ಗಳಿಗೆ 3 ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.
IND vs ENG: 8000 ರನ್ ಗಳಿಸಿ ಸಚಿನ್ ತೆಂಡೂಲ್ಕರ್ ಒಳಗೊಂಡ ಎಲೈಟ್ ಲಿಸ್ಟ್ ಸೇರಿದ ಜೋ ರೂಟ್!
ನಾಲ್ಕನೇ ವಿಕೆಟ್‌ಗೆ ಜೊತೆಯಾಗಿದ್ದ ಜೋ ರೂಟ್ ಹಾಗೂ ಹ್ಯಾರಿ ಬ್ರೂಕ್ ಕೆಲ ಕಾಲ ಭಾರತದ ಬೌಲರ್‌ಗಳನ್ನು ಎದುರಿಸಿದ್ದರು. ಈ ಜೋಡಿ 37 ರನ್‌ಗಳ ಜೊತೆಯಾಟವನ್ನು ಕೂಡ ಆಡಿತ್ತು. ಆದರೆ, ಬಿರುಸಿನ ಬ್ಯಾಟ್ ಮಾಡುತ್ತಿದ್ದ ಹ್ಯಾರಿ ಬ್ರೂಕ್ (23) ಅವರನ್ನು ಆಕಾಶ್ ದೀಪ್ ಕ್ಲೀನ್ ಬೌಲ್ಡ್ ಮಾಡಿದ್ದರು. ಒಂದು ತುದಿಯಲ್ಲಿ ನಿಂತು ಬ್ಯಾಟ್ ಮಾಡುತ್ತಿದ್ದ ಜೋ ರೂಟ್ 40 ರನ್ ಗಳಿಸಿ ಉತ್ತಮ ಆರಂಭವನ್ನು ಪಡೆದಿದ್ದರು. ಆದರೆ, ವಾಷಿಂಗ್ಟನ್ ಸುಂದರ್ ತಮ್ಮ ಸ್ಪಿನ್ ಮೋಡಿಯಿಂದ ಇಂಗ್ಲೆಂಡ್ ಮಾಜಿ ನಾಯಕನನ್ನು ಔಟ್ ಮಾಡಿದರು.
IND vs ENG: ಔಟ್ ಮಾಡಿ ಬೆನ್ ಡಕೆಟ್ ಭುಜಕ್ಕೆ ಡಿಕ್ಕಿ ಹೊಡೆದ ಮೊಹಮ್ಮದ್ ಸಿರಾಜ್!
ನಾಯಕ ಬೆನ್ ಸ್ಟೋಕ್ಸ್ 33 ರನ್ ಗಳಿಸಿ ಭರವಸೆಯನ್ನು ಮೂಡಿಸಿದ್ದರು. ಆದರೆ, ವಾಷಿಂಗ್ಟನ್ ಸುಂದರ್ ಅವರ ಸ್ಪಿನ್ ಮೋಡಿಗೆ ಅವರು ಶರಣಾದರು. ಪ್ರಥಮ ಇನಿಂಗ್ಸ್‌ನಲ್ಲಿ ಅರ್ಧಶತಕ ಸಿಡಿಸಿದ್ದ ಜೇಮಿ ಸ್ಮಿತ್ ಕೂಡ ವಾಷಿಂಗ್ಟನ್‌ಗೆ ವಿಕೆಟ್ ಒಪ್ಪಿಸಿದರು. ನಂತರ ಫಾರ್ಮ್‌ಗೆ ಬಂದ ಜಸ್‌ಪ್ರೀತ್ ಬುಮ್ರಾ, ಬ್ರೈಡೆನ್ ಕಾರ್ಸ್ ಹಾಗೂ ಕ್ರಿಸ್ ವೋಕ್ಸ್‌ಗೆ ಪೆವಿಲಿಯನ್ ಹಾದಿ ತೋರಿಸಿದರು. ಕೊನೆಯಲ್ಲಿ ವಾಷಿಂಗ್ಟನ್ ಸುಂದರ್ ಶೋಯೆಬ್ ಬಶೀರ್ ಅವರನ್ನು ಔಟ್ ಮಾಡಿದರು. ಅಂತಿಮವಾಗಿ ಇಂಗ್ಲೆಂಡ್ ತಂಡ ದ್ವಿತೀಯ ಇನಿಂಗ್ಸ್‌ನಲ್ಲಿ 62.1 ಓವರ್‌ಗಳಿಗೆ 192 ರನ್‌ಗಳಿಗೆ ಆಲ್‌ಔಟ್ ಆಯಿತು. ಆ ಮೂಲಕ ಟೀಮ್ ಇಂಡಿಯಾಗೆ 193 ರನ್‌ಗಳ ಸಾಧಾರಣ ಗುರಿಯನ್ನು ನೀಡಿತು.