ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಶುಭಮನ್ ಗಿಲ್ ನಾಯಕತ್ವದ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ ಆಕಾಶ್ ಚೋಪ್ರಾ!

ಇಂಗ್ಲೆಂಡ್ ವಿರುದ್ಧ ಬರ್ಮಿಂಗ್‌ಹ್ಯಾಮ್‌ನ ಎಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆದಿದ್ದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 336 ರನ್‌ಗಳ ಭಾರೀ ಅಂತರದಿಂದ ಗೆಲುವು ಸಾಧಿಸಿದೆ. ಆ ಮೂಲಕ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಶುಭಮನ್ ಗಿಲ್ ಪಡೆ 1-1 ಸಮಬಲ ಕಾಯ್ದುಕೊಂಡಿವೆ. ಇದರ ಬೆನ್ನಲ್ಲೆ ಶುಭಮನ್‌ ಗಿಲ್‌ ನಾಯಕತ್ವವನ್ನು ಆಕಾಶ್‌ ಚೋಪ್ರಾ ಮುಕ್ತಕಂಠದಿಂದ ಗುಣಗಾನ ಮಾಡಿದ್ದಾರೆ.

ಶುಭಮನ್‌ ಗಿಲ್‌ ನಾಯಕತ್ವದ ಬಗ್ಗೆ ಆಕಾಶ್‌ ಚೋಪ್ರಾ ದೊಡ್ಡ ಹೇಳಿಕೆ!

ಶುಭಮನ್‌ ಗಿಲ್‌ ನಾಯಕತ್ವವನ್ನು ಶ್ಲಾಘಿಸಿದ ಆಕಾಶ್‌ ಚೋಪ್ರಾ,.

Profile Ramesh Kote Jul 8, 2025 5:49 PM

ನವದೆಹಲಿ: ಇಂಗ್ಲೆಂಡ್ ವಿರುದ್ಧ ಲೀಡ್ಸ್‌ನಲ್ಲಿ ನಡೆದಿದ್ದ ಮೊದಲ ಟೆಸ್ಟ್ (IND vs ENG) ಪಂದ್ಯದಲ್ಲಿ 5 ವಿಕೆಟ್‌ಗಳಿಂದ ಸೋಲು ಕಂಡಿದ್ಧ ಭಾರತ ತಂಡ, ಎಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆದಿದ್ದ ಎರಡನೇ ಟೆಸ್ಟ್ ಪಂದ್ಯದಲ್ಲಿ 336 ರನ್‌ಗಳ ಬೃಹತ್ ಅಂತರದ ಗೆಲುವು ಸಾಧಿಸಿ ಐದು ಪಂದ್ಯಗಳ ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ. ದ್ವಿತೀಯ ಇನಿಂಗ್ಸ್‌ನಲ್ಲಿ ಇಂಗ್ಲೆಂಡ್ ಗೆಲುವಿಗೆ 608 ರನ್‌ಗಳ ಅವಶ್ಯಕತೆ ಇತ್ತು, ಆದರೆ ವೇಗಿಗಳಾದ ಮೊಹಮ್ಮದ್ ಸಿರಾಜ್ (Mohammad Siraj) ಹಾಗೂ ಆಕಾಶ್ ದೀಪ್ ಅವರ ಮಾರಕ ದಾಳಿಗೆ ಸಿಲುಕಿ 271 ರನ್‌ಗಳಿಗೆ ಆಲ್ ಔಟ್ ಆಯಿತು. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಎಜ್‌ಬಾಸ್ಟನ್‌ನಲ್ಲಿ ಮೊದಲ ಗೆಲುವು ಸಾಧಿಸಿದ ಭಾರತ ತಂಡದ ಸಾಧನೆಯನ್ನು ಮಾಜಿ ಆರಂಭಿಕ ಆಕಾಶ್ ಚೋಪ್ರಾ (Akash Chopra) ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

ಬರ್ಮಿಂಗ್‌ಹ್ಯಾಮ್‌ ಟೆಸ್ಟ್‌ನ ಎರಡೂ ಇನಿಂಗ್ಸ್‌ನಲ್ಲಿ ನಾಯಕ ಶುಭಮನ್ ಗಿಲ್ (269 ಮತ್ತು 161 ರನ್) ಭರ್ಜರಿ ದ್ವಿಶತಕ ಹಾಗೂ ಶತಕವನ್ನು ಸಿಡಿಸಿದ್ದರು. ಆ ಮೂಲಕ ಅವರು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಇನ್ನು ಪ್ರಥಮ ಇನಿಂಗ್ಸ್‌ನಲ್ಲಿ ಮೊಹಮ್ಮದ್ ಸಿರಾಜ್ 6 ವಿಕೆಟ್ ಸಾಧನೆ ಮಾಡಿದ್ದರೆ, ದ್ವಿತೀಯ ಇನಿಂಗ್ಸ್‌ನಲ್ಲಿ ಆಕಾಶ್ ದೀಪ್ 6 ವಿಕೆಟ್ ಪಡೆದು ಟೀಮ್ ಇಂಡಿಯಾದ ಗೆಲುವಿಗೆ ಬಲ ತುಂಬಿದ್ದರು. ಅಲ್ಲದೆ ಆಕಾಶ್ ದೀಪ್ ಚೊಚ್ಚಲ 10 ವಿಕೆಟ್ ಸಾಧನೆ ಮಾಡಿ ಗಮನ ಸೆಳೆದಿದ್ದರು.

IND vs ENG: ಬುಮ್ರಾ ಇನ್‌, ಪ್ರಸಿಧ್‌ ಔಟ್‌? ಲಾರ್ಡ್ಸ್‌ ಟೆಸ್ಟ್‌ಗೆ ಭಾರತ ತಂಡದಲ್ಲಿ 2 ಬದಲಾವಣೆ!

ಶುಭಮನ್ ಗಿಲ್‌ಗೆ ಆಕಾಶ್ ಚೋಪ್ರಾ ಪ್ರಶಂಸೆ

ತಮ್ಮದೇ ಅಧಿಕೃತ ಯುಟ್ಯೂಬ್ ಚಾನೆಲ್‌ನಲ್ಲಿ ಅಪ್ ಲೋಡ್ ಮಾಡಿರುವ ವಿಡಿಯೊದಲ್ಲಿ ಆಕಾಶ್ ಚೋಪ್ರಾ, ಟೀಮ್ ಇಂಡಿಯಾದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಶುಭಮನ್ ಗಿಲ್, ಮೊಹಮ್ಮದ್ ಸಿರಾಜ್ ಹಾಗೂ ಆಕಾಶ್ ದೀಪ್ ಅವರನ್ನು ಗುಣಗಾನ ಮಾಡಿದ್ದಾರೆ.

"ಈ ಪಂದ್ಯದ ಗೆಲುವು ದಾಖಲೆ ಬರೆಯುವ ಹಾಗೂ ದಾಖಲೆ ಮುರಿಯುವ ಪಂದ್ಯವಾಗಿತ್ತು. ಎಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿ ಇತಿಹಾಸ ಸೃಷ್ಟಿಸಿದೆ. ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ, ಇದೇ ಮೊದಲ ಎರಡೂ ಇನಿಂಗ್ಸ್‌ಗಳಲ್ಲಿ 1000ಕ್ಕೂ ಹೆಚ್ಚು ರನ್ ಗಳಿಸಿ ಇತಿಹಾಸ ಸೃಷ್ಟಿಸಿತ್ತು. ಅಲ್ಲದೆ ಪ್ರಥಮ ಇನಿಂಗ್ಸ್‌ನಲ್ಲಿ ಮೊಹಮ್ಮದ್ ಸಿರಾಜ್ ಹಾಗೂ ದ್ವಿತೀಯ ಇನಿಂಗ್ಸ್‌ನಲ್ಲಿ ಆಕಾಶ್ ದೀಪ್ ಅವರು ತಮ್ಮ ಮಾರಕ ಬೌಲಿಂಗ್ ದಾಳಿಯಿಂದ ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ," ಎಂದು ಟೀಮ್ ಇಂಡಿಯಾದ ಮಾಜಿ ಆರಂಭಿಕ ಹೇಳಿದ್ದಾರೆ.

IND vs ENG: 3ನೇ ಪಂದ್ಯಕ್ಕೂ ಮುನ್ನ ಪಿಚ್ ಕ್ಯುರೇಟರ್​ಗೆ ವಿಶೇಷ ಮನವಿ ಮಾಡಿದ ಇಂಗ್ಲೆಂಡ್

ಇಂಗ್ಲೆಂಡ್‌ಗೆ ಬ್ಯಾಝ್‌ಬಾಲ್ ಕೈಕೊಟ್ಟಿದೆ

ಎಜ್‌ಬಾಸ್ಟನ್‌ನಲ್ಲಿ ನಡೆದಿದ್ದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್‌ನ ಬ್ಯಾಝ್‌ಬಾಲ್ ಸೂತ್ರವು ಟೀಮ್ ಇಂಡಿಯಾದ ಆಲ್‌ರೌಂಡರ್ ಪ್ರದರ್ಶನ ಎದುರು ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆಕಾಶ್ ಚೋಪ್ರಾ ಹೇಳಿದ್ದಾರೆ.

"ಈ ಪಂದ್ಯಕ್ಕೂ ಮುನ್ನ ಎಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ಭಾರತ ತಂಡ ಟೆಸ್ಟ್ ಇತಿಹಾಸದಲ್ಲಿ ಗೆಲುವು ಸಾಧಿಸಿರಲಿಲ್ಲ. ವಿದೇಶಿ ನೆಲಗಳಲ್ಲಿ ಇತ್ತೀಚೆಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾದ ಗೆಲುವನ್ನು ಅವಲೋಕಿಸಿದರೆ, ಅವೆಲ್ಲ ಐತಿಹಾಸಿಕ ಗೆಲುವಾಗಿದೆ. ಈ ಹಿಂದೆ ಕೇಪ್‌ಟೌನ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವು ಸಾಧಿಸಿದ್ದೆವು, ಅದೇ ರೀತಿ ಪರ್ತ್ ಹಾಗೂ ಗಬ್ಬಾದಲ್ಲಿ ಆಸ್ಟ್ರೇಲಿಯಾ ವಿರುದ್ಧ ಜಯ ಕಂಡಿದ್ದೇವೆ. ನಾವು (ಟೀಮ್ ಇಂಡಿಯಾ) ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸದ ಕ್ರೀಡಾಂಗಣದಲ್ಲಿ ಗೆಲುವಿನ ಸಂಭ್ರಮ ಆಚರಿಸಿದ್ದೇವೆ. ಇಂಗ್ಲೆಂಡ್‌ನ ಬ್ಯಾಝ್‌ಬಾಲ್ ಸೂತ್ರವನ್ನು ಸಂಪೂರ್ಣವಾಗಿ ವಿಫಲಗೊಳಿಸಿ ಎದುರಾಳಿ ತಂಡದ ಎದುರು ಗೆಲುವು ಸಾಧಿಸಲು ನಾವು ಅರ್ಹರು ಎಂಬುದನ್ನು ತೋರಿಸುವ ಮೂಲಕ ಸಂಭ್ರಮಿಸಿದ್ದೇವೆ," ಎಂದು ಆಕಾಶ್ ಚೋಪ್ರಾ ತಿಳಿಸಿದ್ದಾರೆ.

ENG vs IND: ಮೂರನೇ ಪಂದ್ಯಕ್ಕೆ ಬುಮ್ರಾ ಲಭ್ಯ; ಖಚಿತಪಡಿಸಿದ ನಾಯಕ ಗಿಲ್‌

ಇಂಗ್ಲೆಂಡ್ ಹಾಗೂ ಭಾರತ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯು 1-1 ಅಂತರದಲ್ಲಿ ಸಮಬಲ ಕಾಯ್ದುಕೊಂಡಿದೆ. ಜುಲೈ 10 ರಂದು ಲಂಡನ್‌ನ ಲಾರ್ಡ್ಸ್ ಅಂಗಣದಲ್ಲಿ ನಡೆಯಲಿರುವ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯಲ್ಲಿ ಮುನ್ನಡೆ ಸಾಧಿಸಲು ಎರಡು ತಂಡಗಳು ಪ್ರಬಲ ಪೈಪೋಟಿ ನೀಡಲು ಸಜ್ಜಾಗುತ್ತಿವೆ.