ಮ್ಯಾಂಚೆಸ್ಟರ್: ಇಲ್ಲಿನ ಓಲ್ಡ್ ಟ್ರಾಫರ್ಟ್ ಕ್ರೀಡಾಂಗಣದಲ್ಲಿ ಇದೀಗ ಆರಂಭವಾಗಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ(IND vs ENG) ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ (Ben Stokes) ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಆ ಮೂಲಕ ಶುಭಮನ್ ಗಿಲ್ (Shubman Gill) ನಾಯಕತ್ವದ ಭಾರತ ತಂಡ ಮೊದಲು ಬ್ಯಾಟ್ ಮಾಡುತ್ತಿದೆ. ಕಳೆದ ಪಂದ್ಯದಲ್ಲಿ ಸೋಲು ಅನುಭವಿಸಿದ್ದ ಭಾರತ ತಂಡ, ಮ್ಯಾಂಚೆಸ್ಟರ್ ಟೆಸ್ಟ್ ಗೆದ್ದ ಸರಣಿಯನ್ನು ಜೀವಂತವಾಗಿರಿಸಿಕೊಳ್ಳಲು ಎದುರು ನೋಡುತ್ತಿದೆ.
ಭಾರತ ತಂಡದ ಪ್ಲೇಯಿಂಗ್ XIನಲ್ಲಿ ಮೂರು ಬದಲಾವಣೆಯನ್ನು ತರಲಾಗಿದೆ. ಔಟ್ ಆಫ್ ಫಾರ್ಮ್ ಕರುಣ್ ನಾಯರ್ ಬದಲಿಗೆ ಸಾಯಿ ಸುದರ್ಶನ್, ಗಾಯಾಳು ನಿತೀಶ್ ಕುಮಾರ್ ರೆಡ್ಡಿ ಬದಲಿಗೆ ಶಾರ್ದುಲ್ ಠಾಕೂರ್ ಹಾಗೂ ಮತ್ತೊರ್ವ ಗಾಯಾಳ ಆಕಾಶ್ ದೀಪ್ ಬದಲಿಗೆ ಅನ್ಶುಲ್ ಕಾಂಬೋಜ್‌ಗೆ ಅವಕಾಶವನ್ನು ನೀಡಲಾಗಿದೆ. ಈ ಬಗ್ಗೆ ಟಾಸ್ ವೇಳೆ ಭಾರತ ತಂಡದ ನಾಯಕ ಶುಭಮನ್ ಗಿಲ್ ಮಾಹಿತಿ ನೀಡಿದ್ದಾರೆ. ಸಾಯಿ ಸುದರ್ಶನ್ ಅವರು ಮೊದಲನೇ ಟೆಸ್ಟ್ ಪಂದ್ಯದಲ್ಲಿ ಆಡಿದ್ದರು. ಆದರೆ, ಅವರಿಂದ ನಿರೀಕ್ಷಿತ ಪ್ರದರ್ಶನ ಮೂಡಿ ಬಂದಿರಲಿಲ್ಲ.
IND vs ENG: ನಾಲ್ಕನೇ ಟೆಸ್ಟ್‌ನಿಂದ ಆಕಾಶ್ ದೀಪ್ ಔಟ್, ಮ್ಯಾಂಚೆಸ್ಟರ್ ಟೆಸ್ಟ್‌ಗೆ ಯುವ ವೇಗಿ!
ಇನ್ನು ಇಂಗ್ಲೆಂಡ್ ತಂಡದ ಪ್ಲೇಯಿಂಗ್ Xiನಲ್ಲಿ ಒಂದು ಬದಲಾವಣೆಯನ್ನು ತರಲಾಗಿದೆ. ಗಾಯಾಳು ಶೋಯೆಬ್ ಬಶೀರ್ ಅವರ ಸ್ಥಾನಕ್ಕೆ ಸ್ಪಿನ್ ಆಲ್‌ರೌಂಡರ್ ಲಿಯಾಮ್ ಡಾಸನ್‌ಗೆ ಅವಕಾಶವನ್ನು ನೀಡಲಾಗಿದೆ. ಇನ್ನುಳಿದಂತೆ ಮೂರನೇ ಟೆಸ್ಟ್ ಆಡಿದ್ದ ಅದೇ ಆಟಗಾರರನ್ನು ಉಳಿಸಿಕೊಳ್ಳಲಾಗಿದೆ.
ಇತ್ತಂಡಗಳ ಪ್ಲೇಯಿಂಗ್ XI
ಭಾರತ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಶುಭಮನ್ ಗಿಲ್(ನಾಯಕ), ರಿಷಭ್ ಪಂತ್(ವಿ.ಕೀ), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಶಾರ್ದುಲ್ ಠಾಕೂರ್, ಅನ್ಶುಲ್ ಕಾಂಬೋಜ್, ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ಇಂಗ್ಲೆಂಡ್: ಝ್ಯಾಕ್ ಕ್ರಾವ್ಲಿ, ಬೆನ್ ಡಕೆಟ್, ಒಲ್ಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮಿ ಸ್ಮಿತ್ (ವಿ.ಕೀ), ಲಿಯಾಮ್ ಡಾಸನ್, ಕ್ರಿಸ್ ವೋಕ್ಸ್, ಬ್ರೈಡೆನ್ ಕಾರ್ಸ್, ಜೋಫ್ರಾ ಆರ್ಚರ್
ಇಂಗ್ಲೆಂಡ್‌ಗೆ 2-1 ಮುನ್ನಡೆ
ಆಡಿದ ಮೂರು ಪಂದ್ಯಗಳ ಬಳಿಕ ಆತಿಥೇಯ ಇಂಗ್ಲೆಂಡ್ ತಂಡ ಟೆಸ್ಟ್ ಸರಣಿಯಲ್ಲಿ 2-1 ಮುನ್ನಡೆಯನ್ನು ಪಡೆದಿದೆ. ಆರಂಭಿಕ ಪಂದ್ಯದಲ್ಲಿ ಇಂಗ್ಲೆಂಡ್ 5 ವಿಕೆಟ್‌ಗಳಿಂದ ಸೋಲು ಅನುಭವಿಸಿತ್ತು. ನಂತರ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 336 ರನ್‌ಗಳಿಂದ ಭರ್ಜರಿ ಗೆಲುವು ಪಡೆದಿತ್ತು. ಆದರೆ, ಲಾರ್ಡ್ಸ್ ಅಂಗಣದಲ್ಲಿ ನಡೆದಿದ್ದ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ 22 ರನ್‌ಗಳಿಂದ ಗೆಲುವು ಪಡೆದಿತ್ತು. ಇದೀಗ ಟೀಮ್ ಇಂಡಿಯಾ ನಾಲ್ಕನೇ ಟೆಸ್ಟ್ ಗೆದ್ದು ಸರಣಿಯನ್ನು ಸಮಬಲ ಕಾಯ್ದುಕೊಳ್ಳಲು ಎದುರು ನೋಡುತ್ತಿದೆ.