IND vs ENG: ಬುಮ್ರಾ ಇನ್, ಪ್ರಸಿಧ್ ಔಟ್? ಲಾರ್ಡ್ಸ್ ಟೆಸ್ಟ್‌ಗೆ ಭಾರತ ತಂಡದಲ್ಲಿ 2 ಬದಲಾವಣೆ!
India's Likely Playing XI for 2nd Test: ಎರಡು ಪಂದ್ಯಗಳ ಅಂತ್ಯಕ್ಕೆ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಆಂಡರ್ಸನ್-ತೆಂಡೂಲ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ 1-1 ಸಮಬಲ ಕಾಯ್ದುಕೊಂಡಿವೆ. ಇದೀಗ ಜುಲೈ 10 ರಂದು ಐತಿಹಾಸಿಕ ಲಾರ್ಡ್ಸ್ ಅಂಗಣದಲ್ಲಿ ನಡೆಯುವ ಮೂರನೇ ಟೆಸ್ಟ್‌ಗೆ ಉಭಯ ತಂಡಗಳು ಸಜ್ಜಾಗುತ್ತಿವೆ. ಅಂದ ಹಾಗೆ ಎರಡನೇ ಟೆಸ್ಟ್ ಗೆಲುವಿನ ಹೊರತಾಗಿಯೂ ಭಾರತ ತಂಡದ ಪ್ಲೇಯಿಂಗ್ XIನಲ್ಲಿ ಎರಡು ಬದಲಾವಣೆಯಾಗುವ ಸಾಧ್ಯತೆ ಇದೆ.

ಭಾರತ ತಂಡದ ಪ್ಲೇಯಿಂಗ್ XIನಲ್ಲಿ ಎರಡು ಬದಲಾವಣೆ ಸಾಧ್ಯತೆ.

ಲಂಡನ್: ಆಂಡರ್ಸನ್-ತೆಂಡೂಲ್ಕರ್ ಟ್ರೋಫಿ ಟೆಸ್ಟ್ ಸರಣಿಯ(IND vs ENG) ಆರಂಭಿಕ ಎರಡು ಪಂದ್ಯಗಳ ಅಂತ್ಯಕ್ಕೆ ಭಾರತ ಹಾಗೂ ಇಂಗ್ಲೆಂಡ್ ತಂಡಗಳು 1-1 ಸಮಬಲ ಕಾಯ್ದುಕೊಂಡಿವೆ. ಮೊದಲನೇ ಪಂದ್ಯದಲ್ಲಿ ಐದು ವಿಕೆಟ್‌ಗಳ ಸೋಲಿನ ಬಳಿಕ ಭಾರತ ತಂಡ (India), ಎರಡನೇ ಟೆಸ್ಟ್ ಪಂದ್ಯದಲ್ಲಿ 336 ರನ್‌ಗಳ ಭರ್ಜರಿ ಗೆಲುವು ಪಡೆಯುವ ಮೂಲಕ ಭರ್ಜರಿ ಕಮ್‌ಬ್ಯಾಕ್ ಮಾಡಿದೆ. ಇದೀಗ ಮೂರನೇ ಟೆಸ್ಟ್ ಪಂದ್ಯ ಜುಲೈ 10ರಂದು ಲಂಡನ್‌ನ ಐತಿಹಾಸಿಕ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಎರಡನೇ ಟೆಸ್ಟ್ ಗೆಲುವಿನ ಹೊರತಾಗಿಯೂ ಶುಭಮನ್ ಗಿಲ್ (Shubman Gill) ನಾಯಕತ್ವದ ಟೀಮ್ ಇಂಡಿಯಾ ಮೂರನೇ ಟೆಸ್ಟ್‌ಗೆ ತನ್ನ ಪ್ಲೇಯಿಂಗ್ XIನಲ್ಲಿ ಎರಡು ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಇದೆ.
ಮೊದಲನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ, ಐದು ಶತಕಗಳನ್ನು ಸಿಡಿಸಿದ ಹೊರತಾಗಿಯೂ ಕೆಳ ಮಧ್ಯಮ ಬ್ಯಾಟಿಂಗ್ ಕ್ರಮಾಂಕದ ವೈಫಲ್ಯದ ಹೊರತಾಗಿಯೂ ಸೋಲು ಅನುಭವಿಸಿತ್ತು. ಆದರೆ, ಎರಡನೇ ಟೆಸ್ಟ್ ಪಂದ್ಯದಲ್ಲಿ ನಾಯಕ ಶುಭಮನ್ ಗಿಲ್ ಅವರ ದ್ವಿಶತಕ ಹಾಗೂ ಮೊಹಮ್ಮದ್ ಸಿರಾಜ್ ಮತ್ತು ಆಕಾಶ್ ದೀಪ್ ಮಾರಕ ಬೌಲಿಂಗ್ ದಾಳಿಯ ನೆರವಿನಿಂದ ಭಾರತ ತಂಡ ದೊಡ್ಡ ಅಂತರದಲ್ಲಿ ಗೆಲುವು ಪಡೆದಿತ್ತು. ಪ್ರಥಮ ಇನಿಂಗ್ಸ್‌ನಲ್ಲಿ 180 ರನ್‌ಗಳ ಮುನ್ನಡೆ ಗಳಸಿದ್ದ ಟೀಮ್ ಇಂಡಿಯಾ, ಇಂಗ್ಲೆಂಡ್‌ಗೆ 608 ರನ್‌ಗಳ ಬೃಹತ್ ಗುರಿಯನ್ನು ನೀಡಿತ್ತು. ಆದರೆ, ಇಂಗ್ಲೆಂಡ್ ತಂಡ ಕೊನೆಯ ಇನಿಂಗ್ಸ್‌ನಲ್ಲಿ 271 ರನ್‌ಗಳ ಅಂತರದಲ್ಲಿ ಸೋಲು ಅನುಭವಿಸಿತ್ತು.
ENG vs IND: ಮೂರನೇ ಪಂದ್ಯಕ್ಕೆ ಬುಮ್ರಾ ಲಭ್ಯ; ಖಚಿತಪಡಿಸಿದ ನಾಯಕ ಗಿಲ್
ಮೂರನೇ ಟೆಸ್ಟ್‌ಗೆ ಭಾರತ ತಂಡದಲ್ಲಿ 2 ಬದಲಾವಣೆ ಸಾಧ್ಯತೆ
ಎರಡನೇ ಟೆಸ್ಟ್ ಪಂದ್ಯದಲ್ಲಿನ ಭರ್ಜರಿ ಗೆಲುವಿನ ಹೊರತಾಗಿಯೂ ಟೀಮ್ ಇಂಡಿಯಾ ಪ್ಲೇಯಿಂಗ್ XIನಲ್ಲಿ ಎರಡು ಬದಲಾವಣೆ ಸಾಧ್ಯತೆ ಇದೆ. ವರ್ಕ್‌ಲೋಡ್ ಮ್ಯಾನೇಜ್‌ಮೆಂಟ್ ಕಾರಣ ಎರಡನೇ ಟೆಸ್ಟ್ ಪಂದ್ಯದಲ್ಲಿ ಬೆಂಚ್ ಕಾದಿದ್ದ ಜಸ್‌ಪ್ರೀತ್ ಬುಮ್ರಾ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಡುವುದು ಬಹುತೇಕ ಖಚಿತವಾಗಿದೆ. ಅದರಂತೆ ನಾಯಕ ಶುಭಮನ್ ಗಿಲ್ ಖಚಿತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಸಿಧ್ ಕೃಷ್ಣ ತಮ್ಮ ಸ್ಥಾನವನ್ನು ಬುಮ್ರಾಗೆ ಬಿಟ್ಟುಕೊಡಲಿದ್ದಾರೆ. ಆ ಮೂಲಕ ಮೊಹಮ್ಮದ್ ಸಿರಾಜ್ ಹಾಗೂ ಆಕಾಶ ದೀಪ್ ಅವರ ಜೊತೆಗೆ ಬುಮ್ರಾ ಬಂದರೆ ಬಾರತ ತಂಡದ ವೇಗದ ಬೌಲಿಂಗ್ ವಿಭಾಗ ಇನ್ನಷ್ಟು ಬಲಿಷ್ಠವಾಗಲಿದೆ.
ವಾಷಿಂಗ್ಟನ್ ಸುಂದರ್ ಸ್ಥಾನಕ್ಕೆ ಕುಲ್ದೀಪ್ ಯಾದವ್?
ಮೂರನೇ ಟೆಸ್ಟ್ ಪಂದ್ಯದಲ್ಲಿ ಪೂರ್ಣ ಪ್ರಮಾಣದ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಅವರನ್ನು ಆಡಿಸುವ ಸಾಧ್ಯತೆ ಇದೆ. ಸುಂದರ್ ಎರಡನೇ ಟೆಸ್ಟ್‌ನಲ್ಲಿ ಯೋಗ್ಯ ಪ್ರದರ್ಶನವನ್ನು ತೋರಿದ್ದರು. ಆದರೂ ಅವರ ಬದಲು ಟೀಮ್ ಮ್ಯಾನೇಜ್‌ಮೆಂಟ್ ಕುಲ್ದೀಪ್ ಅವಕಾಶ ನೀಡಲು ಒಲವು ಹೊಂದಿದೆ. ಏಕೆಂದರೆ ಭಾರತ ತಂಡದ ಅಗ್ರ ಕ್ರಮಾಂಕ ಉತ್ತಮ ಪ್ರದರ್ಶನವನ್ನು ತೋರುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಪಿನ್ ವಿಭಾಗವನ್ನು ಬಲಿಷ್ಠಗೊಳಿಸಿಕೊಳ್ಳಲು ಭಾರತ ಎದುರು ನೋಡುತ್ತಿದೆ.
IND vs ENG: ಎಡ್ಜ್‌ಬಾಸ್ಟನ್‌ನಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಭಾರತ
ಮೂರನೇ ಟೆಸ್ಟ್‌ಗೆ ಭಾರತದ ಸಂಭಾವ್ಯ ಪ್ಲೇಯಿಂಗ್ XI
ಯಶಸ್ವಿ ಜೈಸ್ವಾಲ್ (ಓಪನರ್)
ಕೆಎಲ್ ರಾಹುಲ್ (ಓಪನರ್)
ಕರುಣ್ ನಾಯರ್ (ಬ್ಯಾಟ್ಸ್‌ಮನ್)
ಶುಭಮನ್ ಗಿಲ್ (ನಾಯಕ, ಬ್ಯಾಟ್ಸ್‌ಮನ್)
ರಿಷಭ್ ಪಂತ್ (ವಿ.ಕೀ, ಬ್ಯಾಟ್ಸ್‌ಮನ್)
ನಿತೀಶ್ ಕುಮಾರ್ ರೆಡ್ಡಿ (ಆಲ್‌ರೌಂಡರ್)
ರವೀಂದ್ರ ಜಡೇಜಾ (ಆಲ್‌ರೌಂಡರ್)
ಕುಲ್ದೀಪ್ ಯಾದವ್ (ಸ್ಪಿನ್ನರ್)
ಜಸ್‌ಪ್ರೀತ್ ಬುಮ್ರಾ (ವೇಗದ ಬೌಲರ್)
ಮೊಹಮ್ಮದ್ ಸಿರಾಜ್ (ವೇಗದ ಬೌಲರ್)
ಆಕಾಶ್ ದೀಪ್ (ವೇಗದ ಬೌಲರ್)