ʻಜಸ್‌ಪ್ರೀತ್ ಬುಮ್ರಾ or ಜೋಫ್ರಾ ಆರ್ಚರ್ʼ: ಲಾರ್ಡ್ಸ್ ಟೆಸ್ಟ್‌ನಲ್ಲಿ ಮಿಂಚುವವರು ಯಾರು?
ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಜುಲೈ 10 ರಂದು ಲಂಡನ್‌ನ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಆರಂಭವಾಗುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಕಾದಾಟ ನಡೆಸಲಿವೆ. ಈ ಪಂದ್ಯದಲ್ಲಿ ಎರಡೂ ತಂಡಗಳ ಪರ ಜಸ್‌ಪ್ರೀತ್ ಬುಮ್ರಾ ಹಾಗೂ ಜೋಫ್ರಾ ಆರ್ಚರ್ ಕಣಕ್ಕೆ ಇಳಿಯಲಿದ್ದು, ಇವರ ನಡುವಣ ಜಿದ್ದಾಜಿದ್ದಿ ತೀವ್ರ ಕುತೂಹಲ ಕೆರಳಿಸಿದೆ.

ಲಾರ್ಡ್ಸ್ ಟೆಸ್ಟ್‌ನಲ್ಲಿ ಆಡಲು ಜಸ್‌ಪ್ರೀತ್ ಬುಮ್ರಾ, ಜೋಫ್ರಾ ಆರ್ಚರ್ ಸಜ್ಜು.

ನವದೆಹಲಿ: ಭಾರತ ಮತ್ತು ಇಂಗ್ಲೆಂಡ್ ನಡುವಣ ಐದು ಟೆಸ್ಟ್ ಪಂದ್ಯಗಳ ಸರಣಿ (IND vs ENG) ಅತ್ಯಂತ ರೋಮಾಂಚಕವಾಗಿದೆ. ಹೆಡಿಂಗ್ಲೆಯಲ್ಲಿ ನಡೆದಿದ್ದ ಮೊದಲ ಟೆಸ್ಟ್ ಪಂದ್ಯವನ್ನು ಸೋತ ನಂತರ, ಬರ್ಮಿಂಗ್‌ಹ್ಯಾಮ್‌ನಲ್ಲಿ ಗೆಲುವು ದಾಖಲಿಸುವ ಮೂಲಕ ಟೀಮ್ ಇಂಡಿಯಾ(India) ಅದ್ಭುತವಾಗಿ ಕಮ್‌ಬ್ಯಾಕ್ ಮಾಡಿದೆ. ಸರಣಿಯ ಮೂರನೇ ಪಂದ್ಯ ಜುಲೈ 10 ರಂದು ಗುರುವಾರ ಲಾರ್ಡ್ಸ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯವನ್ನು ಗೆದ್ದ ತಂಡ ಸರಣಿಯಲ್ಲಿ ಮುನ್ನಡೆ ಸಾಧಿಸುತ್ತದೆ. ಈ ಪಂದ್ಯದ ವಿಶೇಷವೆಂದರೆ ಎರಡೂ ತಂಡಗಳ ಅತ್ಯುತ್ತಮ ಬೌಲರ್‌ಗಳು ಕಣಕ್ಕೆ ಇಳಿಯಲಿದ್ದಾರೆ.
ಇಂಗ್ಲೆಂಡ್ ತಂಡವು ಜೋಫ್ರಾ ಆರ್ಚರ್ ಅವರನ್ನು ತನ್ನ ಪ್ಲೇಯಿಂಗ್ XIಗೆ ಸೇರಿಸಿಕೊಂಡಿದೆ. ಇದೇ ವೇಳೆ ಮೊದಲ ಟೆಸ್ಟ್ ಪಂದ್ಯದಲ್ಲಿ ಅದ್ಭುತವಾಗಿ ಬೌಲ್ ಮಾಡಿದ್ದ ಜಸ್‌ಪ್ರೀತ್ ಬುಮ್ರಾ ಮೂರನೇ ಟೆಸ್ಟ್ ಪಂದ್ಯದಲ್ಲೂ ಆಡಲಿದ್ದಾರೆ. ಈ ಇಬ್ಬರೂ ವೇಗಿಗಳು ತಮ್ಮ ತಂಡಗಳಿಗೆ ತಾವು ಪಂದ್ಯ ವಿಜೇತರೆಂದು ಸಾಬೀತುಪಡಿಸಬಹುದು. ಈ ಹಿನ್ನೆಲೆಯಲ್ಲಿ ಲಾರ್ಡ್ಸ್‌ನಲ್ಲಿ ಇವರಿಬ್ಬರ ಕದನವನ್ನು ಕಣ್ತುಂಬಿಸಿಕೊಳ್ಳಲು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.
IND vs ENG: ಲಾರ್ಡ್ಸ್ ಟೆಸ್ಟ್‌ನಲ್ಲಿ ಕುಲ್ದೀಪ್ ಯಾದವ್‌ಗೆ ಅವಕಾಶ ನೀಡಬೇಕೆಂದ ಕೆವಿನ್ ಪೀಟರ್ಸನ್!
ಭಾರತದ ವಿರುದ್ಧ ಜೋಫ್ರಾ ಆರ್ಚರ್ ಟೆಸ್ಟ್ ದಾಖಲೆ
ಜೋಫ್ರಾ ಆರ್ಚರ್ ಇದುವರೆಗೆ ಭಾರತದ ವಿರುದ್ಧ ಕೇವಲ ಎರಡು ಟೆಸ್ಟ್ ಪಂದ್ಯಗಳನ್ನು ಮಾತ್ರ ಆಡಿದ್ದಾರೆ. ಈ ಎರಡೂ ಪಂದ್ಯಗಳು ಭಾರತದಲ್ಲಿ ನಡೆದಿವೆ. ಈ ಎರಡು ಟೆಸ್ಟ್ ಪಂದ್ಯಗಳ ಮೂರು ಇನಿಂಗ್ಸ್‌ಗಳಲ್ಲಿ ಅವರು ಒಟ್ಟು 4 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಭಾರತದ ವಿರುದ್ಧ ಅವರ ಅತ್ಯುತ್ತಮ ಬೌಲಿಂಗ್ ಪ್ರದರ್ಶನವೆಂದರೆ 75 ರನ್‌ಗಳಿಗೆ 2 ವಿಕೆಟ್‌ಗಳು. ಆದಾಗ್ಯೂ, ಈ ಪಂದ್ಯಗಳು ಇಂಗ್ಲೆಂಡ್‌ನ ಪಿಚ್‌ಗಳಿಗಿಂತ ಸಾಕಷ್ಟು ಭಿನ್ನವಾಗಿರುವ ಭಾರತೀಯ ಪಿಚ್‌ಗಳಲ್ಲಿ ನಡೆದಿವೆ ಎಂಬುದನ್ನು ಗಮನಿಸುವುದು ಮುಖ್ಯ.
ಇಂಗ್ಲೆಂಡ್‌ನಲ್ಲಿ ವೇಗದ ಬೌಲರ್‌ಗಳಿಗೆ ಅನುಕೂಲಕರವಾದ ಪಿಚ್‌ಗಳಲ್ಲಿ ಆರ್ಚರ್ ತುಂಬಾ ಅಪಾಯಕಾರಿ ಎಂದು ಎಲ್ಲರಿಗೂ ಗೊತ್ತಿದೆ. ಅವರು 13 ಟೆಸ್ಟ್ ಪಂದ್ಯಗಳಲ್ಲಿ 31.04ರ ಸರಾಸರಿ ಹಾಗೂ 2.99 ರ ಎಕಾನಮಿಯಲ್ಲಿ 42 ವಿಕೆಟ್‌ಗಳನ್ನು ಪಡೆದಿದ್ದಾರೆ. ತವರು ಮೈದಾನದಲ್ಲಿ ಅವರು 8 ಟೆಸ್ಟ್ ಪಂದ್ಯಗಳಲ್ಲಿ 30 ವಿಕೆಟ್‌ಗಳನ್ನು ಪಡೆದಿದ್ದಾರೆ ಮತ್ತು ಲಾರ್ಡ್ಸ್‌ನಲ್ಲಿ ಅವರು ಕೇವಲ ಒಂದು ಪಂದ್ಯದಲ್ಲಿ 5 ವಿಕೆಟ್‌ಗಳನ್ನು ಕಿತ್ತಿದ್ದಾರೆ. ಜೋಫ್ರಾ ಆರ್ಚರ್ 4 ವರ್ಷಗಳ ನಂತರ ಟೆಸ್ಟ್ ಕ್ರಿಕೆಟ್‌ಗೆ ಮರಳುತ್ತಿರುವುದರಿಂದ, ಅವರು ಭಾರತದ ವಿರುದ್ಧ ಹೇಗೆ ಆಡುತ್ತಾರೆ ಎಂಬುದನ್ನು ನೋಡಲು ಆಸಕ್ತಿದಾಯಕವಾಗಿರುತ್ತದೆ.
IND vs ENG: ಆಡಮ್ ಗಿಲ್‌ಕ್ರಿಸ್ಟ್‌ಗೆ ರಿಷಭ್ ಪಂತ್ ಹೋಲಿಕೆ ಇಲ್ಲ ಎಂದ ಆರ್ ಅಶ್ವಿನ್!
ಇಂಗ್ಲೆಂಡ್ ವಿರುದ್ಧ ಜಸ್‌ಪ್ರೀತ್ ಬುಮ್ರಾ ದಾಖಲೆ
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯಗಳಲ್ಲಿ ಜಸ್‌ಪ್ರೀತ್ ಬುಮ್ರಾ ಉತ್ತಮ ದಾಖಲೆಯನ್ನು ಹೊಂದಿದ್ದಾರೆ. 2018 ಮತ್ತು 2024 ರ ನಡುವೆ ಅವರು ಇಂಗ್ಲೆಂಡ್ ವಿರುದ್ಧದ 14 ಟೆಸ್ಟ್ ಪಂದ್ಯಗಳಲ್ಲಿ 22.16ರ ಸರಾಸರಿಯಲ್ಲಿ 60 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಇಂಗ್ಲೆಂಡ್‌ನಲ್ಲಿ ಅವರ ಪ್ರದರ್ಶನವನ್ನು ನೋಡಿದರೆ, ಅವರು 9 ಟೆಸ್ಟ್ ಪಂದ್ಯಗಳಲ್ಲಿ 26.27ರ ಸರಾಸರಿಯಲ್ಲಿ 37 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಇದರಲ್ಲಿ ಎರಡು ಬಾರಿ ಐದು ವಿಕೆಟ್ ಸಾಧನೆ ಮಾಡಿದ್ದಾರೆ. ಹಾಗಾಗಿ ಇಂಗ್ಲೆಂಡ್ ವಿರುದ್ಧದ ಲಾರ್ಡ್ಸ್ ಟೆಸ್ಟ್‌ನಲ್ಲಿ ಜಸ್‌ಪ್ರೀತ್ ಬುಮ್ರಾ ಇಂಗ್ಲೆಂಡ್ ಭೀತಿ ಹುಟ್ಟಿಸಿದ್ದಾರೆ.