ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IND vs ENG: ಸಚಿನ್ , ದ್ರಾವಿಡ್‌ರ ದೊಡ್ಡ ದಾಖಲೆ ಮುರಿಯುವ ಸನಿಹದಲ್ಲಿ ಜೋ ರೂಟ್!

Joe Root on course to break Sachin Record: ಲೀಡ್ಸ್‌ನ ಹೆಡಿಂಗ್ಲ್ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ವಿರುದ್ಧ ಇಂಗ್ಲೆಂಡ್ 5 ವಿಕೆಟ್ ಗೆಲುವು ಸಾಧಿಸಿದೆ. ದ್ವಿತೀಯ ಇನಿಂಗ್ಸ್‌ನಲ್ಲಿ ಅರ್ಧಶತಕ (53* ರನ್) ಸಿಡಿಸಿದ ಜೋರೂಟ್ ತಮ್ಮ ಅರ್ಧಶತಕಗಳ ಸಂಖ್ಯೆಯನ್ನು 66ಕ್ಕೆ ಹೆಚ್ಚಿಸಿಕೊಂಡಿದ್ದಾರೆ. ಇದೀಗ ಅವರು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿಯುವ ಸನಿಹದಲ್ಲಿದ್ದಾರೆ.

IND vs ENG: ದಿಗ್ಗಜರ ದಾಖಲೆ ಮುರಿಯುವ ಸನಿಹದಲ್ಲಿ ಜೋ ರೂಟ್‌!

ಸಚಿನ್‌-ದ್ರಾವಿಡ್‌ ದಾಖಲೆ ಮುರಿಯುವ ಸನಿಹದಲ್ಲಿ ಜೋ ರೂಟ್‌.

Profile Ramesh Kote Jun 25, 2025 7:44 PM

ನವದೆಹಲಿ: ಇಂಗ್ಲೆಂಡ್ ತಂಡದ ಸ್ಟಾರ್ ಆಟಗಾರ ಜೋ ರೂಟ್ (Joe Root)ಅವರು ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ (Sachin Tendulkar) ಹೆಸರಿನಲ್ಲಿರುವ ಅರ್ಧಶತಕಗಳ ದಾಖಲೆ ಮುರಿಯುವ ಸನಿಹದಲ್ಲಿದ್ದಾರೆ. ಟೀಮ್ ಇಂಡಿಯಾದ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ 53* ರನ್ ಗಳಿಸಿ ತಂಡದ 5 ವಿಕೆಟ್ ಗೆಲುವಿಗೆ ನೆರವು ನೀಡಿದ್ದರು. 34ರ ವಯಸ್ಸಿನ ಆಟಗಾರ ತಮ್ಮ ಟೆಸ್ಟ್ ಅರ್ಧಶತಕವನ್ನು 66ಕ್ಕೆ ಹೆಚ್ಚಿಸಿಕೊಂಡಿದ್ದು, ಪ್ರಸಕ್ತ ಸರಣಿಯಲ್ಲಿ ಇನ್ನು ಮೂರು 50ಕ್ಕೂ ಹೆಚ್ಚು ರನ್ ಗಳಿಸಿದರೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿರುವ ಅರ್ಧಶತಕಗಳ ದಾಖಲೆಯನ್ನು ಮುರಿಯಲಿದ್ದಾರೆ.

ಲೀಡ್ಸ್‌ನಲ್ಲಿ ಭಾರತ ವಿರುದ್ಧ ನಡೆದಿದ್ದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ಬೇಗ ವಿಕೆಟ್‌ ಒಪ್ಪಿಸಿದ್ದ ಜೋ ರೂಟ್, ದ್ವಿತೀಯ ಇನಿಂಗ್ಸ್‌ನಲ್ಲಿ ತಾಳ್ಮೆಯುತ ಬ್ಯಾಟಿಂಗ್ ಪ್ರದರ್ಶನ ತೋರಿ ತಂಡವನ್ನು ಗೆಲುವಿನ ದಡ ಸೇರಿಸಿದ್ದರು. ದ್ವಿತೀಯ ಇನಿಂಗ್ಸ್‌ನಲ್ಲಿ ಇಂಗ್ಲೆಂಡ್ 371 ರನ್‌ಗಳ ಗುರಿಯನ್ನು ಪಡೆದಿತ್ತು. ಬೆನ್ ಡೆಕಟ್ ಹಾಗೂ ಝ್ಯಾಕ್‌ ಕ್ರಾವ್ಲಿ ಮೊದಲನೇ ವಿಕೆಟ್ ಗೆ 188 ರನ್ ಜೊತೆಯಾಟವಾಡಿದ್ದರು. ಆದರೆ, ಸತತ ಎರಡು ವಿಕೆಟ್ ಕಳೆದುಕೊಂಡು ಇಂಗ್ಲೆಂಡ್‌ ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ತಂಡಕ್ಕೆ ಆಸರೆಯಾದ ಜೋ ರೂಟ್ 84 ಎಸೆತಗಳಲ್ಲಿ ಅಜೇಯ 53 ರನ್ ಬಾರಿಸಿ ತಂಡಕ್ಕೆ 5 ವಿಕೆಟ್ ಗೆಲುವು ತಂದುಕೊಟ್ಟಿದ್ದರು.

IND vs ENG: 148 ವರ್ಷಗಳ ಟೆಸ್ಟ್‌ ಕ್ರಿಕೆಟ್‌ ಇತಿಹಾಸದಲ್ಲಿ ಅನಗತ್ಯ ದಾಖಲೆ ಬರೆದ ಭಾರತ

ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಅರ್ಧಶತಕ ಗಳಿಸಿದ ಬ್ಯಾಟರ್ಸ್

* 68- ಸಚಿನ್ ತೆಂಡೂಲ್ಕರ್ - ಭಾರತ

* 66- ಜೋ ರೂಟ್ - ಇಂಗ್ಲೆಂಡ್

* 66- ಶಿವನಾರಾಯಣ್ ಚಂದ್ರಪಾಲ್ - ವೆಸ್ಟ್ ಇಂಡೀಸ್

* 63- ರಾಹುಲ್ ದ್ರಾವಿಡ್ - ಭಾರತ

* 63- ಆಲನ್ ಬಾರ್ಡರ್ - ಆಸ್ಟ್ರೇಲಿಯಾ

* 62- ರಿಕಿ ಪಾಂಟಿಂಗ್ - ಆಸ್ಟ್ರೇಲಿಯಾ

ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್

ಪ್ರಸ್ತುತ ಸಕ್ರಿಯ ಟೆಸ್ಟ್ ಕ್ರಿಕೆಟ್ ಆಟಗಾರರ ಸಾಲಿನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಆಗಿ ಜೋ ರೂಟ್ (13087 ರನ್) ಗುರುತಿಸಿಕೊಂಡಿದ್ದಾರೆ. ಆಸ್ಟ್ರೇಲಿಯಾದ ಸ್ಟೀವನ್ ಸ್ಮಿತ್ (10350 ರನ್) ನಂತರದ ಸ್ಥಾನದಲ್ಲಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿರುವ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ (15921 ರನ್) ಹೆಸರಿನಲ್ಲಿದೆ. ಕ್ರಿಕೆಟ್‌ ದೇವರ ಈ ದಾಖಲೆಯನ್ನು ಮುರಿಯಲು ಜೋ ರೂಟ್‌ಗೆ 2834 ರನ್‌ಗಳ ಅಗತ್ಯವಿದೆ. ಈ ದಾಖಲೆ ಮುರಿಯುವತ್ತ ರೂಟ್ ಗಮನಹರಿಸಿದ್ದಾರೆ. ರಿಕಿ ಪಾಂಟಿಂಗ್ (13,378), ಜಾಕ್ ಕಾಲಿಸ್ (13289), ರಾಹುಲ್ ದ್ರಾವಿಡ್ (13,288 ರನ್), ಜೋ ರೂಟ್‌ಗಿಂತ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ.

IND vs ENG: ಭಾರತ ತಂಡದ ಸೋಲಿಗೆ ಪ್ರಮುಖ ಕಾರಣಗಳು ಹೀಗಿದೆ

ರಾಹುಲ್ ದ್ರಾವಿಡ್ ದಾಖಲೆ ಮುರಿಯುವತ್ತ ರೂಟ್

ಮೊದಲನೇ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಅಲ್ಲದೆ ಕ್ಷೇತ್ರ ರಕ್ಷಣೆಯಲ್ಲೂ ಗಮನ ಸೆಳೆದ ಜೋ ರೂಟ್, ಎರಡು ಕ್ಯಾಚ್ ಪಡೆದಿದ್ದಾರೆ. ಆ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಒಟ್ಟು 210 ಕ್ಯಾಚ್‌ಗಳ ಮೂಲಕ ರಾಹುಲ್ ದ್ರಾವಿಡ್ ಅವರ ದಾಖಲೆ ಸರಿಗಟ್ಟಿದ್ದಾರೆ. ಬರ್ಮಿಂಗ್‌ಹ್ಯಾಮ್‌ನಲ್ಲಿ ಜೂನ್ 2 ರಂದು ಆರಂಭವಾಗಲಿರುವ ಎರಡನೇ ಟೆಸ್ಟ್‌ ಪಂದ್ಯದಲ್ಲಿ ರೂಟ್‌ ಒಂದು ಕ್ಯಾಚ್‌ ಪಡೆದರೆ, ದ್ರಾವಿಡ್ ಅವರ ದಾಖಲೆಯನ್ನು ಮುರಿಯಲಿದ್ದಾರೆ.