ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IND vs ENG: ಕುಲ್ದೀಪ್‌ ಯಾದವ್‌ಗೆ ಸ್ಥಾನ ನೀಡದ ಬಗ್ಗೆ ಸೌರವ್‌ ಗಂಗೂಲಿ ಪ್ರಶ್ನೆ!

ಇಂಗ್ಲೆಂಡ್‌ ವಿರುದ್ಧ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಚೈನಾಮನ್‌ ಸ್ಪಿನ್ನರ್‌ ಕುಲ್ದೀಪ್‌ ಯಾದವ್‌ಗೆ ಸ್ಥಾನ ನೀಡದ ಬಗ್ಗೆ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಮಾಜಿ ಅಧ್ಯಕ್ಷ ಸೌರವ್‌ ಗಂಗೂಲಿ ಪ್ರಶ್ನೆ ಮಾಡಿದ್ದಾರೆ. ಭಾರತ ತಂಡದ ಪ್ಲೇಯಿಂಗ್‌ XIನಲ್ಲಿ ರವೀಂದ್ರ ಜಡೇಜಾ ಜೊತೆಗೆ ಮತ್ತೊಬ್ಬ ಸ್ಪಿನ್‌ ಆಲ್‌ರೌಂಡರ್‌ ವಾಷಿಂಗ್ಟನ್‌ ಸುಂದರ್‌ಗೆ ಅವಕಾಶ ನೀಡಲಾಗಿದೆ.

ಕುಲ್ದೀಪ್‌ ಯಾದವ್‌ಗೆ ಸ್ಥಾನ ನೀಡದ ಬಗ್ಗೆ ಸೌರವ್‌ ಗಂಗೂಲಿ ಪ್ರಶ್ನೆ!

ಕುಲ್ದೀಪ್‌ ಯಾದವ್‌ಗೆ ಅವಕಾಶ ನೀಡದ ಬಗ್ಗೆ ಸೌರವ್‌ ಗಂಗೂಲಿ ಬೇಸರ.

Profile Ramesh Kote Jul 3, 2025 5:05 PM

ಬರ್ಮಿಂಗ್‌ಹ್ಯಾಮ್‌: ಇಂಗ್ಲೆಂಡ್‌ ವಿರುದ್ಧ ಇಲ್ಲಿನ ಎಜ್‌ಬಾಸ್ಟನ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ ಪಂದ್ಯದಲ್ಲಿ (IND vs ENG) ಭಾರತ ತಂಡದ ಪ್ಲೇಯಿಂಗ್‌ XI ಬಗ್ಗೆ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಮಾಜಿ ಅಧ್ಯಕ್ಷ ಸೌರವ್‌ ಗಂಗೂಲಿ (Sourav Ganguly) ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಅದರಲ್ಲಿಯೂ ವಿಶೇಷವಾಗಿ ಸ್ಪಿನ್‌ ಸ್ಪೆಷಲಿಸ್ಟ್‌ ಸ್ಪಿನ್ನರ್‌ ಆಡಿಸಬೇಕಿತ್ತು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ವಾಷಿಂಗ್ಟನ್‌ ಸುಂದರ್‌ ಅವರ ಬದಲು ಪೂರ್ಣ ಪ್ರಮಾಣದ ಸ್ಪಿನ್ನರ್‌ ಆಗಿ ಕುಲ್ದೀಪ್‌ ಯಾದವ್‌ (Kuldeep Yadav) ಅವರನ್ನು ಆಡಿಸಬೇಕಿತ್ತು ಎಂದಿದ್ದಾರೆ.

ಎಜ್‌ಬಾಸ್ಟನ್‌ ಟೆಸ್ಟ್‌ಗೆ ಭಾರತ ತಂಡದ ಪ್ಲೇಯಿಂಗ್‌ XIನಲ್ಲಿ ಮೂರು ಬದಲಾವಣೆಯನ್ನು ತರಲಾಗಿದೆ. ಸಾಯಿ ಸುದರ್ಶನ್‌, ಜಸ್‌ಪ್ರೀತ್‌ ಬುಮ್ರಾ ಹಾಗೂ ಶಾರ್ದುಲ್‌ ಠಾಕೂರ್‌ ಅವರನ್ನು ಕೈ ಬಿಡಲಾಗಿದೆ. ಇವರ ಸ್ಥಾನಗಳಿಗೆ ನಿತೀಶ್‌ ಕುಮಾರ್‌ ರೆಡ್ಡಿ, ವಾಷಿಂಗ್ಟನ್‌ ಸುಂದರ್‌ ಹಾಗೂ ಆಕಾಶ್‌ ದೀಪ್‌ಗೆ ಸ್ಥಾನವನ್ನು ನೀಡಲಾಗಿದೆ. ಅಂದ ಹಾಗೆ ಮೊದಲನೇ ಟೆಸ್ಟ್‌ ಪಂದ್ಯದ ಬಳಿಕ ಬರ್ಮಿಂಗ್‌ಹ್ಯಾಮ್‌ನಲ್ಲಿ ಕುಲ್ದೀಪ್‌ ಯಾದವ್‌ಗೆ ಅವಕಾಶ ನೀಡಬಹುದೆಂದು ನಿರೀಕ್ಷೆ ಮಾಡಲಾಗಿತ್ತು. ಆದರೆ, ಟೀಮ್‌ ಮ್ಯಾನೇಜ್‌ಮೆಂಟ್‌ ಕುಲ್ದೀಪ್‌ ಯಾದವ್‌ ಬದಲು ವಾಷಿಂಗ್ಟನ್‌ ಸುಂದರ್‌ಗೆ ಸ್ಥಾನವನ್ನು ಕಲ್ಪಿಸಲಾಗಿದೆ.

IND vs ENG: ʻಎಜ್‌ಬಾಸ್ಟನ್‌ ಸ್ಟೇಡಿಯಂ ಬೌಂಡರಿ ಚಿಕ್ಕದುʼ-ಸ್ಟೀವನ್‌ ಫಿನ್‌ ಆರೋಪ!

ಸೋನಿ ಸ್ಪೋರ್ಟ್ಸ್‌ ಜೊತೆ ಮಾತನಾಡಿದ ಸೌರವ್‌ ಗಂಗೂಲಿ, ಭಾರತ ತಂಡದ ಪ್ಲೇಯಿಂಗ್‌ XIನಲ್ಲಿ ಇಬ್ಬರು ಉತ್ತಮ ಸ್ಪಿನ್ನರ್‌ಗಳಿದ್ದಾರೆಂದು ನನಗೆ ಅನಿಸುತ್ತಿಲ್ಲ. ಆ ಮೂಲಕ ಕುಲ್ದೀಪ್‌ ಯಾದವ್‌ ಅವರನ್ನು ಭಾರತ ತಂಡದ ಪ್ಲೇಯಿಂಗ್‌ XIನಿಂದ ಹೊರಗಿಟ್ಟ ಬಗ್ಗೆ ಗಂಗೂಲಿ ಬೇಸರ ವ್ಯಕ್ತಪಡಿಸಿದ್ದಾರೆ.

"ಭಾರತ ತಂಡ ತನ್ನ ಅತ್ಯುತ್ತಮ ಇಬ್ಬರು ಸ್ಪಿನ್ನರ್‌ಗಳೊಂದಿಗೆ ಆಡುತ್ತಿದೆ ಎಂದು ನನಗೆ ಅನಿಸುತ್ತಿಲ್ಲ, ಇಂಗ್ಲೆಂಡ್‌ ಮೊದಲ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ, ಇದರ ಬಗ್ಗೆ ನನಗೆ ಅಚ್ಚರಿಯಾಗಿದೆ. ಈ ಬಾರಿ ಇಂಗ್ಲೆಂಡ್‌ನಲ್ಲಿ ಟೆಸ್ಟ್‌ ಸರಣಿಯನ್ನು ಗೆಲ್ಲಲು ಭಾರತ ತಂಡಕ್ಕೆ ಉತ್ತಮ ಅವಕಾಶವಿದೆ. ದೊಡ್ಡ ಮೊತ್ತವನ್ನು ಕಲೆ ಹಾಕಿದರೆ, ಭಾರತ ತಂಡಕ್ಕೆ ಇದು ನೆರವಾಗಲಿದೆ," ಎಂದು ಸೌರವ್‌ ಗಂಗೂಲಿ ತಿಳಿಸಿದ್ದಾರೆ.

IND vs ENG: ಎಜ್‌ಬಾಸ್ಟನ್‌ ಟೆಸ್ಟ್‌ ಪಂದ್ಯದ ಅಂಪೈರಿಂಗ್‌ ಬಗ್ಗೆ ಕ್ರಿಸ್‌ ವೋಕ್ಸ್‌ ಅಸಮಾಧಾನ!

ಕುಲ್ದೀಪ್‌ ಯಾದವ್‌ರನ್ನು ಕೈ ಬಿಟ್ಟ ಬಗ್ಗೆ ಗವಾಸ್ಕರ್‌ ಪ್ರಶ್ನೆ

ಸೋನಿ ಸ್ಪೋರ್ಟ್ಸ್‌ ಜೊತೆ ಸಂವಾದದಲ್ಲಿಯೂ ಕುಲ್ದೀಪ್‌ ಯಾದವ್‌ಗೆ ಅವಕಾಶ ನೀಡದ ಬಗ್ಗೆ ಬ್ಯಾಟಿಂಗ್‌ ದಿಗ್ಗಜ ಸುನೀಲ್‌ ಗವಾಸ್ಕರ್‌ ಕೂಡ ಪ್ರಶ್ನೆ ಮಾಡಿದ್ದಾರೆ. ಪಿಚ್‌ನಲ್ಲಿ ತಿರುವು ಇದ್ದರೂ ಕುಲ್ದೀಪ್‌ ಯಾದವ್‌ಗೆ ಸ್ಥಾನ ನೀಡದ ಬಗ್ಗೆ ಮಜಿ ನಾಯಕ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

"ಎಜ್‌ಬಾಸ್ಟನ್‌ನಲ್ಲಿ ಸ್ವಲ್ಪ ತಿರುವು ಇದೆ ಎಂದು ಎಲ್ಲರೂ ಹೇಳುತ್ತಿದ್ದಾರೆ, ಆದರೂ ಕುಲ್ದೀಪ್‌ ಯಾದಾವ್‌ಗೆ ತಂಡದ ಪ್ಲೇಯಿಂಗ್‌ Xiನಲ್ಲಿ ಸ್ಥಾನ ನೀಡದ ಬಗ್ಗೆ ತುಂಬಾ ನಿರಾಶದಾಯಕವಾಗಿದೆ," ಎಂದು ಸುನೀಲ್‌ ಗವಾಸ್ಕರ್‌ ಹೇಳಿದ್ದಾರೆ.

ಮ್ಮ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ನೀವು ನಿರೀಕ್ಷಿಸಿದಷ್ಟು ರನ್‌ಗಳನ್ನು ಗಳಿಸದಿದ್ದರೆ, ಏಳನೇ ಕ್ರಮಾಂಕದಲ್ಲಿ ವಾಷಿಂಗ್ಟನ್ ಸುಂದರ್‌ ಅಥವಾ ಎಂಟನೇ ಕ್ರಮಾಂಕದಲ್ಲಿ ನಿತೀಶ್ ರೆಡ್ಡಿ ಅದನ್ನು ಸರಿಪಡಿಸುವುದಿಲ್ಲ, ಏಕೆಂದರೆ ಮೊದಲ ಟೆಸ್ಟ್‌ನಲ್ಲಿ ನಿಮ್ಮನ್ನು ವಿಫಲಗೊಳಿಸಿದ ಬ್ಯಾಟ್ಸ್‌ಮನ್‌ಗಳು ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಅಲ್ಲ. ನೀವು 830 ರನ್ ಗಳಿಸಿದ್ದೀರಿ. ನೀವು ಎರಡೂ ಇನಿಂಗ್ಸ್‌ಗಳಲ್ಲಿ 380 ರನ್ ಗಳಿಸಿಲ್ಲ- ಅದು 830-ಪ್ಲಸ್ ಆಗಿತ್ತು. ಅದು ಬಹಳಷ್ಟು ರನ್‌ಗಳು," ಎಂದು ಅವರು ತಿಳಿಸಿದ್ದಾರೆ.