ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ENG vs IND: ಟೆಸ್ಟ್‌ ಕ್ರಿಕೆಟ್‌ನ ಮತ್ತೊಂದು ವಿಶೇಷ ದಾಖಲೆ ಸನಿಹದಲ್ಲಿ ರವೀಂದ್ರ ಜಡೇಜಾ!

ಇಂಗ್ಲೆಂಡ್‌ ವಿರುದ್ಧ ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಭಾರತ ಎರಡು ಪಂದ್ಯಗಳನ್ನು ಸೋಲುವ ಮೂಲಕ 1-2 ಅಂತರದಲ್ಲಿ ಹಿನ್ನಡೆ ಅನುಭವಿಸಿದೆ. ನಾಲ್ಕನೇ ಪಂದ್ಯ ಜುಲೈ 23ರಂದು ಮ್ಯಾಂಚೆಸ್ಟರ್‌ನಲ್ಲಿ ಆರಂಭವಾಗಲಿದೆ. 3ನೇ ಪಂದ್ಯದ ಗೆಲುವಿಗೆ ಕೊನೆ ಕ್ಷಣದವರೆಗೂ ಅವಿರತ ಹೋರಾಟ ನಡೆಸಿದ್ದ ರವೀಂದ್ರ ಜಡೇಜಾ ನಾಲ್ಕನೇ ಪಂದ್ಯದಲ್ಲಿ ತಮ್ಮ ಟೆಸ್ಟ್‌ ಕ್ರಿಕೆಟ್‌ ವೃತ್ತಿ ಜೀವನದಲ್ಲಿ ಮತ್ತೊಂದು ವಿಶೇಷ ದಾಖಲೆಯನ್ನು ಬರೆಯುವ ಸನಿಹದಲ್ಲಿದ್ದಾರೆ.

ಇಂಗ್ಲೆಂಡ್‌ನಲ್ಲಿ ವಿಶೇಷ ದಾಖಲೆ ಬರೆಯುವ ಸನಿಹದಲ್ಲಿ ರವೀಂದ್ರ ಜಡೇಜಾ.

ಮ್ಯಾಂಚೆಸ್ಟರ್‌: ಇಂಗ್ಲೆಂಡ್‌ ವಿರುದ್ಧ ಐದು ಪಂದ್ಯಗಳ ಟಸ್ಟ್‌ ಸರಣಿಯಲ್ಲಿ(IND vs ENG) ಭಾರತ ಎರಡು ಪಂದ್ಯಗಳನ್ನು ಸೋಲುವ ಮೂಲಕ 1-2 ಅಂತರದಲ್ಲಿ ಹಿನ್ನಡೆ ಅನುಭವಿಸಿದೆ. ಇನ್ನು ನಾಲ್ಕನೇ ಟೆಸ್ಟ್ ಪಂದ್ಯ ಜುಲೈ 23 ರಂದು ಮ್ಯಾಂಚೆಸ್ಟರ್‌ನ ಓಲ್ಡ್‌ ಟ್ರಾಫರ್ಡ್‌ನಲ್ಲಿ ಆರಂಭವಾಗಲಿದ್ದು, ಈ ಪಂದ್ಯವನ್ನು ಭಾರತ ತಂಡ ಗೆದ್ದು ಸರಣಿಯನ್ನು ಸಮಬಲಗೊಳಿಸುವ ಯೋಜನೆಯನ್ನು ಹಾಕಿಕೊಂಡಿದೆ. ಇದಕ್ಕಾಗಿ ಭಾರತ (India) ತಂಡದ ಆಟಗಾರರು ಬಿಡುವಿಲ್ಲದ ಅಭ್ಯಾಸ ನಡೆಸುತ್ತಿದ್ದಾರೆ. ಮೂರನೇ ಪಂದ್ಯದ ಗೆಲುವಿಗೆ ಕೊನೆ ಕ್ಷಣದವರೆಗೂ ಅವಿರತ ಹೋರಾಟ ನಡೆಸಿದ್ದ ರವೀಂದ್ರ ಜಡೇಜಾ (Ravindra Jadeja) ನಾಲ್ಕನೇ ಪಂದ್ಯದಲ್ಲಿ ತಮ್ಮ ಟೆಸ್ಟ್‌ ಕ್ರಿಕೆಟ್‌ ವೃತ್ತಿ ಜೀವನದಲ್ಲಿ ಮತ್ತೊಂದು ವಿಶೇಷ ದಾಖಲೆ ಬರೆಯುವ ಸನಿಹದಲ್ಲಿದ್ದಾರೆ.

ಈ ಟೆಸ್ಟ್‌ ಸರಣಿಯಲ್ಲಿಒ ಅದ್ಭುತ ಬ್ಯಾಟಿಂಗ್‌ ಫಾರ್ಮ್‌ನಲ್ಲಿರುವ ರವೀಂದ್ರ ಜಡೇಜಾ, ಮ್ಯಾಂಚೆಸ್ಟರ್‌ ಟೆಸ್ಟ್‌ ಪಂದ್ಯದಲ್ಲಿ ಕೇವಲ 58 ರನ್‌ ಗಳಿಸಿದರೆ, ಇಂಗ್ಲೆಂಡ್‌ನಲ್ಲಿ 1000 ಟೆಸ್ಟ್ ರನ್ ಪೂರೈಸಿದ ಲೆಜೆಂಡರಿ ಗ್ಯಾರಿ ಫೀಲ್ಡ್‌ ಸೋಬರ್ಸ್ ಅವರನ್ನು ಒಳಗೊಂಡ ಎಲೈಟ್‌ ಲಿಸ್ಟ್‌ಗೆ ಸೇರ್ಪಡೆಯಾಗಲಿದ್ದಾರೆ.

ಈ ಹಿಂದೆ ಇಂಗ್ಲೆಂಡ್‌ನಲ್ಲಿ ಅದ್ಬುತ ಪ್ರದರ್ಶನ ತೋರಿ ಎಲ್ಲರ ಗಮನ ಸೆಳೆದಿದ್ದ ವಿಂಡೀಸ್‌ ದಿಗ್ಗಜ ಸೋಬರ್ಸ್, 6 ರಿಂದ 11ನೇ ಕ್ರಮಾಂಕಗಳಲ್ಲಿ ಆಡಿದ ಆಟಗಾರರಲ್ಲಿ 1000 ರನ್ ಗಡಿದಾಟಿದ ಏಕೈಕ ಆಟಗಾರಾಗಿದ್ದರು. ಅವರು 16 ಇನಿಂಗ್ಸ್‌ಗಳಲ್ಲಿ 84.38ರ ಸರಾಸರಿಯಲ್ಲಿ 1097 ರನ್ ಕಲೆಹಾಕಿದ್ದಾರೆ. ಇದರಲ್ಲಿ 4 ಶತಕಗಳು ಮತ್ತು 5 ಶತಕಗಳು ಒಳಗೊಂಡಿವೆ.

IND vs ENG: ಕರುಣ್‌ ನಾಯರ್‌ ಔಟ್‌, ನಾಲ್ಕನೇ ಟೆಸ್ಟ್‌ಗೆ ಭಾರತದ ಪ್ಲೇಯಿಂಗ್‌ XIನಲ್ಲಿ 2 ಬದಲಾವಣೆ ಸಾಧ್ಯತೆ!

ಜಡೇಜಾ ಈಗಾಗಲೇ 27 ಇನಿಂಗ್ಸ್‌ಗಳಲ್ಲಿ 40.95ರ ಸರಾಸರಿಯಲ್ಲಿ 942 ರನ್ ಗಳಿಸಿದ್ದು, ಒಂದು ಶತಕ ಹಾಗೂ ಏಳು ಅರ್ಧಶತಕ ಬಾರಿಸಿದ್ದಾರೆ. ಇನ್ನೂ ಕೇವಲ 58 ರನ್ ಗಳಿಸಿದರೆ ಸೋಬರ್ಸ್‌ ಜೊತೆ ‘ಎಲೈಟ್’ ಕ್ಲಬ್‌ಗೆ ಸೇರಿಕೊಳ್ಳಲಿದ್ದಾರೆ. ಈ ಸರಣಿಯಲ್ಲಿಯೂ ಜಡೇಜಾ ಭರ್ಜರಿ ಫಾರ್ಮ್‌ ಮುಂದುವರಿಸಿದ್ದು, ಇಂಗ್ಲೆಂಡ್ ವಿರುದ್ಧದ ಮೂರು ಟೆಸ್ಟ್‌ಗಳಲ್ಲಿ 109ರ ಸರಾಸರಿಯಲ್ಲಿ ಈಗಾಗಲೇ 327 ರನ್ ಗಳಿಸಿದ್ದಾರೆ. ಇದಕ್ಕೂ ಮುನ್ನ ಸತತ ನಾಲ್ಕು ಅರ್ಧಶತಕಗಳನ್ನು ಗಳಿಸುವ ಮೂಲಕ ಸೌರವ್ ಗಂಗೂಲಿ ಹಾಗೂ ರಿಷಭ್ ಪಂತ್ ಬಳಿಕ ಇಂಗ್ಲೆಂಡ್‌ನಲ್ಲಿ ಈ ಸಾಧನೆ ಮಾಡಿದ ಮೂರನೇ ಭಾರತೀಯ ಎನಿಸಿಕೊಂಡಿದ್ದರು.

ಫಾರ್ಮ್‌ ಮುಂದುವರಿಸುವ ವಿಶ್ವಾಸದ್ಲಲಿ ಜಡೇಜಾ

ಈ ಸರಣಿಯ ಮೂರನೇ ಟೆಸ್ಟ್‌ನ ಭಾರತ ತಂಡದ ದ್ವಿತೀಯ ಇನಿಂಗ್ಸ್‌ನಲ್ಲಿ ಅಜೇಯ 61 ರನ್ ಗಳಿಸಿದ್ದ ಜಡೇಜಾ, ಒಂದು ತುದಿಯಲ್ಲಿ ಗಟ್ಟಿಯಾಗಿ ನಿಂತು ಏಕಾಂಗಿ ಹೋರಾಟ ನಡೆಸಿದ್ದರು. ಆದರೂ ಭಾರತ 22 ರನ್‌ಗಳ ಅಂತರದಲ್ಲಿ ಸೋಲು ಅನುಭವಿಸಿತ್ತು. ಆ ಮೂಲಕ ಈ ಸರಣಿಯಲ್ಲಿ 1-2 ಅಂತರದಲ್ಲಿ ಹಿನ್ನಡೆ ಅನುಭವಿಸಿತ್ತು. ಮೊದಲ ಟೆಸ್ಟ್‌ನಲ್ಲಿಯೂ ಕೂಡ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ವೈಫಲ್ಯ ಅನುಭವಿಸಿದಾಗ ಜಡೇಜಾ ತಂಡಕ್ಕೆ ನೀಡಿದ ಕೊಡುಗೆ ಅಮೂಲ್ಯವಾಗಿತ್ತು. ಹೀಗೆ ಅನೇಕ ಸಂದರ್ಭಗಳಲ್ಲಿ ಜಡೇಜಾ ತಂಡವನ್ನು ಸಂಕಷ್ಟದಿಂದ ಪಾರು ಮಾಡಿರುವ ಅನುಭವ ಹೊಂದಿದ್ದಾರೆ. ನಾಲ್ಕನೇ ಪಂದ್ಯಕ್ಕೂ ಇದೇ ಫಾರ್ಮ್‌ನ್ನು ಮುಂದುವರಿಸುವ ನಿರೀಕ್ಷೆಯನ್ನು ಅವರು ಹೊಂದಿದ್ದಾರೆ.

IND vs ENG: ಇಂಗ್ಲೆಂಡ್‌ ವಿರುದ್ಧ ನಾಲ್ಕನೇ ಟೆಸ್ಟ್‌ಗೂ ಮುನ್ನ ಭಾರತ ತಂಡಕ್ಕೆ ಆಘಾತ!

ಆಲ್‌ರೌಂಡರ್‌ ಶ್ರೇಯಾಂಕದಲ್ಲಿ ಜಡ್ಡುಗೆ ಅಗ್ರ ಸ್ಥಾನ

ಐಸಿಸಿಯ ಹೊಸ ಟೆಸ್ಟ್ ಆಲ್‌ರೌಂಡರ್‌ಗಳ ಶ್ರೇಯಾಂಕ ಪಟ್ಟಿಯಲ್ಲಿ ರವೀಂದ್ರ ಜಡೇಜಾ 400 ರೇಟಿಂಗ್ಸ್‌ ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿದ್ದಾರೆ. ಇದರೊಂದಿಗೆ ಜಡೇಜಾ ಐಸಿಸಿ ಟೆಸ್ಟ್ ಆಲ್‌ರೌಂಡರ್ ವಿಭಾಗದಲ್ಲಿ ಅತಿ ಹೆಚ್ಚು ದಿನಗಳ ಕಾಲ ಅಗ್ರ ಕ್ರಮಾಂಕ ಅಲಂಕರಿಸಿದ ಮೊದಲ ಆಟಗಾರನೆಂಬ ವಿಶ್ವದಾಖಲೆಯನ್ನು ಬರೆದಿದ್ದಾರೆ. ರವೀಂದ್ರ ಜಡೇಜಾ 2022ರ ಮಾರ್ಚ್ 9 ರಂದು ವೆಸ್ಟ್ ಇಂಡೀಸ್‌ನ ಜೇಸನ್ ಹೋಲ್ಡರ್ ಅವರನ್ನು ಹಿಂದಿಕ್ಕಿ ವಿಶ್ವದ ನಂಬರ್ ಒನ್ ಟೆಸ್ಟ್ ಆಲ್‌ರೌಂಡರ್ ಸ್ಥಾನವನ್ನು ಅಲಂಕರಿಸಿದ್ದರು. ಅಂದಿನಿಂದ ಇಂದಿಗೆ 1152 ದಿನಗಳು ಕಳೆದಿವೆ, ಜಡೇಜಾ ನಿರಂತರವಾಗಿ ನಂಬರ್ ಒನ್ ಸ್ಥಾನದಲ್ಲಿಯೇ ಮುಂದುವರಿದಿದ್ದಾರೆ.

ಬರಹ: ಕೆ ಎನ್ ರಂಗು ಚಿತ್ರದುರ್ಗ