ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಅಭ್ಯಾಸ ಪಂದ್ಯದಲ್ಲಿ ಭರ್ಜರಿ ಶತಕ ಬಾರಿಸಿ ಫಾರ್ಮ್‌ಗೆ ಮರಳಿದ ಶಾರ್ದುಲ್‌ ಠಾಕೂರ್‌!

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಆಲ್‌ರೌಂಡರ್ ಶಾರ್ದುಲ್ ಠಾಕೂರ್ ಬ್ಯಾಟಿಂಗ್‌ನಲ್ಲಿ ಭರ್ಜರಿ ಫಾರ್ಮ್‌ಗೆ ಮರಳಿದ್ದಾರೆ. ಭಾರತ ಎ ಪರ ಆಡಿದ ಅವರು, ಜಸ್‌ಪ್ರೀತ್‌ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್‌ರಂತಹ ಬೌಲರ್‌ಗಳನ್ನು ಎದುರಿಸಿದ ಇಂಟ್ರಾ-ಸ್ಕ್ವಾಡ್ ಪಂದ್ಯದಲ್ಲಿ ಅವರು ಅದ್ಭುತ ಶತಕವನ್ನು ಬಾರಿಸಿದ್ದಾರೆ.

ಅಭ್ಯಾಸ ಪಂದ್ಯದಲ್ಲಿ ಶತಕ ಸಿಡಿಸಿದ ಶಾರ್ದುಲ್‌ ಠಾಕೂರ್!

ಅಭ್ಯಾಸ ಪಂದ್ಯದಲ್ಲಿ ಶತಕ ಬಾರಿಸಿದ ಶಾರ್ದುಲ್‌ ಠಾಕೂರ್‌

Profile Ramesh Kote Jun 15, 2025 10:02 PM

ಬೆಕೆನ್‌ಹ್ಯಾಮ್: ಇಂಗ್ಲೆಂಡ್ (ENG) ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಲ್‌ರೌಂಡರ್ ಶಾರ್ದುಲ್ ಠಾಕೂರ್ (Shardul Thakur) ಆಡುವ ಹನ್ನೊಂದರಲ್ಲಿ ಸ್ಥಾನ ಪಡೆಯಲು ಎದುರು ನೋಡುತ್ತಿದ್ದಾರೆ. ಅದರಂತೆ ಅವರು ದೀರ್ಘಾವಧಿ ಬಳಿಕ ಭಾರತ ತಂಡದ (Indian Cricket team) ಪರ ಟೆಸ್ಟ್‌ ಕ್ರಿಕೆಟ್‌ಗೆ ಕಮ್‌ಬ್ಯಾಕ್‌ ಮಾಡಲಿದ್ದಾರೆ. ಏಕೆಂದರೆ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, ಭಾರತ ಎ ಪರ ಆಡುವಾಗ ಭಾರತ ವಿರುದ್ಧದ ಇಂಟ್ರಾ-ಸ್ಕ್ವಾಡ್ ಪಂದ್ಯದಲ್ಲಿ ಶಾರ್ದುಲ್ ಠಾಕೂರ್ ಶತಕ ಗಳಿಸಿದರು. ಅವರು ಅಜೇಯ 122 ರನ್ ಬಾರಿಸಿದ್ದಾರೆ. ಅವರು ಈ ಇನಿಂಗ್ಸ್‌ನಲ್ಲಿ ಜಸ್‌ಪ್ರೀತ್‌ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿಧ್‌ ಕೃಷ್ಣ ಮತ್ತು ಅರ್ಷದೀಪ್ ಸಿಂಗ್‌ರಂತಹ ವೇಗದ ಬೌಲರ್‌ಗಳನ್ನು ಅವರು ಸಮರ್ಥವಾಗಿ ಎದುರಿಸಿದ್ದಾರೆ.

ಇದಕ್ಕೂ ಮುನ್ನ ಭಾರತ ಎ ಪರ ಉತ್ತಮ ಬೌಲಿಂಗ್‌ ಮೂಲಕ ಶಾರ್ದುಲ್ ಠಾಕೂರ್‌ ಎಲ್ಲರ ಗಮನವನ್ನು ಸೆಳೆದಿದ್ದರು. ಅಲ್ಲಿ ಅವರು ಕೆಎಲ್ ರಾಹುಲ್, ಶುಭ್‌ಮನ್ ಗಿಲ್ ಮತ್ತು ಕರುಣ್ ನಾಯರ್‌ರಂತಹ ಬ್ಯಾಟ್ಸ್‌ಮನ್‌ಗಳಿಗೆ ಕಾಟ ನೀಡಿದ್ದರು. ಇದಕ್ಕೂ ಮೊದಲು, ಸರ್ಫರಾಜ್ ಖಾನ್ ಎರಡನೇ ದಿನದಂದು 76 ಎಸೆತಗಳಲ್ಲಿ 101 ರನ್ ಗಳಿಸಿದರು. ಇದರಲ್ಲಿ ಅವರು 15 ಬೌಂಡರಿಗಳು ಮತ್ತು ಎರಡು ಸಿಕ್ಸರ್‌ಗಳನ್ನು ಬಾರಿಸಿದರು. ಎರಡನೇ ದಿನದ ಆಟ ಮುಗಿದಾಗ ಶಾರ್ದುಲ್ ಠಾಕೂರ್‌ ಅಜೇಯರಾಗಿ ಉಳಿದಿದ್ದರು. ಅವರು ಮೂರನೇ ದಿನ ಬ್ಯಾಟಿಂಗ್ ಮುಂದುವರಿಸಿ ತಮ್ಮ ಶತಕವನ್ನು ಪೂರೈಸಿದರು.

IND vs ENG: ಮೊದಲ ಟೆಸ್ಟ್‌ ಪಂದ್ಯಕ್ಕೆ ವಿವಿಎಸ್ ಲಕ್ಷ್ಮಣ್‌ಗೆ ಕೋಚಿಂಗ್ ಜವಾಬ್ದಾರಿ?

ಟೀಮ್‌ ಮ್ಯಾನೇಜ್‌ಮೆಂಟ್‌ ಮುಂದೆ ದೊಡ್ಡ ಸವಾಲು

ಈಗ ಟೀಮ್‌ ಮ್ಯಾನೇಜ್‌ಮೆಂಟ್‌ ಮುಂದೆ ಇರುವ ದೊಡ್ಡ ಸಮಸ್ಯೆ ಎಂದರೆ ನಿತೀಶ್ ಕುಮಾರ್ ರೆಡ್ಡಿ ಮತ್ತು ಶಾರ್ದುಲ್ ಠಾಕೂರ್‌ ನಡುವೆ ಯಾರನ್ನು ಆಯ್ಕೆ ಮಾಡುವುದು ಎಂಬುದು. ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್‌ ಸರಣಿಗೆ ಶಾರ್ದುಲ್‌ ಠಾಕೂರ್‌ ಅವರನ್ನು ತಂಡದಿಂದ ಕೈ ಬಿಡಲಾಗಿತ್ತು. ಆದರೆ ನಿತೀಶ್ ಕುಮಾರ್ ರೆಡ್ಡಿ ಎಲ್ಲಾ ಐದು ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಮೆಲ್ಬೋರ್ನ್ ಟೆಸ್ಟ್‌ನಲ್ಲಿ ನಿತೀಶ್ ರೆಡ್ಡಿ ಕೂಡ ಶತಕವನ್ನು ಬಾರಿಸಿದ್ದರು. ಆದಾಗ್ಯೂ, ಬೌಲಿಂಗ್‌ನಲ್ಲಿ ಅವರ ಪ್ರದರ್ಶನ ನಿರೀಕ್ಷಿಸಿದಷ್ಟು ಉತ್ತಮವಾಗಿಲ್ಲ.

ಇಂಗ್ಲೆಂಡ್‌ನಲ್ಲಿ ಶಾರ್ದೂಲ್ ದಾಖಲೆ

33ರ ವಯಸ್ಸಿನ ಶಾರ್ದುಲ್ ಠಾಕೂರ್ ಇಂಗ್ಲೆಂಡ್‌ನಲ್ಲಿ ನಡೆದ ಟೆಸ್ಟ್ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಅವರು ಇಲ್ಲಿಯವರೆಗೆ ಇಂಗ್ಲೆಂಡ್‌ನಲ್ಲಿ 4 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ, ಇದರಲ್ಲಿ 8 ಇನಿಂಗ್ಸ್‌ಗಳಲ್ಲಿ 10 ವಿಕೆಟ್‌ಗಳನ್ನು ಪಡೆದಿದ್ದಾರೆ. ಇದಲ್ಲದೆ, ಅವರು ಬ್ಯಾಟಿಂಗ್‌ನಲ್ಲಿಯೂ ಉತ್ತಮವಾಗಿ ಆಡಿದ್ದಾರೆ. ಇಂಗ್ಲೆಂಡ್‌ನಲ್ಲಿ 173 ಟೆಸ್ಟ್ ರನ್‌ಗಳನ್ನು ಅವರು ಗಳಿಸಿದ್ದಾರೆ. ಇದರಲ್ಲಿ 3 ಅರ್ಧಶತಕಗಳನ್ನು ಗಳಿಸಿದ್ದಾರೆ. ಸೀಮ್‌ ಬೌಲಿಂಗ್‌ ಆಲ್‌ರೌಂಡರ್‌ ಇದುವರೆಗೆ ಭಾರತ ಪರ 11 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ, ಇದರಲ್ಲಿ ಅವರು 31 ವಿಕೆಟ್‌ಗಳನ್ನು ಪಡೆದು 331 ರನ್‌ಗಳನ್ನು ಗಳಿಸಿದ್ದಾರೆ.