ಕಾರ್ಡಿಫ್: ಇಲ್ಲಿನ ಸೋಫಿಯಾ ಗಾರ್ಡನ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ (IND vs ENG) ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ(Virat Kohli), ಬ್ಯಾಟಿಂಗ್ ದಿಗ್ಗಜ ರಾಹುಲ್ ದ್ರಾವಿಡ್ (Rahul Dravid) ಅವರ ಹಳೆಯ ದಾಖಲೆಯೊಂದನ್ನು ಮುರಿದಿದ್ದಾರೆ. ನಾಯಕ ಶುಭಮನ್ ಗಿಲ್ ಔಟ್ ಆದ ಬಳಿಕ ಎಂಟನೇ ಓವರ್‌ನಲ್ಲಿ ಮೂರನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದ ಕೊಹ್ಲಿ ಮನಮೋಹಕ ಬ್ಯಾಟಿಂಗ್ ಪ್ರದರ್ಶನವನ್ನು ತೋರಿದರು. ತಮ್ಮ ಐದನೇ ಎಸೆತದಲ್ಲಿ ಜೋಫ್ರಾ ಆರ್ಚರ್‌ಗೆ ಸ್ಟ್ರೈಟ್ ಡ್ರೈವ್ ಮೂಲಕ ಬೌಂಡರಿ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಈ ಮೈಲುಗಲ್ಲು ತಲುಪಿದರು.
ವಿರಾಟ್ ಕೊಹ್ಲಿ ತಮ್ಮ ಏಕದಿನ ಕ್ರಿಕೆಟ್‌ನಲ್ಲಿ ತಮ್ಮ ಫಾರ್ಮ್ ಅನ್ನು ಮುಂದುವರಿಸಿದರು. ಈ ಪಂದ್ಯದಲ್ಲಿ ಅದ್ಭುತವಾಗಿ ಬ್ಯಾಟ್ ಮಾಡಿದ ಕೊಹ್ಲಿ, 66 ಎಸೆತಗಳಲ್ಲಿ 8 ಬೌಂಡರಿಗಳೊಂದಿಗೆ 65 ರನ್ ಗಳಿಸಿದರು. ಬಳಿಕ ಜೋಫ್ರಾ ಆರ್ಚರ್ ಎಸೆತದಲ್ಲಿ ಕ್ಯಾಚ್ ಕೊಟ್ಟು ಔಟ್ ಆದರು.
IND vs ENG: ʻಔಟಾದರೂ ಪರವಾಗಿಲ್ಲ, ಮುಕ್ತವಾಗಿ ಬ್ಯಾಟ್ ಮಾಡಿʼ-ರೋಹಿತ್ ಶರ್ಮಾಗೆ ಗಂಭೀರ್ ಸಲಹೆ!
ರಾಹುಲ್ ದ್ರಾವಿಡ್ ದಾಖಲೆ ಮುರಿದ ಕೊಹ್ಲಿ
ಇಂಗ್ಲೆಂಡ್ ನೆಲದಲ್ಲಿ ಎಲ್ಲಾ ಸ್ವರೂಪಗಳಲ್ಲಿ ಅತಿ ಹೆಚ್ಚು ರನ್ ಗಳಿಸಿ ಭಾರತೀಯ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ರಾಹುಲ್ ದ್ರಾವಿಡ್ ಅವರನ್ನು ಹಿಂದಿಕ್ಕಿ ಅಗ್ರ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ. ಇಂಗ್ಲೆಂಡ್ ಎದುರು ಎಲ್ಲಾ ಸ್ವರೂಪದಲ್ಲಿಯೂ ಕೊಹ್ಲಿ 2646 ರನ್‌ಗಳನ್ನು ದಾಖಲಿಸಿದ್ದಾರೆ. ಅವರು ಇಂಗ್ಲೆಂಡ್ ಎದುರು ಆಡಿದ 59 ಪಂದ್ಯಗಳ 79 ಇನಿಂಗ್ಸ್‌ಗಳಲ್ಲಿ ಈ ದಾಖಲೆಯನ್ನು ಬರೆದಿದ್ದಾರೆ. ಇಂಗ್ಲೆಂಡ್ ನೆಲದಲ್ಲಿ ಅತಿ ಹೆಚ್ಚು ರನ್ ಗಳಿಸಿ ಏಷ್ಯಾದ ಮೊದಲ ಬ್ಯಾಟ್ಸ್‌ಮನ್ ಎಂಬ ಕೀರ್ತಿಗೂ ಅವರು ಭಾಜನರಾಗಿದ್ದಾರೆ.
ವಿಶೇಷವೆಂದರೆ, ವಿರಾಟ್ ಕೊಹ್ಲಿ ಈ ಮೈದಾನದಲ್ಲಿ ಮಹತ್ವದ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಇಂಗ್ಲೆಂಡ್ ನೆಲದಲ್ಲಿ ಅವರು ಗಳಿಸಿರುವ ಏಕೈಕ ಏಕದಿನ ಶತಕ ಇದೇ ಮೈದಾನದಲ್ಲಿ 2011ರಲ್ಲಿ ದಾಖಲಾಗಿತ್ತು. ಆ ಪಂದ್ಯ ಮತ್ತೊಂದು ವಿಶೇಷತೆಗೂ ಸಾಕ್ಷಿಯಾಗಿತ್ತು. ಭಾರತದ ದಿಗ್ಗಜ ಬ್ಯಾಟರ್ ರಾಹುಲ್ ದ್ರಾವಿಡ್ ಅವರ ಏಕದಿನ ಕ್ರಿಕೆಟ್ ವೃತ್ತಿಜೀವನದ ಕೊನೆಯ ಪಂದ್ಯವೂ ಅದೇ ಆಗಿತ್ತು.
ಇಂಗ್ಲೆಂಡ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಏಷ್ಯಾ ಬ್ಯಾಟ್ಸ್‌ಮನ್‌ಗಳು
ವಿರಾಟ್ ಕೊಹ್ಲಿ: 2646* ರನ್‌ಗಳು
ರಾಹುಲ್ ದ್ರಾವಿಡ್: 2645 ರನ್‌ಗಳು
ಸಚಿನ್ ತೆಂಡೂಲ್ಕರ್: 2626 ರನ್‌ಗಳು
ರೋಹಿತ್ ಶರ್ಮಾ: 2317* ರನ್‌ಗಳು
ಮಹೇಲಾ ಜಯವರ್ಧನೆ: 2211 ರನ್‌ಗಳು
IND vs ENG: ಎರಡನೇ ಏಕದಿನ ಪಂದ್ಯದಿಂದ ಕೆಎಲ್ ರಾಹುಲ್ ಹೊರಗುಳಿಯಲು ಕಾರಣವೇನು?
ವಿವಿಯನ್ ರಿಚರ್ಡ್ಸ್‌ಗೆ ಅಗ್ರ ಸ್ಥಾನ
ಇಂಗ್ಲೆಂಡ್ ನೆಲದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಪ್ರವಾಸಿ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ವೆಸ್ಟ್ ಇಂಡೀಸ್ ದಿಗ್ಗಜ ವಿವಿಯನ್ ರಿಚರ್ಡ್ಸ್ ಅಗ್ರ ಸ್ಥಾನದಲ್ಲಿದ್ದಾರೆ. ವಿಂಡೀಸ್ ದಿಗ್ಗಜ 3402 ರನ್‌ಗಳನ್ನು ಗಳಿಸಿದ್ದಾರೆ. ನಂತರದ ಸ್ಥಾನಗಳಲ್ಲಿ ಕ್ರಮವಾಗಿ ಸ್ಟೀವ್ ಸ್ಮಿತ್ (3348), ರಿಕ್ಕಿ ಪಾಂಟಿಂಗ್ (2833) ಹಾಗೂ ಅಲಾನ್ ಬಾರ್ಡರ್ (2799) ಇದ್ದಾರೆ. ಇವರ ಬಳಿಕ ವಿರಾಟ್ ಕೊಹ್ಲಿ ಇದ್ದಾರೆ.
ಇಂಗ್ಲೆಂಡ್‌ನಲ್ಲಿ ಕೊಹ್ಲಿ ಮೂರು ಶತಕಗಳನ್ನು ಬಾರಿಸಿದ್ದಾರೆ. ಅವರು ಟೆಸ್ಟ್‌ನಲ್ಲಿ ಎರಡು ಶತಕ ಹಾಗೂ ಒಡಿಐನಲ್ಲಿ ಒಂದು ಶತಕ ಬಾರಿಸಿದ್ದಾರೆ. ಆಂಗ್ಲರ ನಾಡಿನಲ್ಲಿ ಅತಿ ಹೆಚ್ಚು ಶತಕಗಳನ್ನು ಸಿಡಿಸಿದ ಭಾರತೀಯ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ತಲಾ 8 ಶತಕಗಳ ಮೂಲಕ ಜಂಟಿಯಾಗಿ ಅಗ್ರ ಸ್ಥಾನದಲ್ಲಿದ್ದಾರೆ. ನಂತರದ ಸ್ಥಾನದಲ್ಲಿ ಸಚಿನ್ ತೆಂಡೂಲ್ಕರ್ ಇದ್ದಾರೆ.
ಇಂಗ್ಲೆಂಡ್‌ನಲ್ಲಿ ಕೊಹ್ಲಿಯ ಅಂಕಿಅಂಶಗಳು
ವಿರಾಟ್ ಕೊಹ್ಲಿ ಇಂಗ್ಲೆಂಡ್‌ನಲ್ಲಿ 17 ಟೆಸ್ಟ್ ಪಂದ್ಯಗಳಿಂದ 33.21ರ ಸರಾಸರಿಯಲ್ಲಿ 1096 ರನ್‌ಗಳನ್ನು ಗಳಿಸಿದ್ದಾರೆ. ಒಡಿಐ ಕ್ರಿಕೆಟ್‌ನಲ್ಲಿ 35 ಪಂದ್ಯಗಳಿಂದ 1378 ರನ್‌ಗಳನ್ನು ಗಳಿಸಿದ್ದಾರೆ ಹಾಗೂ 7 ಟಿ20ಐ ಪಂದ್ಯಗಳಿಂದ 51.03ರ ಸರಾಸರಿಯಲ್ಲಿ 192 ರನ್‌ಗಳನ್ನು ಬಾರಿಸಿದ್ದಾರೆ.