IND vs ENG: ಲಾರ್ಡ್ಸ್ ಪಂದ್ಯದಲ್ಲಿ ಜಸ್‌ಪ್ರೀತ್ ಬುಮ್ರಾ ಏಕೆ ಆಡುತ್ತಿಲ್ಲ? ಕಾರಣ ತಿಳಿಸಿದ ಶುಭಮನ್ ಗಿಲ್!
Why Jasprit Bumrah not playing XI: ಲಂಡನ್‌ನ ಲಾರ್ಡ್ಸ್ ಅಂಗಣದಲ್ಲಿ ನಡೆಯುತ್ತಿರುವ ಮೂರನೇ ಹಾಗೂ ಏಕದಿನ ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಜಸ್‌ಪ್ರೀತ್ ಬುಮ್ರಾ ಆಡುತ್ತಿಲ್ಲ, ಅವರ ಬದಲು ಪ್ರಿನ್ಸ್ ಯಾದವ್‌ಗೆ ಸ್ಥಾನವನ್ನು ನೀಡಲಾಗಿದೆ.
ಮೂರನೇ ಪಂದ್ಯದಲ್ಲಿ ಜಸ್‌ಪ್ರೀತ್ ಬುಮ್ರಾ ಏಕೆ ಆಡುತ್ತಿಲ್ಲ? -
ಲಂಡನ್: ಇಲ್ಲಿನ ಐತಿಹಾಸಿಕ ಲಾರ್ಡ್ಸ್ ಅಂಗಣದಲ್ಲಿ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದಲ್ಲಿ (IND vs ENG) ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ ಮೊದಲು ಬ್ಯಾಟಿಂಗ್ ನಡೆಸಲು ನಿರ್ಧರಿಸಿದ್ದಾರೆ. ಆದರೆ, ಭಾರತ ತಂಡದ ಪ್ಲೇಯಿಂಗ್ Xiನಲ್ಲಿ ಮೂರು ಮಹತ್ವದ ಬದಲಾವಣೆಯನ್ನು ತರಲಾಗಿದೆ. ಜಸ್‌ಪ್ರೀತ್ ಬುಮ್ರಾ (Jasprit Bumrah, ವಾಷಿಂಗ್ಟನ್ ಸುಂದರ್ ಹಾಗೂ ಶಿವಂ ದುಬೇ ಅವರನ್ನು ಕೈ ಬಿಡಲಾಗಿದೆ. ಇವರ ಸ್ಥಾನಕ್ಕೆ ಕೆಎಲ್ ರಾಹುಲ್, ಪ್ರಿನ್ಸ್ ಯಾದವ್ ಹಾಗೂ ಅರ್ಷದೀಪ್ ಸಿಂಗ್‌ಗೆ ಸ್ಥಾನವನ್ನು ನೀಡಲಾಗಿದೆ.
ಏಕದಿನ ಸರಣಿಯ ಆರಂಭಿಕ ಎರಡೂ ಪಂದ್ಯಗಳಲ್ಲಿ ಭಾರತ ತಂಡದ ವೇಗದ ಬೌಲಿಂಗ್ ವಿಭಾಗವನ್ನು ಜಸ್‌ಪ್ರೀತ್ ಬುಮ್ರಾ ಮುನ್ನಡೆಸಿದ್ದರು. ಆದರೆ, ಮೂರನೇ ಪಂದ್ಯದಿಂದ ಅವರನ್ನು ಹಠಾತ್ ಕೈ ಬಿಡಲಾಗಿದೆ. ಟಾಸ್ ವೇಳೆ ಭಾರತ ತಂಡದ ನಾಯಕ ಶುಭಮನ್ ಗಿಲ್ ಈ ವಿಷಯವನ್ನು ಬಹಿರಂಗಪಡಿಸಿದ ಬಳಿಕ ಎಲ್ಲರಿಗೂ ಅಚ್ಚರಿ ಮೂಡಿಸಿತು. ಇದಕ್ಕೆ ಕಾರಣವೇನೆಂದು ಟಾಸ್ ವೇಳೆಯೇ ಗಿಲ್ ಹೇಳಿದ್ದರು. ಬಿಸಿಸಿಐ ಕೂಡ ತನ್ನ ಪೋಸ್ಟ್ ಮೂಲಕ ಬುಮ್ರಾ ಅಲಭ್ಯ ಬಗ್ಗೆ ವಿವರಿಸಿದೆ.
IND vs ENG 3rd ODI: ಭಾರತದ ಎದುರು ಟಾಸ್ ಗೆದ್ದು ಬ್ಯಾಟಿಂಗ್ ಆರಿಸಿಕೊಂಡ ಇಂಗ್ಲೆಂಡ್!
"ಕಾರ್ಡಿಫ್‌ನಲ್ಲಿ ಎರಡನೇ ಪಂದ್ಯದ ವೇಳೆ ಫೀಲ್ಡಿಂಗ್‌ನಲ್ಲಿ ಜಸ್‌ಪ್ರೀತ್ ಬುಮ್ರಾ ಅವರ ಎಡ ಮೊಣಕಾಲಿಗೆ ಗಾಯವಾಗಿತ್ತು. ಹಾಗಾಗಿ ಮೂರನೇ ಏಕದಿನ ಪಂದ್ಯಕ್ಕೆ ಭಾರತ ತಂಡದ ಆಯ್ಕೆಗೆ ಅವರು ಅಲಭ್ಯರಾಗಿರಲಿಲ್ಲ. ಾವರ ಎಡ ಮೊಣಕಾಲಿನಲ್ಲಿ ಊತ ಕಾಣಿಸಿಕೊಂಡಿದೆ," ಎಂದು ಬಿಸಿಸಿಐ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ಅನಾರೋಗ್ಯದಿಂದಾಗಿ ಕಳೆದ ಪಂದ್ಯವನ್ನು ತಪ್ಪಿಸಿಕೊಂಡಿದ್ದ ಕೆ.ಎಲ್. ರಾಹುಲ್ ಮತ್ತೆ ಭಾರತ ತಂಡದ ಆಡುವ ಹನ್ನೊಂದರ ಬಳಗಕ್ಕೆ ಮರಳಿದ್ದಾರೆ. ಅವರೊಂದಿಗೆ ಪ್ರಿನ್ಸ್ ಯಾದವ್ ಹಾಗೂ ಅರ್ಷದೀಪ್ ಸಿಂಗ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಟಾಸ್ ವೇಳೆ ಮಾತನಾಡಿದ ನಾಯಕ ಶುಭ್‌ಮನ್ ಗಿಲ್, "ನಮ್ಮ ತಂಡದಲ್ಲಿ ಮೂರು ಬದಲಾವಣೆಗಳನ್ನು ತರಲಾಗಿದೆ. ಜಸ್‌ಪ್ರೀತ್ ಬುಮ್ರಾ ಮೊಣಕಾಲಿನ ಗಾಯದ ಕಾರಣ ಈ ಪಂದ್ಯಕ್ಕೆ ಲಭ್ಯರಿಲ್ಲ. ವಾಷಿಂಗ್ಟನ್ ಸುಂದರ್ ಕೂಡ ಗಾಯದಿಂದ ಹೊರಗುಳಿದಿದ್ದಾರೆ. ಹರ್ಷ ದುಬೆ ಕೂಡ ಈ ಪಂದ್ಯದಲ್ಲಿ ಆಡುತ್ತಿಲ್ಲ. ಅವರ ಬದಲಿಗೆ ಕೆ.ಎಲ್. ರಾಹುಲ್, ಪ್ರಿನ್ಸ್ ಯಾದವ್ ಮತ್ತು ಅರ್ಷದೀಪ್ ಸಿಂಗ್ ತಂಡಕ್ಕೆ ಬಂದಿದ್ದಾರೆ," ಎಂದು ತಿಳಿಸಿದರು.
Presenting #TeamIndia's Playing XI for the 3️⃣rd ODI 🙌
— BCCI (@BCCI) July 19, 2026
Jasprit Bumrah had an impact injury on his left knee while fielding in the second ODI in Cardiff. He was not available for selection for the third ODI due to reactive swelling in his left knee.
Updates ▶️… pic.twitter.com/RJdchL62hv
ಮುಂದುವರಿದು ಮಾತನಾಡಿದ ಗಿಲ್, "ನಾವು ಅಂಕಿಅಂಶಗಳ ಮೇಲೆ ಹೆಚ್ಚು ಅವಲಂಬಿತರಾಗುವುದಿಲ್ಲ. ನಮಗೆ ಅವರು ಉತ್ತಮ ಬೌಲರ್ ಎನ್ನುವ ವಿಶ್ವಾಸವಿದೆ. ಈ ಪಿಚ್‌ನಲ್ಲಿ ನಾಲ್ವರು ವೇಗದ ಬೌಲರ್‌ಗಳೊಂದಿಗೆ ಕಣಕ್ಕಿಳಿಯಲು ಬಯಸಿದ್ದೆವು. ಮಧ್ಯದ ಓವರ್‌ಗಳಲ್ಲಿ ಸ್ಪಿನ್ನರ್‌ಗಳಿಗಿಂತ ವೇಗಿಗಳು ಹೆಚ್ಚು ಪರಿಣಾಮಕಾರಿಯಾಗುತ್ತಾರೆ ಎಂಬುದನ್ನು ನಾವು ಗಮನಿಸಿದ್ದೇವೆ." ಎಂದರು.
🚨 Toss 🚨
— BCCI (@BCCI) July 19, 2026
England have won the toss and elected to bat first in the 3️⃣rd ODI.
Updates ▶️ https://t.co/pLZ2PvDH5G#TeamIndia | #ENGvIND pic.twitter.com/uZ2XqxneZb
ಎರಡನೇ ಏಕದಿನ ಪಂದ್ಯದ ಬಗ್ಗೆ ಪ್ರತಿಕ್ರಿಯಿಸಿದ ಅವರು, "ಸುಮಾರು 25 ಓವರ್‌ಗಳವರೆಗೆ ನಾವು ಉತ್ತಮ ಸ್ಥಿತಿಯಲ್ಲಿದ್ದೆವು. ಆದರೆ ನಂತರ ಮಧ್ಯದ ಓವರ್‌ಗಳಲ್ಲಿ ಸತತವಾಗಿ ವಿಕೆಟ್ ಕಳೆದುಕೊಂಡೆವು. ಅಂತಹ ಪರಿಸ್ಥಿತಿಯಲ್ಲಿ ನಾವು 280 ರಿಂದ 300 ರನ್‌ಗಳ ಗುರಿ ತಲುಪಬೇಕು. ಕಳೆದ ಎರಡು ಪಂದ್ಯಗಳಲ್ಲಿ ಈ ಪಿಚ್‌ನಲ್ಲಿ ಸುಲಭವಾಗಿ ರನ್ ಗಳಿಸುವುದು ಕಷ್ಟ ಎಂಬುದು ಕಂಡುಬಂದಿದೆ. ಆದ್ದರಿಂದ ಉತ್ತಮ ಮೊತ್ತ ಕಲೆಹಾಕಿ ತಂಡವನ್ನು ಬಲಿಷ್ಠ ಸ್ಥಿತಿಯಲ್ಲಿ ಇರಿಸಲು ನಾವು ಪ್ರಯತ್ನಿಸುತ್ತೇವೆ," ಎಂದು ಗಿಲ್ ಹೇಳಿದ್ದಾರೆ.