IND vs ENG: ಶತಕ ಸಿಡಿಸಿ ವಿಶೇಷ ದಾಖಲೆ ಬರೆದ ವಿಕೆಟ್ ಕೀಪರ್ ಜೇಮಿ ಸ್ಮಿತ್!
ಇಂಗ್ಲೆಂಡ್ ವಿರುದ್ದ ಬರ್ಮಿಂಗ್‌ಹ್ಯಾಮ್‌ನ ಎಜ್‌ಬಾಸ್ಟನ್‌ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿಕೆಟ್ ಕೀಪರ್ ಜೇಮಿ ಸ್ಮಿತ್ ತಮ್ಮ ಟೆಸ್ಟ್ ಕ್ರಿಕೆಟ್ ವೃತ್ತಿ ಬದುಕಿನಲ್ಲಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಆ ಮೂಲಕ ಇಂಗ್ಲೆಂಡ್ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಅಂತ್ಯಂತ ವೇಗದ ಶತಕ ಸಿಡಿಸಿದ ಮೂರನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

ಇಂಗ್ಲೆಂಡ್ ಪರ ಮೂರನೇ ವೇಗದ ಶತಕ ಬಾರಿಸಿದ ಜೇಮಿ ಸ್ಮಿತ್.

ಬರ್ಮಿಂಗ್‌ಹ್ಯಾಮ್: ಇಂಗ್ಲೆಂಡ್ ವಿರುದ್ದ ಬರ್ಮಿಂಗ್‌ಹ್ಯಾಮ್‌ನ ಎಜ್‌ಬಾಸ್ಟನ್‌ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ (IND vs ENG) ಇಂಗ್ಲೆಂಡ್ ವಿಕೆಟ್ ಕೀಪರ್ ಜೇಮಿ ಸ್ಮಿತ್ (Jamie Smith) ತಮ್ಮ ಟೆಸ್ಟ್ ಕ್ರಿಕೆಟ್ ವೃತ್ತಿ ಬದುಕಿನಲ್ಲಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಆ ಮೂಲಕ ಇಂಗ್ಲೆಂಡ್ (England) ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಅಂತ್ಯಂತ ವೇಗದ ಶತಕ ಸಿಡಿಸಿದ ಮೂರನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.
ಭಾರತ ತಂಡ ನೀಡಿದ 588 ರನ್ ಗಳ ಸವಾಲಿನ ಗುರಿಯ ಬೆನ್ನತ್ತಿದ ಇಂಗ್ಲೆಂಡ್ 5 ವಿಕೆಟ್ ನಷ್ಟಕ್ಕೆ 85ರನ್‌ಗಳನ್ನು ಕಲೆಹಾಕುವ ಮೂಲಕ ತೀವ್ರ ಹಿನ್ನಡೆ ಅನುಭಸಿತು. ಈ ವೇಳೆ ಕ್ರೀಸ್‌ಗೆ ಬಂದ ಸ್ಮಿತ್, ಭಾರತದ ಬೌಲರ್‌ಗಳ ವಿರುದ್ದ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶನ ತೋರುವ ಮೂಲಕ ತಂಡಕ್ಕೆ ನೆರವಾದರು. ವಿಶೇಷವಾಗಿ ಭಾರತ ತಂಡದ ವೇಗಿ ಪ್ರಸಿಧ್ ಕೃಷ್ಣರವರ ಒಂದೇ ಓವರ್‌ನಲ್ಲಿ 23ರನ್ ಬಾರಿಸಿ ಎಲ್ಲರ ಗಮನ ಸೆಳೆದರು. ಬಿರುಸಿನ ಬ್ಯಾqff ಮಾಡುತ್ತಿದ್ದ ಸ್ಮಿತ್ ಅವರ ಎದುರು ಪ್ರಸಿಧ್ ಕೃಷ್ಣ ಅವರ ಬೌನ್ಸರ್ ರಣತಂತ್ರ ಕೆಲಸ ಮಾಡಲಿಲ್ಲ. ಜೇಮಿ ಸ್ಮಿತ್ ಸ್ಥಿರವಾಗಿ ಮೈದಾನದಲ್ಲಿ ಅಬ್ಬರದ ಬ್ಯಾಟಿಂಗ್ ನಡೆಸಿ 80 ಎಸೆತಗಳಲ್ಲಿ ಶತಕ ಸಿಡಿಸಿ ಸಂಭ್ರಮಿಸಿದರು.
IND vs ENG: ತ್ರಿಶತಕ ತಪ್ಪಿದ್ದಕ್ಕೆ ತಂದೆಯ ಪ್ರತಿಕ್ರಿಯೆ ಹೇಗಿತ್ತೆಂದು ತಿಳಿಸಿದ ಶುಭಮನ್ ಗಿಲ್!
ಸ್ಮಿತ್ ತಮ್ಮ ಈ ಶತಕದೊಂದಿಗೆ, ಹ್ಯಾರಿ ಬ್ರೂಕ್ 2022 ರಲ್ಲಿ ಪಾಕಿಸ್ತಾನದ ವಿರುದ್ಧ ರಾವಲ್ಪಿಂಡಿಯಲ್ಲಿ ಬಾರಿಸಿದ 80 ಎಸೆತಗಳ ಶತಕದ ದಾಖಲೆಯನ್ನು ಸರಿಗಟ್ಟಿದರು. ಇಂಗ್ಲೆಂಡ್ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಜಾನಿ ಬೈರ್‌ಸ್ಟೋವ್ ಎರಡನೇ ವೇಗದ ಶತಕ ಸಿಡಿಸಿದ ಬ್ಯಾಟ್ಸ್‌ಮನ್ ಆಗಿದ್ದಾರೆ. ಬೈರ್ ಸ್ಟೋವ್ ನ್ಯೂಜಿಲೆಂಡ್ ವಿರುದ್ಧ ಟ್ರೆಂಟ್ ಬ್ರಿಡ್ಜ್‌ನಲ್ಲಿ 77 ಎಸೆತಗಳಲ್ಲಿ ಶತಕ ಬಾರಿಸಿದ್ದರು.
ಭಾರತ ವಿರುದ್ಧ ಟೆಸ್ಟ್ ಪಂದ್ಯಗಳಲ್ಲಿ ವೇಗವಾಗಿ ಶತಕ ಬಾರಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ, ಸ್ಮಿತ್ ನಾಲ್ಕನೇ ಸ್ಥಾನಕ್ಕೆ ಏರಿದ್ದಾರೆ. ಡೇವಿಡ್ ವಾರ್ನರ್ (69 ಎಸೆತಗಳು, 2012), ಎಬಿ ಡಿ ವಿಲಿಯರ್ಸ್ (75 ಎಸೆತಗಳು, 2010), ಮತ್ತು ಶಾಹಿದ್ ಆಫ್ರಿದಿ (78 ಎಸೆತಗಳು, 2006) ಕ್ರಮವಾಗಿ ಮೊದಲ ಮೂರು ಸ್ಥಾನದಲ್ಲಿದ್ದಾರೆ.
Delivering on his incredible talent! 😍
— England Cricket (@englandcricket) July 4, 2025
Sensational from Jamie Smith! 🙌@IGcom | 🏴 #ENGvIND 🇮🇳 pic.twitter.com/jJoCMGn89O
ಶತಕ ಸಿಡಿಸಿದ ಹ್ಯಾರಿ ಬ್ರೂಕ್
ಭಾರತ ತಂಡ 588 ರನ್‌ಗಳಿಗೆ ಪ್ರಥಮ ಇನಿಂಗ್ಸ್ ಅನ್ನು ಮುಗಿಸಿದ ಬಳಿಕ ಬ್ಯಾಟಿಂಗ್ ಆರಂಭಿಸಿದ ಇಂಗ್ಲೆಂಡ್, 84 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಬ್ಯಾಟ್ ಮಾಡಲು ಬಂದ ಹ್ಯಾರಿ ಬ್ರೂಕ್ 140 ಬಾಲ್‌ಗಳಲ್ಲಿ 102 ರನ್ ಗಳೊಂದಿಗೆ ಶತಕ ಬಾರಿಸುವ ಮೂಲಕ ತಂಡಕ್ಕೆ ಆಸರೆಯಾಗಿದ್ದಾರೆ. ಸ್ಮಿತ್ ಮತ್ತು ಬ್ರೂಕ್ ಜೊತೆಯಾಟದಿಂದ ಇಂಗ್ಲೆಂಡ್ 5 ವಿಕೆಟ್ ಕಳೆದುಕೊಂಡು 279 ರನ್ ಕಲೆಹಾಕಿ ಮೂರನೇ ದಿನದಾಟದಲ್ಲಿ ಮುನ್ನಡೆ ಸಾಧಿಸಿದೆ.