IND vs ENG: ಮೊದಲನೇ ಟೆಸ್ಟ್‌ನಲ್ಲಿ ಶತಕ ಸಿಡಿಸಿ ವಿಶೇಷ ದಾಖಲೆ ಯಶಸ್ವಿ ಜೈಸ್ವಾಲ್!
Yashasvi Jaiswal hits Hundred: ಇಂಗ್ಲೆಂಡ್ ವಿರುದ್ಧ ಲೀಡ್ಸ್‌ನ ಹೆಡಿಂಗ್ಲೆ ಸ್ಟೇಡಿಯಂನಲ್ಲಿ ಶುಕ್ರವಾರ ಆರಂಭವಾದ ಮೊದಲನೇ ಟೆಸ್ಟ್ ಪಂದ್ಯದ ಆರಂಭಿಕ ದಿನ ಯಶಸ್ವಿ ಜೈಸ್ವಾಲ್ ಭರ್ಜರಿ ಶತಕವನ್ನು ಬಾರಿಸಿದ್ದಾರೆ. ಆ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ನೂತನ ಮೈಲುಗಲ್ಲು ತಲುಪಿದ್ದಾರೆ. ಈ ದಾಖಲೆಯ ಬಗ್ಗೆ ಇಲ್ಲಿ ಸಂಪೂರ್ಣವಾಗಿ ವಿವರಿಸಲಾಗಿದೆ.

ಇಂಗ್ಲೆಂಡ್‌ನಲ್ಲಿ ಮೊದಲ ಶತಕ ಸಿಡಿಸಿ ವಿಶೇಷ ದಾಖಲೆ ಬರೆದ ಯಶಸ್ವಿ ಜೈಸ್ವಾಲ್.

ಲೀಡ್ಸ್: ಇಲ್ಲಿನ ಹೆಡಿಂಗ್ಲೆ ಸ್ಟೇಡಿಯಂನಲ್ಲಿ ಶುಕ್ರವಾರ ಆರಂಭಗೊಂಡಿರುವ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು (IND vs ENG) ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾದ ಭಾರತ ತಂಡದ ಪರ ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ (Yashasvi jaiswal) ಶತಕವನ್ನು ಸಿಡಿಸಿದ್ದಾರೆ. ಆ ಮೂಲಕ ಇಂಗ್ಲೆಂಡ್ ನೆಲದಲ್ಲಿ ನೂತನ ಮೈಲುಗಲ್ಲು ತಲುಪಿದ್ದಾರೆ. ಆರ್ ಅಶ್ವಿನ್, ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಯಶಸ್ವಿ ಜೈಸ್ವಾಲ್ ತನಗ ನೀಡುರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಆ ಮೂಲಕ ಭಾರತ ತಂಡಕ್ಕೆ ಭರ್ಜರಿ ಆರಂಭವನ್ನು ತಂದುಕೊಟ್ಟಿದ್ದಾರೆ.
ಕೆಎಲ್ ರಾಹುಲ್ ಜೊತೆ ಇನಿಂಗ್ಸ್ ಆರಂಭಿಸಿದ ಯಶಸ್ವಿ ಜೈಸ್ವಾಲ್ ಅವರು ಅದ್ಭುತ ಬ್ಯಾಟಿಂಗ್ ಪ್ರದರ್ಶನವನ್ನು ತೋರಿದರು. ಕೆಎಲ್ ರಾಹುಲ್ (42) ಅವರ ಜೊತೆಗೆ ಮುರಿಯದ ಮೊದಲನೇ ವಿಕೆಟ್‌ಗೆ 91 ರನ್‌ಗಳಿಸಿದ ಜೈಸ್ವಾಲ್, ಭಾರತ ತಂಡಕ್ಕೆ ಭರ್ಜರಿ ಆರಂಭವನ್ನು ತಂದುಕೊಟ್ಟಿದ್ದರು. ಒಂದು ತುದಿಯಲ್ಲಿ ಗಟ್ಟಿಯಾಗಿ ನಿಂತು ಬ್ಯಾಟ್ ಮಾಡಿದ್ದ ಜೈಸ್ವಾಲ್, 159 ಎಸೆತಗಳಲ್ಲಿ ಒಂದು ಸಿಕ್ಸರ್ ಹಾಗೂ 16 ಬೌಂಡರಿಗಳೊಂದಿಗೆ 101 ರನ್‌ಗಳನ್ನು ಗಳಿಸಿದರು. ಆ ಮೂಲಕ ಇಂಗ್ಲೆಂಡ್ ನೆಲದಲ್ಲಿ ಮೊದಲ ಶತಕ ಹಾಗೂ ಒಟ್ಟಾರೆ ತಮ್ಮ ಟೆಸ್ಟ್ ವೃತ್ತಿ ಜೀವನದಲ್ಲಿ ಐದನೇ ಶತಕವನ್ನು ಪೂರ್ಣಗೊಳಿಸಿದ್ದಾರೆ. ಅಲ್ಲದೆ ನಾಯಕ ಶುಭಮನ್ ಗಿಲ್ ಜೊತೆ 129 ರನ್‌ಗಳನ್ನು ಬಾರಿಸಿದ್ದರು.
IND vs ENG: ಟೆಸ್ಟ್ ಕ್ರಿಕೆಟ್‌ನಲ್ಲಿ ಅಪರೂಪದ ದಾಖಲೆ ಬರೆದ ಯಶಸ್ವಿ ಜೈಸ್ವಾಲ್!
ನೂತನ ಮೈಲುಗಲ್ಲು ತಲುಪಿದ ಜೈಸ್ವಾಲ್
ಈ ಶತಕದ ಮೂಲಕ ಯಶಸ್ವಿ ಜೈಸ್ವಾಲ್ ಅವರು ತಮ್ಮ ಟೆಸ್ಟ್ ವೃತ್ತಿ ಜೀವನದಲ್ಲಿ ನೂತನ ಮೈಲುಗಲ್ಲು ತಲುಪಿದ್ದಾರೆ. ಅವರು ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾದಲ್ಲಿ ಆಡಿದ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯಗಳಲ್ಲಿ ಶತಕವನ್ನು ಬಾರಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎಂಬ ವಿಶೇಷ ದಾಖಲೆಯನ್ನು ಯಶಸ್ವಿ ಜೈಸ್ವಾಲ್ ಬರೆದಿದ್ದಾರೆ. ಅವರು ಆಸ್ಟ್ರೇಲಿಯಾದಲ್ಲಿ 2024/25ರ ಸಾಲಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ತಮ್ಮ ಮೊದಲನೇ ಟೆಸ್ಟ್ ಪಂದ್ಯದಲ್ಲಿಯೇ ಶತಕವನ್ನು ಬಾರಿಸಿದ್ದರು. ಅವರು ಕಾಂಗರೂ ನಾಡಿನಲ್ಲಿ ಆಡಿದ್ದ ತಮ್ಮ ಮೊದಲನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್‌ನಲ್ಲಿ 161 ರನ್‌ಗಳನ್ನು ಬಾರಿಸಿದ್ದರು.
📸 📸
— BCCI (@BCCI) June 20, 2025
A celebratory run 👌
The hands aloft 🙌
The trademark jump ☺️
Updates ▶️ https://t.co/CuzAEnBkyu#TeamIndia | #ENGvIND | @ybj_19 pic.twitter.com/E4PDGDOKEb
ಟೀ ವಿರಾಮದ ಬಳಿಕ ಕ್ರೀಸ್‌ಗೆ ಬಂದ ಕ್ರೀಸ್‌ಗೆ ಬಂದಿದ್ದ ಯಶಸ್ವಿ ಜೈಸ್ವಾಲ್ ದೊಡ್ಡ ಇನಿಂಗ್ಸ್ ಆಡುವ ಭರವಸೆಯನ್ನು ಮೂಡಿಸಿದ್ದರು. ಆದರೆ, 53ನೇ ಓವರ್‌ನಲ್ಲಿ ಬೆನ್ ಸ್ಟೋಕ್ಸ್ ಎಸೆತದಲ್ಲಿ ಎಡವಿದ ಜೈಸ್ವಾಲ್ ಕ್ಲೀನ್ ಬೌಲ್ಡ್ ಆದರು. ಆ ಮೂಲಕ ತಮ್ಮ ಚೊಚ್ಚಲ ಶತಕದ ಇನಿಂಗ್ಸ್ ಅನ್ನು ಮುಗಿಸಿದರು. ಆದರೆ, ಆಂಗ್ಲರ ನಾಡಿನಲ್ಲಿನ ತಮ್ಮ ಮೊದಲನೇ ಟೆಸ್ಟ್ ಇನಿಂಗ್ಸ್‌ನಲ್ಲಿ ಶತಕದ ಮೂಲಕ ಇತಿಹಾಸವನ್ನು ಸೃಷ್ಟಿಸಿದ್ದಾರೆ.
IND vs ENG: ಭಾರತ ತಂಡವನ್ನು ಮುನ್ನಡೆಸಿ 58 ವರ್ಷಗಳ ಹಳೆಯ ದಾಖಲೆ ಮುರಿದ ಶುಭಮನ್ ಗಿಲ್!
ಇಂಗ್ಲೆಂಡ್‌ನಲ್ಲಿ ಆಡಿದ ಚೊಚ್ಚಲ ಟೆಸ್ಟ್‌ನಲ್ಲಿ ಶತಕ ಬಾರಿಸಿದ ಭಾರತೀಯರು
146 – ಮುರಳಿ ವಿಜಯ್ (ನಾಟಿಂಗ್‌ಹ್ಯಾಮ್, 2014)
133 – ವಿಜಯ್ ಮಾಂಜ್ರೇಕರ್ (ಲೀಡ್ಸ್, 1952)
131 - ಸೌರವ್ ಗಂಗೂಲಿ (ಲಾರ್ಡ್ಸ್ 1996)
129* – ಸಂದೀಪ್ ಪಾಟೀಲ್ (ಮ್ಯಾಂಚೆಸ್ಟರ್, 1982)
112 – ಅಬ್ಬಾಸ್ ಅಲಿ ಬೇಗ್ (ಮ್ಯಾಂಚೆಸ್ಟರ್, 1959)
100* – ಯಶಸ್ವಿ ಜೈಸ್ವಾಲ್ (ಲೀಡ್ಸ್, 2025)