ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

IND vs ENG: ಲಾರ್ಡ್ಸ್‌ನಲ್ಲಿ ರೋಹಿತ್‌ ಶರ್ಮಾಗೆ ಕೊನೆಯ ಪಂದ್ಯವೇ? ಸ್ಪಷ್ಟನೆ ನೀಡಿದ ಬಿಸಿಸಿಐ ಸೆಕ್ರೆಟರಿ!

ಇಂಗ್ಲೆಂಡ್‌ ವಿರುದ್ಧ ಮೂರನೇ ಒಡಿಐ ರೋಹಿತ್‌ ಶರ್ಮಾ ಪಾಲಿಗೆ ಭಾರತ ತಂಡದ ಪರ ಕೊನೆಯ ಪಂದ್ಯ ಅಲ್ಲ ಹಾಗೂ ಲಾರ್ಡ್ಸ್‌ ಪಂದ್ಯದ ಬಳಿಕ ಮಾಜಿ ನಾಯಕ ತಮ್ಮ ವೃತ್ತಿ ಜೀವನಕ್ಕೆ ವಿದಾಯ ಹೇಳುವುದಿಲ್ಲ ಎಂದು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಕಾರ್ಯದರ್ಶಿ ದೇವಜೀತ್‌ ಸೈಕಿಯಾ ಸ್ಪಷ್ಟಪಡಿಸಿದ್ದಾರೆ.

ರೋಹಿತ್‌ ಶರ್ಮಾ ಭವಿಷ್ಯದ ಬಗ್ಗೆ ದೇವಜೀತ್‌ ಸೈಕಿಯಾ ಸ್ಪಷ್ಟನೆ.

ನವದೆಹಲಿ: ಭಾರತ ತಂಡದ ಮಾಜಿ ನಾಯಕ ರೋಹಿತ್‌ ಶರ್ಮಾ (Rohit Sharma) ಅವರ ಒಡಿಐ ಭವಿಷ್ಯದ ಬಗ್ಗೆ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯ (BCCI) ಕಾರ್ಯದರ್ಶಿ ದೇವಜೀತ್‌ ಸೈಕಿಯಾ (Devajit Saikia) ಅವರು ಸ್ಪಷ್ಟನೆ ನೀಡಿದ್ದಾರೆ. ಇಂಗ್ಲೆಂಡ್‌ ವಿರುದ್ದದ ಮೂರನೇ ಒಡಿಐ ರೋಹಿತ್‌ ಪಾಲಿಗೆ ಕೊನೆಯ ಪಂದ್ಯ ಎಂದು ಹೇಳಲಾಗುತ್ತಿತ್ತು ಹಾಗೂ ಅವರನ್ನು 2027ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯ ಯೋಜನೆಯಿಂದ ಕೈಬಿಡಲು ಬಿಸಿಸಿಐ ಆಯ್ಕೆದಾರರು ಹಾಗೂ ಟೀಮ್‌ ಮ್ಯಾನೇಜ್‌ಮೆಂಟ್‌ ನಿರ್ಧರಿಸಿದೆ ಎಂದು ವರದಿಯಾಗಿದ್ದವು. ಈ ಬಗ್ಗೆ ಇದೀಗ ದೇವಜೀತ್‌ ಸೈಕಿ ಅವರು ಈ ವಿಷಯದ ಬಗ್ಗೆ ಮಾಹಿತಿ ನೀಡಿದ್ದಾರೆ.

39ನೇ ವಯಸ್ಸಿನ ರೋಹಿತ್‌ ಶರ್ಮಾ ಅವರು ಟಿ20ಐ ಹಾಗೂ ಟೆಸ್ಟ್‌ ಕ್ರಿಕೆಟ್‌ಗೆ ಈಗಾಗಲೇ ನಿವೃತ್ತಿಯನ್ನು ಘೋಷಿಸಿದ್ದಾರೆ ಹಾಗೂ 2027ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಆಡಬೇಕೆಂಬ ಉದ್ದೇಶದಿಂದ ಅವರು 50 ಓವರ್‌ಗಳ ಸ್ವರೂಪದಲ್ಲಿ ಸಕ್ರಿಯರಾಗಿದ್ದಾರೆ. ಆದರೆ, ಇಂಗ್ಲೆಂಡ್‌ ವಿರುದ್ಧ ಪ್ರಸ್ತುತ ನಡೆಯುತ್ತಿರುವ ಏಕದಿನ ಸರಣಿ ಆರಂಭಿಕ ಎರಡೂ ಪಂದ್ಯಗಳಲ್ಲಿ ಅವರು ವಿಫಲರಾಗಿದ್ದರು. ಇದಾದ ಬಳಿಕ ಹಲವು ವರದಿಗಳ ಪ್ರಕಾರ, ರೋಹಿತ್‌ ಶರ್ಮಾಗೆ ಲಾರ್ಡ್ಸ್‌ನಲ್ಲಿ ಕೊನೆಯ ಪಂದ್ಯ ಎಂದು ಹೇಳಲಾಗಿತ್ತು.

ʻಏಕದಿನ ವಿಶ್ವಕಪ್‌ ಗೆಲ್ಲುವ ರೋಹಿತ್ ಶರ್ಮಾರ ಕನಸು ಭಗ್ನʼ: ಭಾರತ ತಂಡದಲ್ಲಿ ನಡೆಯತ್ತಿರುವ ಬೆಳವಣಿಗೆಗಳ ಸಂಪೂರ್ಣ ವಿವರ!

ಪಿಟಿಐ ಸುದ್ದಿಸಂಸ್ಥೆ ಜೊತೆ ಮಾತನಾಡಿದ ಬಿಸಿಸಿಐ ಕಾರ್ಯದರ್ಶಿ ದೇವಜೀತ್‌ ಸೈಕಿಯಾ,"ರೋಹಿತ್‌ ಶರ್ಮಾರ ಭವಿಷ್ಯದ ಬಗ್ಗೆ ಮಾಧ್ಯಮಗಳ ಮೂಲಕ ಸಾಕಷ್ಟು ಊಹಾಪೋಹಗಳು ಹರಿದಾಡುತ್ತಿವೆ. ಭಾನುವಾರ ಲಾರ್ಡ್ಸ್‌ನಲ್ಲಿ ರೋಹಿತ್‌ ಶರ್ಮಾ ಅವರಿಗೆ ಕೊನೆಯ ಎಂಬುದರ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ನಾನು ಸ್ಪಷ್ಟಪಡಿಸುತ್ತೇನೆ,." ಎಂದು ತಿಳಿಸಿದ್ದಾರೆ.

2027ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ರೋಹಿತ್‌ ಶರ್ಮಾ ಅವರ ಸ್ಥಾನದಲ್ಲಿ ಯಶಸ್ವಿ ಜೈಸ್ವಾಲ್‌ ಅವರಂಥ ಯುವ ಆಟಗಾರರಿಗೆ ಅವಕಾಶವನ್ನು ಮಾಡಿಕೊಡಲು ಗೌತಮ್‌ ಗಂಭೀರ್‌ ಮಾರ್ಗದರ್ಶನದ ಟೀಮ್‌ ಮ್ಯಾನೇಜ್‌ಮೆಂಟ್‌ ಬಯಸುತ್ತಿದೆ ಎಂತಲೂ ವರದಿಯಾಗಿತ್ತು.

IND vs ENG: ರೋಹಿತ್‌ ಶರ್ಮಾ ಒಡಿಐ ನಿವೃತ್ತಿ ಬಗ್ಗೆ ಸ್ಪಷ್ಟನೆ ನೀಡಿದ ಬ್ಯಾಟಿಂಗ್‌ ಕೋಚ್‌!

"ರೋಹಿತ್‌ ಶರ್ಮಾ ಅವರು ಭಾರತ ಏಕದಿನ ತಂಡದಲ್ಲಿ ನಿಯಮಿತವಾಗಿ ಆಡುತ್ತಿರುವ ಆಟಗಾರ ಹಾಗೂ ತಂಡದ ಯೋಜನೆಗಳಿಗೆ ತಕ್ಕಂತೆ ಅವರು ಎಷ್ಟು ಸಾಧ್ಯವೋ ಅಷ್ಟು ದೀಘಾವಧಿವರೆಗೂ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಲಿದ್ದಾರೆ. ಮತ್ತೊಂದು ವಿಷಯ ಏನೆಂದರೆ ಲಾರ್ಡ್ಸ್‌ ಒಡಿಐ ಅವರ ವೃತ್ತಿ ಜೀವನದ ಕೊನೆಯ ಪಂದ್ಯವಲ್ಲ," ಎಂದು ಬಿಸಿಸಿಐ ಕಾರ್ಯದರ್ಶಿ ಸ್ಪಷ್ಟಪಡಿಸಿದ್ದಾರೆ.

ಆರಂಭಿಕ ಎರಡು ಪಂದ್ಯಗಳಲ್ಲಿ ಕ್ರಮವಾಗಿ 11 ಮತ್ತು 26 ರನ್‌ಗಳನ್ನು ರೋಹಿತ್‌ ಶರ್ಮಾ ಗಳಿಸಿದ್ದರು. ಆ ಮೂಲಕ ದೊಡ್ಡ ಇನಿಂಗ್ಸ್‌ ಆಡುವಲ್ಲಿ ವಿಫಲರಾಗಿದ್ದರು. ಇದೀಗ ಅವರು ಜುಲೈ 19 ರಂದು ಲಂಡನ್‌ ಲಾರ್ಡ್ಸ್‌ ಅಂಗಣದಲ್ಲಿ ನಡೆಯುವ ಮೂರನೇ ಪಂದ್ಯದಲ್ಲಿ ದೊಡ್ಡ ಇನಿಂಗ್ಸ್‌ ಆಡಲು ಎದುರು ನೋಡುತ್ತಿದ್ದಾರೆ. ತಲಾ ಒಂದೊಂದು ಪಂದ್ಯವನ್ನು ಗೆದ್ದಿರುವ ಉಭಯ ತಂಡಗಳು, ಕೊನೆಯ ಪಂದ್ಯವನ್ನು ಗೆದ್ದರೆ ಭಾರತ ಏಕದಿನ ಸರಣಿಯನ್ನು ತನ್ನದಾಗಿಸಿಕೊಳ್ಳಲಿದೆ.