ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

IND vs NAM: ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ವಿಶ್ರಾಂತಿ ಪಡೆಯಬಲ್ಲ ಮೂವರು ಆಟಗಾರರು!

ಯುಎಸ್ಎ ವಿರುದ್ಧದ ಮೊದಲ ಪಂದ್ಯದಲ್ಲಿ ಕಠಿಣ ಹೋರಾಟ ನಡೆಸಿ ಕೊನೆ ಕ್ಷಣದಲ್ಲಿ ಗೆಲುವು ಸಾಧಿಸಿದ್ದ ಭಾರತ ತಂಡ ಫೆಬ್ರವರಿ 12ರಂದು ಗುರುವಾರ ನಮೀಬಿಯಾ ವಿರುದ್ಧದ ಪಂದ್ಯಕ್ಕೆ ಸಿದ್ಧತೆ ನಡೆಸುತ್ತಿದೆ. ಈ ನಡುವೆ ಎರಡನೇ ಪಂದ್ಯದಿಂದ ವೇಗಿ ಅರ್ಷದೀಪ್ ಸಿಂಗ್, ಅಕ್ಷರ್ ಪಟೇಲ್ ಹಾಗೂ ವರುಣ್ ಚಕ್ರವರ್ತಿ ಅವರು ವಿಶ್ರಾಂತಿ ಪಡೆಯುವ ಸಾಧ್ಯತೆಯಿದೆ. ಹೀಗಾಗಿ ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಬದಲಾವಣೆ ಖಚಿತ.

ನಮೀಬಿಯಾ ವಿರುದ್ಧದ ಪಂದ್ಯಕ್ಕೆ ಮೂವರು ಆಟಗಾರರಿಗೆ ವಿಶ್ರಾಂತಿ!

ಭಾರತ ತಂಡದಲ್ಲಿ ಮೂವರಿಗೆ ವಿಶ್ರಾಂತಿ ಸಾಧ್ಯತೆ! -

Profile
Ramesh Kote Feb 10, 2026 5:44 PM

ನವದೆಹಲಿ: ಭಾರತ ತಂಡ 2026ರ ಟಿ20 ವಿಶ್ವಕಪ್ (ICC T20 World Cup 2026) ಟೂರ್ನಿಯಲ್ಲಿ ಅಮೆರಿಕ ವಿರುದ್ಧ ಗೆಲುವು ಸಾಧಿಸುವ ಮೂಲಕ ತನ್ನ ಅಭಿಯಾನ ಆರಂಭಿಸಿದ್ದು, ಇದೀಗ ಗುರುವಾರ ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ನಮೀಬಿಯಾ ಎರಡನೇ ಪಂದ್ಯಕ್ಕೆ (IND vs NAM) ಸಜ್ಜಾಗುತ್ತಿದೆ. ಇನ್ನೂ ಮೊದಲ ಪಂದ್ಯದಲ್ಲಿ ಭಾರತ ತಂಡ 3 ಬದಲಾವಣೆಗಳೊಂದಿಗೆ ಕಣಕ್ಕಿಳಿದಿತ್ತು. ವಾಷಿಂಗ್ಟನ್ ಸುಂದರ್, ಜಸ್‌ಪ್ರೀತ್‌ ಬುಮ್ರಾ ಹಾಗೂ ಸಂಜು ಸ್ಯಾಮ್ಸನ್ (Sanju Samson) ಪ್ಲೇಯಿಂಗ್ XIನಿಂದ ಹೊರಗುಳಿದಿದ್ದರು. ಎರಡನೇ ಪಂದ್ಯದಲ್ಲೂ ಭಾರತ ತಂಡದಲ್ಲಿ ಕೆಲ ಬದಲಾವಣೆಗಳಾಗುವ ಸಾಧ್ಯತೆಯಿದೆ.

ಏಕೆಂದರೆ, ನಮೀಬಿಯಾ ವಿರುದ್ಧದ ಪಂದ್ಯಕ್ಕೆ ವಾಷಿಂಗ್ಟನ್ ಸುಂದರ್ ಅವರು ತಂಡಕ್ಕೆ ಮರುಳುವುದಾಗಿ ನಾಯಕ ಸೂರ್ಯಕುಮಾರ್ ಯಾದವ್ ತಿಳಿಸಿದ್ದಾರೆ. ಇದರಂತೆ ಸುಂದರ್ ಅವರು ತಂಡಕ್ಕೆ ಕಮ್‌ಬ್ಯಾಕ್ ಮಾಡಿದರೆ ಬದಲಾವಣೆ ಖಚಿತ. ಇದರ ನಡುವೆ ನಮೀಬಿಯಾ ವಿರುದ್ಧದ ಪಂದ್ಯದಿಂದ ವೇಗಿ ಅರ್ಷದೀಪ್ ಸಿಂಗ್, ಅಕ್ಷರ್ ಪಟೇಲ್ ಮತ್ತು ವರುಣ್ ಚಕ್ರವರ್ತಿ ಈ ಮೂವರು ಆಟಗಾರರು ವಿಶ್ರಾಂತಿ ಪಡೆಯಲಿದ್ದಾರೆ ಎನ್ನಲಾಗಿದೆ.

ಬಿಸಿಸಿಐ ವಾರ್ಷಿಕ ಗುತ್ತಿಗೆ ಪಟ್ಟಿಯಲ್ಲಿ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಹಿಂಬಡ್ತಿ ಪಡೆಯಲು ಕಾರಣವೇನು?

1.ಅರ್ಷದೀಪ್ ಸಿಂಗ್

ಟೀಮ್ ಇಂಡಿಯಾ ಪರಿಣಾಮಕಾರಿ ಎಡಗೈ ವೇಗಿ ಅರ್ಷದೀಪ್ ಸಿಂಗ್ ಅವರ ನಿರೀಕ್ಷಿತ ಪ್ರದರ್ಶನದ ಹೊರತಾಗಿಯೂ, ಅವರು ತಂಡದಿಂದ ಹೊರಗೂಳಿಯುವ ಸಾಧ್ಯತೆಯಿದೆ. ಅವರು ಯುಎಸ್ಎ ವಿರುದ್ಧದ ಮೊದಲ ಪಂದ್ಯದಲ್ಲಿ ಎರಡು ವಿಕೆಟ್ ಕಬಳಿಸಿ ಎಲ್ಲರ ಗಮನ ಸೆಳೆದಿದ್ದರು. ಆದರೆ, ಅನಾರೋಗ್ಯದ ಕಾರಣಕ್ಕೆ ಅಮೆರಿಕ ವಿರುದ್ಧದ ಪಂದ್ಯದಿಂದ ವಿಶ್ರಾಂತಿ ಪಡೆದಿದ್ದ ಟೀಮ್ ಇಂಡಿಯಾ ಪ್ರಮುಖ ವೇಗಿ ಜಸ್‌ಪ್ರೀತ್ ಬುಮ್ರಾ ತಂಡಕ್ಕೆ ಮರಳಲು ಸಜ್ಜಾಗಿರುವುದರಿಂದ ಆಯ್ಕೆ ಸಮಿತಿ ಈ ನಿರ್ಧಾರ ಮಾಡಬಹುದು ಎನ್ನಲಾಗಿದೆ.

2.ಅಕ್ಷರ್ ಪಟೇಲ್

ಟಿ20 ವಿಶ್ವಕಪ್ ಪ್ರಾರಂಭವಾಗುವ ಕೆಲವೇ ವಾರಗಳ ಮೊದಲು ನಾಗ್ಪುರದಲ್ಲಿ ನಡೆದಿದ್ದ ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20ಐ ಪಂದ್ಯದಲ್ಲಿ ಎಡಗೈ ತೋರುಬೆರಳಿನ ಗಾಯಕ್ಕೆ ತುತ್ತಾಗಿದ್ದರು. ಬಳಿಕ ಒಂದು ಪಂದ್ಯದಿಂದ ಹೊರಗುಳಿದು ಸರಣಿಯ ಅಂತಿಮ ಹಾಗೂ ಮೂರನೇ ಪಂದ್ಯಕ್ಕೆ ತಂಡಕ್ಕೆ ಮರಳಿ ಮೂರು ವಿಕೆಟ್ ಕಿತ್ತಿದ್ದರು. ಅವರು ಗಾಯದ ನಡುವೆಯೂ ವಾಷಿಂಗ್ಟನ್ ಸುಂದರ್ ಅವರ ಅಲಭ್ಯತೆಯ ಕಾರಣ ಯುಎಸ್ಎ ವಿರುದ್ಧದ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದರು. ಇದೀಗ ಸುಂದರ್ ಅವರು ಚೇತರಿಸಿಕೊಂಡು ತಂಡಕ್ಕೆ ಮರಳುವುದರಿಂದ ಇವರು ವಿಶ್ರಾಂತಿ ಪಡೆಯಬಹುದು.

NAM vs NED: ಬಾಸ್ ಡಿ ಲೀಡೆ ಆಲ್‌ರೌಂಡರ್‌ ಆಟ; ಭರ್ಜರಿ ಗೆಲುವು ಸಾಧಿಸಿದ ನೆದರ್ಲ್ಯಾಂಡ್‌

3.ವರುಣ್ ಚಕ್ರವರ್ತಿ

ಇನ್ನೊಂದು ಬದಿಯಲ್ಲಿ ಕಳೆದ ಪಂದ್ಯದಲ್ಲಿ ಒಂದು ವಿಕೆಟ್ ಪಡೆದಿದ್ದ ಸ್ಪಿನ್ನರ್ ವರುಣ್ ಚಕ್ರವರ್ತಿಯವರು ತಂಡದಲ್ಲಿ ಎಕ್ಸ್ ಫ್ಯಾಕ್ಟರ್ ಆಗಿ ಉಳಿದಿದ್ದಾರೆ. ಈ ಕಾರಣದಿಂದಾಗಿ ಅವರು ಹೊರಗುಳಿದು ಕುಲ್‌ದೀಪ್ ಯಾದವ್ ಅವರಿಗೆ ಅವಕಾಶ ನೀಡಬಹುದು.

ಅನಾರೋಗ್ಯದಿಂದ ಬಳಲುತ್ತಿರುವ ಅಭಿಷೇಕ್ ಶರ್ಮಾ?

ಯುಎಸ್ಎ ವಿರುದ್ಧದ ಮೊದಲ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಅನಾರೋಗ್ಯದ ಕಾರಣ ಆ ಪಂದ್ಯದಲ್ಲಿ ಫೀಲ್ಡಿಂಗ್ ಮಾಡಿರಲಿಲ್ಲ. ಬದಲಾಗಿ ಸಂಜು ಸ್ಯಾಮ್ಸನ್ ಅವರು ಮೈದಾನದಲ್ಲಿ ಕಾಣಿಸಿಕೊಂಡಿದ್ದರು. ಅವರ ಆರೋಗ್ಯದ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಒಂದು ವೇಳೆ ಅಭಿಷೇಕ್ ಅವರು ಅನಾರೋಗ್ಯದಿಂದ ಚೇತರಿಸಿಕೊಳ್ಳದಿದ್ದಲ್ಲಿ ಅವರ ಸ್ಥಾನದಲ್ಲಿ ಸಂಜು ಸ್ಯಾಮ್ಸನ್ ಕಣಕ್ಕಿಳಿಯುವ ಸಾಧ್ಯತೆ ಇದೆ.