ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಭುವನೇಶ್ವರ್‌ ಕುಮಾರ್‌ ರೀತಿ ಭಾರತ ತಂಡಕ್ಕೆ ಮರಳಬಲ್ಲ 3 ಭಾರತೀಯ ಆಟಗಾರರು!

ನ್ಯೂಜಿಲೆಂಡ್‌ ವಿರುದ್ಧದ ಐದು ಪಂದ್ಯಗಳ ಟಿ20ಐ ಸರಣಿಗೆ ಅಕ್ಟೋಬರ್‌ 6ರಂದು ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿತ್ತು. ನಾಲ್ಕು ವರ್ಷಗಳ ಬಳಿಕ ಭುವನೇಶ್ವರ್‌ ಕುಮಾರ್‌ ಭಾರತ ತಂಡಕ್ಕೆ ಮರಳಿದ್ದಾರೆ. ಇದರ ಬೆನ್ನಲ್ಲೆ ಹಲವು ಹಿರಿಯ ಆಟಗಾರರು ಕೂಡ ಭಾರತ ತಂಡಕ್ಕೆ ಕಮ್‌ಬ್ಯಾಕ್‌ ಮಾಡಬೇಕೆಂಬ ಆಶಯದೊಂದಿಗೆ ಸಜ್ಜಾಗುತ್ತಿದ್ದಾರೆ.

ಭುವನೇಶ್ವರ್‌ ಕುಮಾರ್‌ ರೀತಿ ಭಾರತ ತಂಡಕ್ಕೆ ಮರಳಬಲ್ಲ ಮೂವರು!

ಭುವಿ ಬಳಿಕ ಭಾರತ ತಂಡದಲ್ಲಿ ಸ್ಥಾನ ಪಡೆಯಬಲ್ಲ ಮೂವರು ಆಟಗಾರರು. -

Profile
Ramesh Kote Oct 9, 2026 4:53 PM

ನವದೆಹಲಿ: ನ್ಯೂಜಿಲೆಂಡ್‌ ವಿರುದ್ಧ ಟಿ20ಐ ಸರಣಿಗೆ (IND vs NZ) ಬಿಸಿಸಿಐ ಅಕ್ಟೋಬರ್‌ 6 ರಂದು 16 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿತ್ತು. ಆದರೆ, ಯಾರೂ ನಿರೀಕ್ಷೆ ಮಾಡದ ರೀತಿ ಹಿರಿಯ ವೇಗಿ ಭುವನೇಶ್ವರ್‌ ಕುಮಾರ್‌ (Bhuvneshwar Kumar) ಭಾರತ ತಂಡದಲ್ಲಿ ಮರಳಿ ಸ್ಥಾನವನ್ನು ಪಡೆದಿದ್ದಾರೆ. 36ರ ವಯಸ್ಸಿನ ಭುವನೇಶ್ವರ್‌ ಕುಮಾರ್‌ ಅವರು 2022ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಕೊನೆಯ ಬಾರಿ ಭಾರತ ತಂಡದಲ್ಲಿ ಆಡಿದ್ದರು. ಅಂದಿನಿಂದ ಅವರು ಭಾರತ ತಂಡದಿಂದ ದೂರ ಉಳಿದಿದ್ದಾರೆ. ಇದೀಗ ಅವರು ದೇಶಿ ಕ್ರಿಕೆಟ್‌ ಹಾಗೂ ಐಪಿಎಲ್‌ ಟೂರ್ನಿಯಲ್ಲಿನ ಪ್ರದರ್ಶನದ ಆಧಾರದ ಮೇಲೆ ಟೀಮ್‌ ಇಂಡಿಯಾಗೆ ಮರಳಿದ್ದಾರೆ.

ಭುವನೇಶ್ವರ್‌ ಕುಮಾರ್‌ ಅವರು ದೇಶಿ ಕ್ರಿಕೆಟ್‌ನಲ್ಲಿ ಯುಪಿ ಟಿ20 ಲೀಗ್‌ ಟೂರ್ನಿಯಲ್ಲಿ ಆಡಿದ್ದ 11 ಪಂದ್ಯಗಳಲ್ಲಿ 14 ವಿಕೆಟ್‌ಗಳನ್ನು ಕಬಳಿಸಿದ್ದರು. ಇದಾದ ಬಳಿಕ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ 16 ಪಂದ್ಯಗಳಿಂದ 28 ವಿಕೆಟ್‌ಗಳನ್ನು ಪಡೆದಿದ್ದರು. ಇದರ ಫಲವಾಗಿ ಭುವನೇಶ್ವರ್‌ ಕುಮಾರ್‌ ಅವರನ್ನು ಅನುಭವದ ಆಧಾರದ ಮೇಲೆ ಭಾರತ ಟಿ20 ತಂಡದಲ್ಲಿ ಸ್ಥಾನವನ್ನು ಕಲ್ಪಿಸಲಾಗಿದೆ. ಭುವಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟು 229 ಪಂದ್ಯಗಳನ್ನು ಆಡಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದಿಂದ ಸಂಜು, ಮಯಾಂಕ್‌ಗೆ ಕೊಕ್‌ ಸಾಧ್ಯತೆ

ಭುವನೇಶ್ವರ್‌ ಕುಮಾರ್‌ ರೀತಿ ಭಾರತ ತಂಡಕ್ಕೆ ಮರಳಬಲ್ಲ ಮೂವರು ಸ್ಟಾರ್‌ಗಳು

1.ಮೊಹಮ್ಮದ್‌ ಶಮಿ

2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಬಳಿಕ ಹಿರಿಯ ವೇಗಿ ಮೊಹಮ್ಮದ್‌ ಶಮಿ ಭಾರತ ತಂಡದಿಂದ ದೂರ ಉಳಿದಿದ್ದಾರೆ. ಚಾಂಪಿಯನ್ಸ್‌ ಟ್ರೋಫಿ ವೇಳೆ ಗಾಯಕ್ಕೆ ತುತ್ತಾಗಿದ್ದ ಶಮಿ, ಭಾರತ ತಂಡದಿಂದ ಹೊರಬಂದು ಗಾಯದಿಂದ ಸಂಪೂರ್ಣವಾಗಿ ಗುಣಮುಖರಾದರೂ ಅವರನ್ನು ಬಿಸಿಸಿಐ ಆಯ್ಕೆದಾರರು ಪರಿಗಣಿಸಿರಲಿಲ್ಲ. ಇದೀಗ ರಾಷ್ಟ್ರೀಯ ತಂಡಕ್ಕೆ ಭುವನೇಶ್ವರ್‌ ಕುಮಾರ್‌ ಮರಳಿರುವುದರಿಂದ ಶಮಿಗೂ ಕೂಡ ಭಾರತ ತಂಡಕ್ಕೆ ಕಮ್‌ಬ್ಯಾಕ್‌ ಮಾಡಬೇಕೆಂಬ ಆಸೆ ಚಿಗುರಿದೆ. 2027ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯು ಮುಂದಿನ ವರ್ಷನಡೆಯಲಿದೆ. ಹಾಗಾಗಿ ಮೊಹಮ್ಮದ್‌ ಶಮಿಯನ್ನು ಟೀಮ್‌ ಮ್ಯಾನೇಜ್‌ಮೆಂಟ್‌ ಪರಿಗಣಿಸಬಹುದು. ಹಾಗಾಗಿ ಶಮಿ ದೇಶಿ ಹಾಗೂ ಐಪಿಎಲ್‌ ಟೂರ್ನಿಯಲ್ಲಿ ಕಠಿಣ ಪರಿಶ್ರಮ ಪಡುತ್ತಿದ್ದಾರೆ.



2.ಕೃಣಾಲ್‌ ಪಾಂಡ್ಯ

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಸ್ಪಿನ್ನರ್‌ ಕೃಣಾಲ್‌ ಪಾಂಡ್ಯ ಕೂಡ ಭಾರತ ತಂಡಕ್ಕೆ ಮರಳಬೇಕೆಂಬ ಉದ್ದೇಶವನ್ನು ಹೊಂದಿದ್ದಾರೆ ಹಾಗೂ ಕಠಿಣ ಪರಿಶ್ರಮಪಡುತ್ತಿದ್ದಾರೆ. ಇವರು 2021 ಜುಲೈ 25 ರಂದು ಭಾರತದ ಪರ ಕೊನೆಯ ಪಂದ್ಯವನ್ನು ಆಡಿದ್ದರು. ಮಧ್ಯಮ ಓವರ್‌ಗಳಲ್ಲಿ ಬೌಲ್‌ ಮಾಡುವ ಹಾಗೂ ಕೆಳ ಮಧ್ಯಮ ಕ್ರಮಾಂಕದಲ್ಲಿ ತಂಡಕ್ಕೆ ಬ್ಯಾಟಿಂಗ್‌ನಲ್ಲಿಯೂ ನೆರವು ನೀಡಬಲ್ಲರು. 2025 ಹಾಗೂ 2026ರ ಐಪಿಎಲ್‌ ಟೂರ್ನಿಯಲ್ಲಿ ಸತತ ಎರಡು ಐಪಿಎಲ್‌ ಟ್ರೋಫಿಗಳನ್ನು ಗೆದ್ದಿದ್ದ ಆರ್‌ಸಿಬಿ ತಂಡದಲ್ಲಿ ಕೃಣಾಲ್‌ ಪಾಂಡ್ಯ ಆಡಿದ್ದರು ಹಾಗೂ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಎರಡೂ ವಿಭಾಗಗಳಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದರು. 2026ರ ಹಾಂಕಾಂಗ್‌ ಸಿಕ್ಸಸ್‌ ಟೂರ್ನಿಯಲ್ಲಿ ಭಾರತ ತಂಡದಲ್ಲಿ ಕೃಣಾಲ್‌ ಪಾಂಡ್ಯ ಕೂಡ ಇದ್ದಾರೆ. ಇವರು ಭಾರತ ತಂಡದ ಪರ ಐದು ಒಡಿಐ, 19 ಟಿ20ಐ ಪಂದ್ಯಗಳನ್ನು ಆಡಿದ್ದಾರೆ.

IND vs WI: ಎರಡನೇ ಟಿ20ಐ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್‌ XI, ಪಿಚ್‌ ರಿಪೋರ್ಟ್‌!

3.ರಜತ್‌ ಪಾಟಿದಾರ್‌

2025 ಮತ್ತು 2026ರ ಐಪಿಎಲ್‌ ಟೂರ್ನಿಗಳಲ್ಲಿ ರಜತ್‌ ಪಾಟಿದಾರ್‌ ನಾಯಕತ್ವದಲ್ಲಿ ಭಾರತ ತಂಡ ಸತತ ಎರಡೂ ಬಾರಿ ಚಾಂಪಿಯನ್ಸ್‌ ಆಗಿತ್ತು. ಇವರು ಆರ್‌ಸಿಬಿ ತಂಡವನ್ನು ಕಳೆದ ಎರಡು ಸೀಸನ್‌ಗಳಲ್ಲಿ ಉತ್ತಮವಾಗಿ ಮುನ್ನಡೆಸಿದ್ದರು. ಇವರ ನಾಯಕತ್ವದ ಆರ್‌ಸಿಬಿ 2025ರ ಐಪಿಎಲ್‌ ಟೂರ್ನಿಯಲ್ಲಿ ಚೊಚ್ಚಲ ಟ್ರೋಫಿಯನ್ನು ಗೆದ್ದಿತ್ತು. ನಂತರ 2026ರಲ್ಲಿಯೂ ಆರ್‌ಸಿಬಿ ಸತತ ಎರಡನೇ ಬಾರಿ ಕಪ್‌ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆಯನ್ನು ಮಾಡಿದ್ದರು. ಅವರು ದೇಶಿ ಕ್ರಿಕೆಟ್‌ ಹಾಗೂ ಐಪಿಎಲ್‌ ಟೂರ್ನಿಯಲ್ಲಿ ಉತ್ತಮ ಪ್ರದರ್ಶನವನ್ನು ತೋರಿದ್ದರ ಹೊರತಾಗಿಯೂ ಆರ್‌ಸಿಬಿ ನಾಯಕನಿಗೆ ಭಾರತ ಟಿ20 ತಂಡದಲ್ಲಿ ಇನ್ನೂ ಸ್ಥಾನ ಸಿಕ್ಕಿಲ್ಲ. ಇದೀಗ ಇವರು ಭಾರತ ತಂಡಕ್ಕೆ ಮರಳಲು ಸಜ್ಜಾಗುತ್ತಿದ್ದಾರೆ.